• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಸಂಬಳವಿಲ್ಲದೆ ಸಂಕಷ್ಟದಲ್ಲಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾದರಾ? ಶಾಲಾ ಶುಲ್ಕ ಸಂಘರ್ಷಕ್ಕೆ ಸಿದ್ದರಾಮಯ್ಯ ಸಿಟ್ಟು

cknewsnow desk by cknewsnow desk
June 15, 2021
in STATE
Reading Time: 1 min read
0
ಬಿಜೆಪಿ ಬೆಳವಣಿಗೆ ಹೈಡ್ರಾಮ & ಎಲ್ಲ ಯಡಿಯೂರಪ್ಪ ತಂತ್ರಗಾರಿಕೆ, ಸಹಿ ಸಂಗ್ರಹವೂ ಅವರದ್ದೇ ಕೆಲಸ ಎಂದು ಹೇಳಿದ ಸಿದ್ದರಾಮಯ್ಯ
921
VIEWS
FacebookTwitterWhatsuplinkedinEmail

ಪೋಷಕರು-ಖಾಸಗಿ ಶಾಲೆಗಳ ಬಿಕ್ಕಟ್ಟು ಬಗೆಹರಿಸುವಂತೆ ಮುಖ್ಯಮಂತ್ರಿಗೆ ಪತ್ರ

ಬೆಂಗಳೂರು: ಶುಲ್ಕ ವಿಚಾರದಲ್ಲಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.

ಪೋಷಕರು ಪಾವತಿಸಬೇಕಾದ ರಿಯಾಯ್ತಿ ಶುಲ್ಕವನ್ನು ಸರಕಾರವೇ ನಿರ್ಧರಿಸಬೇಕು ಮತ್ತು ಸರಕಾರದ ನಿರ್ಧಾರ ಕಟ್ಟುನಿಟ್ಟಿನ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್‍ಗಳಿಗೆ ಪಾವತಿಸಬೇಕಾದ ಕೊರೋನಾ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿ ಮುಂತಾದ ವಿಚಾರಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಅವರಿಗಾಗುವ ಹೊರೆ ತಗ್ಗಿಸಲು ಸಾಧ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುದ್ದಾರೆ. ಆ ಪತ್ರದ ವಿವರ ಹೀಗಿದೆ;

ಖಾಸಗಿ ಶಾಲಾ ಆಡಳಿತ ಮಂಡಳಿಗಳು ಮತ್ತು ಪೋಷಕರು ಪರಸ್ಪರ ಸಂಘರ್ಷಕ್ಕಿಳಿಯುವುದನ್ನು ನೋಡುತ್ತಾ ಕೂರುವುದು ಸರ್ಕಾರದ ಉದಾಸೀನತೆಯನ್ನು ತೋರಿಸುತ್ತದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಈ ಕೂಡಲೇ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು @CMofKarnataka ಅವರನ್ನು ಒತ್ತಾಯಿಸುತ್ತೇನೆ. pic.twitter.com/H0U1zubjIo

— Siddaramaiah (@siddaramaiah) June 15, 2021

ಕೊರೊನಾ ಕಾರಣದಿಂದಾಗಿ ಕಳೆದ ವರ್ಷದಿಂದ ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಾಗಲೇ ಇಲ್ಲ. ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳವನ್ನು ನೀಡಿಲ್ಲ. ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕರು ಹಣ್ಣು ತರಕಾರಿ ವ್ಯಾಪಾರಿಗಳಾಗಿದ್ದಾರೆ.

ಇಂಥ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆ ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಸರಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ.30ರಷ್ಟು ವಿನಾಯ್ತಿ ನೀಡಿ ಶೇ.70ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ.

ವಾಹನ ಶುಲ್ಕ ಸೇರಿ ಇತರೆ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗಿದೆ. ಇಂಥ ಸಂದರ್ಭದಲ್ಲಿ ಸರಕಾರ ನಿಷ್ಕ್ರಿಯವಾಗಿ ಕೂರುವುದು ಅಸಾಮರ್ಥ್ಯ ಮತ್ತು ಲಾಬಿಗೆ ಮಣಿದಿರುವುದರ ಲಕ್ಷಣ. ಸರಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ಯಾವ ಕ್ರಮ ವಹಿಸಲಾಗಿದೆ? ಪೂರ್ತಿ ಶುಲ್ಕವನ್ನು ಕಟ್ಟಲಾಗದ ಮಕ್ಕಳಿಗೆ ಮುಂದಿನ ತರಗತಿಗಳಿಗೆ ಪ್ರವೇಶ ನೀಡದೆ ಶೋಷಿಸುತ್ತಿರುವ ಶಾಲೆಗಳ ವಿಚಾರದಲ್ಲಿ ಯಾವ ಕ್ರಮ ವಹಿಸಲಾಗಿದೆ? ಎಂದು ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕಿದೆ.

ಜುಲೈ 1ರಿಂದ ಶೈಕ್ಷಣಿಕ ವರ್ಷದ ತರಗತಿಗಳನ್ನು ಆರಂಭಿಸಲು ಹಾಗೂ ದಿನಾಂಕ 15-6-2021 ರಿಂದಲೇ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಆದರೆ, ಶುಲ್ಕ ವಸೂಲಿ ಬಗ್ಗೆ ಇಲಾಖೆ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ. ಹೀಗಾಗಿ ಕಳೆದ ವರ್ಷದಂತೆಯೇ ಈ ಶೈಕ್ಷಣಿಕ ವರ್ಷದಲ್ಲೂ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ.

ಕಳೆದ ವರ್ಷ ಶಾಲೆಗೆ ಮಕ್ಕಳು ಕಾಲಿಡಲು ಸಾಧ್ಯವಾಗದಿದ್ದರೂ ಬಸ್ ಶುಲ್ಕವನ್ನೂ ವಸೂಲಿ ಮಾಡಿದ ಶಾಲೆಗಳೂ ಇವೆ. ಈ ವರ್ಷವೂ ಇದೇ ಪರಿಸ್ಥಿತಿ ಮುಂದುವರೆದಿದೆ. ಸಾಲದ್ದಕ್ಕೆ ಸರಕಾರ ಶೇ.30ರಷ್ಟು ಶುಲ್ಕ ಕಡಿತ ಮಾಡಿದ್ದು ಹಿಂದಿನ ವರ್ಷಕ್ಕೆ ಮಾತ್ರ, ಈ ವರ್ಷ ಸರಕಾರವೇ ಪೂರ್ಣ ಶುಲ್ಕ ವಸೂಲಿ ಮಾಡಲು ಒಪ್ಪಿಗೆ ಕೊಟ್ಟಿದೆ ಎಂದು ಆಡಳಿತ ಮಂಡಳಿಗಳು ಪೋಷಕರಿಗೆ ಹೇಳುತ್ತಿವೆ. ಹೀಗಾಗಿ ತಕ್ಷಣ ಸರಕಾರ ಈ ವಿಚಾರದಲ್ಲಿ ತನ್ನ ನಿಲುವು ಏನು ಎನ್ನುವುದನ್ನು ಸ್ಪಷ್ಟಪಡಿಸಬೇಕು ಮತ್ತು ಶುಲ್ಕದ ಪ್ರಮಾಣವನ್ನು ಸರಕಾರವೇ ನಿರ್ಧರಿಸಿ ತನ್ನ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.

Tags: bs yediyurappaCongresseducationkarnatakakarnataka governmentprivate schools feerupsasiddaramaiahteachers
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ವಿಶ್ವವಿದ್ಯಾಲಯಗಳಲ್ಲಿ ಪದವಿ ಕೋರ್ಸ್‌; ಅಕ್ಟೋಬರ್‌ನಿಂದ ಹೊಸ ಶೈಕ್ಷಣಿಕ ವರ್ಷ: ಸಿಎಂ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರದಲ್ಲಿ ಇಡೀ ರಾತ್ರಿ ವರುಣಮೃದಂಗ

ಚಿಕ್ಕಬಳ್ಳಾಪುರದಲ್ಲಿ ಇಡೀ ರಾತ್ರಿ ವರುಣಮೃದಂಗ

5 years ago
ಸ್ವಿಚ್ ಆಫ್ ಆದ ದಾರಿ ದೀಪಗಳು; ಗುಡಿಬಂಡೆ ಕೆರೆ ಏರಿ ಮೇಲೆ ಕಗ್ಗತ್ತಲು

ಗುಡಿಬಂಡೆ: ಯುವಕರಿಬ್ಬರ ಆತ್ಮಹತ್ಯೆ ತಂದ ಆತಂಕ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ