• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್ ಲಸಿಕೆ, ಆಕ್ಸಿಜನ್, ವೆಂಟಿಲೇಟರ್ ವ್ಯವಸ್ಥೆ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಡಿಮಾಂಡ್‌ ಮಾಡಿದ ಸಿದ್ದರಾಮಯ್ಯ

cknewsnow desk by cknewsnow desk
May 24, 2021
in COVID-19, STATE
Reading Time: 1 min read
0
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ
916
VIEWS
FacebookTwitterWhatsuplinkedinEmail

ಬೇರೆ ದೇಶಗಳ ಅಧ್ಯಕ್ಷರು, ಪ್ರಧಾನಿಗಳು ಮೊದಲೇ ಲಸಿಕೆ ಹಾಕಿಸಿಕೊಂಡರು. ಮೋದಿ ತಡ ಮಾಡಿದ್ದೇಕೆ?

ಬೆಂಗಳೂರು: ರಾಜ್ಯದಲ್ಲಿ ಲಭ್ಯ ಇರುವ ಕೋವಿಡ್ ಲಸಿಕೆ, ಆಕ್ಸಿಜನ್, ವೆಂಟಿಲೇಟರ್ ಹಾಗೂ ಇತರ ಸೌಲಭ್ಯಗಳ ಬಗ್ಗೆ ಸರಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ತಮ್ಮ ನಿವಾಸದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಶ್ವೇತಪತ್ರ ಹೊರಡಿಸುವಂತೆ ರಾಜ್ಯ ಹೈಕೋರ್ಟ್ ನೀಡಿರುವ ಆದೇಶವನ್ನು ಸರಕಾರ ಪಾಲಿಸಬೇಕು. ಶ್ವೇತಪತ್ರ ಎಂದರೆ ಸುಳ್ಳು ಹೇಳುವುದಲ್ಲ. ಸತ್ಯಾಂಶವನ್ನು ಜನರ ಮುಂದೆ ಇಡುವಂಥದ್ದು” ಎಂದರು.

ಆಕ್ಸಿಜನ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನೂ ಸರಕಾರ ಈ ವರೆಗೆ ಪಾಲಿಸಿಲ್ಲ. ಶ್ವೇತಪತ್ರದ ವಿಚಾರದಲ್ಲಿಯಾದರೂ ನ್ಯಾಯಾಲಯದ ಆದೇಶಕ್ಕೆ ಮನ್ನಣೆ ನೀಡಲಿ ಎಂದು ಅವರು ಹೇಳಿದರು.

ಲಾಕ್‍ಡೌನ್ʼನಿಂದ ಸಂಕಷ್ಟಕ್ಕೆ ಒಳಗಾಗಿರುವ ಬಡ ಕುಟುಂಬಗಳು ಹಾಗೂ ದುಡಿಯುವ ವರ್ಗದವರಿಗೆ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿದ್ದೆ. ಆದರೆ ಸರಕಾರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಕಳೆದ ವರ್ಷ ಇದೇ ರೀತಿ ಪ್ಯಾಕೇಜ್ ಘೋಷಣೆ ಮಾಡಿತ್ತು. ಆದರೆ, ಬಹುತೇಕ ಮಂದಿಗೆ ಪರಿಹಾರವೇ ಸಿಕ್ಕಿಲ್ಲ. ಈ ವರ್ಷವೂ ಸಹ ಎಲ್ಲರಿಗೂ ಪರಿಹಾರ ಸಿಗುವ ಬಗ್ಗೆ ಅನುಮಾನವಿದೆ. ಪರಿಹಾರ ಪಡೆಯಲು ಅನುಸರಿಸಬೇಕಾದ ಮಾರ್ಗ ಏನು ಎಂಬುದನ್ನೇ ಸರಕಾರ ಈ ವರೆಗೆ ತಿಳಿಸಿಲ್ಲ. ಹೀಗಾಗಿ ಪ್ಯಾಕೇಜ್ ಎಂಬುದು ಕೇವಲ ಕಣ್ಣೊರೆಸುವ ತಂತ್ರ ಎಂದು ಅವರು ಟೀಕಿಸಿದರು.

ಪತ್ರಿಕಾ ವಿತರಕರೂ ನನ್ನನ್ನು ಭೇಟಿ ಮಾಡಿ ಪರಿಹಾರ ಘೋಷಣೆಗೆ ಸರಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದ್ದಾರೆ. ಅವರನ್ನೂ ಸಹ ಸರಕಾರ ಪರಿಗಣಿಸಿ ನೆರವು ಒದಗಿಸಬೇಕು. ಜೊತೆಗೆ ಉಳಿದ ಕಾರ್ಮಿಕರಿಗೂ ಸಹಾಯ ಮಾಡಬೇಕು. ತಮಿಳುನಾಡು, ಕೇರಳ ಸೇರಿದಂತೆ ಹಲವಾರು ರಾಜ್ಯಗಳು ಪರಿಹಾರದ ವಿಚಾರದಲ್ಲಿ ಉದಾರತೆ ತೋರಿವೆ. ಆದರೆ, ನಮ್ಮ ಸರಕಾರಕ್ಕೆ ಏಕೆ ಅದು ಸಾಧ್ಯವಾಗುತ್ತಿಲ್ಲ ಎಂದು ಸಿದ್ದು ಪ್ರಶ್ನಿಸಿದರು.

ಕಷ್ಟ ಕಾಲದಲ್ಲಿ ನಮ್ಮ ಪಕ್ಷದ ಎಲ್ಲ ಶಾಸಕರೂ ಜನರ ನೆರವಿಗೆ ನಿಂತಿದ್ದಾರೆ. ದಿನಸಿ ಕಿಟ್, ಔಷಧ, ಆಂಬುಲೆನ್ಸ್ ಮತ್ತಿತರ ನೆರವು ಒದಗಿಸುತ್ತಿದ್ದಾರೆ. ಅವರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಲಸಿಕೆ ವಿಚಾರದಲ್ಲಿ ಅಪಪ್ರಚಾರ ಏನಿಲ್ಲ. ಲಸಿಕೆ ಇಲ್ಲ ಎಂಬುದು ವಾಸ್ತವ. 18 ವರ್ಷ ಮೀರಿದವರಿಗೆ ಮೇ 1ರಿಂದ ಲಸಿಕೆ ಎಂದು ಪ್ರಧಾನಿ ಮೋದಿಯವರು ಘೋಷಣೆ ಮಾಡಿದ್ದರು. ಈಗ ಕೊಡುತ್ತಿಲ್ಲ. ಅದು ಸುಳ್ಳೇ ? ಇದರಲ್ಲಿ ಅಪಪ್ರಚಾರ ಏನು ? ಮೇ 1ರಂದು ಯಡಿಯೂರಪ್ಪ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದು ಸುಳ್ಳೇ. ಈಗ ಲಸಿಕೆ ಇಲ್ಲದಿವರುವುದು ಸುಳ್ಳೇ? ಎಂದು ಅವರು ಸರಕಾರವನ್ನು ಪ್ರಶ್ನಿಸಿದರು.

ಅಭಿಯಾನಕ್ಕೆ ಚಾಲನೆ ನೀಡಿ ಮೂರು ವಾರಗಳಾದರೂ ರಾಜ್ಯಕ್ಕೆ ಲಸಿಕೆ ಬಂದಿಲ್ಲ. ಸರಕಾರ ಪಾರದರ್ಶಕವಾಗಿರಲಿ. ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡು ಈಗ ಕಾಂಗ್ರೆಸ್ಸಿಗರು ಅಪ ಪ್ರಚಾರ ಮಾಡುತ್ತಿದ್ದಾರೆ ಎಂದರೆ ಹೇಗೆ? ಎಂದು ಅವರು ಕೇಳಿದರು.

ಮೊದಲೇ ಮೋದಿ ಲಸಿಕೆ ಪಡೆಯಬೇಕಿತ್ತು

ಬೇರೆ ದೇಶಗಳಲ್ಲಿ ಅಲ್ಲಿಯ ಅಧ್ಯಕ್ಷರು, ಪ್ರಧಾನಿಗಳೇ ಮೊದಲು ಲಸಿಕೆ ಹಾಕಿಸಿಕೊಂಡರು. ಮೋದಿಯವರೇಕೆ ವಿಳಂಬ ಮಾಡಿದರು. ಅದಕ್ಕೆ ಅನುಮಾನ ಬಂದು ಯಾರೋ ಕೆಲವರು ಅಪಪ್ರಚಾರ ಮಾಡಿರಬಹುದು. ಈಗ ನಾನು ಲಸಿಕೆ ಹಾಕಿಸಿಕೊಂಡಿಲ್ಲವೇ? ಇಲ್ಲಿಯೇ ಲಸಿಕೆ ಇಲ್ಲವೆಂದ ಮೇಲೆ ಆರು ಕೋಟಿ ಡೋಸ್ ವಿದೇಶಗಳಿಗೆ ರಫ್ತು ಮಾಡಿದ್ದು ಏಕೆ? ಕರ್ನಾಟಕಕ್ಕೆ ಒಂದು ಕೋಟಿ ಡೋಸ್ ಬಂದಿದೆ ಎಂದು ಹೇಳುತ್ತಿದ್ದಾರೆ. ಇನ್ನೂ ಎಂಟು ಕೋಟಿ ಡೋಸ್ ಬರಬೇಕಿದೆ ಎಂದರು ಸಿದ್ದರಾಮಯ್ಯ.

ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಲ್ಲಿ ತಲಾ ಒಂದು ಕೋಟಿ ಕೊಡಿ. ಲಸಿಕೆ ಖರೀದಿ ಮಾಡಿ ಜನರಿಗೆ ಹಂಚುತ್ತೇವೆ ಎಂದರೆ ಅದಕ್ಕೂ ಒಪ್ಪಿಗೆ ಕೊಡುವುದಿಲ್ಲ. ಸರ್ಕಾರದ ಹಣದಲ್ಲಿ ಲಸಿಕೆ ವಿತರಣೆ ಮಾಡುವುದರಲ್ಲಿ ತಪ್ಪೇನಿದೆ. ಸರಕಾರ ಮಾಡುವುದೂ ಅದೇ ಕೆಲಸ ಅಲ್ಲವೇ? ಎಂದು ಬೇಸರ ವ್ಯಕ್ತಪಡಿಸಿದರು.

ಅಧಿಕಾರಿಗಳು ಉತ್ತರಿಸುತ್ತಿಲ್ಲ

ಕೊರೊನಾದಿಂದ ಉಂಟಾಗಿರುವ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಕ್ಕೆ ಅನುಮತಿ ಕೊಟ್ಟಿಲ್ಲ. ಈ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಸರಕಾರದ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇನೆ. ನಾನು ಪರಿಶೀಲನೆ ಸಭೆ ನಡೆಸಲು ಹೊರಟಿರಲಿಲ್ಲ. ಕೇವಲ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಸರಕಾರಕ್ಕೆ ಪತ್ರ ಬರೆದಿದ್ದೆ. ವಿಪಕ್ಷ ನಾಯಕರು ಮಾಹಿತಿ ಸಂಗ್ರಹಿಸಬಾರದು ಎಂಬ ಸುತ್ತೋಲೆ 2009ರ ವರೆಗೆ ಇರಲಿಲ್ಲ. ಯಡಿಯೂರಪ್ಪವರು ಬಂದ ಬಳಿಕವಷ್ಟೇ ಅಂತಹ ಸುತ್ತೋಲೆ ಹೊರಬಿತ್ತು. ಮಾಹಿತಿ ಹಕ್ಕು ಕಾಯಿದೆ ಜಾರಿಯಲ್ಲಿರುವಾಗ ಮಾಹಿತಿ ಸಂಗ್ರಹಕ್ಕೂ ಅವಕಾಶ ಕೊಡುವುದಿಲ್ಲ ಎಂದರೆ ಸಂವಿಧಾನ ಮತ್ತು ಕಾನೂನು ಬಾಹಿರ. ಸತ್ಯ ಹೊರಗೆ ಬರುತ್ತದೆ ಎಂಬ ಕಾರಣಕ್ಕೆ ಸರಕಾರ ಈ ನಿಲುವು ತಳೆದಿದೆ. ಇನ್ನು ಮಾಹಿತಿ ಕೋರಿ ಅಧಿಕಾರಿಗಳಿಗೆ ಪತ್ರ ಬರೆದರೂ ಉತ್ತರಿಸುವುದಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದರು.

ಬ್ಲಾಕ್ ಫಂಗಸ್ ಕಾಯಿಲೆಗೆ ಇಂಜೆಕ್ಷನ್ ದೊರೆಯುತ್ತಿಲ್ಲ. ಮಾರಣಾಂತಿಕ ಕಾಯಿಲೆಗೆ ಔಷಧ ಇಲ್ಲ ಎಂದರೆ ಅದು ಕೊಲೆಗೆ ಸಮಾನ. ಪ್ರಧಾನಿಯವರು ಕಣ್ಣೀರು ಹಾಕಿರುವುದು ನಾಟಕ. ಕಣ್ಣೀರು ಹಾಕುವುದರಿಂದ ಆಕ್ಸಿಜನ್, ಲಸಿಕೆ ಸಿಗುವುದಿಲ್ಲ. ಭಾವನಾತ್ಮಕವಾಗಿ ಜನರನ್ನು ಮರಳು ಮಾಡುವ ಪ್ರಯತ್ನ ಇದು ಎಂದು ಸಿದ್ದರಾಮಯ್ಯ ದೂರಿದರು.

Tags: covid19deamand for covid19 white paperkarnataka governmentnarendra modisiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪಂಚರಾಜ್ಯ ಚುನಾವಣೆ ಬ್ಯುಸಿಯಲ್ಲಿ ಬಿದ್ದು ಮೋದಿ ಕೊರೊನ ನಿರ್ವಹಣೆ ಮರೆತರು ಎಂದು ದೂರಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು

ಪಂಚರಾಜ್ಯ ಚುನಾವಣೆ ಬ್ಯುಸಿಯಲ್ಲಿ ಬಿದ್ದು ಮೋದಿ ಕೊರೊನ ನಿರ್ವಹಣೆ ಮರೆತರು ಎಂದು ದೂರಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು

Leave a Reply Cancel reply

Your email address will not be published. Required fields are marked *

Recommended

ರಾತ್ರಿ ಪುನರ್ಜನ್ಮದ ಬಗ್ಗೆ ಅಂಗೇನು ಎಂದಿದ್ದ ಅಪ್ಪ, ಬೆಳಗ್ಗೆ ಹೊತ್ತಿಗೆ ಹೊರಟುಬಿಟ್ಟಿದ್ದರು!!

ರಾತ್ರಿ ಪುನರ್ಜನ್ಮದ ಬಗ್ಗೆ ಅಂಗೇನು ಎಂದಿದ್ದ ಅಪ್ಪ, ಬೆಳಗ್ಗೆ ಹೊತ್ತಿಗೆ ಹೊರಟುಬಿಟ್ಟಿದ್ದರು!!

6 years ago
ಜುಲೈ 7-8 ಮತ್ತು 9ರಂದು ರಾಜ್ಯ ಸಿಇಟಿ ಪರೀಕ್ಷೆ; ವೇಳಾಪಟ್ಟಿ ಪ್ರಕಟಿಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ

14 ದಿನ ಕೊರೋನಾ ಕರ್ಫ್ಯೂ ಕಾರಣ; ಎಂಜಿನಿಯರಿಂಗ್, ಪಾಲಿಟೆಕ್ನಿಕ್‌ ಪರೀಕ್ಷೆಗಳು ಮುಂದಕ್ಕೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ