ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಸೀಟಿ ಸ್ಕ್ಯಾನಿಂಗ್ ದರವನ್ನು ನಿಗದಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಸೀಟಿ ಸ್ಕ್ಯಾನ್ ಹೆಸರಿನಲ್ಲಿ ನಡೆಯುತ್ತಿದ್ದ ಸುಲಿಗೆಗೆ ಕಡಿವಾಣ ಹಾಕಿದೆ.
ಕೆಲ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಸೀಟಿ ಸ್ಕ್ಯಾನ್‌ಗೆ 6,000ರಿಂದ 10,000 ರೂ.ಗಳವರೆಗೆ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ.
ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನಿಂಗ್ʼಗಾಗಿ 1,500 ರೂ. ನಿಗದಿಪಡಿಸಲಾಗಿದೆ. ಒಂದು ವೇಳೆ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಹಣ ಪಡೆದರೆ ಕಠಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಸರಕಾರಿ ವ್ಯವಸ್ಥೆ ಅಡಿ ಸ್ಕ್ಯಾನಿಂಗ್ ಅನ್ನು ಉಚಿತವಾಗಿ ಮಾಡಲಾಗುತ್ತಿದೆ. ಸಾರ್ವಜನಿಕರು ಸರಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದೂ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.
Lead photo courtesy: Wikipedia