• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

3ನೇ ಅಲೆಯನ್ನೂ ಎದುರಿಸಲು ಗ್ರಾಮೀಣ ಹಂತದಲ್ಲೇ ಹೆಚ್ಚೆಚ್ಚು ಮೂಲಸೌಲಭ್ಯ; ಹಳ್ಳಿ ಆಸ್ಪತ್ರೆಗಳಲ್ಲಿ 8,105 ಆಕ್ಸಿಜನ್‌ ಬೆಡ್‌ ವ್ಯವಸ್ಥೆ ಮಾಡಲು ನಿರ್ಧರಿಸಿದ ಸರಕಾರ

cknewsnow desk by cknewsnow desk
May 10, 2021
in COVID-19, STATE
Reading Time: 1 min read
0
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ
917
VIEWS
FacebookTwitterWhatsuplinkedinEmail

ಪ್ರಾಥಮಿಕ, ಸಮುದಾಯ, ತಾಲೂಕು & ಜಿಲ್ಲಾಸ್ಪತ್ರೆಗಳಿಗೆ ಹೆಚ್ಚೆಚ್ಚು ಮೂಲಸೌಕರ್ಯ I
ಆರೋಗ್ಯ ಇಲಾಖೆ ಉನ್ನತಾಧಿಕಾರಿಗಳ ಜತೆ ಡಿಸಿಎಂ ಚರ್ಚೆ

ಬೆಂಗಳೂರು: ಈಗಿನದು ಸೇರಿದಂತೆ ಸಂಭನೀಯ 3ನೇ ಅಲೆಯನ್ನೂ ಎದುರಿಸಲು ಸಾಧ್ಯವಾಗುವಂತೆ ಗ್ರಾಮೀಣ ಭಾಗದಲ್ಲೂ ಅತ್ಯುತ್ತಮ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಲು ಹೆಜ್ಜೆ ಇಟ್ಟಿರುವ ಸರಕಾರ, ತಾಲೂಕು ಆಸ್ಪತ್ರೆಗಳೂ ಸೇರಿ ಹಳ್ಳಿಯ ವಿವಿಧ ಹಂತಗಳಲ್ಲೇ 8,105 ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ ಮಾಡುವ ಮಹತ್ವದ ನಿರ್ಧಾರ ಕೈಗೊಂಡಿದೆ.

ಬೆಂಗಳೂರಿನಲ್ಲಿ ಸೋಮವಾರ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಜತೆ ಮಾತುಕತೆ ನಡೆಸಿದ ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಈ ಮಾಹಿತಿ ತಿಳಿಸಿದರು.

ರಾಜ್ಯದ 146 ತಾಲೂಕು ಆಸ್ಪತ್ರೆಗಳಲ್ಲಿ ಈಗಾಗಲೇ ತಲಾ 4ರಿಂದ 6 ಐಸಿಯು ಬೆಡ್‌ಗಳಿವೆ. ಇವುಗಳನ್ನು 20ಕ್ಕೆ ಹೆಚ್ಚಿಸಲಾಗುವುದು. ಈ ಮೂಲಕ ಒಟ್ಟು 1,925 ಐಸಿಯು ಬೆಡ್‌ಗಳು ಲಭ್ಯವಾಗುತ್ತವೆ. ಜತೆಗೆ, ರಾಜ್ಯಾದ್ಯಂತ 206 ಸಮುದಾಯ ಆರೋಗ್ಯ ಕೇಂದ್ರಗಳಿದ್ದು, ಅವುಗಳಲ್ಲಿ ಈಗ 30 ಸಾಮಾನ್ಯ ಬೆಡ್‌ಗಳಿವೆ. ಅವೆಲ್ಲವನ್ನೂ ಆಕ್ಸಿಜನ್‌ ಬೆಡ್‌ಗಳನ್ನಾಗಿ ಪರಿವರ್ತಿಸ ಲಾಗುವುದು. ಆಗ ಒಟ್ಟು 6,180 ಆಕ್ಸಿಜನ್‌ ಬೆಡ್‌ಗಳು ಸಿಗುತ್ತವೆ. ಪ್ರತಿ ಸಮುದಾಯ ಕೇಂದ್ರದ 30 ಬೆಡ್‌ಗಳ ಫೈಕಿ 5 ಬೆಡ್‌ಗಳನ್ನು ಅಧಿಕ ಆಮ್ಲಜನಕ ಸಾಂದ್ರತೆ (ಹೆಡೆನ್ಸಿಟಿ ಆಕ್ಸಿಜನ್‌) ಯುಳ್ಳ  ಬೆಡ್‌ಗಳನ್ನಾಗಿ ಮಾಡಲಾಗುವುದು. ಜತೆಗೆ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ 50 ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗುವುದು. ಈ ಎಲ್ಲ ನಿರ್ಧಾರಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು ಎಂದು ಡಿಸಿಎಂ ತಿಳಿಸಿದರು.

ಎರಡನೇ ಅಲೆಯಲ್ಲಿ ನಾವು ತತ್ತರಿಸಿದ್ದೇವೆ. 3ನೇ ಅಲೆಯ ಬಗ್ಗೆ ಅಲಕ್ಷ್ಯ ಮಾಡುವುದು ಬೇಡ. ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡುವುದು ಬೇಡ. ಹಳ್ಳಿ ಮಟ್ಟದಿಂದಲೇ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸುತ್ತಾ ಬರಬೇಕು ಎಂದರು.

ವಾರ್‌ ರೂಂಗೆ ವ್ಯಾಕ್ಸಿನೇಷನ್‌ ಲಿಂಕ್

ಈಗ 18ರಿಂದ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕುವ ಕಾರ್ಯ ಶುರುವಾಗಿದೆ. ಎಲ್ಲರಿಗೂ ತಪ್ಪದೇ ಲಸಿಕೆ ಸಿಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಕೋವಿಡ್‌ ವಾರ್‌ ರೂಂಗೆ ಕೋವಿಡ್‌ ವ್ಯಾಕ್ಸಿನೇಷನ್‌ ಮಾಹಿತಿಯನ್ನು ಕೂಡ ಅಪ್‌ಲೋಡ್‌ ಮಾಡಲಾಗುವುದು. ಎಲ್ಲ ಮಾಹಿತಿಯೂ ಅಲ್ಲಿ ಸಿಗಬೇಕು ಎಂದು ಅವರು ಮಾಹಿತಿ ಕೊಟ್ಟರು.

ಆಕ್ಸಿಜನ್‌ ಸಾಂದ್ರಕ ಖರೀದಿ

ಈಗಾಗಲೇ 3,000 ಆಮ್ಲಜನಕ ಸಾಂದ್ರಕಗಳನ್ನು (ಆಕ್ಸಿಜನ್‌ ಕಾನ್ಸನ್‌ಟ್ರೇಟರ್‌) ಖರೀದಿಗೆ ಆದೇಶ ಕೊಡಲಾಗಿದೆ. ಇನ್ನು 10,000 ಖರೀದಿಗೆ ಬೇಡಿಕೆ ಸಲ್ಲಿಸುವಂತೆ ಸೂಚಿಸಿದ್ದೇನೆ. ಈಗ ಪ್ರತಿ ದಿನ 40,000 ರಾಟ್‌ ಕಿಟ್‌ ದಿನಕ್ಕೆ ಪೂರೈಕೆ ಆಗತ್ತಿವೆ. ಇನ್ನೂ ಹೆಚ್ಚು ಖರೀದಿಗೆ ಟೆಂಡರ್‌ ಕರೆಯಲಾಗುತ್ತಿದೆ. ಇದೇ ವೇಳೆ 5 ಲಕ್ಷ ಡೋಸ್‌ ರೆಮಿಡಿಸಿವರ್‌ ಖರೀದಿಗೆ ಗ್ಲೋಬಲ್ ಟೆಂಡರ್‌ ಕರೆಯಲಾಗಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ವೈದ್ಯ ವಿದ್ಯಾರ್ಥಿಗಳ ನಿಯೋಜನೆ

ಅಂತಿಮ ವರ್ಷದ ವೈದ್ಯಕೀಯ ಪದವೀಧರರು & ಸ್ನಾತಕೋತ್ತರ ಪದವೀಧರರು ಅಗತ್ಯವಿದ್ದು, ಕೂಡಲೇ ವೈದ್ಯ ಶಿಕ್ಷಣ ಇಲಾಖೆ ಜತೆ ಮಾತನಾಡುವಂತೆ ಜಾವೇದ್‌ ಅಖ್ತರ್‌ ಅವರಿಗೆ ಸೂಚಿಸಿದ್ದೇನೆ. ಆಸ್ಪತ್ರೆಗಳಲ್ಲಿ ಈಗಾಗಲೇ ಕೆಲಸ ಮಾಡುತ್ತಿರುವ ವೈದ್ಯರಿಗೆ ಒತ್ತಡ ಹೆಚ್ಚಾಗಿದ್ದು, ಅದನ್ನು ತಗ್ಗಿಸಲು ವೈದ್ಯ ವಿದ್ಯಾರ್ಥಿಗಳ ಸೇವೆ ಅತ್ಯಗತ್ಯವಾಗಿದೆ ಎಂದರು ಡಿಸಿಎಂ.

ಲ್ಯಾಬ್‌ಗಳಿಗೆ ಸ್ಯಾಂಪಲ್ಸ್‌ ಕೊಡಬೇಕಾದರೆ 500ಕ್ಕೂ ಸ್ಯಾಂಪಲ್ಸ್‌ಗೆ ಒಂದೇ ಮೊಬೈಲ್‌ ಸಂಖ್ಯೆ ಕೊಟ್ಟಿರುವ ಅಂಶ ಬೆಳಕಿಗೆ ಬಂದಿದೆ. ಇನ್ಮೇಲೆ ಹಾಗೆ ಮಾಡಬಾರದು. ಸಾಸ್ಟ್‌ ಪೋರ್ಟಲ್‌ನಲ್ಲಿಯೇ ಐದು ಜನಕ್ಕಿಂತ ಹೆಚ್ಚು ಜನರ ಸ್ಯಾಂಪಲ್‌ ಒಂದು ಮೊಬೈಲ್‌ ಸಂಖ್ಯೆಗೆ ಲಿಂಕ್‌ ಆಗದಂತೆ ಬದಲಾವಣೆ ಮಾಡಲಾಗುತ್ತದೆ. ಇನ್ನು, ಟೆಲಿಫೋನಿಕ್‌ ಟ್ರಾಯಾಜಿಕ್‌ ಮಾಡಬಹುದು ಅಂತ ಕೆಲವರು ಹೇಳುತ್ತಿದ್ದಾರೆ. ಅದು ಬೇಡವೆಂದು ತಿಳಿಸಿದ್ದೇನೆ. ಭೌತಿಕ ಪರೀಕ್ಷೆಯೇ ಮಾಡಬೇಕು ಎಂದು ಅವರು ವಿವರಗಳನ್ನು ಕೊಟ್ಟರು.

ತಕ್ಷಣವೇ ಮಂಗಳೂರು ವೆನ್‌ಲಾಕ್‌ ಆಸ್ಪತ್ರೆಗೆ 50 ವೆಂಟಿಲೇಟರ್‌ ಕೊಡುವಂತೆ ಸೂಚನೆ ಕೊಟ್ಟಿದ್ದೇನೆ. ಆ ಭಾಗದಲ್ಲಿ ಸೋಂಕು ಉಲ್ಬಣವಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ವೆಂಟಿಲೇಟರ್‌ ಒತ್ತಡ ಕಡಿಮೆ ಮಾಡಲು ಈ ಕೈಗೊಳ್ಳಲಾಗಿದೆ.

ಚಿಕಿತ್ಸೆ & ಕೋವಿಡ್‌ ನಿರ್ವಹಣೆಯಲ್ಲಿ ಸರಕಾರದ ಮಾರ್ಗಸೂಚಿಯನ್ನೇ ಪಾಲಿಸಬೇಕು. ನಗರ ಸ್ಥಳೀಯ ಸಂಸ್ಥೆಗಳು ಮಾಡುವಂತಿಲ್ಲ. ಐಸಿಎಂಆರ್‌, ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ಜಾರಿ ಮಾಡುವ ಮಾರ್ಗಸೂಚಿಯೇ ಅಂತಿಮ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

Tags: Bengalurucovid19 third wavedr cn ashwathnarayaninfrastructure for rural hospitalskarnataka fights coronaKarnataka high alert
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಬೆಂಗಳೂರಿಗರಿಗೆ ಲಸಿಕೆ! ಮುಗ್ಧ ಹಳ್ಳಿ ಜನರಿಗೆ ವೈರಸ್‌ ಹಂಚಿಕೆ!!; ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತವರು ಜಿಲ್ಲೆ ಚಿಕ್ಕಬಳ್ಳಾಪುರದಲ್ಲೇ ಹಳ್ಳ ಹಿಡಿಯುತ್ತಿದೆ ಕೋವಿಡ್ ಲಸಿಕೆ ಅಭಿಯಾನ

ಬೆಂಗಳೂರಿಗರಿಗೆ ಲಸಿಕೆ! ಮುಗ್ಧ ಹಳ್ಳಿ ಜನರಿಗೆ ವೈರಸ್‌ ಹಂಚಿಕೆ!!; ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತವರು ಜಿಲ್ಲೆ ಚಿಕ್ಕಬಳ್ಳಾಪುರದಲ್ಲೇ ಹಳ್ಳ ಹಿಡಿಯುತ್ತಿದೆ ಕೋವಿಡ್ ಲಸಿಕೆ ಅಭಿಯಾನ

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆಯಲ್ಲಿ ಶ್ರೀ ತ್ರಿಮತಾಚಾರ್ಯ ಗಾಯತ್ರಿ ಮಂದಿರ 33ನೇ ವರ್ಷದ ವಾರ್ಷಿಕೋತ್ಸವ

ಗುಡಿಬಂಡೆಯಲ್ಲಿ ಶ್ರೀ ತ್ರಿಮತಾಚಾರ್ಯ ಗಾಯತ್ರಿ ಮಂದಿರ 33ನೇ ವರ್ಷದ ವಾರ್ಷಿಕೋತ್ಸವ

5 years ago
ನಂದಿಬೆಟ್ಟಕ್ಕೆ ರೋಪ್ ವೇ; ಜುಲೈ 23ಕ್ಕೆ ಸಚಿವ ಸಿ.ಪಿ.ಯೋಗೇಶ್ವರ ಸ್ಥಳ ಪರಿಶೀಲನೆ

ನಂದಿ ಗಿರಿಧಾಮಕ್ಕೆ ರೋಪ್‌ ವೇ: ಆಡಳಿತಾತ್ಮಕ ಅನುಮೋದನೆ ಕೊಟ್ಟ ರಾಜ್ಯ ಸರಕಾರ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ