• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ಅಂಬ್ಯುಲೆನ್ಸ್ ನೌಕರರು ಅತಂತ್ರ, ಆಶಾ ಕಾರ್ಯಕರ್ತೆಯರ ಪರಿಸ್ಥಿತಿ ಆಯೋಮಯ

cknewsnow desk by cknewsnow desk
June 14, 2021
in CHIKKABALLAPUR, COVID-19, STATE
Reading Time: 2 mins read
0
ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ಅಂಬ್ಯುಲೆನ್ಸ್ ನೌಕರರು ಅತಂತ್ರ, ಆಶಾ ಕಾರ್ಯಕರ್ತೆಯರ ಪರಿಸ್ಥಿತಿ ಆಯೋಮಯ
980
VIEWS
FacebookTwitterWhatsuplinkedinEmail

ಹೆಸರಿಗೆ ಫ್ರಂಟ್‌ಲೈನ್‌ ವಾರಿಯರ್ಸ್‌ ! ವೇತನದಲ್ಲಿ ಮಾತ್ರ ಲಾಸ್ಟ್‌ ಲೈನರ್ಸ್!!‌

by G S Bharath Gudibande

ಗುಡಿಬಂಡೆ: ರಾಜ್ಯದಲ್ಲಿ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಹಗಲು ರಾತ್ರಿ ಕರ್ತವ್ಯ ನಿರ್ವಹಣೆ ಮಾಡಿ ವೇತನ ಕಡಿಮೆ ಇದ್ದರೂ, ಸುರಕ್ಷತೆ ಇಲ್ಲದಿದ್ದರೂ, ಸೋಂಕಿತರ ಪಾಲಿಗೆ ಆಸರೆಯಾಗುತ್ತಿರುವ ಆಂಬ್ಯುಲೆನ್ಸ್ ಚಾಲಕರು ಸಂಕಷ್ಟದಲ್ಲಿದ್ದಾರೆ, ಹಾಗಾಗಿ ಸರಕಾರ ಇವರ ಸಮಸ್ಯೆಗಳನ್ನು ಪರಿಷ್ಕರಿಸಿ ಸೇವಾ ಭದ್ರತೆ ಸೇರಿದಂತೆ ಮುಂತಾದವುಗಳು ನೀಡಬೇಕಾಗಿದೆ.

ರಾಜ್ಯದಲ್ಲಿ ಕೋವಿಡ್-19 ಸೋಂಕು ತೀವ್ರವಾಗಿ ಹೆಚ್ಚಳವಾಗುತ್ತಿದೆ, ಸೋಂಕು ನಿಯಂತ್ರಣ ಮೀರಿ ಹರಡುತ್ತಿದೆ, ಇಂತಹ ಸಮಯದಲ್ಲಿ ಸೋಂಕಿತರನ್ನು ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ಸುರಕ್ಷಿತವಾಗಿ ಸೇರಿಸುವುದು ಆಂಬ್ಯುಲೆನ್ಸ್ ಚಾಲಕರ ಕರ್ತವ್ಯ, ಆದರೆ ಮುಂಚೂಣಿಯಲ್ಲಿ ನಿಂತು ಕೊರೋನಾ ವಾರಿಯರ್‌ಗಳಾಗಿ ಸೋಂಕಿತರನ್ನು ಆಸ್ಪತ್ರೆಗೆ ಸೇರಿಸುವ ಆಂಬ್ಯುಲೆನ್ಸ್ ಚಾಲಕರು ಜೀವನ ಪರಿಸ್ಥಿತಿ ಹೇಳತೀರದು.

ಆಂಬ್ಯುಲೆನ್ಸ್ ಚಾಲಕರ ಪರಿಸ್ಥಿತಿ

ತುರ್ತು ಸಂದರ್ಭದಲ್ಲಿ ಕೋವಿಡ್ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸವನ್ನು ಮಾಡುತ್ತಿದ್ದಾರೆ, ಜೀವದ ಭಯ ಬಿಟ್ಟು ಅವರು ಈ ಸೇವೆಯನ್ನು ಮಾಡುತ್ತಿರುವುದು ಶ್ಲಾಘನೀಯ. ಆದರೆ ಅವರಿಗೆ ಸೂಕ್ತ ವ್ಯವಸ್ಥೆ, ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ಮುಂತಾದವುಗಳನ್ನು ನೀಡಿ ಅವರ ಕುಟುಂಬಗಳನ್ನು ಸುಧಾರಿಸಲು ಮುಂದಾಗಬೇಕಿದೆ. ಆದರೆ, ಅದಕ್ಕೆ ಸರಕಾರ ಮನಸ್ಸು ಮಾಡಿಲ್ಲ.

ಕಾಣದ ವೈರಿಯೊಂದಿಗೆ ಹೋರಾಡುವ ದಾದಿಯರು

ಕಣ್ಣಿಗೆ ಕಾಣುವ ವೈರಿಯೊಂದಿಗೆ ಹೋರಾಡುವುದು ಸುಲಭ ಆದರೆ ಅಗೋಚರ ವೈರಿಯೊಂದಿಗೆ ಹೋರಾಡಿ ಗೆಲ್ಲುವುದು ನಿಜಕ್ಕೂ ಸವಾಲೇ ಸರಿ. ಇಂತಹ ಸವಾಲನ್ನು ಸಂತೋಷದಿಂದ ಸ್ವೀಕರಿಸಿರುವ ದಾದಿಯರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆದರೆ ಇವರ ವೇತನದ ವಿಷಯಕ್ಕೆ ಬಂದರೆ, ಸರಕಾರದ ಬಣ್ಣ ಬಿಚ್ಚಿಕೊಳ್ಳುತ್ತದೆ. ಮಾತೆತ್ತಿದರೆ ಫ್ರಂಟ್‌ಲೈನ್‌ ವಾರಿಯರ್‌ಗಳೆಂದು ಕೊಚ್ಚಿಕೊಳ್ಳುವ ಸರಕಾರ ಸಂಬಳದ ವಿಷಯಕ್ಕೆ ಬಂದರೆ ಡಬಲ್‌ಗೇಮ್‌ ಆಡುತ್ತಿದೆ.

ಸರಕಾರದ ಪ್ರೀತಿ ತೋರಿಕೆಗೆ ಸೀಮಿತ

ದಾದಿಯರು, ಆಂಬ್ಯುಲೆನ್ಸ್ ಚಾಲಕರು ಹಾಗೂ ಫ್ರಂಟ್ ಲೈನ್ ವಾರಿಯರ್ಸ್ ಬಗ್ಗೆ ಸರಕಾರ ಮತ್ತು ಸಮಾಜ ತೋರುವ ಪ್ರೀತಿ ಕೇವಲ ತೋರಿಕೆಗೆ ಮಾತ್ರ ಎನ್ನುವಂತಾಗಿದೆ. ಸರಕಾರ ಕೊಡುತ್ತಿರುವ ಸೌಲಭ್ಯ, ವೇತನ ಹಾಗೂ ಉದ್ಯೋಗ ಭದ್ರತೆ ಏನೇನು ಸಾಲದು.

ಹಾಗಾದರೆ ಇವರಿಗೆಲ್ಲ ಎಷ್ಟು ಸಂಬಳ ಸಿಗುತ್ತಿದೆ. ಜೀವ ಪಣಕ್ಕಿಟ್ಟು ಕೆಲಸ ಮಾಡಿದರೂ ಇವರೆಲ್ಲ ಸರಕಾರಿ ನೌಕರರಲ್ಲ. ಯಾರದ್ದೋ ಏಜೆನ್ಸಿ ಮೂಲಕ ನೇಮಕಗೊಂಡು ಸರಕಾರಕ್ಕೆ ಚಾಕರಿ ಮಾಡುತ್ತಿರುವವ ನತದೃಷ್ಟ ಕಾರ್ಮಿಕರು.

ಆಶಾ ಕಾರ್ಯಕರ್ತೆಯರಿಗೆ ಸೀನಿಯಾರಿಟಿ ಇದ್ದರೆ ಅಬ್ಬಾ ಎಂದರೂ 12,000 ರೂ. ವೇತನ ಸಿಕ್ಕಿದರೆ ಹೆಚ್ಚು. ಇನ್ನು ಹೊಸದಾಗಿ ಬಂದವರಿಗೆ ಸಿಗುವುದು 5,000 ರಿಂದ 7,000 ರೂ. ಮಾತ್ರ. ಅದೂ ಭತ್ಯೆಗಳೂ ಸೇರಿ.

ಇನ್ನೂ ಆಂಬ್ಯುಲೆನ್ಸ್ ಚಾಲಕರಿಗೆ 10,000-12,000 ರೂ. ಸಿಗುತ್ತದೆ. ಇವರು 108 ಸಿಬ್ಬಂದಿಯಾಗಿದ್ದರೆ ಮಾತ್ರ. ಇನ್ನೂ ಏಜೆನ್ಸಿಗಳ ಮೂಲಕ ಹೊರಗುತ್ತಿಗೆ ಪ್ರಕಾರ ಕೆಲಸ ಮಾಡುವವರಿಗೆ ಅಬ್ಬಬ್ಬಾ ಎಂದರೆ 10,000 ರೂ. ದಾಟುವುದಿಲ್ಲ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರ ತವರು ಜಿಲ್ಲೆಯಲ್ಲೇ ಫ್ರಂಟ್‌ಲೈನ್‌ ವಾರಿಯರ್‌ಗಳ ಜೀವನ ಧಾರುಣವಾಗಿದೆ.

ಮತ್ತೊಂದೆಡೆ, ಆಂಬ್ಯುಲೆನ್ಸ್ ಸಿಬ್ಬಂದಿಯಲ್ಲಿ ಹೊರ ಗುತ್ತಿಗೆ ಕಾರ್ಮಿಕರೇ ಹೆಚ್ಚು. ಬರುವ ವೇತನದಲ್ಲಿ ಅರ್ಧ ಪಾಲು ಏಜೆನ್ಸಿಗಳ ಪಾಲಾದರೆ, ಉಳಿದಿದ್ದರಲ್ಲಿ ಅವರು ಜೀವನ ಸಾಗಿಸಬೇಕಿದೆ. ಸರಕಾರ ಮುಂಚೂಣಿ ಕಾರ್ಯಕರ್ತರು ಎಂದು ಭಜನೆ ಮಾಡುತ್ತಿದ್ದರೂ ಅದರಿಂದ ಇವರಿಗೆ ಸಿಗುತ್ತಿರುವ ಭಾಗ್ಯವೇನೂ ಇಲ್ಲ.

ಪ್ರಾಣ ಪಣಕಿಟ್ಟರೂ ಬೆಲೆ ಇಲ್ಲ

ಸರಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ನಮ್ಮ ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆರು, ನರ್ಸ್‌ಗಳು, ವೈದ್ಯರು ಹಾಗೂ 108 ಆಂಬ್ಯುಲೆನ್ಸ್ ಚಾಲಕರು ಕೊರೋನಾ ವಿರುದ್ಧ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚುವುದರಿಂದ ಶುರುವಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ, ಅವರಿಗೆ ವಾಸಿಯಾದ ನಂತರ ಅವರನ್ನು ಪುನಾ ಮನೆಗೆ ಬಿಡುವವರೆಗೂ ಜವಾಬ್ದಾರಿಯಿಂದ ನಡೆದುಕೊಂಡರೂ ಸಮಾಜದಲ್ಲಿ ಸೂಕ್ತ ಬೆಲೆ ಸಿಗದೆ ಹಿಂದುಳಿದಿದ್ದಾರೆ.


ಯಾರು ಏನಂತಾರೆ?

ಆಂಬ್ಯುಲೆನ್ಸ್ ಚಾಲಕರು ಹಾಗೂ ದಾದಿಯರ ಸೇವೆ ನಿಜಕ್ಕೂ ಶ್ಲಾಘನೀಯ, ಇಂತಹ ಪ್ಯಾಂಡಮಿಕ್ ಸಂದರ್ಭದಲ್ಲಿ ಆಂಬ್ಯುಲೆನ್ಸ್ ಚಾಲಕರು, ದಾದಿಯರು ಮಾಡುತ್ತಿರುವ ಸೇವೆಗೆ ಸರ್ಕಾರ ಕೂಡಲೇ ಸ್ಪಂದಿಸಿ ಅವರಿಗೆ ಸೂಕ್ತ ಸೇವಾ ಭದ್ರತೆ, ವೇತನ ಹೆಚ್ಚಳ ಸೇರಿದಂತೆ ಮುಂತಾದ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು, ಹಾಗೂ ಇವರ ಹಗಲಿರುಳು ಮಾಡುವ ಸೇವೆಗೆ ಸಮಾಜದ ಪ್ರತಿಯೊಬ್ಬ ಜನರು ಗೌರವವನ್ನು ನೀಡಬೇಕು.

ಜಿ.ವಿ.ಗೋಪಿ / ಸ್ಥಳೀಯರು, ಗುಡಿಬಂಡೆ

ಕೊರೋನಾ ಆರಂಭದಿಂದ 24/7 ಕೆಲಸ ನಿರ್ವಹಿಸುತ್ತಿದ್ದೇವೆ, ನಮಗೆ ಕಡಿಮೆ ವೇತನ, ಸೌಲಭ್ಯ ಹಾಗೂ ಸುರಕ್ಷಿತವೂ ಕೂಡ ಕಡಿಮೆ ನಮ್ಮ ಸೇವೆಯನ್ನು ಗುರುತಿಸುವವರು ಇಲ್ಲ, ನಮಗೆ ಸೂಕ್ತ ಭದ್ರತೆ, ವೇತನ ಹೆಚ್ಚಳ ಸೇರಿದಂತೆ ಸೂಕ್ತ ಸೌಲಭ್ಯಗಳನ್ನು ನೀಡಿ ನಮಗೆ ಆಶ್ರಯ ನೀಡಬೇಕೆಂದು ವನವಿ ಮಾಡಿದರು.

ವೆಂಕಟೇಶ್ / ಆಂಬ್ಯುಲೆನ್ಸ್ ಚಾಲಕ, ಗುಡಿಬಂಡೆ

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಇದೀಗ ಬಂದಿದೆ! N95ಗೆ ಬದಲಿಗೆ ಮರು ಬಳಕೆ ಮಾಡಬಹುದಾದ ಹೈಬ್ರಿಡ್ SHG95 ಮಾಸ್ಕ್; ಮೇಡ್ ಇನ್ ಇಂಡಿಯಾ ಫಲ

ಇದೀಗ ಬಂದಿದೆ! N95ಗೆ ಬದಲಿಗೆ ಮರು ಬಳಕೆ ಮಾಡಬಹುದಾದ ಹೈಬ್ರಿಡ್ SHG95 ಮಾಸ್ಕ್; ಮೇಡ್ ಇನ್ ಇಂಡಿಯಾ ಫಲ

Leave a Reply Cancel reply

Your email address will not be published. Required fields are marked *

Recommended

ನೆಹರು ಎಂದರೇ

ನೆಹರು ಎಂದರೇ

4 years ago
ಲೋಕಸಭೆ ಚುನಾವಣೆ; ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ ಗ್ಯಾರಂಟಿ

ಜನವರಿ 13ಕ್ಕೆ ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಉದ್ಯೋಗ ಮತ್ತು ಸಾಲ ಮೇಳ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ