• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಇವತ್ತು ಸೂರ್ಯೋದಯದಿಂದಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 4 ದಿನ ಫುಲ್‌ ಲಾಕ್‌ಡೌನ್;‌ ಆಂಧ್ರ ಪ್ರದೇಶದವರಿಗೆ ಅವಕಾಶ ಇಲ್ಲ & ಕೋಲಾರ, ಬೆಂಗಳೂರು ಸೇರಿ ಹೊರಗಿನವರಿಗೆ ನೋ ಎಂಟ್ರಿ

cknewsnow desk by cknewsnow desk
May 19, 2021
in CHIKKABALLAPUR, STATE
Reading Time: 1 min read
0
ಬಾಗೇಪಲ್ಲಿಯಲ್ಲಿ ವೀಕೆಂಡ್‌ ಲಾಕ್‌ಡೌನ್‌ ಸಕ್ಸಸ್;‌ ಪಟ್ಟಣ ಸೇರಿ ತಾಲೂಕಿನಾದ್ಯಂತ ಜನಜೀವನ ಬಹತೇಕ ಸ್ತಬ್ಧ
916
VIEWS
FacebookTwitterWhatsuplinkedinEmail

ಏನಿರುತ್ತದೆ? ಏನಿರಲ್ಲ? ಇಲ್ಲಿದೆ ಪೂರ್ಣ ಮಾಹಿತಿ

ಚಿಕ್ಕಬಳ್ಳಾಪುರ: ಕೋವಿಡ್‌ ಎರಡನೇ ಅಲೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರ ಉಸ್ತುವಾರಿಯ ಚಿಕ್ಕಬಳ್ಳಾಪುರ ಜಿಲ್ಲೆ ಇವತ್ತಿನಿಂದ ನಾಲ್ಕು ದಿನ ಕಂಪ್ಲೀಟ್‌ ಲಾಕ್‌ ಆಗಲಿದೆ.

ಜಿಲ್ಲೆಯ ಚಿಕ್ಕಬಳ್ಳಾಪುರ, ಚಿಂತಾಮಣಿ, ಶಿಡ್ಲಘಟ್ಟ, ಬಾಗೇಪಲ್ಲಿ, ಗುಡಬಂಡೆ, ಗೌರಿಬಿದನೂರು ತಾಲೂಕುಗಳು ಗುರುವಾರ ಸೂರ್ಯೋದಯದಿಂದಲೇ ಆರಂಭವಾಗುವಂತೆ ಲಾಕ್‌ಡೌನ್‌ ಆಗಲಿದೆ. ಈಗಾಗಲೇ ಜಿಲ್ಲಾಡಳಿತ ಈ ಬಗ್ಗೆ ಜನರಿಗೆ ಪೂರ್ಣ ಮಾಹಿತಿ ನೀಡಿದೆ. ಈ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳ ಜನರು ಸೋಮವಾರ ಬೆಳಗ್ಗೆವರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯತ್ತ ಹೋಗುವಂತಿಲ್ಲ.

ಮೇ 20ರಿಂದ 23ರವರೆಗೆ (ಗುರುವಾರದಿಂದ ಭಾನುವಾರ ವರೆಗೆ) ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿ ಇರುತ್ತದೆ. ವೈದ್ಯ ಸೇವೆ, ಹಾಲು, ಪತ್ರಿಕೆ, ಆಸ್ಪತ್ರೆ ಇನ್ನಿತರೆ ಅತ್ಯಗತ್ಯ ಸೇವೆಗಳಿಗೆ ಮಾತ್ರ ವಿನಾಯಿತಿ ಇರುತ್ತದೆ.

ಇನ್ನು ಸಂಚಾರಕ್ಕೂ ಪೂರ್ಣ ನಿರ್ಬಂಧವಿದೆ. ಜಿಲ್ಲೆಯಲ್ಲಿ ಅಂತಾರಾಜ್ಯ ಮತ್ತು ಅಂತರ ಜಿಲ್ಲಾ ಸಂಚಾರವನ್ನು ಈಗಾಗಲೇ ನಿರ್ಬಂಧಿಸಲಾಗಿದೆ. ಗೂಡ್ಸ್ ವಾಹನಗಳಿಗೆ ಮಾತ್ರ ಅವಕಾಶವಿರುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ 27 ಪೋಸ್ಟ್‌ಗಳನ್ನು ಹಾಕಲಾಗಿದ್ದು, ಲಾಕ್‌ಡೌನ್‌ಗಾಗಿ ಹೆಚ್ಚಿನ ಚೆಕ್ ಪೋಸ್ಟ್‌ಗಳನ್ನು ಹಾಕಲಾಗಿದೆ. ಅನವಶ್ಯಕವಾಗಿ ಸಂಚಾರ ಮಾಡುವ ವಾಹನಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಲಾಗುವುದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

ಇನ್ನು ಬೆಂಗಳೂರು ಜನ ಜಿಲ್ಲೆಗೆ ಎಂಟ್ರಿ ಕೊಡುವುದನ್ನು ತಡೆಯಲು ರಾಷ್ಟ್ರೀಯ ಹೆದ್ದಾರಿಯಲ್ಲಿನ ಚದುಲುಪುರ ಬಳಿ ಬಿಗಿ ಪಹರೆ ಮಾಡಲಾಗಿದೆ. ಜತೆಗೆ ಶಿಡ್ಲಘಟ್ಟ, ಬಾಗೇಪಲ್ಲಿ, ಗೌರಿಬಿದನೂರು ರಸ್ತೆಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಹಾಕಲಾಗಿದೆ. ಇದರ ಜತೆಗೆ, ಆಂಧ್ರ ಪ್ರದೇಶದಿಂದ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ, ಮತ್ತಿತರೆ ರಸ್ತೆಗಳಲ್ಲೂ ಪೊಲೀಸರನ್ನು ನಿಯೋಜಿಸಲಾಗಿದೆ. ಮುಖ್ಯವಾಗಿ ಬೆಂಗಳೂರಿನಿಂದ ಬರುವವರ ಮೇಲೆ ಹೆಚ್ಚು ನಿಗಾ ಇಡಲಾಗಿದೆ.

ಏನಿರುವುದಿಲ್ಲ?

  • ಎಲ್ಲ ರೀತಿಯ ಮದ್ಯದಂಗಡಿಗಳು ಬಂದ್
  • ಚಿಂತಾಮಣಿ ಎಪಿಎಂಸಿಯ ಗುರುವಾರ & ಶನಿವಾರದ ಮಾರುಕಟ್ಟೆ ಹೊರತುಪಡಿಸಿ
  • 4 ದಿನ ಉಳಿದೆಲ್ಲ ಎಪಿಎಂಸಿ ಮಾರುಕಟ್ಟೆಗಳು ಸಂಪೂರ್ಣ ಬಂದ್
  • ಕೋವಿಡ್ ಆಸ್ಪತ್ರೆಗಳ ಹತ್ತಿರದ ಹೋಟೆಲ್‌ಗಳು ಹೊರತುಪಡಿಸಿ ಉಳಿದ ಹೋಟೆಲ್‌ಗಳು ಇರುವುದಿಲ್ಲ
  • ಅಂತರ ಜಿಲ್ಲೆ, ಅಂತಾರಾಜ್ಯ ವಾಹನಗಳಿಗೆ ನಿರ್ಬಂಧ
  • ಎಟಿಎಂ ಹೊರತುಪಡಿಸಿ ಎಲ್ಲಾ ಬ್ಯಾಂಕುಗಳು ಕೂಡ ಸಂಪೂರ್ಣ ಬಂದ್
  • ಹಾಲು ಖರೀದಿಗೆ ವಾಹನಗಳ ಬಳಕೆ ಮಾಡುವಂತಿಲ್ಲ
  • ನಗರ & ಪಟ್ಟಣಗಳಲ್ಲಿರುವ ಪೆಟ್ರೋಲ್‌ ಬಂಕ್‌ಗಳು ಇರಲ್ಲ

ಏನಿರುತ್ತದೆ?

  • ಬೆಳಗ್ಗೆ 6ರಿಂದ 10ವರೆಗೂ ಹಾಲು ಖರೀದಿಗೆ ಅವಕಾಶ
  • ಮೆಡಿಕಲ್ ಶಾಪ್, ಆಸ್ಪತ್ರೆಗಳು ಎಂದಿನಂತೆ ತೆರೆದಿರುತ್ತವೆ
  • ಗುರುವಾರ, ಶನಿವಾರ ಚಿಂತಾಮಣಿ ಎಪಿಎಂಸಿ ಮಾರುಕಟ್ಟೆ
  • ಎಟಿಎಂ ಕೇಂದ್ರಗಳು ಇರುತ್ತವೆ
  • ಹೆದ್ದಾರಿಗಳಲ್ಲಿರುವ ಪೆಟ್ರೋಲ್ ಬಂಕ್‌ಗಳು
  • ಆಸ್ಪತ್ರೆಗಳ ಹತ್ತಿರದ ಹೋಟೆಲ್‌ಗಳಲ್ಲಿ ಪಾರ್ಸೆಲ್‌ಗೆ ಅವಕಾಶ
  • ಕೃಷಿ ಆಧಾರಿತ ಕೈಗಾರಿಕೆಗಳಿಗೆ ಅವಕಾಶ
  • ಫಾರ್ಮಾ ಆಧಾರಿತ ಕೈಗಾರಿಕೆಗಳಿಗೆ ನಿರ್ಬಂಧ ಇಲ್ಲ
  • ಆಹಾರ ಸಂಸ್ಕರಣೆ ಘಟಕಗಳಿಗೆ ಅವಕಾಶ
  • ಸರಕು ಸಾಗಾಟ ವಾಹನಗಳಿಗೆ ಮುಕ್ತ ಅವಕಾಶ
  • ವೈದ್ಯಕೀಯ ಉದ್ದೇಶಕ್ಕಾಗಿ ಹಾಗೂ ಅನಿವಾರ್ಯ ತುರ್ತು ಸಂದರ್ಭಗಳಲ್ಲಿ ಸೂಕ್ತ ದಾಖಲೆ ತೋರಿಸಿದರೆ ಸಂಚಾರಕ್ಕೆ ಅವಕಾಶ

ಇದರ ಜತೆಗೆ, ಜಿಲ್ಲೆಯ ಎಲ್ಲ ಪ್ರವಾಸಿತಾಣಗಳು ಕೂಡ ಲಾಕ್‌ಡೌನ್‌ ವೇಳೆ ಬಂದ್‌ ಆಗಿರುತ್ತವೆ. ಗಿರಿಧಾಮ ನಂದಿ ಬೆಟ್ಟಕ್ಕೆ ಪ್ರವೇಶ ಇರುವುದಿಲ್ಲ. ಈಗಾಗಲೇ ರಾಜ್ಯವ್ಯಾಪಿ ಲಾಕ್‌ಡೌನ್‌ ಇರುವುದರಿಂದ ಪ್ರವೇಶವನ್ನು ಮುಚ್ಚಲಾಗಿದೆ. ಉಳಿದಂತೆ ನಂದಿ, ರಂಗಸ್ಥಳ, ಕೈವಾರ, ಕೈಲಾಸಗಿರಿ, ಗಡಿದಂ, ಆವಲಬೆಟ್ಟ ಸೇರಿದಂತೆ ಎಲ್ಲ ಪ್ರವಾಸಿ & ಧಾರ್ಮಿಕ ತಾಣಗಳಿಗೆ ಯಾರಿಗೂ ಪ್ರವೇಶ ಇಲ್ಲ.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಿಗೆ ತಲಾ 25 ಆಮ್ಲಜನಕ ಸಾಂದ್ರಕ ಕೊಟ್ಟ ಸರಕಾರ; ಗ್ರಾಮ ಮಟ್ಟದ ಕೋವಿಡ್ ಕಾರ್ಯಪಡೆಗೆ 50,000 ಅಡ್ವಾನ್ಸ್

ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಿಗೆ ತಲಾ 25 ಆಮ್ಲಜನಕ ಸಾಂದ್ರಕ ಕೊಟ್ಟ ಸರಕಾರ; ಗ್ರಾಮ ಮಟ್ಟದ ಕೋವಿಡ್ ಕಾರ್ಯಪಡೆಗೆ 50,000 ಅಡ್ವಾನ್ಸ್

Recommended

ಕನ್ನಡದಲ್ಲಿ ಸರಿಯಾಗಿ ಸಹಿ ಮಾಡಲು ಬರದವರೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಅಧ್ಯಕ್ಷರಾಗಿದ್ದಾರೆ ಎಂದು ದೂರಿದ ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ!!

ಕನ್ನಡದಲ್ಲಿ ಸರಿಯಾಗಿ ಸಹಿ ಮಾಡಲು ಬರದವರೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಅಧ್ಯಕ್ಷರಾಗಿದ್ದಾರೆ ಎಂದು ದೂರಿದ ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ!!

5 years ago
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ: ರಾಹುಲ್‌ ಗಾಂಧಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ: ರಾಹುಲ್‌ ಗಾಂಧಿ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ