• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ವ್ಯಾಕ್ಸಿನ್‌ ವಿಚಾರದಲ್ಲಿ ಕೇಂದ್ರ-ರಾಜ್ಯ ಸರಕಾರಗಳು ಜನರಿಗೆ ಸುಳ್ಳು ಹೇಳುತ್ತಿವೆ ಎಂದು ಆರೋಪ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

cknewsnow desk by cknewsnow desk
May 12, 2021
in COVID-19, STATE
Reading Time: 1 min read
0
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ
912
VIEWS
FacebookTwitterWhatsuplinkedinEmail

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೇ 1ರಂದು ಲಸಿಕೆ ಅಭಿಯಾನ ಉದ್ಘಾಟಿಸಿದರು. ಆಗ ವ್ಯಾಕ್ಸಿನ್ ಎಲ್ಲಿತ್ತು? ಮುಖ್ಯ ಕಾರ್ಯದರ್ಶಿ ಮೇ 3 ಅಥವಾ 4ನೇ ವಾರದಲ್ಲಿ ಲಸಿಕೆ ಬರುತ್ತದೆ ಎಂದಿದ್ದಾರೆ. ಆರೋಗ್ಯ ಸಚಿವರು 15 ದಿನ ಲಸಿಕೆ ಹಾಕಲು ಸಾಧ್ಯವಿಲ್ಲ ಎನ್ನುತ್ತಾರೆ.

ಬೆಂಗಳೂರು: ಲಸಿಕೆ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನರಿಗೆ ದ್ರೋಹವೆಸಗಿವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಲಸಿಕೆ ಲಭ್ಯ ಇಲ್ಲ ಎಂದಾದರೆ ಎಲ್ಲರಿಗೂ ಹಾಕುವುದಾಗಿ ಏಕೆ ಹೇಳಬೇಕಿತ್ತು. ರಾಜ್ಯದಲ್ಲಿ ಅಭಿಯಾನಕ್ಕೆ ಚಾಲನೆ ನೀಡುವ ಅಗತ್ಯವಾದರೂ ಏನಿತ್ತು ಎಂದು ಅವರು ಪ್ರಶ್ನಿಸಿದ್ದಾರೆ.

ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಮತ್ತು ಸೋಂಕಿತರ ಪ್ರಾಣ ರಕ್ಷಣೆ ವಿಚಾರದಲ್ಲಿ ನಿರ್ಲಕ್ಸ್ಯ ವಹಿಸಿರುವ ಕೇಂದ್ರ ಮತ್ತು ರಾಜ್ಯ ಸರಕಾರಗಳ ಧೋರಣೆ ಖಂಡಿಸಿ ವಿಕಾಸಸೌಧ ಆವರಣದ ಗಾಂಧಿ ಪ್ರತಿಮೆ ಮುಂಭಾಗ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಇಂದು ಸಾಂಕೇತಿವಾಗಿ ಪ್ರತಿಭಟನೆ ನಡೆಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ, “18 ವರ್ಷ ಮೀರಿದ ಎಲ್ಲರಿಗೂ ಲಸಿಕೆ ಹಾಕುವುದಾಗಿ ಪ್ರಧಾನಿ ಘೋಷಣೆ ಮಾಡಿದರು. ಆದರೆ, 45-60 ವರ್ಷ ಮೀರಿದವರಿಗೇ ಇನ್ನೂ ಸಿಗುತ್ತಿಲ್ಲ. ಮೊದಲ ಡೋಸ್ ಪಡೆದವರೇ ಎರಡನೇ ಡೋಸ್‍ಗೆ ಪರದಾಡುತ್ತಿದ್ದಾರೆ” ಎಂದರು.

ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿಯಾಗಿ 13 ವರ್ಷ, ಪ್ರಧಾನಿಯಾಗಿ ಏಳು ವರ್ಷಗಳ ಅನುಭವವಿದೆ. ಆದರೂ ಜನರಿಗೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಸಿದ್ದರಾಮಯ್ಯ ದೂರಿದರು.

ಕೆಪಿಸಿಸಿ ಅಧ್ಯಕ್ಷರಾದ @DKShivakumar,
ಮಾಜಿ ಡಿಸಿಎಂ @DrParameshwara, ಕೆಪಿಸಿಸಿ ಕಾರ್ಯಾಧ್ಯಕ್ಷರಾದ @RLR_BTM, ಸಲೀಂ ಅಹಮದ್, ಮಾಜಿ ಸಚಿವರಾದ @thekjgeorge, ರಮೇಶ್ ಕುಮಾರ್, @krishnabgowda, ಮಾಜಿ ಸಂಸದ ಉಗ್ರಪ್ಪ, ಬಿ.ಕೆ. ಹರಿಪ್ರಸಾದ್ ಮತ್ತಿತರರು ಈ ಧರಣಿಯಲ್ಲಿ ಪಾಲ್ಗೊಂಡಿದ್ದರು. 2/2 pic.twitter.com/fxLEkARw3A

— Siddaramaiah (@siddaramaiah) May 12, 2021

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಮೇ ಒಂದರಂದು ಲಸಿಕೆ ಅಭಿಯಾನ ಉದ್ಘಾಟಿಸಿದರು. ಆಗ ವ್ಯಾಕ್ಸಿನ್ ಎಲ್ಲಿತ್ತು? ಮುಖ್ಯ ಕಾರ್ಯದರ್ಶಿಗಳು ಮೇ ಮೂರು ಅಥವಾ ನಾಲ್ಕನೇ ವಾರದಲ್ಲಿ ಲಸಿಕೆ ಬರುತ್ತದೆ ಎಂದಿದ್ದಾರೆ. ಆರೋಗ್ಯ ಸಚಿವರು 15 ದಿನ ಲಸಿಕೆ ಹಾಕಲು ಸಾಧ್ಯವಿಲ್ಲ ಎನ್ನುತ್ತಾರೆ. ಇದನ್ನು ಜವಾಬ್ದಾರಿಯುತ ಸರಕಾರ ಎಂದು ಕರೆಯಲು ಆಗುವುದೇ? ಜನರು ಲಸಿಕೆಗಾಗಿ ಸರತಿ ಸಾಲಿನಲ್ಲಿ ದಿನಗಟ್ಟಲೇ ಕಾಯುತ್ತಿದ್ದಾರೆ. ಇದರ ಹೊಣೆಗಾರರು ಯಾರು ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಮತ್ತೊಂದೆಡೆ ಆಕ್ಸಿಜನ್ ಸಿಗದೆ ಸೋಂಕಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ನಮ್ಮ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಸೋಂಕು ವ್ಯಾಪಕವಾಗಿದ್ದು, ಎರಡನೇ ಅಲೆ ತೀವ್ರವಾಗಿ ಬಾಧಿಸುತ್ತಿದೆ. ಈ ಕುರಿತು ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಮಾಹಿತಿ ಇತ್ತು. ತಜ್ಞರೂ ಸಹ ವರದಿ ನೀಡಿದ್ದರು. ಆದರೆ ತಜ್ಞರ ವರದಿಯನ್ನು ಉಭಯ ಸರಕಾರಗಳು ಉದಾಸೀನ ಮಾಡಿ, ಸಲಹೆಗಳನ್ನು ನಿರ್ಲಕ್ಷಿಸಿದವು. ಅದರ ಪರಿಣಾಮವಾಗಿ ಕೆಟ್ಟ ಪರಿಸ್ಥಿತಿ ಎದುರಿಸುವಂತಾಗಿದೆ ಎಂದು ಅವರು ಹೇಳಿದರು.

ದೇಶ ಮತ್ತು ರಾಜ್ಯ ಇಂತಹ ಸ್ಥಿತಿಗೆ ಬರಲು ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವವರೇ ನೇರ ಹೊಣೆಗಾರರು, ಮೊದಲೇ ಸಿದ್ಧತೆ ಮಾಡಿಕೊಂಡಿದ್ದರೆ, ಅಗತ್ಯ ವವಸ್ಥೆಗೆ ಕ್ರಮ ಕೈಗೊಂಡಿದ್ದರೆ ಪರಿಸ್ಥಿತಿ ಕೈ ಮೀರುತ್ತಿರಲಿಲ್ಲ. ಬೆಡ್, ಆಕ್ಸಿಜನ್, ರೆಮಿಡಿಸಿವಿರ್, ವೆಂಟಿಲೇಟರ್ ಸಿದ್ಧತೆ ಮಾಡಿಕೊಳ್ಳಲಿಲ್ಲ. ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಎನ್ನುವಂತೆ ಈಗ ಮಾಡುತ್ತಿದ್ದಾರೆ. ಸರಕಾರ ತಜ್ಞರ ವರದಿ, ಸಲಹೆ ಕೇಳುವುದಿಲ್ಲ. ತಜ್ಞರೂ ಸರಕಾರದ ನಿರ್ಲಕ್ಷ್ಯ ಧೋರಣೆ ನೋಡಿ ಮೌನಕ್ಕೆ ಶರಣಾಗಿದ್ದಾರೆ ಎಂದು ಮಾಜಿ ಸಿಎಂ ಆರೋಪಿಸಿದರು.

ರಾಜ್ಯದಲ್ಲಿ ಲಾಕ್‍ಡೌನ್ ಘೋಷಣೆಯಾಗಿದೆ. ಆದರೆ, ಕಟ್ಟುನಿಟ್ಟಾಗಿ ಮಾಡಿಲ್ಲ. ವಲಸೆ ಹೋಗಿರುವ ಕಾರ್ಮಿಕರಿಗೆ ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ. ಅವರು ಬದುಕುವುದಾದರೂ ಹೇಗೆ? ಜೀವ ಉಳಿಸಿಕೊಳ್ಳಲು ಬಡವರಿಗೆ ಪ್ಯಾಕೇಜ್ ಘೋಷಣೆ ಮಾಡಿ ಎಂದು ಒತ್ತಾಯ ಮಾಡಿದರೂ ಸರಕಾರ ಕಿವಿಗೊಡಲಿಲ್ಲ ಎಂದ ಅವರು, ಹೀಗಾದರೆ ಸರಕಾರದ ಜವಾಬ್ದಾರಿ ಏನು? ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಏಕಿರಬೇಕು? ಬೆಡ್ʼಗೆ ಒಬ್ಬರು, ಲಸಿಕೆಗೆ ಇನ್ನೊಬ್ಬರು ಹೀಗೆ ಸಚಿವರನ್ನು ನೇಮಕ ಮಾಡಲಾಗಿದೆ. ಆದರೂ ಸೋಂಕಿತರ ಪರದಾಟ ನಿಂತಿಲ್ಲ. ಸಿದ್ಧತೆ ಮಾಡಿಕೊಳ್ಳದೆ ರಾಜ್ಯವನ್ನು ಇಂಥ ಸ್ಥಿತಿಗೆ ತಳ್ಳಿದ್ದಾರೆ ಎಂದು ಕಿಡಿಕಾರಿದರು.

ಆಕ್ಸಿಜನ್ ನೀಡದೆ ಸೋಂಕಿತರನ್ನು ಸಾಯಿಸುತ್ತಿರುವುದು ಕೇಂದ್ರ ಮತ್ತು ರಾಜ್ಯ ಸರಕಾರ ಮಾಡುತ್ತಿರುವ ಕೊಲೆಗಳು. ಸರಕಾರಗಳು ಸತ್ತಿರುವುದರಿಂದಲೇ ನ್ಯಾಯಾಲಯಗಳು ಮಧ್ಯೆ ಪ್ರವೇಶ ಮಾಡಿವೆ. ಈಗಲಾದರೂ ಕೇಂದ್ರ ಸರಕಾರ ಎಚ್ಚೆತ್ತು ಲಸಿಕೆ ಸಂಗ್ರಹಕ್ಕೆ ಮುಂದಾಗಲಿ. 18 ವರ್ಷ ಮೀರಿದವರು ರಾಜ್ಯದಲ್ಲಿ 3.26 ಕೋಟಿ ಇದ್ದಾರೆ. ಅವರಿಗೆ ಆರೂವರೆ ಕೋಟಿ ಡೋಸ್ ಲಸಿಕೆ ಬೇಕು. ಎರಡು, ಮೂರು ತಿಂಗಳಲ್ಲಿ ಎಲ್ಲರಿಗೂ ವ್ಯಾಕ್ಸಿನ್ ನೀಡಿದಾಗ ಮಾತ್ರ ಈ ರೋಗ ತಡೆಯಲು ಸಾಧ್ಯ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ, ವಿಧಾನಸಭೆ ಮಾಜಿ ಅಧ್ಯಕ್ಷ ರಮೇಶ್ ಕುಮಾರ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ವಿ.ಮುನಿಯಪ್ಪ, ಸೀತಾರಾಂ, ಕೃಷ್ಣ ಬೈರೇಗೌಡ, ನಸೀರ್ ಅಹಮದ್, ದಿನೇಶ್ ಗುಂಡೂರಾವ್, ಎಚ್.ಎಂ. ರೇವಣ್ಣ, ಸಂಸದ ಜಿ.ಸಿ. ಚಂದ್ರಶೇಖರ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಶಾಸಕರಾದ ಬೈರತಿ ಸುರೇಸ್, ಸೌಮ್ಯಾ ರೆಡ್ಡಿ, ರಿಜ್ವಾನ್ ಅರ್ಷದ್, ಹ್ಯಾರೀಸ್, ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Tags: bjpcongress protestcovid19karnataka fights coronasiddaramaiahvaccinationvaccine shortage
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೊನೆಗೂ ಎಕ್ಸಾಮ್‌ ಸುದ್ದಿ ಕೊಟ್ಟ ಸುರೇಶ್‌ ಕುಮಾರ್; ಸೆಕೆಂಡ್‌ ಪಿಯುಸಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ, ಎಸ್ಎಸ್ಎಲ್ಸಿ ಮಕ್ಕಳಿಗೆ ಜೂನ್‌ನಲ್ಲಿ ಪರೀಕ್ಷೆ

ಲಾಕ್‌ಡೌನ್‌ ಮುಗಿದ ಮೇಲೆ ಮೇ ಅಂತ್ಯದೊಳಗೆ ವಿದ್ಯಾರ್ಥಿಗಳಿಗೆ ಪೂರ್ಣ ಆಹಾರ ಧಾನ್ಯ ವಿತರಣೆ: ಸಚಿವ ಸುರೇಶ್ ಕುಮಾರ್

Leave a Reply Cancel reply

Your email address will not be published. Required fields are marked *

Recommended

ಅಗಸ್ಟ್‌ 15ರಂದು ಬಳ್ಳಾರಿ & ಚಾಮರಾಜನಗರ ಜಿಲ್ಲೆಗಳಲ್ಲಿ  ಧ್ವಜಾರೋಹಣ ಮಾಡಲು ಸಚಿವರೇ ಇಲ್ಲ

ಅಗಸ್ಟ್‌ 15ರಂದು ಬಳ್ಳಾರಿ & ಚಾಮರಾಜನಗರ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರೇ ಇಲ್ಲ

5 years ago
ಹೈಕಮಾಂಡ್ ಅಮ್ಮನಂತೆ ಎಂದಿದ್ದ ಡಿಕೆಶಿ ಆವತ್ತೊಂದು ದಿನ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು!

ವ್ಯಕ್ತಿಪೂಜೆಗಲ್ಲ, ಪಕ್ಷಪೂಜೆಗೆ ಮಾತ್ರ ಅವಕಾಶ: ಶಾಸಕ ಜಮೀರ್‌ ಅಹಮದ್‌ಗೆ ನೇರವಾಗಿ ಟಾಂಗ್‌ ಕೊಟ್ಟ ಡಿ.ಕೆ.ಶಿವಕುಮಾರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ