• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

cknewsnow desk by cknewsnow desk
May 14, 2021
in COVID-19, KOLAR
Reading Time: 1 min read
0
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್
914
VIEWS
FacebookTwitterWhatsuplinkedinEmail

ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಸ್ಥಾಪನೆಗೆ ಕ್ರಮ: ಡಿಸಿಎಂ

ಬೆಂಗಳೂರು: ನೆರೆಯ ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ ಸ್ಥಾಪನೆಯಾಗುತ್ತಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, “ರಾಜಧಾನಿಗೆ ಹತ್ತಿರದಲ್ಲೇ ಇರುವ ಮಾಲೂರಿನಲ್ಲಿ ಕೋವ್ಯಾಕ್ಸಿನ್ ಘಟಕ ಬರುತ್ತಿದೆ. ಅಲ್ಲಿಗೆ ರೈಲು ಸೇರಿದಂತೆ ಉತ್ತಮ ಸಂಪರ್ಕ ವ್ಯವಸ್ಥೆ ಇದೆ. ಅಲ್ಲಿಯೂ ಲಸಿಕೆ ತಯಾರಾಗಲಿದೆ. ಈಗಾಗಲೇ ಸರಕಾರ ಎಲ್ಲ ಒಪ್ಪಿಗೆ ನೀಡಿದೆ. ಆಡಳಿತಾತ್ಮಕ ಕೆಲಸಗಳನ್ನು ಕಂಪನಿ ಪೂರ್ಣ ಮಾಡುತ್ತಿದ್ದು, ಸಿವಿಲ್ ಕಾಮಗಾರಿಗಳು ಶುರುವಾಗಿವೆ. ಅವು ತ್ವರಿತವಾಗಿ ಮುಗಿದು ಆದಷ್ಟು ಬೇಗ ಲಸಿಕೆ ತಯಾರಿಕೆ” ಆರಂಭವಾಗುತ್ತದೆ ಎಂದರು.

ಈಗಾಗಲೇ ಕೋವಿಶೀಲ್ಡ್ ತಯಾರಿಸುವ ಸೀರಂ ಮಾತ್ರವಲ್ಲದೆ, ಯಾವುದೇ ಲಸಿಕೆ ತಯಾರಿಕೆ ಕಂಪನಿ ರಾಜ್ಯಕ್ಕೆ ಬಂದು ಘಟಕ ಸ್ಥಾಪಿಸಲು ಮುಂದಾದರೆ ಅಗತ್ಯವಾದ ಎಲ್ಲ ಸಹಕಾರ ನೀಡಲಾಗುವುದು. ಅತ್ಯಂತ ಕ್ಷಿಪ್ರಗತಿಯಲ್ಲಿ ಎಲ್ಲ ಅನುಮತಿಗಳನ್ನು ನೀಡಲಾಗುವುದು ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಕೋವ್ಯಾಕ್ಸಿನ್‌ ಘಟಕದ ಬಗ್ಗೆ ಇನ್ನಷ್ಟು ಮಾಹಿತಿ

ಹೈದರಾಬಾದ್‌ ಮೂಲದ ಭಾರತ್‌ ಬಯೋಟೆಕ್‌ ಕಂಪನಿಯ ಲಸಿಕೆ ತಯಾರಿಕೆ ಘಟಕದ ಸುದ್ದಿ ಈ ಮೊದಲೇ ಇತ್ತಾದರೂ ಡಿಸಿಎಂ ಅಶ್ವತ್ಥನಾರಾಯಣ ಅವರು ಇಂದು ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಮಾಲೂರಿನಲ್ಲಿ ಫುಡ್‌ ಪಾರ್ಕ್‌ ವಶದಲ್ಲಿರುವ 100 ಎಕರೆ ಪ್ರದೇಶದಲ್ಲಿ ಈ ಘಟಕ ಸ್ಥಾಪನೆಯಾಗುತ್ತಿದೆ ಎನ್ನಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಭಾರತ್‌ ಬಯೋಟೆಕ್‌ ಮಾಸಿಕ 40 ಲಕ್ಷ ಡೋಸ್‌ ಲಸಿಕೆಯನ್ನು ತಯಾರಿಸುತ್ತಿದ್ದು, ಮಾಲೂರು ಘಟಕದಲ್ಲಿ ಉತ್ಪಾದನೆ ಶುರುವಾದರೆ ಅದಕ್ಕಿಂತ ಐದು ಪಟ್ಟು ಹೆಚ್ಚು ಪ್ರಮಾಣದಲ್ಲ ಲಸಿಕೆ ತಯಾರಿಕೆ ಮಾಡುವುದು ಕಂಪನಿಯ ಗುರಿ ಎಂಬ ಮಾಹಿತಿ ಸಿಕ್ಕಿದೆ.

100 ಹಾಸಿಗೆಗಳ ಆಸ್ಪತ್ರೆ

ಎರಡನೇ ಅಲೆ ಹಾಗೂ ಸಂಭನೀಯ ಮೂರನೇ ಅಲೆ ಎದುರಿಸಲು ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅತ್ಯುತ್ತಮ ವೈದ್ಯಕೀಯ ಮೂಲಸೌಕರ್ಯಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡುತ್ತಿದೆ. ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ ಕನಿಷ್ಠ 100 ಹಾಸಿಗೆಗಳ ಆಸ್ಪತ್ರೆ ಇರಲೇಬೇಕು. ಅದರಲ್ಲಿ ಆಕ್ಸಿಜನ್ & ಐಸಿಯು ಬೆಡ್ʼಗಳೂ ಇರಬೇಕು. ಈ ಬಗ್ಗೆ ಕ್ರಮ ವಹಿಸಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

40 ಕೋಟಿ ಡೋಸ್ ಉತ್ಪಾದನೆ

ನೀತಿ ಆಯೋಗ ಈಗಾಗಲೇ ತಿಳಿಸಿರುವಂತೆ ಅಗಸ್ಟ್ ತಿಂಗಳಲ್ಲಿ 40 ಕೋಟಿ ಡೋಸ್ ಲಸಿಕೆ ದೇಶದಲ್ಲಿ ಉತ್ಪಾದನೆ ಆಗಲಿದೆ. ಇದು ಆಶಾದಾಯಕ ಬೆಳವಣಿಗೆ. ಜೂನ್-ಜುಲೈ ತಿಂಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ತಯಾರಾಗಲಿದೆ. ಇದುವರೆಗೂ ದೇಶದಲ್ಲಿ 19 ಕೋಟಿ ಡೋಸ್ ವ್ಯಾಕ್ಸಿನ್ ಕೊಡಲಾಗಿದೆ. ಜತೆಗೆ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ. ಈವರೆಗೆ ಎಲ್ಲ ಮೂಲಗಳಿಂದ ಬಂದಿರುವ ನೆರವಿನ ಪ್ರಮಾಣವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದರು. ಕೇಂದ್ರವು ಲಸಿಕೆ ತಯಾರಿಕೆ ಕಂಪನಿಗಳಿಗೆ ಸಾಕಷ್ಟು ಉತ್ತೇಜನ ಕೊಡುತ್ತಿದೆ. ಜಾಗತಿಕ ಮಟ್ಟದಲ್ಲಿ ಲಸಿಕೆಗಳ ಮೇಲಿರುವ ಪೇಟೆಂಗ್ ವಿನಾಯಿತಿ ಬಗ್ಗೆಯೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿವಿಧ ದೇಶಗಳ ನಾಯಕರ ಜತೆ ಈಗಾಗಲೇ ಯಶಸ್ವಿ ಮಾತುಕತೆ ನಡೆಸಿದ್ದಾರೆ. ಹೀಗಾಗಿ ಇನ್ನಷ್ಟು ಲಸಿಕೆ ತಯಾರಿಕೆ ಘಟಕಗಳು ರಾಜ್ಯಕ್ಕೆ ಬರಲಿವೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಸಿಎಸ್ಆರ್ ನೆರವು

ಕಾರ್ಪೋರೇಟ್ ವಲಯದಿಂದ ರಾಜ್ಯದಲ್ಲಿ ಉತ್ತಮ ರೀತಿಯಲ್ಲಿ ಸಿಎಸ್ಆರ್ ನೆರವು ಬರುತ್ತಿದೆ. ಹಣದ ರೂಪದಲ್ಲಿ & ಸಾಮಗ್ರಿ ರೂಪದಲ್ಲಿ ನೆರವು ಹರಿದುಬರುತ್ತಿದೆ. ಜತೆಗೆ, ಮುಖ್ಯಮಂತ್ರಿ ಪರಿಹಾರ ನಿಧಿಗೂ ಹಣ ಸಂದಾಯವಾಗುತ್ತಿದೆ. ಕೇಂದ್ರ ಸರಕಾರದಿಂದಲೂ ಸಾಕಷ್ಟು ನೆರವು ಸಿಗುತ್ತಿದೆ. ಈಗಾಗಲೇ ಈ ಬಗ್ಗೆ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದೇನೆ ಎಂದ ಅವರು, ಅಂತಾರಾಷ್ಟ್ರೀಯ ಮಟ್ಟದಿಂದಲೂ ರಾಜ್ಯಕ್ಕೆ ಸಾಕಷ್ಟು ನೆರವು ಬಂದಿದೆ. ಈ ವಿಭಾಗದಲ್ಲಿ ಹಿರಿಯ ಅಧಿಕಾರಿಗಳಾದ ಸೆಲ್ವಕುಮಾರ್ ಹಾಗೂ ಸಿಎಸ್ಆರ್ ಉಸ್ತುವಾರಿ ಅಧಿಕಾರಿ ಉಮಾ ಮಹಾದೇವನ್ ಅವರು ಕೆಲಸ ಮಾಡುತ್ತಿದ್ದಾರೆ ಎಂದರು ಅವರು.

Tags: ccovaxincovaxin production plant at Malur. Kolarcovid19karnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಗುಡಿಬಂಡೆಯಲ್ಲಿ ಲೋಕಾಯುಕ್ತ ದಾಳಿ

ಗುಡಿಬಂಡೆಯಲ್ಲಿ ಲೋಕಾಯುಕ್ತ ದಾಳಿ

by cknewsnow desk
January 9, 2024
0

ಕೆ.ಆರ್.ಡಿ.ಎಲ್. ಎಕ್ಸಿಕ್ಯೂಟಿವ್ ಎಂಜಿನಿಯರ್ ಸಂಬಂಧಿತರ ಮನೆ ಮೇಲೆ ದಾಳಿ; ರಾಜ್ಯದ 30 ಕಡೆ ಶೋಧ

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

by cknewsnow desk
December 21, 2023
0

ಕೋವಿಡ್‌ 19 ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

by cknewsnow desk
December 20, 2023
0

ನಾಳೆ ತುರ್ತು ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

by cknewsnow desk
December 20, 2023
0

ರಾಜ್ಯದಲ್ಲಿ ಕೋವಿಡ್ ಹೆಚ್ಚಳ; ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

by cknewsnow desk
December 19, 2023
0

ಕೇರಳ ನಂತರ ಕರ್ನಾಟಕದಲ್ಲಿ ಹೈ ಅಲರ್ಟ್

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ಕೋವಿಡ್-‌19 ರೂಪಾಂತರಿ ತಳಿ ಉಲ್ಬಣ; ಕೇರಳ-ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

by cknewsnow desk
December 17, 2023
0

ಕೇರಳದಲ್ಲಿ 1,324 ಜನರಿಗೆ ಕೋವಿಡ್; ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತಕ್ಕೆ ಸರಕಾರ ಸೂಚನೆ

Next Post
ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಇದೆಯಾ ಪ್ರತ್ಯೇಕ ರೂಲ್ಸ್!: 18+ ವಯೋಮಿತಿಯವರಿಗೆ ಇನ್ನೂ ಸಿಗುತ್ತಿದೆ ವ್ಯಾಕ್ಸಿನ್‌!! ಬೇಕಿದ್ದರೆ ಹೋಗಿ ಹಾಕಿಸಿಕೊಳ್ಳಿ..

ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಇದೆಯಾ ಪ್ರತ್ಯೇಕ ರೂಲ್ಸ್!: 18+ ವಯೋಮಿತಿಯವರಿಗೆ ಇನ್ನೂ ಸಿಗುತ್ತಿದೆ ವ್ಯಾಕ್ಸಿನ್‌!! ಬೇಕಿದ್ದರೆ ಹೋಗಿ ಹಾಕಿಸಿಕೊಳ್ಳಿ..

Leave a Reply Cancel reply

Your email address will not be published. Required fields are marked *

Recommended

ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂದು ಹೇಳಲು ನಾನು ‘ಜ್ಯೋತಿಷಿ’ ಅಲ್ಲ ಎಂದ ಡಿಸಿಎಂ; ಸೈನಿಕನಿಗೆ ಪರೋಕ್ಷ ಟಾಂಗ್

5 years ago
ಕಲಿಯುಗ ಪ್ರತ್ಯಕ್ಷ ದೈವ ಶ್ರೀ ವೆಂಕಟೇಶ್ವರ ಸ್ವಾಮಿ ನೆಲೆಸಿರುವ ಆಂಧ್ರಪ್ರದೇಶ ಆಗುತ್ತಿದೆಯಾ ಕ್ರೈಸ್ತಪ್ರದೇಶ !?

ವಿಜೃಂಭಿಸುತ್ತಿರುವ ಕೋವಿಡ್‌ ಸೋಂಕು; ಏಪ್ರಿಲ್‌ 12ರಿಂದ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ಆಲಯದಲ್ಲಿ ಸರ್ವ ದರ್ಶನ ಟೋಕನ್‌ ವಿತರಣೆ ಬಂದ್, ತಿರುಪತಿ ದೇಗುಲಗಳಲ್ಲೂ ಬಿಗಿ ಕ್ರಮ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ