• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

2ಡಿಜಿ ಔ‍ಷಧ ಖರೀದಿಸಿ ಜೆಡಿಎಸ್‌ನಿಂದ ಉಚಿತವಾಗಿ ಜನರಿಗೆ ಹಂಚಲು ಚಿಂತನೆ; ಸೋಂಕು ಪತ್ತೆ ಪರೀಕ್ಷೆ ಸಮಸ್ಯೆ, ಪಡಿತರ ವಿತರಣೆಯಲ್ಲಿನ ತೊಡಕಿನ ಬಗ್ಗೆ ಚರ್ಚೆ

cknewsnow desk by cknewsnow desk
May 17, 2021
in COVID-19, STATE
Reading Time: 1 min read
0
ಕೋವಿಡ್ ಕೆಸರು; ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಪಂಚಪ್ರಶ್ನೆ ಹಾಕಿದ ಎಚ್ಡಿಕೆ
915
VIEWS
FacebookTwitterWhatsuplinkedinEmail

ರಾಜ್ಯದ ಕೋವಿಡ್‌ ಸ್ಥಿತಿಗತಿ ಬಗ್ಗೆ ಶಾಸಕರು, ಮುಖಂಡರೊಂದಿಗೆ ಎಚ್‌ಡಿಕೆ ಆನ್‌ಲೈನ್‌ ಸಮಾಲೋಚನೆ I ಹಳ್ಳಿ ಜನರ ನೆರವಿಗೆ ಧಾವಿಸುವಂತೆ ಮುಖಂಡರು, ಕಾರ್ಯಕರ್ತರಿಗೆ ಸೂಚನೆ

ಬೆಂಗಳೂರು: ರಾಜ್ಯದ ಕೋವಿಡ್‌ ಸ್ಥಿತಿಗತಿ ಮತ್ತು ಜೆಡಿಎಸ್‌ʼವತಿಯಿಂದ ಜನರಿಗೆ ನೀಡಲಾಗುತ್ತಿರುವ ಪರಿಹಾರ ಕಾರ್ಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಪಕ್ಷದ ಶಾಸಕರು, ಮುಖಂಡರೊಂದಿಗೆ ಸೋಮವಾರ ಆನ್‌ಲೈನ್‌ ಸಮಾಲೋಚನೆ ನಡೆಸಿದರು.

ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆ ಕಡಿಮೆ ಪ್ರಮಾಣದಲ್ಲಿ ನಡೆಯುತ್ತಿರುವುದು, ಪರೀಕ್ಷಾ ವರದಿಗಳು ವಿಳಂಬವಾಗಿ ಬರುತ್ತಿರುವುದು ಮತ್ತು ವರದಿ ವಿಳಂಬವಾಗುತ್ತಿರುವುದರಿಂದ ಆಗುತ್ತಿರುವ ಅನಾಹುತಗಳು, ಲಸಿಕೆ ಅಭಿಯಾನ ಅವ್ಯವಸ್ಥೆ, ಆಕ್ಸಿಜನ್‌ ಪೂರೈಕೆಯಲ್ಲಿ ಅಗುತ್ತಿರುವ ಸಮಸ್ಯೆ, ತಾರತಮ್ಯ, ಆಸ್ಪತ್ರೆಗಳು ರೋಗಿಗಳಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಿರುವುದನ್ನು ಶಾಸಕರು ಕುಮಾರಸ್ವಾಮಿ ಅವರ ಗಮನಕ್ಕೆ ತಂದರು. ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ಹಳ್ಳಿಗಳಲ್ಲಿ ಸೋಂಕಿಗೆ ಒಳಗಾಗಿರುವವರಿಗೆ ಮಾಹಿತಿ, ಜಾಗೃತಿ ನೀಡಲು ಆಶಾ ಕಾರ್ಯಕರ್ತೆಯರು ಶ್ರಮ ವಹಿಸುತ್ತಿರುವುದಾಗಿ ಶಾಸಕರು ಮಾಹಿತಿ ನೀಡಿದರು. ಆಶಾ ಕಾರ್ಯಕರ್ತರ ಕಾರ್ಯಕ್ಕೆ ಎಚ್‌ಡಿಕೆ ಹರ್ಷ ವ್ಯಕ್ತಪಡಿಸಿದರು. ಕಾರ್ಯಕರ್ತೆಯರು ಸೋಂಕಿತರಿಗೆ ಔಷಧ ತಲುಪಿಸಲು ಉತ್ಸಕರಾಗಿದ್ದರೂ, ಸರ್ಕಾರ ಔಷಧ ಪೂರೈಸದೇ ಇರುವುದನ್ನು ಶಾಸಕ ಆಶ್ವಿನ್‌ ಅವರು ಸಭೆಯಲ್ಲಿ ಎಚ್‌ಡಿಕೆ ಗಮನಕ್ಕೆ ತಂದರು.

ಕೋವಿಡ್‌ ಚಿಕಿತ್ಸೆಗೆ ನೆರವಾಗುತ್ತಿರುವ, ವೈಯಕ್ತಿಕ ಸಹಾಯ ನೀಡುತ್ತಿರುವ ಪಕ್ಷದ ಶಾಸಕರ ನಡೆಗೆ ಕುಮಾರಸ್ವಾಮಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.

2ಡಿಜಿ ಔ‍ಷಧ ಖರೀದಿಸಿ ಹಂಚಲು ಚಿಂತನೆ

ಡಿಆರ್‌ಡಿಒ ಅಭಿವೃದ್ಧಿಪಡಿಸಿರುವ 2ಡಿಜಿ ಔ‍ಷಧದ ಪೊಟ್ಟಣಗಳನ್ನು ಖರೀದಿ ಮಾಡಿ ರಾಜ್ಯದಾದ್ಯಂತ ಜೆಡಿಎಸ್‌ʼವತಿಯಿಂದ ಉಚಿತವಾಗಿ ವಿತರಿಸುವ ಬಗ್ಗೆ ಆನ್‌ಲೈನ್‌ ಸಭೆಯಲ್ಲಿ ಸಮಾಲೋಚನೆ ನಡೆಯಿತು. ಔ‍ಷಧ ಪರಿಣಾಮಕಾರಿ ಎಂದು ಕಂಡು ಬಂದರೆ ಅದನ್ನು ಖರೀದಿಸಿ ಹಂಚಲು ನಿರ್ಧರಿಸಲಾಯಿತು. ಎಚ್‌.ಡಿ.ಕುಮಾರಸ್ವಾಮಿ ಅವರ ಈ ನಿರ್ಧಾರಕ್ಕೆ ಶಾಸಕರು, ಮುಖಂಡರು ಸಮ್ಮತಿ ವ್ಯಕ್ತಪಡಿಸಿದರು.

ಪಡಿತರ ಸಮಸ್ಯೆಗೆ ಶಾಸಕರ ಆಕ್ರೋಶ

ಪಡಿತರ ತೆಗೆದುಕೊಳ್ಳಲು ಥಂಬ್‌ ಇಂಪ್ರೆಶನ್‌ ರದ್ದು ಮಾಡಿ, ಆಧಾರ್‌ ಕಡ್ಡಾಯಗೊಳಿಸಿರುವುದನ್ನು ಬಹುತೇಕ ಶಾಸಕರು ವಿರೋಧಿಸಿದರು. ಆಧಾರ್‌ ಲಿಂಕ್‌ ಆಗದೇ, ಪಡಿತರ ಸಿಗದೇ ಜನ ಪರದಾಡುತ್ತಿದ್ದಾರೆ ಎಂದು ಶಾಸಕರು & ಮುಖಂಡರು ದೂರಿದರು. ಚೆಕ್‌ ಲೀಸ್ಟ್‌ ಮೂಲಕ ಪಡಿತರ ವಿತರಿಸಬೇಕು. ಈ ವಿಚಾರವನ್ನು ಸರಕಾರದ ಗಮನಕ್ಕೆ ತರಬೇಕಾಗಿ ಬಹುತೇಕ ಶಾಸಕರು ಎಚ್‌ಡಿಕೆ ಅವರಿಗೆ ಮನವಿ ಮಾಡಿದರು. ಸರಕಾರಕ್ಕೆ ಈ ವಿಷಯ ತಲುಪಿಸಿ ಸಮಸ್ಯೆ ಪರಿಹರಿಸುವದಾಗಿ ಎಚ್‌ಡಿಕೆ ಹೇಳಿದರು.

ದಂಪತಿ ಸಾವಿಗೆ ಎಚ್‌ಡಿಕೆ ಬೇಸರ

ನಾಗಮಂಗಲದಲ್ಲಿ ದಂಪತಿ ಕೋವಿಡ್‌ನಿಂದ ಸಾವಿಗೀಡಾಗಿದ್ದು, ಮಗು ಅನಾಥವಾದ ಬಗ್ಗೆ ಶಾಸಕ ಸುರೇಶ್‌ಗೌಡ ಅವರಿಂದ ಎಚ್‌ಡಿಕೆ ಮಾಹಿತಿ ಪಡೆದರು. ಸಾವಿಗೆ ತೀವ್ರ ಬೇಸರ ವ್ಯಕ್ತಪಡಿಸಿದರು.

ದಂಪತಿಗೆ ಆಸ್ಪತ್ರೆ ವ್ಯವಸ್ಥೆ ಮಾಡಿದ್ದು, ಚಿಕಿತ್ಸೆ ಕಲ್ಪಿಸಿದ ಪ್ರಯತ್ನಗಳ ಬಗ್ಗೆ ಶಾಸಕ ಸುರೇಶ್‌ಗೌಡ ವಿವರಿಸಿದರು. ಅವರ ಪ್ರಾಣ ಉಳಿಸಲು ಸಾಧ್ಯವಾಗದ್ದಕ್ಕೆ ಶಾಸಕರು ಮರುಗಿದರು.

ಕೋವಿಡ್‌ಗೆ ಯುವಕರೇ ಸಾವು: ಆತಂಕ

ರಾಜ್ಯದಾದ್ಯಂತ ಯುವಕರೇ ಹೆಚ್ಚಾಗಿ ಕೋವಿಡ್‌ಗೆ ಬಲಿಯಾಗುತ್ತಿರುವ ಗಂಭೀರ ವಿಚಾರವನ್ನು ಶಾಸಕರು ಕುಮಾರಸ್ವಾಮಿ ಅವರ ಗಮನಕ್ಕೆ ತಂದರು. ಯುವಕರೇ ಸಾವಿಗೀಡಾಗುತ್ತಿರುವುದು ಏಕೆ ಎಂಬುದರ ಕುರಿತು ಸರಕಾರ ಅಧ್ಯಯನ ನಡೆಸುವ ಅಗತ್ಯವಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾದವು. ಅಲ್ಲದೆ, ಈ ಬಗ್ಗೆ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿರುವುದಾಗಿ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

Tags: Bengalurucovid19hd Kumaraswamy on covid19 meetingjdskarnatakakarnataka fights corona
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಕೋವಿಡ್‌ ಮಹಾಮಾರಿಯ ಜತೆಯಲ್ಲೇ ಇನ್ನೊಂದು ಮಹಾಶತ್ರು!!, ಗುಣಮುಖರಾದ ಕೋವಿಡ್‌ ಸೋಂಕಿತರನ್ನು ತೀವ್ರವಾಗಿ ಕಂಗೆಡಿಸುತ್ತಿರುವ ಬ್ಲ್ಯಾಕ್‌ ಫಂಗಸ್‌

ಬ್ಲ್ಯಾಕ್ ಫಂಗಸ್ ಸೋಂಕು ಬಂದರೆ ಸರಕಾರಕ್ಕೆ ಮಾಹಿತಿ ನೀಡಿ; ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌

Leave a Reply Cancel reply

Your email address will not be published. Required fields are marked *

Recommended

ಉತ್ತರ ಪ್ರದೇಶದ ರೈತರ ಧಾರುಣತೆ ಬಿಚ್ಚಿಟ್ಟ ಖರ್ಗೆ

ಖರ್ಗೆಯವರೇ.. ನೀವು ಪ್ರಧಾನಿಯಾದರೆ ಕಾಂಗ್ರೆಸ್ ಸಹಿಸಿಕೊಳ್ಳುತ್ತದೆಯೇ?

3 years ago
1043 ರೂ.ಗೆ ಒಂದು ಕೆಜಿ ರೇಷ್ಮೆಗೂಡು ಮಾರಾಟ

1043 ರೂ.ಗೆ ಒಂದು ಕೆಜಿ ರೇಷ್ಮೆಗೂಡು ಮಾರಾಟ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ