• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಮುಳಬಾಗಿಲು ಪಟ್ಟಣದಲ್ಲಿ ಸುಸಜ್ಜಿತ ಕೋವಿಡ್ ಕೇರ್ ಆಸ್ಪತ್ರೆ ಉದ್ಘಾಟಿಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ

cknewsnow desk by cknewsnow desk
June 2, 2021
in COVID-19, KOLAR
Reading Time: 1 min read
0
ಮುಳಬಾಗಿಲು ಪಟ್ಟಣದಲ್ಲಿ ಸುಸಜ್ಜಿತ ಕೋವಿಡ್ ಕೇರ್ ಆಸ್ಪತ್ರೆ ಉದ್ಘಾಟಿಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ
917
VIEWS
FacebookTwitterWhatsuplinkedinEmail

80 ಆಕ್ಸಿಜನ್ ಹಾಸಿಗೆಗಳ ಆಸ್ಪತ್ರೆ / ಶಾಸಕರ ನಿಧಿಯಿಂದ 80 ಲಕ್ಷ ರೂ. ವೆಚ್ಚ

ಮುಳಬಾಗಿಲು: ಸ್ಥಳೀಯ ಶಾಸಕರ ನಿಧಿ ಹಾಗೂ ಸರಕಾರದ ನೆರವಿನಿಂದ ಪಟ್ಟಣದ ಹಳೆಯ ನ್ಯಾಯಾಲಯ ಕಟ್ಟಡದಲ್ಲಿ ಹೊಸದಾಗಿ ಅಭಿವೃದ್ಧಿ ಮಾಡಲಾಗಿರುವ ಸುಸಜ್ಜಿತ 80 ಹಾಸಿಗೆಗಳ ಕೋವಿಡ್ ಕೇರ್ ಆಸ್ಪತ್ರೆಯನ್ನು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಬುಧವಾರ ಲೋಕಾರ್ಪಣೆ ಮಾಡಿದರು.

ಈ ಮೂಲಕ ರಾಜ್ಯದ ಪೂರ್ವ ಗಡಿಭಾಗದ ಪಟ್ಟಣ ಮುಳಬಾಗಿಲು ಮತ್ತು ತಾಲೂಕಿನ ಗ್ರಾಮಗಳಲ್ಲಿ ಸೋಂಕಿಗೆ ತುತ್ತಾದವರು ಇಲ್ಲಿಯೇ ಅತ್ಯುತ್ತಮ ಚಿಕಿತ್ಸೆ ಪಡೆಯಬಹುದು. ಸೋಂಕು ಕಾಣಿಸಿಕೊಂಡ ಮೇಲೆ ಆತಂಕಗೊಂಡು ಕೋಲಾರ ಅಥವಾ ಬೆಂಗಳೂರಿಗೆ ಓಡುವುದು ಬೇಡ. ಇಲ್ಲಿಯೇ ಅತ್ಯುತ್ತಮ ಚಿಕಿತ್ಸೆ ಲಭ್ಯವಾಗುತ್ತದೆ ಎಂದು ಉದ್ಘಾಟನೆ ನೆರೆವೇರಿಸಿದ ನಂತರ ಡಿಸಿಎಂ ಹೇಳಿದರು.

ಪಟ್ಟಣದ ಹಳೆಯ ನ್ಯಾಯಾಲಯದ ಕಟ್ಟಡದಲ್ಲಿ ಅತ್ಯಂತ ಸುಸಜ್ಜಿತವಾಗಿ ಈ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸಲಾಗಿದೆ. ನ್ಯಾಯಾಲಯವು ಹೊಸ ಕಟ್ಟಡಕ್ಕೆ ಸ್ಥಳಾಂತರವಾದ ನಂತರ ಈ ಕಟ್ಟಡ ಖಾಲಿ ಬಿದ್ದಿತ್ತು. ಇದನ್ನು ವ್ಯರ್ಥವಾಗಿ ಬಿಡದೇ ಈಗ ಆಸ್ಪತ್ರೆಯಾಗಿ ಪರಿವರ್ತಿಸಲಾಗಿದೆ. ಈ ಆಸ್ಪತ್ರೆಗೆ ಸ್ಥಳೀಯ ಶಾಸಕರ ನಿಧಿಯಿಂದ 80 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಈ ಕಟ್ಟಡವನ್ನು ಆಸ್ಪತ್ರೆ ಮಾಡಬೇಕು ಎಂದು ಶಾಸಕ ನಾಗೇಶ್ ಸಂಕಲ್ಪ ಮಾಡಿದ್ದರು. ಅದಕ್ಕೆ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಮತ್ತು ಸಂಸದ ಮುನಿಯಪ್ಪ ಅವರು ಸಹಕಾರ ನೀಡಿದ್ದಾರೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಈ ಆಸ್ಪತ್ರೆಯ ಎಲ್ಲ 80 ಬೆಡ್ಗಳಿಗೂ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಜಂಬೋ ಸಿಲಿಂಡರ್‌ʼಗಳ ಸಂಪರ್ಕ ಕಲ್ಪಿಸಲಾಗಿದೆ. ಇಲ್ಲಿ ಆಮ್ಲಜನಕ ಕೊರತೆ ಆಗುವುದಿಲ್ಲ. ಅಲ್ಲದೆ, ಎಸ್ಎಲ್ಆರ್ ಪ್ರತಿಷ್ಠಾನದಿಂದ ಮಹೇಶ್, ರಾಜ್ಚಂದ್ರ ಸಂಸ್ಥೆ, ರಾಘವೇಂದ್ರ ರಾವ್ ಅವರು ತಲಾ ಒಂದು ಸೇರಿದಂತೆ ವಿವಿಧ ಸಂಘಟನೆಗಳು ಮುಂದೆ ಬಂದು 20 ಆಮ್ಲಜನಕ ಸಾಂದ್ರಕಗಳನ್ನು ಈ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದ್ದಾರೆ. ಸರಕಾರದ ಕಡೆಯಿಂದ ವೈದ್ಯರು, ಅರೆ ವೈದ್ಯ ಸಿಬ್ಬಂದಿ, ವೈದ್ಯಕೀಯ ಸಾಮಗ್ರಿ, ಔಷಧಿ, ಮಾತ್ರೆಗಳನ್ನು ಒದಗಿಸಲಾಗಿದೆ. ಮುಂದೆ ಏನೇ ಬೇಡಿಕೆ ಇದ್ದರೂ ವಿಳಂಬ ಮಾಡದೇ ಒದಗಿಸಲಾಗುವುದು ಎಂದು ಅವರು ಹೇಳಿದರು.

ಮೂರನೇ ಅಲೆಗೂ ಸನ್ನದ್ಧ

ಗ್ರಾಮೀಣ ಪ್ರದೇಶದಲ್ಲಿ ಅತ್ಯುತ್ತಮ ಆರೋಗ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಸಂಭವನೀಯ ಮೂರನೇ ಅಲೆ ಎದುರಿಸುವುದಕ್ಕೂ ಸರಕಾರ ಸಂಪೂರ್ಣವಾಗಿ ಸನ್ನದ್ಧವಾಗಿದೆ. ರಾಜ್ಯದ ಎಲ್ಲ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರ ಸೇರಿದಂತೆ ತಾಲೂಕು ಮತ್ತು ಜಿಲ್ಲಾ ಮಟ್ಟದ ಎಲ್ಲ ಆಸ್ಪತ್ರೆಗಳಿಗೆ ಇನ್ನಷ್ಟು ಶಕ್ತಿ ತುಂಬಲಾಗುತ್ತಿದೆ. ಮೂಲಸೌಕರ್ಯಗಳನ್ನು ಉತ್ತಮಪಡಿಸಲಾಗುತ್ತಿದೆ ಎಂದು ಡಿಸಿಎಂ ತಿಳಿಸಿದರು.

ಕೋಲಾರದ ಮುಳಬಾಗಿಲಿನಲ್ಲಿ ಹಳೆಯ ಕೋರ್ಟ್ ಸಂಕೀರ್ಣವನ್ನು ಕೋವಿಡ್ ಕೇರ್ ಆಸ್ಪತ್ರೆಯನ್ನಾಗಿ ಪರಿವರ್ತಿಸಿ ಇಂದು ಲೋಕಾರ್ಪಣೆಗೊಳಿಸಲಾಗಿದೆ.

ಯಾವುದೇ ರೀತಿಯ ಪರಿಸ್ಥಿತಿ ಬಂದರೂ ಸೂಕ್ತ ಚಿಕಿತ್ಸೆ ಒದಗಿಸಲು 80 ಹಾಸಿಗೆಗಳ ಲಭ್ಯತೆ, ಆಕ್ಸಿಜನ್, ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಸರ್ಕಾರದ ನೆರವು ಸದಾ ಸಿಗಲಿದೆ.

1/2 pic.twitter.com/epKdp9EsRN

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) June 2, 2021

ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ, ಶಾಸಕ ನಾಗೇಶ್, ಸಂಸದ ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಘವೇಂದ್ರ ಬೇಲೂರು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags: covid19-covid care hospital in mulbagalkarnatakakarnataka fihgts coronakolar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಗುಡಿಬಂಡೆಯಲ್ಲಿ ಲೋಕಾಯುಕ್ತ ದಾಳಿ

ಗುಡಿಬಂಡೆಯಲ್ಲಿ ಲೋಕಾಯುಕ್ತ ದಾಳಿ

by cknewsnow desk
January 9, 2024
0

ಕೆ.ಆರ್.ಡಿ.ಎಲ್. ಎಕ್ಸಿಕ್ಯೂಟಿವ್ ಎಂಜಿನಿಯರ್ ಸಂಬಂಧಿತರ ಮನೆ ಮೇಲೆ ದಾಳಿ; ರಾಜ್ಯದ 30 ಕಡೆ ಶೋಧ

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

by cknewsnow desk
December 21, 2023
0

ಕೋವಿಡ್‌ 19 ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

by cknewsnow desk
December 20, 2023
0

ನಾಳೆ ತುರ್ತು ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

by cknewsnow desk
December 20, 2023
0

ರಾಜ್ಯದಲ್ಲಿ ಕೋವಿಡ್ ಹೆಚ್ಚಳ; ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

by cknewsnow desk
December 19, 2023
0

ಕೇರಳ ನಂತರ ಕರ್ನಾಟಕದಲ್ಲಿ ಹೈ ಅಲರ್ಟ್

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ಕೋವಿಡ್-‌19 ರೂಪಾಂತರಿ ತಳಿ ಉಲ್ಬಣ; ಕೇರಳ-ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

by cknewsnow desk
December 17, 2023
0

ಕೇರಳದಲ್ಲಿ 1,324 ಜನರಿಗೆ ಕೋವಿಡ್; ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತಕ್ಕೆ ಸರಕಾರ ಸೂಚನೆ

Next Post
ಸರಕಾರಿ ಆಸ್ಪತ್ರೆಗಳಲ್ಲಿ ವಿಶ್ವ ದರ್ಜೆಯ ಸೇವೆ ಸಿಗುವಂತೆ ಕಾರ್ಯನಿರ್ವಹಿಸಿ; ನೂತನ ವೈದ್ಯರಿಗೆ ಗ್ರಾಮೀಣ ಸೇವೆಯ ಪಾಠ ಮಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಸರಕಾರಿ ಆಸ್ಪತ್ರೆಗಳಲ್ಲಿ ವಿಶ್ವ ದರ್ಜೆಯ ಸೇವೆ ಸಿಗುವಂತೆ ಕಾರ್ಯನಿರ್ವಹಿಸಿ; ನೂತನ ವೈದ್ಯರಿಗೆ ಗ್ರಾಮೀಣ ಸೇವೆಯ ಪಾಠ ಮಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

NEPಯನ್ನು ‘ನಾಗಪುರ ಎಜ್ಯುಕೇಷನ್ ಪಾಲಿಸಿ’ ಎಂದ ಡಿಕೆಶಿಗೆ ಸಚಿವರು ಕೊಟ್ಟ ಉತ್ತರವೇನು?

NEPಯನ್ನು ‘ನಾಗಪುರ ಎಜ್ಯುಕೇಷನ್ ಪಾಲಿಸಿ’ ಎಂದ ಡಿಕೆಶಿಗೆ ಸಚಿವರು ಕೊಟ್ಟ ಉತ್ತರವೇನು?

5 years ago
ರಷ್ಯಾ ಆಕ್ರಮಣದಿಂದ ಉಕ್ರೇನ್ ಜರ್ಝರಿತ

ರಷ್ಯಾ ಆಕ್ರಮಣದಿಂದ ಉಕ್ರೇನ್ ಜರ್ಝರಿತ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ