• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಆಡಳಿತ ಪಕ್ಷಕ್ಕೆ ಬಿತ್ತಾ ಕೋವಿಡ್‌ ಹೊಡೆತ!! ಸಿಎಂ ತವರು ಶಿವಮೊಗ್ಗ ಜಿಲ್ಲೆಯಲ್ಲೇ ಮುಗ್ಗರಿಸಿದ ಬಿಜೆಪಿ, ಬಳ್ಳಾರಿಯಲ್ಲೂ ಕಾಂಗ್ರೆಸ್‌; ಮಡಿಕೇರಿಯಲ್ಲಿ ಮಾತ್ರ ಅರಳಿದ ಕಮಲ

cknewsnow desk by cknewsnow desk
April 30, 2021
in COVID-19, POLITICS, STATE
Reading Time: 2 mins read
0
ಆಡಳಿತ ಪಕ್ಷಕ್ಕೆ ಬಿತ್ತಾ ಕೋವಿಡ್‌ ಹೊಡೆತ!! ಸಿಎಂ ತವರು ಶಿವಮೊಗ್ಗ ಜಿಲ್ಲೆಯಲ್ಲೇ ಮುಗ್ಗರಿಸಿದ ಬಿಜೆಪಿ, ಬಳ್ಳಾರಿಯಲ್ಲೂ ಕಾಂಗ್ರೆಸ್‌; ಮಡಿಕೇರಿಯಲ್ಲಿ ಮಾತ್ರ ಅರಳಿದ ಕಮಲ
916
VIEWS
FacebookTwitterWhatsuplinkedinEmail

ಕೋವಿಡ್‌ ಎರಡನೇ ಅಲೆಯಲ್ಲಿ ತೇಲುತ್ತಿರುವ ಕರ್ನಾಟಕದ ವಿವಿಧ ಕಡೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಮುಗ್ಗರಿಸಿದೆ. ಅಚ್ಚರಿ ಎಂಬಂತೆ ಕಾಂಗ್ರೆಸ್‌ ಎಲ್ಲಡೆ ಜಯದ ಕೇಕೆ ಹಾಕಿದೆ. ಎರಡರಲ್ಲಿ ಒಂದು ಕಡೆ ಅಧಿಕಾರ ಕಳೆದುಕೊಂಡಿದೆ.

ಬೆಂಗಳೂರು: ಕೋವಿಡ್‌ ಹುಚ್ಚೆದ್ದು ಕುಣಿಯುತ್ತಿರುವ ಹೊತ್ತಿನಲ್ಲಿಯೇ ಹೊರಬಿದ್ದರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಆಡಳಿತಾರೂಢ ಬಿಜೆಪಿಗೆ ಶಾಕ್‌ ನೀಡಿದೆ.

ರಾಜ್ಯದಲ್ಲಿ ಅನಿಯಂತ್ರಿತವಾಗಿ ಹಬ್ಬುತ್ತಿರುವ ಸೋಂಕಿನ ನಡುವೆಯೂ ನಡೆದ ಮತದಾನವು ಬಹುತೇಕ ಆಡಳಿತಾರೂಢ ಪಕ್ಷಕ್ಕೇ ಅನುಕೂಲವಾಗಿರುತ್ತದೆ ಎಂಬ ʼಕೆಲವರʼ ನಿರೀಕ್ಷೆಗಳ ನಡುವೆಯೇ ಬಿಜೆಪಿ ಸೋತು, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಗೆಲುವಿನ ನಗೆ ಬೀರಿವೆ.

ಬಳ್ಳಾರಿ ಮಹಾನಗರ ಪಾಲಿಕೆ ಸೇರಿ ರಾಜ್ಯದ 10 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದ್ದರೆ, ಜೆಡಿಎಸ್‌ ಸಾಧನೆ ತೃಪ್ತಿಕರವಾಗಿದೆ. ಬಿಜೆಪಿ ಮಾತ್ರ ನಿರೀಕ್ಷೆಗಳನ್ನು ಹುಸಿ ಮಾಡಿ ಹಿಂದಕ್ಕೆ ಬಿದ್ದಿದೆ.

ಹಾಗಾದರೆ; ಮಸ್ಕಿ, ಬಸವ ಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭೆ ಚುನಾವಣೆ ಮೇಲೆ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಪ್ರಭಾವ ಇರುತ್ತದಾ? ಎಂಬ ಪ್ರಶ್ನೆ ಈಗೆದ್ದಿದೆ. ರಾಜಕೀಯ ಪಕ್ಷಗಳ ಚಿಹ್ನೆಗಳ ಮೇಲೆಯೇ ನಡೆದ ಮಹಾನಗರ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಗಳಿಗೆ ನಡೆದ ಚುನಾವಣೆಯಲ್ಲಿ 10 ಸ್ಥಳೀಯ ಸಂಸ್ಥೆಗಳ ಪೈಕಿ 7 ಕಡೆ ಕಾಂಗ್ರೆಸ್ ಜಯಭೇರಿ ಭಾರಿಸಿದೆ.

ಬಳ್ಳಾರಿ ಮಹಾನಗರ ಪಾಲಿಕೆ

ಸಚಿವರಾದ ಶ್ರೀರಾಮುಲು, ಆನಂದ್‌ ಸಿಂಗ್‌ ಅವರಿರುವ ಬಳ್ಳಾರಿಯ ಮಹಾನಗರ ಪಾಲಿಕೆ ಕಾಂಗ್ರೆಸ್​ ತೆಕ್ಕೆಗೆ ಹೋಗಿದೆ. ಒಟ್ಟು 39 ವಾರ್ಡುಗಳ ಪೈಕಿ ಕಾಂಗ್ರೆಸ್‌ 29ರಲ್ಲಿ ಗೆದ್ದಿದ್ದರೆ, ಬಿಜೆಪಿ 13 ಕಡೆ ಗೆದ್ದಿದೆ. ಇಲ್ಲಿ ಜೆಡಿಎಸ್‌ ಸಾಧನೆ ಶೂನ್ಯ. ಬಳ್ಳಾರಿಯ ಸೋಲು ಬಿಜೆಪಿಗೆ ದೊಡ್ಡ ಆಘಾತವಾಗಿದೆ ಮಾತ್ರವಲ್ಲದೆ, ಕಾಂಗ್ರೆಸ್‌ ಪಾಲಿಗೆ ಬಿಗ್‌ ಬ್ರೇಕ್‌ಥ್ರೂ ಆಗಿದೆ ಎನ್ನಬಹುದು.

ರಾಮನಗರ ನಗರಸಭೆ

ರಾಮನಗರ ನಗರಸಭೆ ನಗರಸಭೆಯಲ್ಲಿ ಬಿಜೆಪಿ ಖಾತೆ ತೆರೆಯಲಾಗಿಲ್ಲ. ಇದು ಕಾಂಗ್ರೆಸ್‌ ವಶಕ್ಕೆ ಹೋಗಿದೆ. ಕೈಗೆ ಸ್ಪಷ್ಟ‌ ಬಹುತವೂ ಸಿಕ್ಕಿದೆ. ಒಟ್ಟು 31 ವಾರ್ಡ್​ಗಳ ಪೈಕಿ ಕಾಂಗ್ರೆಸ್ 19 ಕಡೆ, ಜೆಡಿಎಸ್​​​ 11 ವಾರ್ಡ್​ನಲ್ಲಿ ಜಯ ಗಳಿಸಿವೆ. ಇನ್ನು ಒಂದು ವಾರ್ಡ್​ನಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದರೆ, ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರ ಉಸ್ತುವಾರಿಯ ಬಿಜೆಪಿ ಒಂದು ವಾರ್ಡ್​ನಲ್ಲೂ ಖಾತೆ ತೆರೆದಿಲ್ಲ.

ಗುಡಿಬಂಡೆಯಲ್ಲಿ ಕಾಂಗ್ರೆಸ್‌

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರಸ್‌ ಜಯಭೇರಿ ಸಾಧಿಸಿದೆ. ಈ ಚುನಾವಣೆ ವಿಷಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಅವರು ಗುಡಿಬಂಡೆ ಕಡೆ ತಲೆ ಹಾಕಿಲ್ಲ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿಗಳೆಲ್ಲವೂ ಉಸ್ತುವಾರಿ ಸಚಿವರ ಹುಟ್ಟೂರು ಪೆರೇಸಂದ್ರ ದಾಟಿಬರದೇ ಇದ್ದದ್ದೂ ಜನರ ಆಕ್ರೋಶಕ್ಕೆ ಕಾರಣ ಆಗಿರಬಹುದು. ಒಟ್ಟು 11 ವಾರ್ಡುಗಳಲ್ಲಿ ಕಾಂಗ್ರೆಸ 6 ಕಡೆ ಗೆದ್ದರೆ, ಜೆಡಿಎಸ್‌ 2 ವಾರ್ಡುಗಳಲ್ಲಿ ಜಯ ಗಳಿಸಿದೆ.

ಚನ್ನಪಟ್ಟಣದಲ್ಲಿ ಜೆಡಿಎಸ್‌

ಇನ್ನು ಜೆಡಿಎಸ್‌ ಭದ್ರಕೋಟೆಗಳಲ್ಲಿ ಒಂದಾಗಿದ್ದ ಚನ್ನಪಟ್ಟಣದಲ್ಲಿ ಜೆಡಿಎಸ್‌ ಅಧಿಕಾರ ಉಳಿಸಿಕೊಂಡಿದೆ. ಒಟ್ಟು 31 ವಾರ್ಡುಗಳಲ್ಲಿ 16ಕಡೆ ಜೆಡಿಎಸ್‌ ಗೆಲುವು ಸಾಧಿಸಿದೆ. ಇನ್ನೂ ಬಿಜೆಪಿ 7 ಕಡೆ ಗೆದ್ದರೆ, ಕಾಂಗ್ರೆಸ್‌ ಕೂಡ 7 ವಾರ್ಡುಗಳಲ್ಲಿ ಜಯ ಗಳಿಸಿದೆ.

ಪಟ್ಟಣ ಪಂಚಾಯಿತಿ, ಪುರಸಭೆ-ನಗರಸಭೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿದ ರಾಜ್ಯದ ಜನತೆಗೆ ನನ್ನ ಮನದಾಳದ ಕೃತಜ್ಞತೆಗಳು.

ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ನಾಯಕರು, ಮುಖಂಡರು ಎಲ್ಲಕ್ಕೂ ಮಿಗಿಲಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅಭಿನಂದನೆಗಳು.@JanataDal_S
1/2

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 30, 2021

ಭದ್ರಾವತಿಯಲ್ಲಿ ಕಾಂಗ್ರೆಸ್‌

ಮುಖ್ಯಮಂತ್ರಿ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದ ಭದ್ರಾವತಿ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಒಟ್ಟು 35 ವಾರ್ಡ್​ಗಳ ಪೈಕಿ 18 ವಾರ್ಡ್​ಗಳಲ್ಲಿ ಜಯ ಗಳಿಸಿದೆ. ಬಿಜೆಪಿ 4 ಕಡೆ ಮಾತ್ರ ಗೆದ್ದಿದೆ. ಇನ್ನು 11 ಕಡೆ ಗೆದ್ದಿರುವ ಜೆಡಿಎಸ್‌ ಕಮಲ ಪಾಳಯಕ್ಕೆ ಬಲವಾದ ಸಡ್ಡು ಹೊಡೆದಿದೆ.

ತೀರ್ಥಹಳ್ಳಿಯಲ್ಲೂ ಬಿಜೆಪಿ ಇಲ್ಲ

ಮುಖ್ಯಮಂತ್ರಿ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದ ಇನ್ನೊಂದು ತಾಲೂಕು ತೀರ್ಥಹಳ್ಳಿಯಲ್ಲೂ ಬಿಜೆಪಿಗೆ ಶಾಕ್‌ ಆಗಿದೆ. ಕಳೆದ 25 ವರ್ಷಗಳಿಂದ ಇಲ್ಲಿನ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ 15 ವಾರ್ಡ್​ಗಳ ಪೈಕಿ 9ರಲ್ಲಿ ಕಾಂಗ್ರೆಸ್ ಗೆದ್ದರೆ, ಬಿಜೆಪಿ 6 ವಾರ್ಡ್​ಗಳಲ್ಲಿ ಮಾತ್ರ ಗೆದ್ದಿದೆ.

ಬೇಲೂರು ಕೂಡ ಕಾಂಗ್ರೆಸ್‌ಗೆ

ಜೆಡಿಎಸ್‌ ಭದ್ರಕೋಟೆಯಾಗಿದ್ದ ಹಾಸನ ಜಿಲ್ಲೆಯ ಬೇಲೂರು ಪುರಸಭೆಯಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಜಯಭೇರಿ ಭಾರಿಸಿದೆ. 25 ವಾರ್ಡ್​ಗಳಲ್ಲಿ ಕಾಂಗ್ರೆಸ್​ ಜಯ ಗಳಿಸಿದ್ದು, 5 ವಾರ್ಡ್ʼಗಳಲ್ಲಿ ಮಾತ್ರ ಜೆಡಿಎಸ್ ಗೆಲುವು ಸಿಕ್ಕಿದೆ. ಇನ್ನು, ಒಂದು ಕಡೆಯಷ್ಟೇ ಬಿಜೆಪಿ ಗೆದ್ದಿದೆ.

ಮಡಿಕೇರಿಯಲ್ಲಿ ಮಾತ್ರ ಕಮಲ

ಸಮಾಧಾನಕರ ಸಂಗತಿ ಎಂದರೆ, ಮಡಿಕೇರಿ ನಗರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಿಕ್ಕಿದೆ. 23 ಸ್ಥಾನಗಳ ಪೈಕಿ ಬಿಜೆಪಿ 16 ಕಡೆ ಗೆದ್ದು ಬೀಗಿದೆ. ಆದರೆ ಅಚ್ಚರಿ ಎಂಬಂತೆ ಎಸ್‌ಡಿಪಿಐ 5 ಕಡೆ ಜಯಿಸಿದರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತಲಾ 1 ಕಡೆ ಮಾತ್ರ ಗೆಲುವು ಸಾಧಿಸಿವೆ.

ಬೀದರ್‌ನಲ್ಲೂ ಹಿಂದೆ ಬಿದ್ದ ಬಿಜೆಪಿ

ಇನ್ನು, ಒಟ್ಟು 35 ಸ್ಥಾನಗಳ ಬೀದರ್ ನಗರಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಕ್ಕಿಲ್ಲ. ಆದರೆ, 15 ಕಡೆ ಗೆದ್ದಿರುವ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ 15, ಬಿಜೆಪಿ 8, ಜೆಡಿಎಸ್ 7, ಎಐಎಂಐಎಂ 2 ಮತ್ತೂ ಆಮ್ʼಆದ್ಮಿ ಪಕ್ಷ ಒಂದೆಡೆ ಗೆದ್ದಿದೆ. ಈ ಪೈಕಿ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದ್ದು, ಇನ್ನೆರಡು ವಾರ್ಡುಗಳಲ್ಲಿ ಚುನಾವಣೆ ನಡೆದಿಲ್ಲ. ಆದರೆ, ಅಧಿಕಾರಕ್ಕೇರಲು ಕಾಂಗ್ರೆಸ್‌ ಪ್ರಯತ್ನಗಳನ್ನು ಶುರು ಮಾಡಿದೆ.

Tags: bjpCongressjdskarnatakaurban local bodies elections
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಗುಮ್ಮನಾಯಕನ ಪಾಳ್ಯದ ಮೇಲೆ ದಾಳಿ ಮಾಡಿದ್ದನಾ ಟಿಪ್ಪು ಸುಲ್ತಾನ್?‌ ಪಾಳೇಗಾರರ  ಖಜಾನೆಯಲ್ಲಿದ್ದ ಅಪಾರ ಸಂಪತ್ತು ಎಲ್ಲಿಗೆ ಹೋಯಿತು? ಹೂತು ಹೋಗುತ್ತಿದೆ 700  ವರ್ಷಗಳ ಇತಿಹಾಸ!!

ಗುಮ್ಮನಾಯಕನ ಪಾಳ್ಯದ ಮೇಲೆ ದಾಳಿ ಮಾಡಿದ್ದನಾ ಟಿಪ್ಪು ಸುಲ್ತಾನ್?‌ ಪಾಳೇಗಾರರ ಖಜಾನೆಯಲ್ಲಿದ್ದ ಅಪಾರ ಸಂಪತ್ತು ಎಲ್ಲಿಗೆ ಹೋಯಿತು? ಹೂತು ಹೋಗುತ್ತಿದೆ 700 ವರ್ಷಗಳ ಇತಿಹಾಸ!!

Leave a Reply Cancel reply

Your email address will not be published. Required fields are marked *

Recommended

ರಥಸಪ್ತಮಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಸೂರ್ಯ ನಮಸ್ಕಾರ, ಯೋಗ ಕಾರ್ಯಕ್ರಮ

ರಥಸಪ್ತಮಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಸೂರ್ಯ ನಮಸ್ಕಾರ, ಯೋಗ ಕಾರ್ಯಕ್ರಮ

6 years ago
ಚಿಕ್ಕಬಳ್ಳಾಪುರ: ಶ್ರೀಗಂಧ ಚೋರರ ಸೆರೆ

ಚಿಕ್ಕಬಳ್ಳಾಪುರ: ಶ್ರೀಗಂಧ ಚೋರರ ಸೆರೆ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ