• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಸರಕಾರಿ ಆಸ್ಪತ್ರೆಗಳಲ್ಲಿ ವಿಶ್ವ ದರ್ಜೆಯ ಸೇವೆ ಸಿಗುವಂತೆ ಕಾರ್ಯನಿರ್ವಹಿಸಿ; ನೂತನ ವೈದ್ಯರಿಗೆ ಗ್ರಾಮೀಣ ಸೇವೆಯ ಪಾಠ ಮಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

cknewsnow desk by cknewsnow desk
June 2, 2021
in COVID-19, STATE
Reading Time: 1 min read
0
ಸರಕಾರಿ ಆಸ್ಪತ್ರೆಗಳಲ್ಲಿ ವಿಶ್ವ ದರ್ಜೆಯ ಸೇವೆ ಸಿಗುವಂತೆ ಕಾರ್ಯನಿರ್ವಹಿಸಿ; ನೂತನ ವೈದ್ಯರಿಗೆ ಗ್ರಾಮೀಣ ಸೇವೆಯ ಪಾಠ ಮಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್
921
VIEWS
FacebookTwitterWhatsuplinkedinEmail

ಐತಿಹಾಸಿಕ ರೀತಿಯಲ್ಲಿ, ಐದಾರು ತಿಂಗಳಲ್ಲಿ ಒಟ್ಟು 1,763 ವೈದ್ಯರ ನೇಮಕ ನೇರ ನೇಮಕ

ಬೆಂಗಳೂರು: ಸರಕಾರಿ ಆಸ್ಪತ್ರೆಗಳಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆ ದೊರೆಯುವ ಮಟ್ಟಿಗೆ ಕೆಲಸ ಮಾಡಿ, ಸರಕಾರಿ ಆಸ್ಪತ್ರೆಗಳ ಬಗೆಗಿನ ಜನರ ಮನೋಧೋರಣೆ ಬದಲಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೊಸ ವೈದ್ಯರಿಗೆ ಕರೆ ನೀಡಿದರು.

ಆರೋಗ್ಯ ಇಲಾಖೆಯಿಂದ 715 ಹಿರಿಯ ತಜ್ಞರು, 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಸೇರಿದಂತೆ ಒಟ್ಟು 1,763 ವೈದ್ಯರ ನೇಮಕ ಪೂರ್ಣಗೊಂಡಿದ್ದು, ನೂತನ ವೈದ್ಯರನ್ನು ಉದ್ದೇಶಿಸಿ, ಆನ್ʼಲೈನ್ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.

ಕೋವಿಡ್ ಆರ್ಥಿಕ ಸಂಕಷ್ಟದ ನಡುವೆ ಐತಿಹಾಸಿಕ ರೀತಿಯಲ್ಲಿ ರಾಜ್ಯ ಸರಕಾರವು ಕೇವಲ ಐದಾರು ತಿಂಗಳಲ್ಲಿ ವೈದ್ಯರ ನೇರ ನೇಮಕ ಮಾಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ಗುಣಮಟ್ಟದ ಸೇವೆ ಸರಕಾರಿ ಆಸ್ಪತ್ರೆಗಳಲ್ಲಿ ಸಿಗುವುದಿಲ್ಲ ಎಂಬ ಭಾವನೆ ಜನರಲ್ಲಿದೆ. ಆದರೆ ವಾಸ್ತವವಾಗಿ ಸರಕಾರಿ ಆಸ್ಪತ್ರೆಗಳಲ್ಲಿ ಬಹಳಷ್ಟು ಮೂಲಸೌಕರ್ಯವಿದೆ. ಹೊಸ ವೈದ್ಯರು ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳಲ್ಲಿ ಕೆಲಸ ಮಾಡಿ, ಆ ಆಸ್ಪತ್ರೆಯನ್ನು ವಿಶ್ವದರ್ಜೆಯ ಆಸ್ಪತ್ರೆಯಾಗಿ ಪರಿವರ್ತಿಸಬೇಕು. ಕಾರ್ಪೊರೇಟ್ ವಲಯದ ಮಾದರಿಯಲ್ಲಿ ಕಾರ್ಯನಿರ್ವಹಿಸಿ, ಸರಕಾರಿ ಆಸ್ಪತ್ರೆಗಳ ಗುಣಮಟ್ಟ ಹೆಚ್ಚಿಸುವ ಸಂಕಲ್ಪ ತೊಡಬೇಕು ಎಂದರು.

ಸರಕಾರಿ ಆಸ್ಪತ್ರೆಗೆ ಬಡವರು, ಕೆಳ ಮಧ್ಯಮ ವರ್ಗದ ಜನರು ಬರುತ್ತಾರೆ. ಇಂತಹವರು ಆರೋಗ್ಯಕ್ಕಾಗಿ ಹೆಚ್ಚು ಹಣ ಖರ್ಚು ಮಾಡಬಾರದೆಂದು ಸರಕಾರ ಉಚಿತ ಸೇವೆ ನೀಡುತ್ತಿದೆ. ಈ ಸೇವೆಯನ್ನು ಜನರಿಗೆ ತಲುಪಿಸುವ ಸೇತುವೆಯಾಗಿ ವೈದ್ಯರು ಕಾರ್ಯನಿರ್ವಹಿಸಬೇಕು ಎಂದರು.

1 ಸಾವಿರ ಜನಸಂಖ್ಯೆಗೆ ಒಬ್ಬ ವೈದ್ಯ ಇರಬೇಕೆಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಆದರೆ ದೇಶದಲ್ಲಿ 1,511 ಮಂದಿಗೆ ಒಬ್ಬ ಅಲೋಪತಿ ವೈದ್ಯ ಇದ್ದಾರೆ ಎಂದು 15 ನೇ ವೇತನ ಆಯೋಗ ತಿಳಿಸಿದೆ. ಇಂತಹ ಸಂದರ್ಭದಲ್ಲಿ ಸರಕಾರ ವೈದ್ಯರ ನೇಮಕ ಮಾಡಿರುವುದು ಸಕಾಲಿಕವಾಗಿದೆ. ಕೋವಿಡ್ ಪರಿಸ್ಥಿತಿಯಿಂದಾಗಿ, ಈಗ ವೈದ್ಯರು ಕೇವಲ ವೈದ್ಯರಾಗಿ ಉಳಿಯದೆ ಯೋಧರಾಗಿ ಬದಲಾಗಿದ್ದಾರೆ. ವೈದ್ಯರು ಸಮಾಜಶಾಸ್ತ್ರಜ್ಞ, ಆಡಳಿತಾಧಿಕಾರಿ, ನೀತಿ ನಿರೂಪಕರು, ಮಾನಸಿಕ ತಜ್ಞರಾಗಿ ಅನೇಕ ಪಾತ್ರಗಳನ್ನು ವಹಿಸುತ್ತಿದ್ದಾರೆ ಎಂದರು.

ರಾಜ್ಯದಲ್ಲಿ 2,508 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 204 ಸಮುದಾಯ ಆರೋಗ್ಯ ಕೇಂದ್ರಗಳಿವೆ. ಹಳ್ಳಿಗಳಲ್ಲಿ ಕಡ್ಡಾಯ ಸೇವೆ ಸಲ್ಲಿಸುವ ಕಾನೂನು ಹೇರಿಕೆಗೆ ಅವಕಾಶ ನೀಡದೆ ವೈದ್ಯರು ಈ ಭಾಗಗಳಲ್ಲಿ ಕೆಲಸ ಮಾಡಿದರೆ, ಹಳ್ಳಿ ಜನರು ಆರೋಗ್ಯ ಸೇವೆಗಾಗಿ ದೂರದ ಪ್ರದೇಶಕ್ಕೆ ಪ್ರಯಾಣಿಸುವ ಅಗತ್ಯವೇ ಇರುವುದಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದರ ಜೊತೆಗೆ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ರೂಪಿಸಲಾಗುತ್ತಿದೆ. ಎಚ್ಡಬ್ಲ್ಯುಸಿ ನಿರ್ಮಾಣದಲ್ಲಿ ಕೇಂದ್ರ ಸರಕಾರ ನೀಡಿದ ಗುರಿಗಿಂತ ಶೇ.125 ರಷ್ಟು ಹೆಚ್ಚು ಸಾಧನೆಯಾಗಿದೆ. ಆದರೆ ವೈದ್ಯರು ಹಳ್ಳಿಗಳಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ಈ ಸಾಧನೆ ಸಾರ್ಥಕವಾಗಲು ಸಾಧ್ಯ ಎಂದರು.

ವೈದ್ಯರೇ ದೇವರು ಎಂದ ಸಚಿವರು!

ವೈದ್ಯೋ ನಾರಾಯಣೋ ಹರಿ ಎಂದರೆ ವೈದ್ಯರೇ ದೇವರು. ಅನಾರೋಗ್ಯಕ್ಕೊಳಗಾದಾಗ ನೋವು ಕಡಿಮೆ ಮಾಡಿ, ಧೈರ್ಯ ಆತ್ಮವಿಶ್ವಾಸ ತುಂಬುವವರು ವೈದ್ಯರು. ಶ್ರೀಗಂಧದ ಕೊರಡು ತನ್ನನ್ನು ಸವೆಸಿಕೊಂಡಂತೆ ವೈದ್ಯರು ಸಮಾಜಕ್ಕಾಗಿ ಜೀವನ ಸವೆಸುತ್ತಾರೆ. ಎಲ್ಲಾ ವೈದ್ಯರು ತನು, ಮನ ಅರ್ಪಿಸಿ ಕೆಲಸ ಮಾಡಿದರೂ ಜನರು ವೈದ್ಯರ ಮೇಲೆ ವಿಶ್ವಾಸ ಕಡಿಮೆ ಮಾಡಿಕೊಂಡಿದ್ದಾರೆ. ಈ ಮನಸ್ಥಿತಿಯನ್ನು ಬದಲಿಸುವಂತೆ ಕೆಲಸ ಮಾಡಬೇಕು ಎಂದರು.

ಕೋವಿಡ್ʼನ ಎರಡನೇ ಅಲೆಯಿಂದ ದೇಶದಲ್ಲಿ 600 ಕ್ಕೂ ಹೆಚ್ಚು ವೈದ್ಯರು ಮೃತಪಟ್ಟಿದ್ದಾರೆ. ಇವರೆಲ್ಲರೂ ಕೊರೊನಾ ಯುದ್ಧದಲ್ಲಿ ಹುತಾತ್ಮರಾದ ಯೋಧರು. ಇಂತಹ ಸನ್ನಿವೇಶ ತಪ್ಪಿಸಲು ವೈದ್ಯರು ತಮ್ಮ ಹಾಗೂ ತಮ್ಮ ಕುಟುಂಬದ ಆರೋಗ್ಯದ ಬಗ್ಗೆಯೂ ಯೋಚಿಸಬೇಕು. ಲಸಿಕೆ ಬಗ್ಗೆ ಜನರು ತಪ್ಪು ಅರಿವಿನಿಂದ ಕೂಡಿರುವ ಈ ಸಮಯದಲ್ಲಿ ಎಲ್ಲಾ ವೈದ್ಯರು ಲಸಿಕೆ ಪಡೆದು, ಜನರಿಗೆ ಮಾದರಿಯಾಗಿ ಹಾಗೂ ತಮ್ಮ ಆರೋಗ್ಯ ಕಾಪಾಡಿಕೊಂಡು ಕೆಲಸ ಮಾಡಬೇಕು ಎಂದು ಸಚಿವರು ಕೋರಿದರು.

ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್, ಆಯುಕ್ತ ತ್ರಿಲೋಕ್ ಚಂದ್ರ ಪಾಲ್ಗೊಂಡಿದ್ದರು.

Tags: covid19 doctor recruitment in karnatakadr k sudhakarkarnatakaKarnataka covid-19karnataka fights corona
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಿದ್ದರಾಮಯ್ಯ v/s ಸರಕಾರ; ಕೋವಿಡ್ ನಡುವೆ ಸಖತ್ ಪಾಲಿಟಿಕ್ಸ್

ಕೋವಿಡ್ ಸಂಕಷ್ಟದಿಂದ ಪಾರಾಗಲು ಸರಕಾರದ ಮುಂದೆ ಡಿಮಾಂಡ್‌ಗಳ ಪಟ್ಟಿ ಇಟ್ಟ ಉದ್ಯಮ ಜಗತ್ತು; ಶೀಘ್ರದಲ್ಲಿಯೇ ಪರಿಹಾರ ಎಂದ ಸರಕಾರ

Leave a Reply Cancel reply

Your email address will not be published. Required fields are marked *

Recommended

ಜಗನ್ನಾಥನ ನೆಲದಲ್ಲಿ ಶಿಕ್ಷಣಕಾಶಿ ಕಟ್ಟಿದರು, ಕಂದಮಲ್‌ ಕಲ್ಯಾಣಕ್ಕೆ ಸಂಸತ್ತಿಗೆ ಹೋದರು, ‌ಅಳಿವಿನ ಅಂಚಿನಲ್ಲಿದ್ದ ನೇಕಾರಿಕೆಗೆ ಶಕ್ತಿ ತುಂಬಲು ದುರ್ಬಲರ ಚಾಕರಿಗೂ ನಿಂತರು!!

ಜಗನ್ನಾಥನ ನೆಲದಲ್ಲಿ ಶಿಕ್ಷಣಕಾಶಿ ಕಟ್ಟಿದರು, ಕಂದಮಲ್‌ ಕಲ್ಯಾಣಕ್ಕೆ ಸಂಸತ್ತಿಗೆ ಹೋದರು, ‌ಅಳಿವಿನ ಅಂಚಿನಲ್ಲಿದ್ದ ನೇಕಾರಿಕೆಗೆ ಶಕ್ತಿ ತುಂಬಲು ದುರ್ಬಲರ ಚಾಕರಿಗೂ ನಿಂತರು!!

5 years ago
ಕ್ಯಾಪ್ಟನ್ ಅಭಿಮನ್ಯು ಗಜಪಡೆಗೆ ಭಾರ ಹೊರಿಸಿ ತಾಲೀಮು

ಕ್ಯಾಪ್ಟನ್ ಅಭಿಮನ್ಯು ಗಜಪಡೆಗೆ ಭಾರ ಹೊರಿಸಿ ತಾಲೀಮು

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ