• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಮಂತ್ರಿಗಳೇ ಕೋವಿಡ್‌ ಕಾಲದಲ್ಲೂ ಕಮಿಷನ್ ತಿಂದಿದ್ದು ಸಾಕು, ಖಾಸಗಿ ಆಸ್ಪತ್ರೆಗಳಿಗೆ ಬಾಕಿ ಕೊಡಿ, ಜನರ ಕಷ್ಟ ನೋಡಿ ಎಂದು ಒತ್ತಾಯ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

cknewsnow desk by cknewsnow desk
April 30, 2021
in COVID-19, POLITICS, STATE
Reading Time: 1 min read
0
ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ
917
VIEWS
FacebookTwitterWhatsuplinkedinEmail

ನಾನು ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸರಕಾರಕ್ಕೆ ಒಂದು ವಿಚಾರ ಕೇಳುತ್ತೇನೆ. ಈ ಪರಿಸ್ಥಿತಿ ನಿಯಂತ್ರಿಸಲು ನಿಮ್ಮಿಂದ ಸಾಧ್ಯವಿಲ್ಲ ಎಂದು ಎಲ್ಲರಿಗೂ ಗೊತ್ತಾಗಿದೆ. ಆದರೂ ಯಾಕೆ ಸುಳ್ಳುಗಳನ್ನು ಹೇಳುತ್ತಿದ್ದೀರಿ ಎಂದ ಡಿಕೆಶಿ.

ಬೆಂಗಳೂರು: “ಸಚಿವರೇ ಕಮಿಷನ್ ಲೆಕ್ಕ ಹಾಕಿಕೊಂಡು ಕೂತಿದ್ದೀರಾ? ಕಮಿಷನ್ ಹೊಡೆದಿದ್ದು ಸಾಕು. ಹಿಂದೆ ತಿಂದಿದ್ದು ಸಾಕು, ಮುಂದೆ ತಿನ್ನೋದು ಸಾಕು. ಆದಷ್ಟು ಬೇಗ ಖಾಸಗಿ ಆಸ್ಪತ್ರೆಗಳಿಗೆ ಬಾಕಿ ಹಣ ಪಾವತಿಸಿ. ಜನರ ಕಷ್ಟದ ಬಗ್ಗೆ ಗಮನ ಹರಿಸಿ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು:

‘ಕೇಂದ್ರ ಸರಕಾರ 18ರಿಂದ 45 ವರ್ಷದವರು ಕೊರೋನಾ ಲಸಿಕೆ ಹಾಕಿಸಿಕೊಳ್ಳಲು ಆನ್ಲೈನ್‌ ನೋಂದಣಿಗೆ ಸೂಚಿಸಿದೆ. ಸರಕಾರ ದೇಶದ ಎಲ್ಲ ವರ್ಗದ ಬಗ್ಗೆ ಯೋಚಿಸುತ್ತಿದೆಯೋ ಅಥವಾ ಒಂದು ವರ್ಗದ ಬಗ್ಗೆ ಮಾತ್ರ ಯೋಚಿಸುತ್ತಿದೆಯೇ ಎಂಬುದು ಅರ್ಥವಾಗುತ್ತಿಲ್ಲ. ನಾನು ಆನ್ಲೈನ್ ನೋಂದಣಿ ಮಾಡಿಸಬೇಕು ಎಂದರೆ ಬೇರೆಯವರ ಸಹಾಯ ಪಡೆಯಬೇಕಾಗುತ್ತದೆ. ಇನ್ನು ಹಳ್ಳಿ ಜನರ ಪರಿಸ್ಥಿತಿ ಏನು? ಅವರಿಗೆ ಆನ್ಲೈನ್ ಸೌಲಭ್ಯ ಇದೆಯೇ? ಆನ್ಲೈನ್ ನೋಂದಣಿ ಮಾಡಿದವರಿಗೆ ಮಾತ್ರ ಹಾಕುವ ಯೋಚನೆಯೋ? ಈ ಹಿಂದೆ ಮನೆ ಬಾಗಿಲಿಗೆ ಹೋಗಿ ಪೊಲೀಯೋ ಲಸಿಕೆ ಹಾಕಿದಂತೆ ಈಗ ಕೊರೋನಾ ಲಸಿಕೆಯನ್ನೂ ನೀಡಬೇಕು”.

ರಾಜ್ಯದಲ್ಲಿ ನಾಳೆಯಿಂದ ಲಸಿಕೆ ನೀಡಲು ಸಾಧ್ಯವಿಲ್ಲ, ವಿಳಂಬವಾಗುತ್ತದೆ ಎಂದು ಸರಕಾರವೇ ಹೇಳುತ್ತಿದೆ. ಕೊರೋನಾ ಬಂದು ವರ್ಷವಾಗಿದೆ. ಆದರೂ ಯಾವುದೇ ಪೂರ್ವ ತಯಾರಿ ಮಾಡಿಕೊಳ್ಳದೇ, ಸರಕಾರ ಜನರನ್ನು ಸಂಕಟಕ್ಕೆ ತಳ್ಳುತ್ತಿದೆ. ಬರೀ ಸುಳ್ಳು ಹೇಳಿ ತನ್ನ ಹುಳುಕು ಮುಚ್ಚಿಕೊಳ್ಳುತ್ತಿದೆ. ನನ್ನ ಕ್ಷೇತ್ರದಲ್ಲೇ 17 ಜನ ಸತ್ತಿದ್ದರೂ 4 ಜನ ಸತ್ತಿದ್ದಾರೆ ಎಂದು ಸುಳ್ಳು ಅಂಕಿ-ಅಂಶ ತೋರಿಸುತ್ತಿದೆ. ವಾಸ್ತವದ ಶೇ.20ರಷ್ಟನ್ನು ಅಂಕಿ-ಅಂಶದಲ್ಲಿ ತೋರಿಸುತ್ತಿಲ್ಲ. ಸರಕಾರ ಕೊರೋನಾ ಸಾವಿನ ಪ್ರಮಾಣದ ಬಗ್ಗೆ ಪರಿಶೀಲನೆ ನಡೆಸಬೇಕು. ಸತ್ತವರ ಮನೆಗೆ ಅಧಿಕಾರಿಗಳನ್ನು ಕಳುಹಿಸಿ, ಸಾವಿಗೆ ಕಾರಣ ತಿಳಿಯಬೇಕು. ಕಾಂಗ್ರೆಸ್ ಕಾರ್ಯಕರ್ತರು ಕೊರೋನಾ ಸಾವಿನ ವಾಸ್ತವಾಂಶವನ್ನು ಕೆಪಿಸಿಸಿ ಕಚೇರಿಗೆ ರವಾನಿಸಬೇಕು.

ಲಸಿಕೆ ವಿಚಾರದಲ್ಲಿ ಸರಕಾರ ತಯಾರಿ ಮಾಡಿಕೊಳ್ಳದಿದ್ದರೂ ಲಸಿಕೆ ಅಭಿಯಾನ ಘೋಷಿಸಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಅಂತಾರಾಷ್ಟ್ರೀಯ ಮಾಧ್ಯಮಗಳು ಭಾರತದಲ್ಲಿ ಸರಕಾರ ಕೊರೋನಾ ಪರಿಸ್ಥಿತಿ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ವಿವರವಾಗಿ ವರದಿ ಮಾಡುತ್ತಿವೆ.

ಲಾಕ್ಡೌನ್ ಹೇರಿರುವ ಹಿನ್ನೆಲೆಯಲ್ಲಿ ಸರಕಾರವು ಜನರಿಗೆ ಆರ್ಥಿಕ ನೆರವು ನೀಡಬೇಕು. ಈಗಾಗಲೇ ಜನ ವಲಸೆ ಹೋಗುತ್ತಿದ್ದಾರೆ. ಕಾರ್ಮಿಕರು ಗುಳೆ ಹೋಗುವುದನ್ನು ನಿಲ್ಲಿಸಲು ಆರ್ಥಿಕ ಪ್ಯಾಕೇಜ್ ಅನಿವಾರ್ಯ.

ಕಳೆದ ವರ್ಷ ಖಾಸಗಿ ಆಸ್ಪತ್ರೆಗಳಲ್ಲಿ ಸರಕಾರ ಹಾಸಿಗೆ ಪಡೆದಿತ್ತು. ಈ ವರ್ಷವೂ ಶೇ.80ರಷ್ಟು ಪಡೆದಿದೆ. ಆದರೆ ಅವರಿಗೆ ಕಳೆದ ವರ್ಷದ ಬಾಕಿಯನ್ನೇ ಕೊಟ್ಟಿಲ್ಲ. ಈ ಆಸ್ಪತ್ರೆಗಳಲ್ಲಿ ನರ್ಸ್ʼಗಳಿಗೆ ಕೊಡಲು, ಔಷದಿ, ಆಕ್ಸಿಜನ್ ಖರೀದಿಗೆ ದುಡ್ಡಿಲ್ಲದಂತಾಗಿದೆ.

ರೆಮ್ಡಿಸಿವಿಯರ್ ಪೂರೈಸುತ್ತಿರುವ ಡ್ರಗ್ ಕಂಟ್ರೋಲರ್ ಗಳ ಫೋನ್ ಆಫ್ ಆಗಿವೆ. ನೀವು ಕೆಲವು ಸರ್ಕಾರಿ ಆಸ್ಪತ್ರೆಗಳಿಗೆ ಮಾತ್ರ ಇವುಗಳನ್ನು ಪೂರೈಸುತ್ತಿದ್ದೀರಿ ಹೊರತು, ಬೇರೆ ಯಾರಿಗೂ ಕೊಡುತ್ತಿಲ್ಲ. ನಮಗೆ ರೆಮ್ಡಿಸಿವಿಯರ್ ಬೇಕು ಎಂದು ನೂರಾರು ಮಂದಿ ಕರೆ ಮಾಡುತ್ತಿದ್ದಾರೆ. ಹೀಗಾಗಿ ಎಲ್ಲ ಆಸ್ಪತ್ರೆಗಳಿಗೂ ಇದನ್ನು ಪೂರೈಸಬೇಕು. ಕೂಡಲೇ ಆಸ್ಪತ್ರೆಗಳಿಗೆ ಹಣ ಪಾವತಿ ಮಾಡಬೇಕು. ಯಾರಿಗೆ ಹಣ ಕೊಟ್ಟಿದ್ದೀರಿ ಎಂಬುದರ ಬಗ್ಗೆ ಪಟ್ಟಿ ಬಿಡುಗಡೆ ಮಾಡಿ.

ಸೋಂಕಿತರಿಗೆ ನಮ್ಮಿಂದಾದ ನೆರವು ನೀಡುತ್ತಿದ್ದೇವೆ

ಕಾಂಗ್ರೆಸ್ ಪಕ್ಷದಿಂದ 10 ಆಂಬುಲೆನ್ಸ್ ಗಳನ್ನು ಸಿದ್ಧಪಡಿಸಲಾಗಿದೆ. ಮಾಜಿ ಮೇಯರ್ʼಗಳು, ಕಾರ್ಯಾಧ್ಯಕ್ಷರುಗಳ ಜತೆ ಸಭೆ ನಡೆಸಿದ್ದೇನೆ. ನಾವು ಸೋಂಕಿತರಿಗೆ, ಸತ್ತವರ ಕುಟುಂಬಕ್ಕೆ ಹೇಗೆ ನೆರವಾಗಬಹುದು ಎಂಬುದರ ಬಗ್ಗೆ ಚರ್ಚಿಸಿದ್ದೇನೆ. ಸರಕಾರವು ಮಾಧ್ಯಮಗಳಲ್ಲಿ ಪ್ರಕಟಿಸಿದ್ದ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಯಾರೂ ಅದನ್ನು ಸ್ವೀಕರಿಸುತ್ತಿಲ್ಲ. ನಮ್ಮ ಸಹಾಯವಾಣಿಗೆ 3 ಸಾವಿರಕ್ಕೂ ಹೆಚ್ಚು ಮಂದಿ ಕರೆ ಮಾಡಿದ್ದಾರೆ. 100 ಕ್ಕೂ ಹೆಚ್ಚು ಸೋಂಕಿತರು ಆಸ್ಪತ್ರೆಗೆ ದಾಖಲಾಗಲು ನೆರವಾಗಿದ್ದಾರೆ. 300ಕ್ಕೂ ಹೆಚ್ಚು ಸೋಂಕಿತರಿಗೆ ವೈದ್ಯರಿಂದ ಮಾರ್ಗದರ್ಶನ ಕೊಡಿಸಿ, ಔಷಧಿಗಳನ್ನು ನೀಡಲಾಗಿದೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪಕ್ಷದ ಸಹಾಯವಾಣಿ ಆರಂಭಿಸಲು ಸೂಚಿಸಿದ್ದೇವೆ. ಈ ಸಮಯದಲ್ಲಿ ಎಷ್ಟೇ ಕಷ್ಟವಾದರೂ ಜನರ ಜತೆ ಇರಬೇಕು ಎಂದು ಕೆಲಸ ಮಾಡುತ್ತಿದ್ದೇವೆ.

ರಾಜ್ಯದಲ್ಲಿ ಮತದಾರ ಬದಲಾವಣೆ ಬಯಸಿದ್ದಾನೆ

ಪಕ್ಷದ ಚಿಹ್ನೆಗಳ ಮೇಲೆ ನಡೆದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ 10 ಸಂಸ್ಥೆಗಳ ಪೈಕಿ 7ರಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿದೆ. ಜನರ ಆಶೀರ್ವಾದಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ರಾಮನಗರದಲ್ಲಿ ನಮ್ಮ ಪಕ್ಷದಿಂದ ಸ್ಪರ್ಧಿಸಿದ್ದ ಒಬ್ಬ ಹೆಣ್ಣುಮಗಳು ಕೆಲ ದಿನಗಳ ಹಿಂದೆ ಕೊರೋನಾದಿಂದ ಮೃತಪಟ್ಟಿದ್ದು, ಚುನಾವಣೆಯಲ್ಲಿ ಆಕೆ ಗೆದ್ದಿದ್ದಾಳೆ. ಉಳಿದಂತೆ ರಾಮನಗರ, ಗುಡಿಬಂಡೆ, ಭದ್ರಾವತಿ, ತೀರ್ಥಹಳ್ಳಿ, ಬೇಲೂರು, ಬೀದರ್, ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದೆ.

ಬಿಜೆಪಿ ಸರ್ಕಾರದ ದುರಾಡಳಿತವನ್ನು ಜನ ತಿರಸ್ಕರಿಸುತ್ತಿರುವುದಕ್ಕೆ ಈ ಚುನಾವಣೆ ಫಲಿತಾಂಶವೇ ಸಾಕ್ಷಿ. ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ನಮ್ಮ ಪಕ್ಷ ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿತ್ತು. ಆದರೆ ಆಗ ಪಕ್ಷದ ಚಿಹ್ನೆ ಇಲ್ಲ ಎಂದು ಕೆಲವರು ಮಾತನಾಡಿದ್ದರು. ಈ ಸ್ಥಳೀಯ ಸಂಸ್ಥೆ ಚುನಾವಣೆ ಪಕ್ಷದ ಚಿಹ್ನೆ ಆಧಾರದ ಮೇಲೆ ನಡೆದಿದ್ದು, 266 ವಾರ್ಡ್ ಗಳ ಪೈಕಿ ಕಾಂಗ್ರೆಸ್ 119, ಬಿಜೆಪಿ 56, ಜೆಡಿಎಸ್ 67 ಹಾಗೂ 14 ರಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದಾರೆ. ಈ 14ರಲ್ಲಿ 11 ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಾಗಿದ್ದಾರೆ.

ರಾಜ್ಯದಲ್ಲಿ ಬದಲಾವಣೆ ಬಯಸಿ ಕಾಂಗ್ರೆಸ್ʼಗೆ ಮತ ನೀಡಿರುವ ಎಲ್ಲ ಮತದಾರರಿಗೆ, ಕಾರ್ಯಕರ್ತರು, ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ.

Tags: allegations against karnataka minsterscovid19DK ShivakumarKarnataka congressmis management
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಆಡಳಿತ ಪಕ್ಷಕ್ಕೆ ಬಿತ್ತಾ ಕೋವಿಡ್‌ ಹೊಡೆತ!! ಸಿಎಂ ತವರು ಶಿವಮೊಗ್ಗ ಜಿಲ್ಲೆಯಲ್ಲೇ ಮುಗ್ಗರಿಸಿದ ಬಿಜೆಪಿ, ಬಳ್ಳಾರಿಯಲ್ಲೂ ಕಾಂಗ್ರೆಸ್‌; ಮಡಿಕೇರಿಯಲ್ಲಿ ಮಾತ್ರ ಅರಳಿದ ಕಮಲ

ಆಡಳಿತ ಪಕ್ಷಕ್ಕೆ ಬಿತ್ತಾ ಕೋವಿಡ್‌ ಹೊಡೆತ!! ಸಿಎಂ ತವರು ಶಿವಮೊಗ್ಗ ಜಿಲ್ಲೆಯಲ್ಲೇ ಮುಗ್ಗರಿಸಿದ ಬಿಜೆಪಿ, ಬಳ್ಳಾರಿಯಲ್ಲೂ ಕಾಂಗ್ರೆಸ್‌; ಮಡಿಕೇರಿಯಲ್ಲಿ ಮಾತ್ರ ಅರಳಿದ ಕಮಲ

Leave a Reply Cancel reply

Your email address will not be published. Required fields are marked *

Recommended

ಗಾಂಧಿ ಜಯಂತಿಗೂ ಮುನ್ನವೇ ಪಬ್ ಒಪೆನ್!

ಅತಿಥಿ ಉಪನ್ಯಾಸಕ ಹುದ್ದೆ: 55,000ಕ್ಕೂ ಹೆಚ್ಚು ಅರ್ಜಿ!

4 years ago
ಚಿನ್ನ ಖಾಲಿಯಾದರೂ ಪರವಾಗಿಲ್ಲ!; ಕೆಜಿಎಫ್‌ ಎಂದರೆ ಎಲ್ಲರಿಗೂ ಇಷ್ಟ!! ಏಕೆಂದರೆ…?

ಚಿನ್ನ ಖಾಲಿಯಾದರೂ ಪರವಾಗಿಲ್ಲ!; ಕೆಜಿಎಫ್‌ ಎಂದರೆ ಎಲ್ಲರಿಗೂ ಇಷ್ಟ!! ಏಕೆಂದರೆ…?

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ