• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ರಾಜ್ಯದಲ್ಲಿ ಮತ್ತೆ ತಲೆ ಎತ್ತಲಿದೆಯಾ ಮೈನಿಂಗ್‌ ಮಾಫಿಯಾ? ಇನ್ನೂ 100 ಕಡೆ ಮೈನಿಂಗ್‌ಗೆ ಅವಕಾಶ ಇದೆ ಎಂದ ಸಚಿವ ಮುರುಗೇಶ್‌ ನಿರಾಣಿ

cknewsnow desk by cknewsnow desk
May 26, 2021
in STATE
Reading Time: 1 min read
0
ರಾಜ್ಯದಲ್ಲಿ ಮತ್ತೆ ತಲೆ ಎತ್ತಲಿದೆಯಾ ಮೈನಿಂಗ್‌ ಮಾಫಿಯಾ? ಇನ್ನೂ 100 ಕಡೆ ಮೈನಿಂಗ್‌ಗೆ ಅವಕಾಶ ಇದೆ ಎಂದ ಸಚಿವ ಮುರುಗೇಶ್‌ ನಿರಾಣಿ
912
VIEWS
FacebookTwitterWhatsuplinkedinEmail

ಕಬ್ಬಿಣದ ಅದಿರು ರಪ್ತುಗೆ ಅವಕಾಶ ನೀಡುವಂತೆ ಸುಪ್ರೀಂ ಕೋರ್ಟ್ʼಗೆ ರಾಜ್ಯ ಸರಕಾರದಿಂದ ಮೇಲ್ಮನವಿ

ಬೆಂಗಳೂರು: ರಾಜ್ಯದಿಂದ ವಿದೇಶಕ್ಕೆ ಕಬ್ಬಿಣದ ಅದಿರು ರಪ್ತು ಮಾಡಲು ಕೇಂದ್ರ ಸರಕಾರ ತಾತ್ವಿಕ ಒಪ್ಪಿಗೆ ನೀಡಿರುವುದರಿಂದ ಸುಪ್ರೀಂ ಕೋರ್ಟ್ʼನಲ್ಲಿ ವಿಧಿಸಿರುವ ನಿಷೇಧವನ್ನು ತೆರವುಗೊಳಿಸುವಂತೆ ಮೇಲ್ಮನವಿ ಅರ್ಜಿ ಹಾಕಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿರ್ಧರಿಸಿದೆ.

ಉನ್ನತಧಿಕಾರಿಗಳ ಸಮಿತಿ (ಸಿಇಸಿ)ಯ ಅಭಿಪ್ರಾಯ ಪಡೆದು ಕಬ್ಬಿಣದ ಅದಿರು ರಪ್ತು ಮಾಡಲು ವಿಧಿಸಿರುವ ನಿಷೇಧವನ್ನು ತೆರವು ಮಾಡುವಂತೆ ಮನವಿ ಮಾಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಹೇಳಿದರು.

ಗುರುವಾರ ವಿಕಾಸಸೌಧದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಹಾಗೂ ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ಅವರೊಂದಿಗೆ ವರ್ಚುಯಲ್ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದರು.

ವಿದೇಶಕ್ಕೆ ರಪ್ತು ಮಾಡುವ ಸಂಬಂಧ ಅಭಿಪ್ರಾಯವನ್ನು ಕೇಳಲಾಗಿತ್ತು. ಕರ್ನಾಟಕದಿಂದ ಕಬ್ಬಿಣದ ಅದಿರನ್ನು ವಿದೇಶಕ್ಕೆ ರಪ್ತು ಮಾಡುವ ವಿಚಾರದಲ್ಲಿ ಕೇಂದ್ರದಿಂದ ಯಾವುದೇ ತಕರಾರು ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ದೇಶದ ಯಾವುದೇ ರಾಜ್ಯಗಳಲ್ಲೂ ವಿದೇಶಕ್ಕೆ ಕಬ್ಬಿಣದ ಅದಿರು ರಪ್ತು ಮಾಡಲು ನಿಷೇಧ ಹೇರಿಲ್ಲ. ಕರ್ನಾಟಕದಲ್ಲಿ ಮಾತ್ರ ಇರುವುದರಿಂದ ಸರಕಾರದ ಬೊಕ್ಕಸಕ್ಕೆ ಬರುತ್ತಿದ್ದ ವರಮಾನವು ನಿಂತು ಹೋಗಿದೆ ಎಂದರು ನಿರಾಣಿ.

ಕೇಂದ್ರ ಸರಕಾರವೂ ನಮಗೆ ಸಂಪೂರ್ಣವಾದ ಸಹಕಾರವನ್ನು ನೀಡುತ್ತಿದೆ. ನ್ಯಾಯಾಲಯದಲ್ಲಿ ಕಾನೂನಿನ ನೆರವು ನೀಡುವುದಾಗಿ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ. ನಮ್ಮ ನಿಲವನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಳ್ಳುವ ಸಾಧ್ಯತೆ ಇದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ಸರಕಾರಕ್ಕೆ ಹೆಚ್ಚಿನ ವರಮಾನ ತಂದುಕೊಡುವ ಪ್ರಮುಖ ಮೂಲವು ಇದಾಗಿದೆ. ಈ ಎಲ್ಲಾ ಅಂಶಗಳನ್ನು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರಿಗೆ ಮನವರಿಕೆ ಮಾಡಿಕೊಟ್ಟೆವು. ರಾಜ್ಯದ ನಿಲುವಿಗೆ ಕೇಂದ್ರ ಸರಕಾರ ಸಮ್ಮತಿಸಿದೆ ಎಂದು ಅವರು ಮಾಹಿತಿ ನೀಡಿದರು.

ಅದಿರು ರಪ್ತು ಮಾಡುವ ಸರಕಾರದ ನಿಲುವನ್ನು ಸಿಇಸಿಯವರೆಗೂ ಮನವರಿಕೆ ಮಾಡಿಕೊಡಲಾಗುವುದು. ಕಾನೂನಿನ ಇತಿಮಿತಿಯಲ್ಲೇ ಮಾಡಲಿದ್ದೇವೆ ಎಂದು ಗಣಿ ಸಚಿವರು ಪುನರುಚ್ಚರಿಸಿದರು.

24 ಗಂಟೆಯವರೆಗೆ ಮೈನಿಂಗ್ ಅವಕಾಶ

ದಿನದ 24 ಗಂಟೆಯವರೆಗೆ ಮೈನಿಂಗ್ ಅವಕಾಶ ಇದೆ. ಸಾಗಾಣಿಕೆಗೆ ಮಾತ್ರ 12 ಗಂಟೆ ಇದೆ.
ಇದರಿಂದ ನಮ್ಮ ಕಾರ್ಖಾನೆಯವರಿಗೆ ಸಮಸ್ಯೆಯಾಗಿದೆ ಎಂದು ಮನವಿ ಬಂದಿದೆ. ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ವಿವರಣೆ ನೀಡಿದರು.

ಗಣಿ ಕಂಪನಿಗಳಿಂದ ಸಂಗ್ರಹಣೆ ಮಾಡಿರುವ ರಾಯಲ್ಟಿ ಹಣವೂ ಸುಪ್ರೀಂ ಕೋರ್ಟ್ʼನಲ್ಲಿದೆ. ಇದನ್ನು ಬಳಸಿಕೊಂಡು ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ನಡೆಸಬಹುದು. ಇದನ್ನು ರಾಜ್ಯಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡುವುದಾಗಿ ಹೇಳಿದರು ಅವರು.

ಹೊಸದಾಗಿ 100 ಗಣಿ

ಪ್ರಸ್ತುತ ರಾಜ್ಯದಲ್ಲಿ 35 ದಶಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಉತ್ಪಾದನೆಯಾಗುತ್ತದೆ. 2030ರ ವೇಳೆಗೆ ಇದನ್ನು 70 ದಶಲಕ್ಷ ಮೆಟ್ರಿಕ್ ಟನ್ʼಗೆ ಕೊಂಡೊಯ್ಯುವ ಗುರಿ ಹಾಕಿಕೊಳ್ಳಲಾಗಿದೆ ಎಂದ ಅವರು, 100 ಮೈನಿಂಗ್ ಹೊಸದಾಗಿ ಮಾಡುವ ಬಗ್ಗೆ ಗುರಿ ಹೊಂದಲಾಗಿದೆ. 3 ಸಾವಿರ ಅರ್ಜಿಗಳು ಬಂದಿವೆ. ಅದನ್ನು ತ್ವರಿತವಾಗಿ ವಿಲೇವಾರಿ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು. ಆತ್ಮನಿರ್ಭರ್ ಅಡಿಯಲ್ಲಿ 500 ಮೈನಿಂಗ್ ಮಾಡಲು ನಿರ್ದೇಶನ ಮಾಡಲಾಗಿದೆ. ಎರಡು ವರ್ಷದಲ್ಲಿ 100 ಮೈನಿಂಗ್ ಮಾಡಲು ಶ್ರಮ ವಹಿಸುತ್ತೇವೆ. ರಾಜ್ಯದಲ್ಲಿ ಮೈನಿಂಗ್ ಸಂಪನ್ಮೂಲ ಚೆನ್ನಾಗಿದೆ. ಗೋಲ್ಡ್ ಮೈನಿಂಗ್ ರಾಜ್ಯದಲ್ಲಿ ಚೆನ್ನಾಗಿದೆ
ಖನಿಜ ಸಂಪತ್ತನ್ನು ಉಪಯೋಗಿಸಿಕೊಳ್ಳಲು ಸಲಹೆ ಬಂದಿದೆ ಎಂದರು ಗಣಿ ಸಚಿವರು.

ಜಾಗತಿಕ ಟೆಂಡರ್

ರಾಜ್ಯದಲ್ಲಿ ಒಟ್ಟು ಎಷ್ಟು ಪ್ರಮಾಣದಲ್ಲಿ ಅದಿರು ಇದೆ ಎಂಬುದು ಯಾರಿಗೂ ಸರಿಯಾಗಿ ತಿಳಿಯುತ್ತಿಲ್ಲ. ಹೀಗಾಗಿ ಇದನ್ನು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಲು ಇಲಾಖೆ ತೀರ್ಮಾಸಲಾಗಿದೆ.
ಎಲ್ಲಿ ಎಷ್ಟು ಪ್ರಮಾಣದಲ್ಲಿದೆ? ಇದರ ಗುಣಮಟ್ಟ ಇತ್ಯಾದಿಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದ ಕಾರಣ ಸಮೀಕ್ಷೆ ನಡೆಸುತ್ತೇವೆ ಎಂದು ಅವರು ತಿಳಿಸಿದರು.

Tags: iron ore exportkarnatakakarnataka governmentmines and geologymurugesh niraniSupreme Court
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಪರಿಣಾಮ; ʼಬಡವರ ಖರ್ಜೂರಾʼ ಬೆಳೆಯುವ ಈಚಲು ಮರಗಳ ಮಾರಣಹೋಮ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಪರಿಣಾಮ; ʼಬಡವರ ಖರ್ಜೂರಾʼ ಬೆಳೆಯುವ ಈಚಲು ಮರಗಳ ಮಾರಣಹೋಮ

Leave a Reply Cancel reply

Your email address will not be published. Required fields are marked *

Recommended

ಕೊರೊನಾ ಇನ್ನೂ ಮುಗಿದಿಲ್ಲ, ನಿರ್ಬಂಧ ತೆರವಿನ ನಂತರ ಪರಿಸ್ಥಿತಿ ಕಳವಳಕಾರಿ ಎಂದರು ಪ್ರಧಾನಿ

ಕೊರೊನಾ ಇನ್ನೂ ಮುಗಿದಿಲ್ಲ, ನಿರ್ಬಂಧ ತೆರವಿನ ನಂತರ ಪರಿಸ್ಥಿತಿ ಕಳವಳಕಾರಿ ಎಂದರು ಪ್ರಧಾನಿ

5 years ago
ಪ್ರಧಾನಿಯನ್ನು ಭೇಟಿಯಾಗೋಕೆ ಸಿದ್ದರಾಮಯ್ಯನ ಪರ್ಮಿಷನ್‌ ಬೇಕಾ? ನಾನ್‌ಸೆನ್ಸ್‌ ಎಂದ ದೇವೇಗೌಡರು

ಬೆಂಗಳೂರಿನಲ್ಲಿ ಪ್ರತಿ ಕುಟುಂಬಕ್ಕೆ ಆಗುವ ಕುಡಿಯುವ ನೀರಿನ ಖರ್ಚು ಎಷ್ಟು?

2 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ