• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

SAST ಪೋರ್ಟಲ್‌’ನಲ್ಲಿ ಆಮ್ಲಜನಕ, ರೆಮಿಡಿಸಿವರ್‌ ಜತೆಗೆ ಖಾಸಗಿ ಆಸ್ಪತ್ರೆಗಳ ಸರಕಾರಿ ಬೆಡ್‌ ಮಾಹಿತಿ; ಇಷ್ಟು ದಿನ ನಡೆದ ಕೋವಿಡ್‌ ಬೆಡ್‌ & ಔಷಧ ಗೋಲ್‌ಮಾಲ್‌ಗೆ ಬೀಳುತ್ತಾ ಅಂಕುಶ?

cknewsnow desk by cknewsnow desk
May 10, 2021
in COVID-19, STATE
Reading Time: 1 min read
0
ಖಾಸಗಿ ಮೆಡಿಕಲ್ ಕಾಲೇಜುಗಳಿಂದ 6,034 ಹಾಸಿಗೆ ಮೀಸಲು, ಇನ್ನೂ 1,135 ಹಾಸಿಗೆ ಶೀಘ್ರವೇ ಲಭ್ಯ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
914
VIEWS
FacebookTwitterWhatsuplinkedinEmail

ಬೇಡಿಕೆ-ಪೂರೈಕೆಯಲ್ಲಿ ಪಾರದರ್ಶಕತೆ ತರಲು ಸರಕಾರದ ಕ್ರಮ I ಟೆಸ್ಟ್‌ ವರದಿ ತಡವಾದರೆ ಲ್ಯಾಬ್‌ಗಳಿಗೆ ಒಂದು ಟೆಸ್ಟ್‌ಗೆ ₹150 ದಂಡ

ಬೆಂಗಳೂರು: ಆಮ್ಲಜನಕ, ರೆಮಿಡಿಸಿವಿರ್ ಜತೆಗೆ ಖಾಸಗಿ ಆಸ್ಪತ್ರೆಗಳಲ್ಲಿರುವ ಸರಕಾರಿ ಬೆಡ್‌ಗಳ ಮಾಹಿತಿಯನ್ನು ಸುವರ್ಣ ಆರೋಗ್ಯ ಸುರಕ್ಷತಾ ಟ್ರಸ್ಟ್‌ (SAST) ಪೋರ್ಟಲ್ʼ ನಲ್ಲಿ ಸಿಗುವ ಹಾಗೆ ಮಾಡಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ರಾಜ್ಯ ಕೋವಿಡ್‌ ವಾರ್ ರೂಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಆಮ್ಲಜನಕ & ರೆಮಿಡಿಸಿವಿರ್ ಬೇಡಿಕೆ- ಪೂರೈಕೆಯಲ್ಲಿ ಪಾರದರ್ಶಕತೆ ಬಹಳ ಮುಖ್ಯ. ಎಷ್ಟು ಪೂರೈಕೆ ಆಗುತ್ತಿದೆ? ಎಷ್ಟು ಬಳಕೆಯಾಗುತ್ತಿದೆ? ಯಾರಿಗೆ ಕೊಡಲಾಗಿದೆ? ಎಂಬ ಸಮಗ್ರ ಮಾಹಿತಿಯನ್ನು ಇದೇ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡಲಾಗುವುದು. ಈಗ ಪ್ರತೀದಿನ 35,000 ರೆಮಿಡಿಸಿವಿರ್ ಡೋಸ್‌ ಬೇಕಿದೆ ಎಂದರು.

ಇದರ ಜತೆಗೆ, ರಾಜ್ಯಾದ್ಯಂತ ಆಕ್ಸಿಜನ್‌ ಬೆಡ್‌ಗಳಿಗೆ ಭಾರೀ ಬೇಡಿಕೆ ಇದೆ. ಸರಕಾರಿ ಆಸ್ಪತ್ರೆಗಳ ಜತೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಇರುವ ಸರಕಾರದ ಬೆಡ್‌ಗಳ ಮಾಹಿತಿಯನ್ನು ಕೂಡ ಈ ಪೋರ್ಟಲ್‌ ನಲ್ಲಿ ಹಾಕಲಾಗುವುದು. ಇದರಿಂದ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ಬರುತ್ತದೆ. ಜತೆಗೆ ಸಾರ್ವಜನಿಕರಿಗೂ ವಾಸ್ತವ ಚಿತ್ರಣ ಸಿಗುವಂತಾಗಲಿದೆ ಎಂದರು.

ಇನ್ನು ಎರಡು-ಮೂರು ದಿನಗಳಲ್ಲೇ ಸಾಸ್ಟ್ ಪೋರ್ಟ್‌ಲ್‌ಗೆ (http://arogya.karnataka.gov.in/) ಮೇಲೆ ತಿಳಿಸಿದ ಎಲ್ಲವನ್ನೂ ಲಿಂಕ್‌ ಮಾಡಲಾಗುವುದು. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ ತಿಳಿಸಿದರು.

ಕರ್ನಾಟಕ ಕೋವಿಡ್ ನಿರ್ವಹಣೆ ವಾರ್‌ ರೂಮ್‌ಗೆ ಭೇಟಿ ನೀಡಿ ಅದರ ಕಾರ್ಯ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿ ಕ್ಷಿಪ್ರಗತಿಯಲ್ಲಿ ಕೆಲಸ ನಿರ್ವಹಿಸುವಂತೆ ಸೂಚಿಸಿದೆ.

24ಗಂಟೆ ಒಳಗಡೆ BU ನಂಬರ್‌ ನೀಡುವಂತೆ ಸೂಚಿಸಲಾಗಿದೆ. ತಡವಾಗಿ ಟೆಸ್ಟ್‌ ರಿಸಲ್ಟ್‌ ಕೊಡುವ ಲ್ಯಾಬ್‌ಗಳಿಗೆ ಪ್ರತಿ ಟೆಸ್ಟ್‌ಗೆ 150 ರೂ.ವರೆಗೆ ದಂಡ ವಿಧಿಸಲಾಗುವುದು.

1/3 pic.twitter.com/nUJzT5NqCi

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) May 10, 2021

24 ಗಂಟೆ ಒಳಗೇ ರಿಸಲ್ಟ್‌ & ಬಿಯು ನಂಬರ್

ಬೆಂಗಳೂರಿನಲ್ಲಿ ಈಗ ಪರೀಕ್ಷೆಯಾದ 24 ಗಂಟೆ ಒಳಗೇ ಫಲಿತಾಂಶ ಬಂದು ಬಿಯು ನಂಬರ್‌ ಜನರೇಟ್‌ ಆಗುತ್ತದೆ. ರಾಜ್ಯದ ಉದ್ದಗಲಕ್ಕೂ ಹೀಗೆಯೇ ಆಗಬೇಕು. ರಾಜ್ಯದ ಸರಾಸರಿ ಪರಿಸ್ಥಿತಿ ನೋಡಿದರೆ ರಿಸಲ್ಟ್‌ ಬರಲು ನಾಲ್ಕೂವರೆ ದಿನದಿಂದ ಎರಡು ದಿನವಾಗುತ್ತಿದೆ. ಫಲಿತಾಂಶ ವಿಳಂಬದಿಂದ ಸೋಂಕು ಉಲ್ಬಣಿಸಿ ಹೆಚ್ಚು ಪ್ರಾಣನಷ್ಟ ಆಗುತ್ತಿದೆ ಎಂದು ಡಿಸಿಎಂ ಕಳವಳ ವ್ಯಕ್ತಪಡಿಸಿದರು.

ಸ್ಯಾಂಪಲ್‌ ಕಲೆಕ್ಟ್‌ ಮಾಡಿದ ಒಂದು ದಿನದೊಳಗೆ ವರದಿ ಕೊಡುವುದಕ್ಕೆ ಇರುವ ಅಡ್ಡಿಗಳನ್ನು ನಿವಾರಿಸಲು ಎಲ್ಲ ಕ್ರಮ ಕೈಗೊಳ್ಳಲಾಗುತ್ತದೆ. ತಡವಾಗಿ ರಿಸಲ್ಟ್ ಕೊಡುವ ಲ್ಯಾಬ್‌ಗಳಿಗೆ ಪ್ರತಿ ಟೆಸ್ಟ್‌ಗೆ 150 ರೂ. ದಂಡ ವಿಧಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಬೆಡ್‌ಗೆ ಬೇಡಿಕೆ ಹೆಚ್ಚಾಗಿದೆ

ಬೆಂಗಳೂರಿನಲ್ಲಿ ಈಗ ಬೆಡ್ ಖಾಲಿ ಆಗುತ್ತಿರುವುದು ದಿನಕ್ಕೆ 950 ಮಾತ್ರ. ಆದರೆ 7000 ದಿಂದ 8000 ಬೆಡ್‌ಗಳಿಗೆ ಡಿಮಾಂಡ್ ಬರುತ್ತಿದೆ. ಇಷ್ಟು ಸೋಂಕಿತರಲ್ಲಿ ಟ್ರಾಯಾಜ್ (ವೈದ್ಯರ ಪರಿಶೀಲನೆ) ಆದ ಮೇಲೆ ಆಸ್ಪತ್ರೆಗೆ ಸೇರಬೇಕಾದವರೇ 2000ಕ್ಕೂ ಹೆಚ್ಚು ಜನ ಇದ್ದಾರೆಂದು ಡಿಸಿಎಂ ಮಾಹಿತಿ ನೀಡಿದರು.

ಬೆಡ್‌ ಬೇಡಿಕೆ ನಿಭಾಯಿಸಲು ಸಮರ್ಪಕ ಟ್ರಾಯಾಜಿಂಗ್ ಮಾಡಬೇಕು. ಬೆಂಗಳೂರಿನಲ್ಲಿ ಎಲ್ಲ ವಾರ್ಡ್ ಮಟ್ಟದಲ್ಲಿಯೂ ಟ್ರಾಯಾಜಿಂಗ್ ಮಾಡಿ ಅರ್ಹರಿಗಷ್ಟೇ ಆಸ್ಪತ್ರೆಗೆ ಸೇರಿಸುವ ಅವಕಾಶ ಕಲ್ಪಿಸುವ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಕೆಲ ಕಡೆ ವೈಯಕ್ತಿಕ ಟ್ರಾಯಾಜಿಂಗ್ ಆರಂಭವಾಗಿದೆ. ಒಂದೊಂದು ಕಡೆಯೂ ಐವರು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು ಡಾ.ಅಶ್ವತ್ಥನಾರಾಯಣ.

ಗಂಭೀರ ಸೋಂಕಿತರಿಗೆ ಬೆಡ್‌ ಒದಗಿಸುವ ಉದ್ದೇಶದಿಂದ ಸ್ಟೆಪ್ʼಡೌನ್ ಆಸ್ಪತ್ರೆಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದ ಅವರು, ಈ ಸ್ಟೆಪ್ʼಡೌನ್ ಆಸ್ಪತ್ರೆ & ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಟ್ರಾಯಾಜಿಂಗ್, ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಗಂಭೀರವಲ್ಲದ ಸೋಂಕಿತರಿಗೆ ಇಲ್ಲಿಯೇ ಚಿಕಿತ್ಸೆ ಕೋಡಲಾಗುವುದು ಎಂದು ಡಿಸಿಎಂ ತಿಳಿಸಿದರು.

20,000 ಬೆಡ್‌ ಹೆಚ್ಚಳ

ರಾಜ್ಯಾದ್ಯಂತ ಐಸಿಯು & ಆಕ್ಸಿಜನ್‌ ಬೆಡ್‌ಗಳನ್ನು ಹೆಚ್ಚಿಸಲಾಗುತ್ತಿದೆ. ಬೆಂಗಳೂರಿನಲ್ಲಿ 4000 ಬೆಡ್‌ಗಳೂ ಸೇರಿದಂತೆ ರಾಜ್ಯದ ಉದ್ದಗಲಕ್ಕೂ 20,000 ಬೆಡ್‌ಗಳನ್ನು ಹೆಚ್ಚಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ಆದೇಶದಿಂದ ರಾಜ್ಯಕ್ಕೆ 1200 ಮೆ.ಟನ್‌ ಆಮ್ಲಜನಕ ಹಂಚಿಕೆಯಾದ ಹಿನ್ನೆಲೆಯಲ್ಲಿ ಸರಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಡಾ.ಅಶ್ವತ್ಥನಾರಾಯಣ ವಿವರಿಸಿದರು.

ಹೆಚ್ಚು ದರ ಸುಲಿಗೆ ಮಾಡಿದರೆ ಕ್ರಮ

ಹೋಮ್‌ ಐಸೋಲೇಷನ್‌ ಪ್ರಮಾಣ ಹೆಚ್ಚುತ್ತಿರುವುದರಿಂದ ಪಲ್ಸಾಸ್ಕೋಮೀಟರ್‌ಗಳಿಗೆ ಡಿಮಾಂಡ್‌ ಜಾಸ್ತಿಯಾಗಿದೆ. ಮಾರುಕಟ್ಟೆಯಲ್ಲಿ ದುಬಾರಿ ಬೆಲೆಗೆ ಮಾರಲಾಗುತ್ತಿದೆ ಎಂಬ ಸರಕಾರಕ್ಕೆ ಬಂದಿದೆ. ಮೆಡಿಕಲ್‌ ಸ್ಟೋರ್‌ಗಳು ಆಗಿರಲಿ ಅಥವಾ ಇನ್ನಾರೇ ಆಗಿರಲಿ ಎಂಆರ್‌ಪಿಗಿಂತ ಹೆಚ್ಚು ಬೆಲೆಗೆ ಮಾರಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದು ಪ್ರತಿ ರೆಮಿಡಿಸಿವರ್‌ ಸೇರಿ ಪ್ರತಿಯೊಂದು ಔಷಧಕ್ಕೂ ಅನ್ವಯ ಆಗುತ್ತದೆ. ಜನರು 112 ಹೆಲ್ಪ್‌ಲೈನ್‌ ಕರೆ ಮಾಡಿದರೆ ಅಂಥ ತಪ್ಪಿತಸ್ಥರನ್ನೂ ಕೂಡಲೇ ಬಂಧಿಸಲಾಗುವುದು. ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಶಿಕ್ಷೆಗೊಳಪಡಿಸಲಾಗುವುದು ಎಂದು ಡಿಸಿಎಂ ಎಚ್ಚರಿಕೆ ನೀಡಿದರು.

ಸರಕಾರವು ದೊಡ್ಡ ಪ್ರಮಾಣದಲ್ಲಿ ಪಲ್ಸಾಸ್ಕೋಮೀಟರ್‌ಗಳನ್ನು ಖರೀದಿ ಮಾಡುತ್ತಿದೆ. ಪ್ರತೀ ಒಂದರ 350 ರೂ.ನಂತೆ ಕೊಡಲಾಗುತ್ತಿದೆ. ಹೀಗಿದ್ದರೂ ಜನರ ಅಗತ್ಯಕ್ಕಾಗಿ ಸರಕಾರ ಹೆಚ್ಚು ಪ್ರಮಾಣದಲ್ಲಿ ಕೊಳ್ಳುತ್ತಿದೆ ಎಂದರು ಅವರು.

ಡಿಸಿಎಂ ವಾರ್‌ ರೂಂಗೆ ಭೇಟಿ ನೀಡಿದ ವೇಳೆ ಮುಖ್ಯಮಂತ್ರಿಗಳ ಕಾರ್ಯನೀತಿ ಸಲಹೆಗಾರ ಪ್ರಶಾಂತ್‌ ಪ್ರಕಾಶ್‌ ಇದ್ದರು.

ಹಿರಿಯ ಐಎಎಸ್ ಅಧಿಕಾರಿಗಳಾದ ಪೊನ್ನುರಾಜ್‌, ಮೌನಿಷ್‌ ಮುದ್ಗಲ್‌, ಪ್ರದೀಪ್, ಅರುಂಧತಿ ಚಂದ್ರಶೇಖರ್‌, ಗಿರಿಗೌಡ, ಸಾಸ್ಟ್ ಪೋರ್ಟ್‌ಲ್‌ ಕಾರ್ಯನಿರ್ವಾಹಕ ನಿರ್ದೇಶಕಿ ಎನ್.ಟಿ. ಅಬ್ರು, ಕೆಎಎಸ್ ಅಧಿಕಾರಿ ರಾಜೇಂದ್ರ ಕುಮಾರ ಮತ್ತಿತರರು ಇದ್ದರು.

Tags: Bengalurucovid 19Covid second wavedr cn ashwathnarayankarnatakaoxygen bedsremidisivirsast portal
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

3ನೇ ಅಲೆಯನ್ನೂ ಎದುರಿಸಲು ಗ್ರಾಮೀಣ ಹಂತದಲ್ಲೇ ಹೆಚ್ಚೆಚ್ಚು ಮೂಲಸೌಲಭ್ಯ; ಹಳ್ಳಿ ಆಸ್ಪತ್ರೆಗಳಲ್ಲಿ 8,105 ಆಕ್ಸಿಜನ್‌ ಬೆಡ್‌ ವ್ಯವಸ್ಥೆ ಮಾಡಲು ನಿರ್ಧರಿಸಿದ ಸರಕಾರ

Leave a Reply Cancel reply

Your email address will not be published. Required fields are marked *

Recommended

ಡಿಜಿಟ್‌ನೊಂದಿಗೆ  ಸಿಎಂ ಪುತ್ರ ವಿಜಯೇಂದ್ರ ಡೀಲ್ ಬಗ್ಗೆ ಹೇಳಿದ  ಬಸನಗೌಡ ಪಾಟೀಲ್‌ ಯತ್ನಾಳ್‌

ನನ್ನ ನಾಲಿಗೆ ಸರಿ ಇದ್ದಿದ್ದಕ್ಕಾಗಿಯೇ ರಾಜ್ಯದಲ್ಲಿ ಇಷ್ಟೆಲ್ಲಾ ಬದಲಾವಣೆ ಆಗಿದೆ ಎಂದ ಯತ್ನಾಳ್

5 years ago
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ಅತಿಥಿ ಉಪನ್ಯಾಸಕರಿಗೆ ಸಂಕ್ರಾತಿ ಕೊಡುಗೆ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ