• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕೋವಿಡ್ ಸಂಕಷ್ಟದ ನಡುವೆಯೂ ದೊಡ್ಡ ಟಾರ್ಗೆಟ್ ಹಾಕಿಕೊಂಡ ಕೃಷಿ ಇಲಾಖೆ; ರಾಜ್ಯದಲ್ಲಿ ಶೇ.107ಕ್ಕೂ ಹೆಚ್ಚು ಬಿತ್ತನೆ, ರಸಗೊಬ್ಬರ, ಬೀಜಕ್ಕೆ ಕೊರತೆ ಇಲ್ಲವೆಂದ ಸಚಿವ ಬಿ.ಸಿ.ಪಾಟೀಲ್‌

cknewsnow desk by cknewsnow desk
May 29, 2021
in STATE
Reading Time: 1 min read
0
ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?
914
VIEWS
FacebookTwitterWhatsuplinkedinEmail

Photos by CkPhotography ಸಿಕೆಪಿ@ckphotographi

ಭಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಕೊರತೆ ಇಲ್ಲ ಎಂದು ಅಂಕಿ-ಅಂಶ ಕೊಟ್ಟ ಇಲಾಖೆ

ಬೆಂಗಳೂರು: ಈ ಬಾರಿಯೂ ಸಹ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆ ಸಕಲ ರೀತಿಯಲ್ಲಿ ಸಜ್ಜಾಗಿದ್ದು, ಕಳೆದ ಬಾರಿ ಶೇ.107ಕ್ಕೂ ಹೆಚ್ಚು ಬಿತ್ತನೆಯಾಗಿ ಕೋವಿಡ್ ಸಮಯದಲ್ಲೂ ಆಶಾ ಭಾವನೆ ಮೂಡಿಸಿದೆ.

ಈ ಬಾರಿಯೂ ಕೃಷಿ ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ಕೃಷಿ ಇಲಾಖೆ ಸಿದ್ಧಗೊಂಡಿದ್ದು, ರಸಗೊಬ್ಬರಕ್ಕಾಗಲೀ, ಬಿತ್ತನೆ ಬೀಜ ಪೂರೈಕೆಯಾಗಲೀ ತೊಂದರೆಯಾಗಲೀ ಕೊರತೆಯಾಗಲೀ ಇರುವುದಿಲ್ಲ. ಈ ಬಾರಿಯ ಬಿತ್ತನೆ ಬೀಜ, ರಸಗೊಬ್ಬರ ಮಳೆಯ ವಿವರ ಆಹಾರ ಧಾನ್ಯಗಳ ಉತ್ಪಾದನೆಯ ಗುರಿ ಹೊಂದಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮಳೆ ಎಷ್ಟಾಗಿದೆ?

2021-22ನೇ ಸಾಲಿನ ಪೂರ್ವ ಮುಂಗಾರು ಹಂಗಾಮಿನಲ್ಲಿ ಮೇ 28ರವರೆಗೆ 105 ಮಿ.ಮೀ ಸಾಮಾನ್ಯ ಮಳೆಯಾಗಿದ್ದು, 159 ಮಿ.ಮೀ. ವಾಸ್ತವರಿಕ ಸರಾಸರಿ ಮಳೆ ಅಂದರೆ ಶೇ.51ರಷ್ಟು ಮಳೆಯಾಗಿದೆ.

ಆಹಾರ ಧಾನ್ಯ, ಎಣ್ಣೆಕಾಳುಗಳ ಉತ್ಪಾದನೆ ಗುರಿ

2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 77 ಲಕ್ಷ ಹೆಕ್ಟೇರ್ ವಿಸ್ತೀರ್ಣ ಪ್ರದೇಶದಲ್ಲಿ ಬಿತ್ತನೆ ಕೈಗೊಳ್ಳುವ ಗುರಿ ಹೊಂದಿದ್ದು, 101.38 ಲಕ್ಷ ಟನ್ ಆಹಾರ ಧಾನ್ಯಗಳು ಹಾಗೂ 10.85 ಲಕ್ಷ ಟನ್  ಎಣ್ಣೆಕಾಳುಗಳ ಉತ್ಪಾದನೆ ಗುರಿ ಹೊಂದಲಾಗಿದೆ.

ಮೇ 28 ರವರೆಗಿನ ಬಿತ್ತನೆ

ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಚಾಮರಾಜನಗರ, ಮಂಡ್ಯ, ಹಾಸ, ಚಿಕ್ಕಮಗಳೂರು, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭೂ ಸಿದ್ಧತೆ ಹಾಗೂ ಜೋಳ, ಹೆಸರು ಉದ್ದು, ಹಲಸಂದೆ, ಎಳ್ಳು, ಸೂರ್ಯಕಾಂತಿ, ಹತ್ತಿ, ತಂಬಾಕು ಸೇರಿದಂತೆ ಇತರೆ ಬೆಳೆಗಳ ಬಿತ್ತನೆ ಪ್ರಾರಂಭವಾಗಿದೆ. ಕರಾವಳಿ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ನೈರುತ್ಯ ಮಾರುತ ಮಳೆಯು ಪ್ರಾರಂಭವಾದ ಬಳಿಕ ಭೂಮಿ ಸಿದ್ಧತೆ ಹಾಗೂ ಬಿತ್ತನೆ ಕಾರ್ಯಗಳು ಪ್ರಾರಂಭವಾಗಿವೆ.

ಚಾಮರಾಜನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಮೈಸೂರು, ಬೆಳಗಾವಿ ಹಾಗೂ ರಾಮನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಪೂರ್ವ ಮುಂಗಾರು ಮಳೆಯಾಗಿದ್ದು, ಕಳೆದ ಮೇ 28 ರವರೆಗೆ 3.06 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆಯಾಗಿದೆ. ಇಲ್ಲಿಯವರೆಗಿನ ವರದಿ ಪ್ರಕಾರ 77 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಗೆ ಪ್ರತಿಯಾಗಿ 3.06 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಶೇ.3.97ರಷ್ಟು ಬಿತ್ತನೆಯಾಗಿದೆ.

ಬಿತ್ತನೆ ಬೀಜ ಹಂಚಿಕೆ

ಲಾಕ್ಡೌನ್ ಸಮಯದಲ್ಲಿಯೂ ಕೂಡ ಕೃಷಿಗಾಗಲೀ ರೈತಾಪಿ ಚಟುವಟಿಕೆಗಳಿಗಾಗಲೀ ಅಥವಾ ಕೃಷಿ ಯಂತ್ರೋಪಕರಣಗಳ ಖರೀದಿಗಾಗಲಿ ಯಾವುದೇ ನಿರ್ಬಂಧ ವಿಧಿಸಿಲ್ಲ. 2021-21ರ ಮುಂಗಾರು ಹಂಗಾಮಿಗೆ ಅಂದಾಜು 6 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳಿಗೆ ಬೇಡಿಕೆಯಿದ್ದು, ಕಳೆದ ಮೇ 28ರವರೆಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಇದುವರೆಗೂ 19675 ಕ್ವಿಂಟಾಲ್ ಗಳಷ್ಟು ಬಿತ್ತನೆ ಬೀಜ ವಿತರಿಸಲಾಗಿದ್ದು, 1,74,653 ಕ್ವಿಂಟಾಲ್ʼಗಳಷ್ಟು ಇನ್ನೂ ದಾಸ್ತಾನು ಇದೆ. ಅಗತ್ಯಕ್ಕೆ ತಕ್ಕಂತೆ ಬಿತ್ತನೆ ಬೀಜ ಪೂರೈಸಲಾಗುತ್ತಿದ್ದು, ಬಿತ್ತನೆ ಬೀಜ ಪೂರೈಕೆಗೆ ಯಾವುದೇ ಕೊರತೆ ಇರುವುದಿಲ್ಲ.

2021-22ರ ಮುಂಗಾರು ಹಂಗಾಮಿನಲ್ಲಿಒಟ್ಟು 26.47 ಲಕ್ಷ ಮೆಟ್ರಿಕ್ ಟನ್ ವಿವಿಧ ರಾಸಾಯನಿಕ ಗೊಬ್ಬರಗಳಿಗೆ ಬೇಡಿಕೆಯಿದ್ದು, ಇದರಲ್ಲಿ ಏಪ್ರಿಲ್ ಹಾಗೂ ಮೇ ಮಾಹೆಯಲ್ಲಿ 7,97,662 ಮೆಟ್ರಿಕ್ ಟನ್ ರಸಗೊಬ್ಬರಗಳಿಗೆ ಬೇಡಿಕೆಯಿದ್ದು, ಮೇ.28 ರವರೆಗೆ ಒಟ್ಟು 5,67,239 ಮೆಟ್ರಿಕ್ ಟನ್ ಪ್ರಮಾಣದಲ್ಲಿ ರಸಗೊಬ್ಬರ ಸರಬರಾಜಾಗಿದೆ. ಅಲ್ಲದೇ ಇನ್ನೂ ಒಟ್ಟು 12,38,600 ಮೆಟ್ರಿಕ್ ಟನ್ ಗಳಷ್ಟು ರಸಗೊಬ್ಬರ ದಾಸ್ತಾನು ಇದ್ದು, ಯಾವುದೇ ರಸಗೊಬ್ಬರಕ್ಕೆ ಇರುವುದಿಲ್ಲ.

ಸಚಿವರು ಏನಂತಾರೆ?

ರಾಜ್ಯದಲ್ಲಿ ಭಿತ್ತನೆಗೆ ಅಗತ್ಯವಾದ ಬೀಜ ಮತ್ತು ರಸಗೊಬ್ಬರ ಕೊರತೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ಜತೆಗೆ, ಕೇಂದ್ರವೂ ಸಕಾಲಕ್ಕೆ ನೆರವು ನೀಡುತ್ತಿದೆ. ಮಳೆಯಾಗಿರುವ ಜಿಲ್ಲೆಗಳಲ್ಲಿ ಭಿತ್ತನೆ ಕೆಲಸ ನಡೆಯುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ತಿಳಿಸಿದ್ದಾರೆ.

Tags: agriculturebc patilcultivationkarnatakamonsoonrain
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರಗಳಿಗೆ ಅಕ್ರಮ ಖರೀದಿ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸೇರಿ ನಾಲ್ವರು ಸಸ್ಪೆಂಡ್‌

ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರಗಳಿಗೆ ಅಕ್ರಮ ಖರೀದಿ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸೇರಿ ನಾಲ್ವರು ಸಸ್ಪೆಂಡ್‌

Leave a Reply Cancel reply

Your email address will not be published. Required fields are marked *

Recommended

ಗಡಿನಾಡಿನಲ್ಲೊಬ್ಬ ಫುಕುವೋಕಾ! ಅರತ್ತೈದರ ಪ್ರಾಯದಲ್ಲೂ ಸಾವಯವ ಕೃಷಿ ಮೇಲೆ ವ್ಯಾಮೋಹ; ಬರಪೀಡಿತ ಗಡಿ ಪ್ರದೇಶದಲ್ಲಿ ವರ್ಷಕ್ಕೆರಡು ಭತ್ತದ ಬೆಳೆ

ಇನ್ನು ಮುಂದೆ ಬೆಳೆ ವಿಮೆಗೂ ನಾಮಿನಿ ಮಾಡಿಸಿಕೊಳ್ಳಬೇಕು ಕಡ್ಡಾಯ

5 years ago
ಹೊಸ ತಲೆಮಾರಿನವರು ಕಲಾಸೃಷ್ಟಿಗಿಳಿದರೆ ಭೂಕಂಪವೇ ಸಂಭವಿಸುತ್ತದೆ ಎಂದು ಎದೆತಟ್ಟಿ ಹೇಳಿದ್ದ ಮಾರಿ ಸೆಲ್ವರಾಜ್ ಸೃಷ್ಟಿಸಿದ ಕರ್ಣನ್ ಎಂಬ ನಿರಾಭರಣ ಸುಂದರ

ಹೊಸ ತಲೆಮಾರಿನವರು ಕಲಾಸೃಷ್ಟಿಗಿಳಿದರೆ ಭೂಕಂಪವೇ ಸಂಭವಿಸುತ್ತದೆ ಎಂದು ಎದೆತಟ್ಟಿ ಹೇಳಿದ್ದ ಮಾರಿ ಸೆಲ್ವರಾಜ್ ಸೃಷ್ಟಿಸಿದ ಕರ್ಣನ್ ಎಂಬ ನಿರಾಭರಣ ಸುಂದರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ