ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರ ಇಲ್ಲ
ಬೆಂಗಳೂರು: ಸರಕಾರ ಅನ್‌ಲಾಕ್ ಘೋಷಣೆ ಮಾಡುತ್ತಿದ್ದಂತೆ ಗ್ರಾಮೀಣ ಪ್ರದೇಶಗಳಿಂದ ಪುನಾ ಬೆಂಗಳೂರಿಗೆ ಜನರ ವಾಪಸಾತಿ ಪ್ರವಾಹೋಪಾದಿಯಲ್ಲಿ ಶುರುವಾಗಿರುವ ಭಾರೀ ಆತಂಕದ ನಡುವೆಯೇ ನಾಳೆಯಿಂದ (ಸೋಮವಾರ) 19 ಜಿಲ್ಲೆಗಳಲ್ಲಿ ಸೆಮಿ ಲಾಕ್‌ಡೌನ್ ಹಾಗೂ 11 ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್‌ಡೌನ್ ಮುಂದುವರಿಯುತ್ತದೆ.
ಪಾಸಿಟಿವಿಟಿ ಪ್ರಮಾಣ ಕಡಿಮೆಯಾಗಿರುವ ಕಾರಣಕ್ಕೆ ಚಿಕ್ಕಬಳ್ಳಾಪುರ ಮತ್ತು ಕೋಲಾರ ಸೇರಿ ೧೯ ಜಿಲ್ಲೆಗಳಲ್ಲಿ ಸೆಮಿ ಲಾಕ್‌ಡೌನ್ ಜತೆಗೆ ಕಟ್ಟುನಿಟ್ಟಿನ ನೈಟ್ ಕರ್ಫ್ಯೂ ಕೂಡ ಜಾರಿಯಲ್ಲಿ ಇರುತ್ತದೆ.
ಸೋಂಕು ಇಳಿಮುಖವಾಗದ ಕಾರಣ ಮೈಸೂರು, ಚಾಮರಾಜನಗರ ಹಾಗೂ ಕೊಡಗು ಸೇರಿದಂತೆ ೧೧ ಜಿಲ್ಲೆಗಳಲ್ಲಿ ಲಾಕ್‌ಡೌನ್ ಯಥಾಸ್ಥಿತಿ ಮುಂದುವರಿದಿದೆ.
ಇದೇ ವೇಳೆ ಯಾವುದೇ ಜಿಲ್ಲೆಯಲ್ಲಿ ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸಂಚಾರ ನಾಳೆಯಿಂದ ಆರಂಭವಾಗುವುದಿಲ್ಲ. ಸೆಮಿ ಲಾಕ್ ಇರುವ ಜಿಲ್ಲೆಗಳಲ್ಲೂ ಸಾರ್ವನಿಕ ಸಾರಿಗೆ ಇರುವುದಿಲ್ಲ. ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಕೂಡ ಪುನಾರಂಭ ಆಗುವುದಿಲ್ಲ.
ಕಂಪ್ಲೀಟ್ ಲಾಕ್‌ಡೌನ್ ಇರುವ 11 ಜಿಲ್ಲೆಗಳು
ಪಾಸಿಟಿವಿಟಿ ದರ ಇಳಿಕೆಯಾಗದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಲಾಕ್‌ಡೌನ್ ಯಥಾಸ್ಥಿತಿ ಮುಂದುವರಿಯುತ್ತದೆ. ಈ ಜಿಲ್ಲೆಗಳಲ್ಲಿ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಸಾಧ್ಯವಾದರೆ ಇನ್ನಷ್ಟು ಕಠಿಮ ನಿರ್ಬಂಧಗಳನ್ನು ವಿಧಿಸಿ ಎಂದು ಸರಕಾರ ಈ ಜಿಲ್ಲೆಗಳಿಗೆ ಸೂಚನೆ ನೀಡಿದೆ.
19 ಜಿಲ್ಲೆಗಳಲ್ಲಿ ಸೆಮಿ ಲಾಕ್
ಇನ್ನು ಚಿಕ್ಕಬಳ್ಳಾಪುರ, ಕೋಲಾರ ಸೇರಿ 19 ಜಿಲ್ಲೆಗಳಲ್ಲಿ ಜೂನ್ 14ರಿಂದ, ಅಂದರೆ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಜೂನ್ 21ರ ಬೆಳಗ್ಗೆ 6 ಗಂಟೆಯವರೆಗೆ ಸೆಮಿ ಲಾಕ್‌ಡೌನ್ ಜಾರಿಯಲ್ಲಿರುತ್ತದೆ. ಈ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.
ಏನಿರುತ್ತದೆ? ಏನಿರಲ್ಲ?
- ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಖಾಸಗಿ ಬಸ್ ಸಂಚಾರ ಇರಲ್ಲ. ಮೆಟ್ಟರೋ ರೈಲು ಕೂಡ ಇಲ್ಲ.
- ಸಿನಿಮಾ, ಮಾಲ್, ಜಿಮ್, ಈಜುಕೊಳಗಳು ಕೂಡ ಬಂದ್
- ಬಟ್ಟೆ, ಮೊಬೈಲ್, ಪಾದರಕ್ಷೆ, ಎಲೆಕ್ಟ್ರಿಕ್ ಮಳಿಕೆ ಪುಸ್ತಕ ಮಾರಾಟ ಅಂಗಡಿಗಳೂ ಇರಲ್ಲ
- ದೇಗುಲ , ಮಸೀದಿ, ಚರ್ಚ್ ಸೇರಿ ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ಭಕ್ತರಿಗೆ ಅವಕಾಶ ಇಲ್ಲ.
- ಸಭೆ, ಸಮಾರಂಭಗಳಿಗೂ ಅವಕಾಶ ಇಲ್ಲ
- ಎಲ್ಲಾ ಕಾರ್ಖಾನೆಗಳನ್ನು ಶೇ.50ರಷ್ಟು ಸಿಬ್ಬಂದಿ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.
- ಗಾರ್ಮೆಂಟ್ ಕಾರ್ಖಾನೆಗಳು ಶೇ.30ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.
- ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಗ್ಗೆ 6ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅವಕಾಶ
- ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ ಹಾಗೂ ನಿರ್ಮಾಣ ಚಟುವಟಿಕೆ ಸಂಬಂಧಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ಮಾರಾಟ ಮಳಿಗೆಗಳನ್ನು ತೆರೆಯಲು ಅವಕಾಶ
- ಪಾರ್ಕುಗಳನ್ನು ಬೆಳಗ್ಗೆ 5ರಿಂದ 10 ಗಂಟೆಯವರೆಗೆ ಅವಕಾಶ
- ಬೀದಿ ಬದಿ ವ್ಯಾಪಾರಿಗಳಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ
- ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ
- ನೈಟ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
- ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
Oh corona
Oh