• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಮಹಾಮಾರಿಗೆ ಬಲಿಯಾದ ಕೋವಿಡ್‌ ವಾರಿಯರ್ಸ್‌ಗೆ ಕೂಡಲೇ ಪರಿಹಾರ ಕೊಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದ ಸಿದ್ದರಾಮಯ್ಯ

cknewsnow desk by cknewsnow desk
May 29, 2021
in COVID-19, STATE
Reading Time: 1 min read
0
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ
923
VIEWS
FacebookTwitterWhatsuplinkedinEmail

ಸಿಬ್ಬಂದಿಗೆ ಮಾರ್ಚ್ ತಿಂಗಳಿಂದ ಸಂಬಳವನ್ನೇ ನೀಡಿಲ್ಲ. ತಾಂತ್ರಿಕ ಕಾರಣಗಳನ್ನು ನೀಡಿ ಕೊರೋನ ಕಾಲದಲ್ಲೂ ಸಂಬಳ ನೀಡದಿರುವುದು ಅತ್ಯಂತ ಅಮಾನವೀಯ ಎಂದ ಪ್ರತಿಪಕ್ಷ ನಾಯಕ

ಬೆಂಗಳೂರು: ಸರಕಾರ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿರುವ ಮತ್ತು ಕರ್ತವ್ಯದ ವೇಳೆ ಮರಣ ಹೊಂದಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಕುಟುಂಬದವರಿಗೆ ಕೂಡಲೇ ಪರಿಹಾರ ವಿತರಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಕೊರೊನಾ ವಾರಿಯರ್ಸ್‍ಗೆ ಬಾಕಿ ಉಳಿಸಿಕೊಂಡಿರುವ ವೇತನವನ್ನು ಕೂಡ ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

ಕರ್ತವ್ಯದ ವೇಳೆ ಮರಣಹೊಂದಿದ ಕೊರೊನಾ ವಾರಿಯರ್ಸ್‌ಗಳಾದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರ ಕುಟುಂಬದವರಿಗೆ ಪರಿಹಾರ ನೀಡಬೇಕು ಹಾಗೂ ಬಾಕಿ ಉಳಿಸಿಕೊಂಡಿರುವ ಇವರ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು @CMofKarnataka ಅವರನ್ನು ಒತ್ತಾಯಿಸುತ್ತೇನೆ.#CoronaWarriors pic.twitter.com/LoNYyMdaQD

— Siddaramaiah (@siddaramaiah) May 29, 2021

ಸಿದ್ದು ಬರೆದ ಪತ್ರ ಪೂರ್ಣಪಾಠ ಇಲ್ಲಿದೆ:

  • ಕೊರೋನ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿಗಳ ತಳ ಮಟ್ಟದ ಸಿಬ್ಬಂದಿಗಳು, ಶಿಕ್ಷಕರು, ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ, ಸಾರಿಗೆ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳು, ಪಶುವೈದ್ಯರು ಮುಂತಾದವರು ನೇರವಾಗಿ ಜನರ ಜೊತೆ ಇದ್ದು ಕೆಲಸ ಮಾಡುತ್ತಿದ್ದಾರೆ. ಇವರುಗಳಿಗೆ ವಿಶೇಷ ರಕ್ಷಣೆಯನ್ನು ನೀಡಬೇಕಾದುದು ಸರಕಾರದ ಪ್ರಧಾನ ಜವಾಬ್ಧಾರಿ. ಆದರೆ ಸರಕಾರ ಇನ್ನೂ ಸಹ ಹಲವು ಇಲಾಖೆಗಳ ಸಿಬ್ಬಂದಿಗಳನ್ನು ಕೊರೋನ ವಾರಿಯರ್ಸ್ ಎಂದು ಘೋಷಣೆ ಮಾಡಿಲ್ಲ. ಈಗಾಗಲೇ ಕೊರೋನ ವಾರಿಯರ್ಸ್ ಎಂದು ಘೋಷಿಸಿರುವವರಿಗೆ ಕಳೆದ ಎರಡು ಮೂರು ತಿಂಗಳಿಂದ ಸಂಬಳವನ್ನೂ ನೀಡಿಲ್ಲ.
  • ಜೊತೆಗೆ ಜನರ, ರೋಗಿಗಳ ಸಂಪರ್ಕದಲ್ಲಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ, ಸರಕಾರದ ತಳ ಮಟ್ಟದ ಸಿಬ್ಬಂದಿಗಳಿಗೆ ಕೊರೋನಾದಿಂದ ರಕ್ಷಣೆ ಪಡೆಯಲು ನೀಡಬೇಕಾದ ಮಾಸ್ಕು, ಸ್ಯಾನಿಟೈಸರ್, ಕೈಗವಸು ಮುಂತಾದ ಮೂಲಭೂತವಾದ ಸಾಮಗ್ರಿಗಳನ್ನೂ ನೀಡಿಲ್ಲ. ಕೊರೋನ ವಾರಿಯರ್ಸ್ ಎಂದು ಘೋಷಣೆ ಮಾಡಲಾದವರಲ್ಲಿ ಕೆಲವರು ಮರಣ ಹೊಂದಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಲ್ಲಿ ಸುಮಾರು ಜನ ಕೊರೋನಾಕ್ಕೆ ತುತ್ತಾಗಿ ಮರಣ ಹೊಂದಿದ್ದಾರೆ. ಆದರೆ ಅವರಲ್ಲಿ ಪರಿಹಾರ ಸಿಕ್ಕಿರುವುದು ಕೇವಲ ಮೂರು ಜನರ ಕುಟುಂಬಗಳಿಗೆ ಮಾತ್ರ. ಎಲ್ಲ ಇಲಾಖೆಗಳಲ್ಲೂ ಇದೇ ರೀತಿಯ ಪರಿಸ್ಥಿತಿ ಇದೆ.
  • ಜೀವವನ್ನು ಪಣಕ್ಕೊಡ್ಡಿ ಕೆಲಸ ಮಾಡುತ್ತಿರುವ ಇವರೆಲ್ಲರನ್ನು ಸರಕಾರ ನಡೆಸಿಕೊಳ್ಳುತ್ತಿರುವ ರೀತಿ ಅತ್ಯಂತ ಅಮಾನವೀಯವಾಗಿದೆ. ದೇಶದ ರಾಜ್ಯಗಳಲ್ಲೆ ಆರ್ಥಿಕ ಸ್ಥಿತಿಯಲ್ಲಿ ಮೊದಲೆರಡು ಸ್ಥಾನಗಳಲ್ಲೇ ಇರುವ ಕರ್ನಾಟಕದಲ್ಲಿ ಕನಿಷ್ಠ ಮಾಸ್ಕು, ಸ್ಯಾನಿಟೈಸರ್ ನೀಡುವಷ್ಟು ಹೃದಯವಂತಿಕೆ, ಕರ್ತವ್ಯ ಪ್ರಜ್ಞೆ, ಉದಾರತೆಗಳನ್ನು ಆಡಳಿತ ನಡೆಸುವ ಸರಕಾರ ಕಳೆದುಕೊಂಡಿರುವುದು ಅತ್ಯಂತ ಬೇಜವಾಬ್ದಾರಿಯುತವಾದ ಹಾಗೂ ಅವಮಾನಕರವಾದ ಸಂಗತಿ. ಆದ್ದರಿಂದ ಕೂಡಲೇ ಅವರ ಬೇಡಿಕೆಗಳನ್ನು ಪರಿಗಣಿಸಿ ಈಡೇರಿಸಬೇಕೆಂದು ಆಗ್ರಹಿಸುತ್ತೇನೆ. ಜನರ ಜತೆ ನೇರ ಸಂಪರ್ಕದಲ್ಲಿದ್ದುಕೊಂಡು ಕೆಲಸ ಮಾಡುವ ಪಶುವೈದ್ಯರು ಸೇರಿದಂತೆ ಇತರೆ ಎಲ್ಲರನ್ನು ಕೊರೋನ ವಾರಿಯರ್ಸ್ ಎಂದು ಅಧಿಸೂಚನೆ ಹೊರಡಿಸಿ ಅಗತ್ಯ ಕ್ರಮ ವಹಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ನೇರವಾಗಿ ರೋಗಿಗಳ ನೇರ ಸಂಪರ್ಕದಲ್ಲಿರುತ್ತಾರೆ. ಅವರಿಗೆ ಮಾಸ್ಕ್, ಸ್ಯಾನಿಟೈಸರ್, ಕೈಗವಸು, ಅಗತ್ಯ ಔಷಧಗಳು ಮುಂತಾದವುಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ನೀಡುವುದು.
  • ಕೊರೋನ ವಾರಿಯರ್ಸ್ ಎಂದು ಘೋಷಣೆ ಮಾಡಿದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಸಿಬ್ಬಂದಿಗಳಲ್ಲಿ ಹಲವರು ಮರಣ ಹೊಂದಿದ್ದಾರೆ. ಅವರಲ್ಲಿ ಬಹುತೇಕರ ಕುಟುಂಬಗಳಿಗೆ ಇನ್ನೂ ಪರಿಹಾರ ನೀಡಿಲ್ಲ. ಅವರೆಲ್ಲರಿಗೆ ಕೂಡಲೇ ಪರಿಹಾರ ನೀಡಬೇಕು.
  • ಈ ಎಲ್ಲ ಸಿಬ್ಬಂದಿಗಳಿಗೆ ಮಾರ್ಚ್ ತಿಂಗಳಿಂದ ಸಂಬಳವನ್ನೇ ನೀಡಿಲ್ಲ. ತಾಂತ್ರಿಕ ಕಾರಣಗಳನ್ನು ನೀಡಿ ಕೊರೋನ ಕಾಲದಲ್ಲೂ ಸಂಬಳ ನೀಡದಿರುವುದು ಅತ್ಯಂತ ಅಮಾನವೀಯ. ಕೂಡಲೇ ಈ ಎಲ್ಲರಿಗೆ ಸಂಬಳ ಬಿಡುಗಡೆ ಮಾಡಬೇಕು.
  • ಪಲ್ಸ್ ಆಕ್ಸಿಮೀಟರ್‍ನಂಥ ಅತ್ಯಂತ ಅಗತ್ಯ ಸಾಮಗ್ರಿಗಳನ್ನು ಒಂದು ಪಂಚಾಯ್ತಿ/ಒಬ್ಬರು ಆಶಾ ಕಾರ್ಯಕರ್ತೆಗೆ ಕೇವಲ ಒಂದೊಂದನ್ನು ಮಾತ್ರ ನೀಡಲಾಗಿದೆ. ಹೀಗೆ ಮಾಡುವುದರಿಂದಲೂ ಸೋಂಕು ಹಬ್ಬಲು ಕಾರಣವಾಗಬಹುದು. ಆದ್ದರಿಂದ ಇಂಥ ಸಾಮಾನ್ಯ ಸಂಗತಿಗಳನ್ನು ವೈಜ್ಞಾನಿಕವಾಗಿ ಅಂದಾಜು ಮಾಡಿ ಸಾಮಗ್ರಿಗಳನ್ನು ಕೋವಿಡ್ ವಾರಿಯರ್ಸ್‍ಗಳಿಗೆ ಒದಗಿಸಿಕೊಡಬೇಕು.
  • ಇವರೆಲ್ಲರಿಗೆ ಸೂಕ್ತವಾದ, ಗೌರವಯುತವಾದ ಸಂಬಳ, ಗೌರವಧನ, ಸಂಭಾವನೆಯನ್ನು ಹೆಚ್ಚಿಸಬೇಕು. ಕೊರೋನಾದಂಥ ಮಾರಣಾಂತಿಕವಾದ ಸೋಂಕನ್ನು ನಿಭಾಯಿಸುವಲ್ಲಿ ಮಾನವ ಸಂಪನ್ಮೂಲದ ಪಾತ್ರ ಬಹಳ ದೊಡ್ಡದು. ಅವರುಗಳನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳಬೇಕಾದುದು ಸರಕಾರದ ಜವಾಬ್ದಾರಿ ಎಂದು ಭಾವಿಸಿ ಕೂಡಲೇ ಈಡೇರಿಸಬೇಕೆಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯವರಿಗೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Tags: bsycovid19frontline worrierskarnatakaletter to chief ministersiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

ಕೋವಿಡ್ ಸಂಕಷ್ಟದ ನಡುವೆಯೂ ದೊಡ್ಡ ಟಾರ್ಗೆಟ್ ಹಾಕಿಕೊಂಡ ಕೃಷಿ ಇಲಾಖೆ; ರಾಜ್ಯದಲ್ಲಿ ಶೇ.107ಕ್ಕೂ ಹೆಚ್ಚು ಬಿತ್ತನೆ, ರಸಗೊಬ್ಬರ, ಬೀಜಕ್ಕೆ ಕೊರತೆ ಇಲ್ಲವೆಂದ ಸಚಿವ ಬಿ.ಸಿ.ಪಾಟೀಲ್‌

Leave a Reply Cancel reply

Your email address will not be published. Required fields are marked *

Recommended

COVID19 ಖಡಕ್‌ ಸೂಚನೆ ನೀಡಿದ ಸಿದ್ದರಾಮಯ್ಯ

COVID19 ಖಡಕ್‌ ಸೂಚನೆ ನೀಡಿದ ಸಿದ್ದರಾಮಯ್ಯ

2 years ago
ಕಾಂಗ್ರೆಸ್‌ ಸೋತರೆ ಸಿದ್ದು ಕುರ್ಚಿಗೆ ಸಂಚಕಾರ: ಭೈರತಿ ಸುರೇಶ್

ಕಾಂಗ್ರೆಸ್‌ ಸೋತರೆ ಸಿದ್ದು ಕುರ್ಚಿಗೆ ಸಂಚಕಾರ: ಭೈರತಿ ಸುರೇಶ್

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ