ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೇ 22ರಿಂದ ಯಾರು ಯಾರಿಗೆ ಲಸಿಕೆ ನೀಡಲಾಗುತ್ತಿದೆ ಎಂದ ಮಾಹಿತಿ ಇಲ್ಲಿದೆ.
ಚಿಕ್ಕಬಳ್ಳಾಪುರ: 18 ರಿಂದ 44 ವರ್ಷ ವಯೋಮಾನದ ಆದ್ಯತಾ ಗುಂಪಿನ ಜನರನ್ನು ಗುರುತಿಸಿ ಕೋವಿಡ್-19 ಲಸಿಕೆ ನೀಡಲು ರಾಜ್ಯ ಸರಕಾರ ಸೂಚಿಸಿದ್ದು, ಅದರಂತೆ 18ರಿಂದ 44 ವರ್ಷದ ಕೆಳಕಂಡವರಿಗೆ ಶನಿವಾರದಿಂದ (ಮೇ 22) ಲಸಿಕೆ ನೀಡಲು ಪ್ರಾರಂಭಿಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಕಬಾಡೆ ತಿಳಿಸಿದ್ದಾರೆ.
ಯಾರು ಯಾರಿಗೆ ಲಸಿಕೆ?
ವಿಕಲಚೇತನರು (ಮಾನಸಿಕ ಅಸ್ವಸ್ಥತೆ ಸೇರಿದಂತೆ) ಮತ್ತು ಒಬ್ಬ ಆರೈಕೆದಾರರು, ಕೈದಿಗಳು, ಚಿತಾಗಾರ & ಸ್ಮಶಾನ, ರುದ್ರಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಸ್ವ ಸಹಾಯಕರು, ಆರೋಗ್ಯ ಕಾರ್ಯರ್ಕರ ನಿಕಟ ಕುಟುಂಬಸ್ಥರು, ಕೋವಿಡ್-19 ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು, ಸರಕಾರಿ ಸಾರಿಗೆ ಸಿಬ್ಬಂದಿ, ಆಟೋ ಮತ್ತು ಕ್ಯಾಬ್ ಚಾಲಕರು, ವಿದ್ಯುತ್ ಮತ್ತು ನೀರು ಸರಬರಾಜು ಮಾಡುವವರು, ಅಂಚೆ ಇಲಾಖೆ ಸಿಬ್ಬಂದಿ, ಬೀದಿ ಬದಿಯ ವ್ಯಾಪಾರ ಮಾಡುವವರು, ಭದ್ರತೆ ಮತ್ತು ಕಚೇರಿಗಳ ಹೌಸ್ ಕೀಪಿಂಗ್ ಸಿಬ್ಬಂದಿ, ನ್ಯಾಯಾಂಗ ಅಧಿಕಾರಿಗಳು, ವಯೋವೃದ್ಧರು, ತೀವ್ರ ಅನಾರೋಗ್ಯದಿಂದ ಬಳಲುತ್ತಿರುವವರ ಆರೈಕೆದಾರರು, ಮಕ್ಕಳ ಸಂರಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಾಧ್ಯಮ ಸಿಬ್ಬಂದಿ, ಆಸ್ಪತ್ರೆಗಳಿಗೆ ಸರಕು ಸರಬರಾಜು ಮಾಡುವ ವ್ಯಕ್ತಿಗಳು, ಆಯಿಲ್ ಇಂಡಸ್ಟ್ರಿ ಮತ್ತು ಗ್ಯಾಸ್ ಸರಬರಾಜು ಮಾಡುವವರು (ಪೆಟ್ರೊಲ್ ಬಂಕ್, ಕರ್ಮಚಾರಿ ಒಳಗೊಂಡಂತೆ) ಔಷಧಿ ತಯಾರಿಸುವ ಕಂಪನಿಯ ಸಿಬ್ಬಂದಿ, ಆಸ್ಪತ್ರೆಗಳಿಗೆ ಆಕ್ಸಿಜನ್, ಔಷಧಿ ಮತ್ತು ವೈದ್ಯಕೀಯ ಉಪಕರಣ ಸರಬರಾಜು ಮಾಡುವ ಸಿಬ್ಬಂದಿ, ಅಧಿಕೃತ ಗುರುತಿನ ಚೀಟಿ ಹೊಂದಿರುವ ಫಲಾನುಭವಿಗಳು (ಉದಾಹರಣೆ: ವೃದ್ದಾಶ್ರಮ ವಾಸಿಗಳು, ನಿರ್ಗತಿಕರು), ಭಾರತೀಯ ಆಹಾರ ನಿಗಮ ಸಿಬ್ಬಂದಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕೆಲಸಗಾರರು.
ಈ ಮೇಲ್ಕಂಡ ಎಲ್ಲ ಆದ್ಯತಾ ಗುಂಪಿನ ಚಿಕ್ಕಬಳ್ಳಾಪುರ ಜಿಲ್ಲೆಯ ಫಲಾನುಭವಿಗಳು ಇಂದಿನಿಂದ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿಕೋಳ್ಳುವ ಮೂಲಕ ಸದರಿ ಕಾರ್ಯಕ್ರಮದ ಪ್ರಯೋಜನ ಪಡೆದುಕೋಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಚಿಕ್ಕಬಳ್ಳಾಪುರ ಜಿಲ್ಲೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.