• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್‌ ಆಕ್ಸಿಜನ್‌ ಬೆಡ್‌ ಕೊರತೆ ನೀಗಿಸಲು ಡಿಸಿಎಂ ಪರಿಹಾರ ಸೂತ್ರ: ಗಂಭೀರವಲ್ಲದ 30-40% ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಶಿಫ್ಟ್‌ ಮಾಡಲು ನಿರ್ಧಾರ

cknewsnow desk by cknewsnow desk
May 7, 2021
in COVID-19, STATE
Reading Time: 1 min read
0
ಚಿನ್ನದ ನಾಡಿಗೆ ಆಪಲ್‌ ಗರಿ; ಜಿಲ್ಲೆಯಲ್ಲಿ ಐಫೋನ್‌ ಹವಾ! ಯುವಜನರಿಗೆ ಸ್ಟೀವ್‌ ಜಾಬ್ಸ್‌ ಕನವರಿಕೆ!!
921
VIEWS
FacebookTwitterWhatsuplinkedinEmail

ತಜ್ಞರ ವರದಿ ಪ್ರಕಾರ ಶೇ.30ರಿಂದ 40ರಷ್ಟು ಗಂಭೀರವಲ್ಲದ ಸೋಂಕಿತರು ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸೋಂಕಿತರಿಗೆ ಹಾಸಿಗೆ ಕೊರತೆ ನೀಗಿಸುವ ಉದ್ದೇಶದಿಂದ ಸರಕಾರಿ & ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಂಭೀರವಲ್ಲದ ಸೋಂಕಿತರನ್ನು ಸ್ಟೆಪ್‌ʼಡೌನ್‌ ಆಸ್ಪತ್ರೆ ಇಲ್ಲವೇ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಶಿಫ್ಟ್‌ ಮಾಡಿ ಚಿಕಿತ್ಸೆ ನೀಡಲು ಸರಕಾರ ನಿರ್ಧರಿಸಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿಎನ್‌.ಅಶ್ವತ್ಥನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ʼಕೋವಿಡ್‌ ಚಿಕಿತ್ಸೆ ಶಿಷ್ಟಾಚಾರ ಸಮಿತಿʼ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ತಜ್ಞರು ಕೊಟ್ಟ ವರದಿ ಪ್ರಕಾರ ಶೇ.30ರಿಂದ 40ರಷ್ಟು ಗಂಭೀರವಲ್ಲದ ಸೋಂಕಿತರು ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೂಡಲೇ ಇವರೆಲ್ಲರನ್ನೂ ಸ್ಟೆಪ್‌ಡೌನ್‌ ಆಸ್ಪತ್ರೆಗಳಿಗೆ ಶಿಫ್ಟ್‌ ಮಾಡುವ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

ಕೂಡಲೇ ಈ ಕೆಲಸ ಆಗಬೇಕು. ಇಷ್ಟು ಬೆಡ್‌ಗಳು ಖಾಲಿಯಾದರೆ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಬೆಡ್‌ಗಳು ಲಭ್ಯವಾಗುತ್ತವೆ. ಇದರಿಂದ ಸಾವಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ಸಭೆಯಲ್ಲಿ ಹೇಳಿದರು.

ಸರಕಾರಿ ಆಸ್ಪತ್ರೆಗಳು ಮಾತ್ರವಲ್ಲದೆ ಖಾಸಗಿ ಆಸ್ಪತ್ರೆಗಳು ಕೂಡ ಕಡ್ಡಾಯವಾಗಿ ಈ ನಿರ್ಣಯವನ್ನು ಜಾರಿಗೆ ತರಬೇಕು. ನೋಡೆಲ್‌ ಅಧಿಕಾರಿಗಳ ಉಸ್ತುವಾರಿಯಲ್ಲಿ ಈ ಪ್ರಕ್ರಿಯೆ ಕಟ್ಟುನಿಟ್ಟಾಗಿ ನಡೆಯಬೇಕು ಎಂದು ಅವರು ಸೂಚಿಸಿದರು.

ಅನೇಕರು ಆಸ್ಪತ್ರೆಗೆ ಸೇರುವ ಅಗತ್ಯ ಇಲ್ಲದಿದ್ದರೂ ಬಂದು ಸೇರುತ್ತಿದ್ದಾರೆ. ಇದನ್ನು ಕೂಡ ತಡೆಯಬೇಕು ಹಾಗೂ ಅವರನ್ನು ಹೋಮ್‌ ಐಸೋಲೇಷನ್‌ ಮಾಡಿ ಚಿಕಿತ್ಸೆ ಕೊಡಬೇಕು. ಸರಕಾರದ ಮಾರ್ಗಸೂಚಿ ಪ್ರಕಾರ 90ಕ್ಕಿಂತ‌ ಕಡಿಮೆ ಸ್ಯಾಚುರೇಷನ್ ಇರುವವರು ಮಾತ್ರ ಆಸ್ಪತ್ರೆಗೆ ದಾಖಲಾಗಬೇಕು. ಹಣ ಕೊಡ್ತಾರೆ ಎಂದು ಆಸ್ಪತ್ರೆಗಳಿಗೆ ದಾಖಲು ಮಾಡಿಕೊಳ್ಳುವಂತಿಲ್ಲ. ಇದು ಖಾಸಗಿ ಆಸ್ಪತ್ರೆಗಳಿಗೂ ಕಡ್ಡಾಯವಾಗಿ ಅನ್ವಯವಾಗುತ್ತದೆ ಎಂದು ಡಿಸಿಎಂ ಸಭೆಯಲ್ಲಿ ಹೇಳಿದರು.

ರಾಜ್ಯದಲ್ಲಿ ಕೋವಿಡ್‌ ಆಸ್ಪತ್ರೆಗಳ ಸಮರ್ಪಕ ನಿರ್ವಹಣೆ ಕುರಿತು ಸಲಹಾ ಸಮಿತಿ ನೀಡಿರುವ ಸೂಚನೆಗಳನ್ನು ಗಣನೆಗೆ ತೆಗೆದುಕೊಂಡು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.@CMofKarnataka @KarnatakaVarthe

1/4 pic.twitter.com/wjBnHgXJAS

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) May 7, 2021

ಸಂಬಂಧಿಕರಿಗೆ ಮಾಹಿತಿ ಕಡ್ಡಾಯ

ಸರಕಾರಿ ರೂಪಿಸಿರುವ ಕೋವಿಡ್‌ ಚಿಕಿತ್ಸಾ ವಿಧಾನದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಖಾಸಗಿ ಆಸ್ಪತ್ರೆಗಳೂ ಪಾಲಿಸಬೇಕು. ಕೋವಿಡ್‌ ಶಿಷ್ಟಾಚಾರವನ್ನು ಯಾರೂ ಉಲ್ಲಂಘಿಸುವಂತಿಲ್ಲ. ಆಸ್ಪತ್ರೆಗಳಲ್ಲಿಸಮರ್ಪಕ ಚಿಕಿತ್ಸೆ ನೀಡುತ್ತಿಲ್ಲ ಎಂದು ದೂರುಗಳು ಬಂದಿವೆ. ಈ ಬಗ್ಗೆ ಕರಾರುವಕ್ಕಾದ ಸಮೀಕ್ಷೆ-ಪರಿವೇಕ್ಷಣೆ ನಡೆಸಿ. ಗುಣಮಟ್ಟದ ಚಿಕಿತ್ಸೆ ಸಿಗಬೇಕು. ಚಿಕಿತ್ಸೆಯಲ್ಲಿ ಎಲ್ಲಾದರೂ ಲೋಪವಾಗಿದ್ದರೆ ಕಠಿಣ ಕ್ರಮ ಜರುಗಿಸಿ. ಇದೇ ವೇಳೆ ರಿಮೋಟ್‌ ಐಸಿಯು ವ್ಯವಸ್ಥೆಯನ್ನು ಕೆಲ ದಿನಗಳಲ್ಲಿಯೇ ಅನುಷ್ಟಾನಕ್ಕೆ ತರಲಾಗುತ್ತಿದೆ ಎಂದು ಡಿಸಿಎಂ ಹೇಳಿದರು.

ಚಿಕಿತ್ಸೆ ಪಡೆಯುತ್ತಿರುವ ಸೋಂಕಿರಿಗೆ ಯಾವ ಚಿಕಿತ್ಸೆ ನೀಡಲಾಗುತ್ತಿದೆ? ಅವರ ಆರೋಗ್ಯ ಹೇಗಿದೆ? ಎಂಬ ಮಾಹಿತಿಯನ್ನು ಸಂಬಂಧಿಕರಿಗೆ ನೀಡುವುದು ಕಡ್ಡಾಯ. ವೈದ್ಯರು ಈ ಬಗ್ಗೆ ಸಂಬಂಧಿಕರಿಗೆ ಸಮರ್ಪಕ ಮಾಹಿತಿ ನೀಡಲಾಗುತ್ತಿಲ್ಲ ಎಂದು ದೂರುಗಳು ಬರುತ್ತಿವೆ. ಸಾವುಗಳ ಬಗ್ಗೆಯೂ ಸಮರ್ಪಕ ಆಡಿಟ್‌ ನೆಯಬೇಕು ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

ರಕ್ತ ಪರೀಕ್ಷೆ ಮಾಡಿ

ಹೋಮ್‌ ಐಸೋಲೇಷನ್‌ ಆಗಿರುವ ಸೋಂಕಿತರ ರಕ್ತ ಪರೀಕ್ಷೆ ನಡೆಸುವಂತೆ ಸೂಚಿಸಿದ ಡಿಸಿಎಂ ಅವರು, ಇತ್ತೀಚಿನ ಕೆಲ ದಿನಗಳಲ್ಲಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯದಲ್ಲಿ ಬಹಳ ಏರುಪೇರಾಗುತ್ತಿರುವ ವರದಿಗಳು ಬರುತ್ತಿವೆ. ಹೀಗಾಗಿ ಅವರೆಲ್ಲರ ರಕ್ತ ಪರೀಕ್ಷೆ ಮಾಡಿ, ಸಮಸ್ಯೆ ಪತ್ತೆ ಹಚ್ಚಬೇಕು. ಸೋಂಕು ಪತ್ತೆ ಹಚ್ಚುವ ಕೆಲಸ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೇ ಮುಗಿಯಬೇಕು ಎಂದು ಅಧಿಕಾರಿಗಳಿಗೆ ಡಾ.ಅಶ್ವತ್ಥನಾರಾಯಣ ಸೂಚಿಸಿದರು.

ಸಭೆಯಲ್ಲಿ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಆಕ್ತರ್‌, ಇಲಾಖೆ ಆಯುಕ್ತ ತ್ರಿಲೋಕ ಚಂದ್ರ, ಡಿಸಿಎಂ ಅವರ ಕಾರ್ಯದರ್ಶಿ ಪ್ರದೀಪ್‌, ಚಿಕ್ಸಿತೆಯ ಶಿಷ್ಟಾಚಾರ ಸಮಿತಿ ಅಧ್ಯಕ್ಷರೂ ಆದ ಆರೋಗ್ಯ ವಿವಿ ಕುಲಪತಿ ಡಾ.ಸಚ್ಚಿದಾನಂದ ಸೇರಿದಂತೆ ಇತರ ಹಿರಿಯ ವೈದರು ಸಭೆಯಲ್ಲಿ ಇದ್ದರು.

Tags: covid19covid19 treatment protocoldr cn ashwathnarayankarnatakastep down hospital
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಕಂಪ್ಲೀಟ್‌ ಲಾಕ್‌ಡೌನ್: ಎರಡನೇ ಅಲೆಯಿಂದ  ರಾಜ್ಯವನ್ನು ರಕ್ಷಿಸಲು ಇದೊಂದೇ ಪರಿಹಾರ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಕಂಪ್ಲೀಟ್‌ ಲಾಕ್‌ಡೌನ್: ಎರಡನೇ ಅಲೆಯಿಂದ ರಾಜ್ಯವನ್ನು ರಕ್ಷಿಸಲು ಇದೊಂದೇ ಪರಿಹಾರ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ವಿಮೆ ಕಂಪನಿಗಳನ್ನು ವಿನಾಕಾರಣ ಉದ್ಧಾರ ಮಾಡುತ್ತಿದ್ದೇವೆ ಎಂದು ಕಿಡಿಕಿಡಿಯಾದ ಸಚಿವರು; ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಟ್ಟಿದ ಪ್ರೀಮಿಯಂ ₹40 ಲಕ್ಷ, ಸಿಕ್ಕಿದ ವಿಮೆ ₹19 ಲಕ್ಷ!

ವಿಮೆ ಕಂಪನಿಗಳನ್ನು ವಿನಾಕಾರಣ ಉದ್ಧಾರ ಮಾಡುತ್ತಿದ್ದೇವೆ ಎಂದು ಕಿಡಿಕಿಡಿಯಾದ ಸಚಿವರು; ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಟ್ಟಿದ ಪ್ರೀಮಿಯಂ ₹40 ಲಕ್ಷ, ಸಿಕ್ಕಿದ ವಿಮೆ ₹19 ಲಕ್ಷ!

6 years ago
ಮನುಷ್ಯನಲ್ಲಿನ ಟೊಳ್ಳನ್ನುಅಳಿಸಿ ಅಧ್ಯಾತ್ಮದ ಮತ್ತು ದೈವತ್ವದ ಸೆಲೆ ಮೂಡಿಸುವುದೇ ಸತ್ಸಂಗ: ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ

ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಸಂತ ಸಮಾವೇಶ

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ