• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ಆದೇಶ: 20,000 ಆಕ್ಸಿಜನ್‌ ಬೆಡ್‌ ವ್ಯವಸ್ಥೆಗೆ ಮುಂದಾದ ರಾಜ್ಯ; ನಿತ್ಯ 37,000 ರೆಮಿಡಿಸಿವಿರ್‌ ಲಭ್ಯ, ಕೋವಿಡ್‌ ರಿಸಲ್ಟ್‌ ತಡವಾದರೆ ಲ್ಯಾಬ್‌ಗಳಿಗೆ ದಂಡ

cknewsnow desk by cknewsnow desk
May 9, 2021
in COVID-19, STATE
Reading Time: 1 min read
0
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ
914
VIEWS
FacebookTwitterWhatsuplinkedinEmail

24 ಗಂಟೆ ಒಳಗಾಗಿ ಕೋವಿಡ್‌ ಪರೀಕ್ಷೆ ರಿಸಲ್ಟ್‌ ನೀಡಲಾಗುವುದು. ಯಾವ ಲ್ಯಾಬೇ ಆಗಿರಲಿ. ಅದು ಖಾಸಗಿಯಾಗಿರಲಿ ಅಥವಾ ಸರಕಾರದ್ದೇ ಆಗಿರಲಿ ಸರಕಾರ ನಿಗದಿ ಮಾಡಿದ ಸಮಯದೊಳಗೆ ಫಲಿತಾಂಶ ನೀಡದಿದ್ದರೆ ಪ್ರತಿ ಟೆಸ್ಟಿಗೆ 100ರಿಂದ 150 ರೂಪಾಯಿ ದಂಡ ವಿಧಿಸಲಾಗುವುದು: ಡಿಸಿಎಂ

ಬೆಂಗಳೂರು: ಸುಪ್ರೀಂ ಕೋರ್ಟ್ 1,200 ಮೆ.ಟನ್‌ ಆಮ್ಲಜನಕವನ್ನು ರಾಜ್ಯಕ್ಕೆ ಹಂಚಿಕೆ ಮಾಡಲು ಕೇಂದ್ರ ಸರಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸರಕಾರವು ಆಕ್ಸಿಜನ್‌ ಬೆಡ್‌ಗಳ ಪ್ರಮಾಣವನ್ನು ಇನ್ನೂ 20,000 ಹೆಚ್ಚಿಸಲು ಮುಂದಾಗಿದೆ ಎಂದು ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಪ್ರಕಟಿಸಿದರು.

ವಿಧಾನಸೌಧದಲ್ಲಿಂದು  ಬಿಜೆಪಿ ಆಯೋಜಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಟ್ಟು 20,000 ಆಕ್ಸಿಜನ್‌ ಬೆಡ್‌ಗಳ ಪೈಕಿ ತಕ್ಷಣವೇ ತುರ್ತಾಗಿ 10,000 ಬೆಡ್‌ ವ್ಯವಸ್ಥೆ ಮಾಡಲಾಗುವುದು. ಇದರೊಂದಿಗೆ ರಾಜ್ಯದಲ್ಲಿ ಉಂಟಾಗಿರುವ ಆಕ್ಸಿಜನ್‌ ಬೆಡ್‌ಗಳ ಹಾಹಾಕಾರ ನೀಗಲಿದೆ” ಎಂದರು.

ಕೋವಿಡ್‌ ಬರುವ ಮುನ್ನ ರಾಜ್ಯದಲ್ಲಿ ದಿನಕ್ಕೆ 100 ಮೆ.ಟನ್‌ ಆಕ್ಸಿಜನ್‌ ಮಾತ್ರ ಖರ್ಚಾಗುತ್ತಿತ್ತು. ಆದರೆ, ಈಗ ನಿತ್ಯವೂ 950 ಮೆ.ಟನ್‌ ಬೇಕಾಗುತ್ತಿದೆ. ಸದ್ಯಕ್ಕಿರುವ ಆಕ್ಸಿಜನ್‌ ಬೆಡ್‌ಗಳಿಗೆ ಸಾಕಾಗುವಷ್ಟು ಆಮ್ಲಜನಕ ನಮ್ಮಲ್ಲಿದೆ. ಆದರೆ, ಸೋಂಕಿತರು ಹೆಚ್ಚುತ್ತಿರುವುದರಿಂದ  ಅನಿವಾರ್ಯವಾಗಿ ಬೆಡ್‌ಗಳನ್ನೂ ಹೆಚ್ಚಿಸಬೇಕಾಗಿರುವುದರಿಂದ ಹೆಚ್ಚುವರಿ ಆಮ್ಲಜನಕವೂ ಬೇಕಿದೆ. ಆ ಕೊರತೆ ನ್ಯಾಯಾಲಯದ ಆದೇಶದಿಂದ ನೀಗಲಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು

ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲೂ ಆಕ್ಸಿಜನ್‌ ಬೆಡ್‌ ಹಾಕಲು ನಿರ್ಧರಿಸಲಾಗಿದೆ. ಅಲ್ಲಿಗೆ ಅಗತ್ಯ ನುರಿತ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದ ಅವರು, ಸದ್ಯಕ್ಕೆ ಈಗ ರಾಜ್ಯದಲ್ಲಿ 70,000 ಬೆಡ್‌ಗಳನ್ನು ಕೋವಿಡ್‌ಗೆ ಮೀಸಲಾಗಿ ಇಡಲಾಗಿದ್ದು, ಈ ಪೈಕಿ ಸರಕಾರದಿಂದ 35,000 ಹಾಗೂ ಖಾಸಗಿ ಆಸ್ಪತ್ರೆಗಳ ವತಿಯಿಂದ 35,000 ಬೆಡ್‌ಗಳಿವೆ. ಈ ಒಟ್ಟು ಬೆಡ್‌ಗಳ ಪೈಕಿ 50,000 ಆಕ್ಸಿಜನ್‌ ಬೆಡ್‌ಗಳಿವೆ ಎಂದರು.

ಇದೇ ವೇಳೆ ಆಕ್ಸಿಜನ್‌ ಬೆಡ್‌ಗಳ ಕೊರತೆಯನ್ನು ನೀಗಿಸಲು ಕ್ರಮ ವಹಿಸಲಾಗಿದೆ. ಶೇ.30ರಿಂದ 40ರಷ್ಟು ಗಂಭೀರವಲ್ಲದ ಸೋಂಕಿತರು ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಆಕ್ಸಿಜನ್‌ ಬೆಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರನ್ನು ಕೂಡಲೇ ಸ್ಟೆಪ್‌ಡೌನ್‌ ಆಸ್ಪತ್ರೆಗಳಿಗೆ ಶಿಫ್ಟ್‌ ಮಾಡಲು ಸರಕಾರ ನಿರ್ಧರಿಸಿದೆ ಎಂದು ಡಿಸಿಎಂ ತಿಳಿಸಿದರು.

.@BJP4Karnataka ದ ಎಲ್ಲಾ 250 ಸಹಾಯ ಕೇಂದ್ರಗಳಲ್ಲಿ ರಾಜ್ಯಾದ್ಯಂತ 'ಸೇವೆಯೇ ಸಂಘಟನೆ' ಅಭಿಯಾನ ಮೂಲಕ #COVID19 ನಿಯಂತ್ರಣ,ಪರಿಹಾರ ಕಾರ್ಯಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ವಿಧಾನಪರಿಷತ್ ಸದಸ್ಯರು,ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ @nrkbjp ಹಾಗೂ ಶ್ರೀ ಅಶ್ವಥ್ ನಾರಾಯಣ್ ಅವರೊಂದಿಗೆ ಈ ಬಗ್ಗೆ ಸುದ್ದಿಗೋಷ್ಠಿ ನಡೆಯಿತು.

1/9 pic.twitter.com/QgVN9CDC1e

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) May 8, 2021

ರೆಮಿಡಿಸಿವಿರ್‌ ಸಮಸ್ಯೆ ಇಲ್ಲ

ರೆಮಿಡಿಸಿವಿರ್‌ ಕೊರತೆ ಈಗಿಲ್ಲ. 9ನೇ ತಾರೀಖಿನ ವರೆಗೂ 30,900 ಡೋಸ್‌ ಹಂಚಿಕೆಯಾಗಿತ್ತು. ಇನ್ನು 70,000 ಡೋಸ್‌ ಬರುವುದು ಬಾಕಿ ಇದೆ. ಇವತ್ತು-ನಾಳೆಗೆ ಕೊರತೆ ಇಲ್ಲ. ಎಲ್ಲ ಜಿಲ್ಲೆಗಳಿಗೂ ಹಂಚಿಕೆ ಮಾಡಲಾಗಿದೆ. ಹತ್ತನೇ ತಾರೀಖಿನ ನಂತರ ಒಂದು ವಾರ ಕಾಲ 2,60,000 ಡೋಸ್ ಹಂಚಿಕೆಯಾಗಿದ್ದು, ರಾಜ್ಯಕ್ಕೆ ಬರುವುದಿದೆ. ಈ ಲೆಕ್ಕದ ಪ್ರಕಾರ ಪ್ರತಿದಿನ ರಾಜ್ಯಕ್ಕೆ 37,000 ಡೋಸ್ ಲಭ್ಯವಾಗುತ್ತಿದೆ. ಹೀಗಾಗಿ ಕೊರತೆ ಪ್ರಶ್ನೆ ಇಲ್ಲ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

ನಿತ್ಯವೂ ನಮಗೆ ಪೂರೈಕೆ ಮಾಡಬೇಕಾದ ರೆಮಿಡಿಸಿವಿರ್‌ ಕೋಟಾ ಸಕಾಲಕ್ಕೆ, ಸರಿಯಾಗಿ ಪೂರೈಕೆ ಮಾಡುವಂತೆ ಎಲ್ಲ ತಯಾರಿಕಾ ಕಂಪನಿಗಳಿಗೆ ಸರಕಾರ ಇವತ್ತೇ ನೊಟೀಸ್‌ ಕೂಡ ಜಾರಿ ಮಾಡುತ್ತಿದೆ ಎಂದೂ ಅವರು ಉತ್ತರಿಸಿದರು.

ಕೋವಿಡ್‌ ರಿಸಲ್ಟ್‌ ತಡವಾದರೆ ಲ್ಯಾಬ್‌ಗೆ ದಂಡ

ಇನ್ನು ಮುಂದೆ 24 ಗಂಟೆ ಒಳಗಾಗಿ ಕೋವಿಡ್‌ ಪರೀಕ್ಷೆ ರಿಸಲ್ಟ್‌ ನೀಡಲಾಗುವುದು. ಯಾವ ಲ್ಯಾಬೇ ಆಗಿರಲಿ. ಅದು ಖಾಸಗಿಯಾಗಿರಲಿ ಅಥವಾ ಸರಕಾರದ್ದೇ ಆಗಿರಲಿ ಸರಕಾರ ನಿಗದಿ ಮಾಡಿದ ಸಮಯದೊಳಗೆ ಫಲಿತಾಂಶ ನೀಡದಿದ್ದರೆ ಪ್ರತಿ ಟೆಸ್ಟಿಗೆ 100ರಿಂದ 150 ರೂಪಾಯಿ ದಂಡ ವಿಧಿಸಲಾಗುವುದು ಎಂದು ಡಿಸಿಎಂ ಎಚ್ಚರಿಕೆ ಕೊಟ್ಟರು.

ಇಷ್ಟು ದಿನ ಸೋಂಕಿತರು ತಡವಾಗಿ ಪರೀಕ್ಷೆಗೆ ಬರುತ್ತಿದ್ದರು. ತಡವಾಗಿ ಪರೀಕ್ಷೆ ಮಾಡಿಸಿಕೊಂಡು ತಡವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಹೀಗಾಗಿ ಪ್ರಾಣ ಹಾನಿ ಹೆಚ್ಚಾಗುತ್ತಿತ್ತು. ಮುಂದೆ ಹೀಗೆ ಆಗಬಾರದು ಎಂದು ಅವರು ತಿಳಿಸಿದರು.

ಆರ್‌ಟಿಪಿಸಿಆರ್‌ ಟೆಸ್ಟ್‌ಗೆ ವೇಗ ಕೊಡಲಾಗಿದೆ. ಕೋವಿಡ್‌ ಬಂದಾಗ ಸರಕಾರಿ ವಲಯದಲ್ಲಿ ಕೇವಲ ಒಂದೇ ಲ್ಯಾಬ್‌ ಇತ್ತು. ಇವತ್ತು 91 ಲ್ಯಾಬ್‌ಗಳಿವೆ. ಖಾಸಗಿ ವಲಯದಲ್ಲಿ 150 ಲ್ಯಾಬ್‌ಗಳಿವೆ. ದಿನಕ್ಕೆ ಸರಕಾರದ ವತಿಯಿಂದ 10,500 ಟೆಸ್ಟ್‌ಗಳನ್ನು ಮಾಡಬಹುದು. ಖಾಸಗಿ ಲ್ಯಾಬ್‌ಗಳಲ್ಲಿ 70,000 ಜನರಿಗೆ ಟೆಸ್ಟ್‌ ಆಗುತ್ತಿದೆ. ಅಂಕಿ-ಅಂಶಗಳ ಪ್ರಕಾರ 93% ಆರ್‌ಟಿಪಿಸಿಆರ್‌ ಟೆಸ್ಟ್‌ ಆಗುತ್ತಿದ್ದರೆ, 7% ಮಾತ್ರ ರಾಟ್‌ ಟೆಸ್ಟ್‌ ಆಗುತ್ತಿದೆ. ಈಗ ರಾಟ್‌ ಟೆಸ್ಟ್‌ ಅನ್ನು ಎಷ್ಟು ಬೇಕಾದರೂ ಮಾಡಲು ಐಸಿಎಂಆರ್‌ ಒಪ್ಪಿಗೆ ಕೊಟ್ಟಿದ್ದು, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ರಾಟ್‌ ಕಿಟ್‌ಗಳನ್ನು ಒದಗಿಸಿ ಪರೀಕ್ಷೆಗಳನ್ನು ಹೆಚ್ಚಿಸಲಾಗುವುದು ಎಂದರು ಡಿಸಿಎಂ.

ಔಷಧ ಕೊರತೆ ಇಲ್ಲ

ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್‌ ಔಷಧಿಗಳನ್ನು ಅಗತ್ಯ ಪ್ರಮಾಣದಲ್ಲಿ ಒದಗಿಸಲಾಗುತ್ತಿದೆ. ಜತೆಗೆ, ವೈದ್ಯಕೀಯ ಬಳಕೆ ವಸ್ತುಗಳ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗಿದೆ. ಇನ್ನೆರಡು ದಿನದಲ್ಲಿ ಅಷ್ಟೂ ಪಿಎಚ್‌ಸಿಗಳಿಗೆ ಮತ್ತೂ ಅಗತ್ಯವಾದಷ್ಟು ಔಷಧಿ ಮತ್ತು ಸರಂಜಾಮುಗಳನ್ನು ಒದಗಿಸಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಇನ್ನೊಂದೆಡೆ ಎಲ್ಲ ವೈದ್ಯರು ಮತ್ತು ಆಸ್ಪತ್ರೆಗಳಿಗೆ ಕೋವಿಡ್‌ ಸೋಂಕಿತರನ್ನು ಟ್ರೀಟ್‌ ಮಾಡುವ ಬಗ್ಗೆ ಸ್ಪಷ್ಟ ಮಾರ್ಗಸೂಚಿ ನೀಡಲಾಗಿದೆ. ಯಾವ ಕಾರಣಕ್ಕೂ ಅದನ್ನು ಮೀರುವಂತಿಲ್ಲ ಎಂದ ಅವರು,

ಬೂತ್‌ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರ ನೆರವು

ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕೋವಿಡ್‌ ಸೋಂಕಿರಿಗೆ ನೆರವಾಗುತ್ತಿದ್ದಾರೆಂಬ ಮಾಹಿತಿ ಹಂಚಿಕೊಂಡ ಡಿಸಿಎಂ, ಬೂತ್‌ ಮಟ್ಟದಲ್ಲಿ ಕಾರ್ಯಕರ್ತರು ಸೋಂಕಿತರಿಗೆ ಅಗತ್ಯವಾದ ಎಲ್ಲ ನೆರವು ಕೊಡುತ್ತಿದ್ದಾರೆ, ಆಹಾರ ಧಾನ್ಯ, ಔಷಧಿ, ವೈದ್ಯಕೀಯ ಸಂಪರ್ಕ, ಮಾಸ್ಕ್‌ ತಲುಪಿಸುವ ಕೆಲಸ ಮಾಡುತ್ತಿದ್ದಾರೆ. 250 ಕೇಂದ್ರಗಳ ಮೂಲಕ ರಾಜ್ಯಾದ್ಯಂತ ಕಾರ್ಯಕರ್ತರು ಸಮರೋಪಾದಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಅಲ್ಲದೆ, ಕೋವಿಡ್‌ ಕೇರ್‌ಗಳಲ್ಲೂ ಕಾರ್ಯಕರ್ತರು ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಸರಕಾರದ ಕೋವಿಡ್‌ ಯಂತ್ರಾಂಗದ ಜತೆ ಸೇರಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಶಕ್ತಿ ತುಂಬುವ ಕೆಲಸವನ್ನು ಪಕ್ಷ ಮಾಡುತ್ತಿದೆ ಎಂದು ಡಿಸಿಎಂ ತಿಳಿಸಿದರು.

ವಿಧಾನಪರಿಷತ್‌ ಸದಸ್ಯ ರವಿಕುಮಾರ್‌, ಪಕ್ಷದ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ಬಿಜೆಪಿ ಮಾಧ್ಯಮ ಸಂಚಾಲಕ ಪ್ರಶಾಂತ್‌ ಇದ್ದರು.

Tags: covid19dr cn ashwathnarayankarnatakakarnataka fights coronalabsmedical oxygenrtpcr test
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ನಾಳೆಯಿಂದ (ಮೇ 10) 18-44 ವರ್ಷ ವಯೋಮಾನದ ಎಲ್ಲರಿಗೂ ಕೋವಿಡ್ ಲಸಿಕೆ; ನೋಂದಣಿ ಮಾಡಿಸಿಕೊಂಡವರಿಗೆ ಮಾತ್ರ ಸಿಗಲಿದೆ ವ್ಯಾಕ್ಸಿನ್: ಸಚಿವ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ ನಕಲಿ ಹಕ್ಕುಪತ್ರ ಹಗರಣ ತನಿಖೆಗೆ ಸರಕಾರ ನಿರ್ಧಾರ

ಚಿಕ್ಕಬಳ್ಳಾಪುರ ನಕಲಿ ಹಕ್ಕುಪತ್ರ ಹಗರಣ ತನಿಖೆಗೆ ಸರಕಾರ ನಿರ್ಧಾರ

3 years ago
ನಾನೇ ಒರಿಜಿನಲ್ ಎಂದ ಸಿ.ಎಂ.ಇಬ್ರಾಹಿಂಗೆ ಜೆಡಿಎಸ್‌ ಗೇಟ್‌ಪಾಸ್ ‌

ನಾನೇ ಒರಿಜಿನಲ್ ಎಂದ ಸಿ.ಎಂ.ಇಬ್ರಾಹಿಂಗೆ ಜೆಡಿಎಸ್‌ ಗೇಟ್‌ಪಾಸ್ ‌

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ