• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕಾವೇರಿ ಬಗ್ಗೆ ಕರ್ನಾಟಕ-ತಮಿಳುನಾಡು ಜಗಳ ಆಡುವುದು ಬೇಡ: ಸ್ಟಾಲಿನ್‌ಗೆ ಬುದ್ಧಿ ಹೇಳಿದ ಎಚ್‌ಡಿಕೆ

cknewsnow desk by cknewsnow desk
June 18, 2021
in STATE
Reading Time: 1 min read
0
ಕಾವೇರಿ ಬಗ್ಗೆ ಕರ್ನಾಟಕ-ತಮಿಳುನಾಡು ಜಗಳ ಆಡುವುದು ಬೇಡ: ಸ್ಟಾಲಿನ್‌ಗೆ ಬುದ್ಧಿ ಹೇಳಿದ ಎಚ್‌ಡಿಕೆ
913
VIEWS
FacebookTwitterWhatsuplinkedinEmail

ಯಡಿಯೂರಪ್ಪ ಸರಕಾರದಿಂದ ಮೇಕೆದಾಟು ಯೋಜನೆ ನಿರ್ಲಕ್ಷ್ಯ: ಎಚ್‌ಡಿಕೆ ಆಕ್ರೋಶ

ಬೆಂಗಳೂರು: ಮೇಕೆದಾಟು ಮಾತ್ರವಲ್ಲ, ಕಾವೇರಿಯ ಬಗ್ಗೆ ಕರ್ನಾಟಕ ಮತ್ತು ತಮಿಳುನಾಡು ಜಗಳ ಮಾಡಿಕೊಂಡರೆ ಆಗುವ ಲಾಭ ಯಾರಿಗೆ?

ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್.‌ಡಿ.ಕುಮಾರಸ್ವಾಮಿ ಅವರು ಸ್ಟಾಲಿನ್‌ ಈ ಬಗ್ಗೆ ಬುದ್ಧಿವಾದ ಹೇಳಿದ್ದಾರೆ. ಅದು ಹೀಗಿದೆ;

ಸ್ಟಾಲಿನ್ ಒಂದು ಮಾತು ಹೇಳಿದ್ದರು. ಸಂವಿಧಾನದ 8ನೇ ಪರಿಚ್ಛೇದದಡಿ ಮಾನ್ಯತೆ ನೀಡಲಾಗಿರುವ ಎಲ್ಲ ಭಾಷೆಗಳಿಗೆ ಅಧಿಕೃತ ಭಾಷೆ ಸ್ಥಾನ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದ್ದರು. ಈ ಪ್ರಯತ್ನದಲ್ಲಿ ನಾನೂ ಕೈಜೋಡಿಸುತ್ತೇನೆ. ಆದರೆ, ಅಣ್ಣತಮ್ಮಂದಿರಂತೆ ಇರಬೇಕಾದ ನಾವು, ಕಾವೇರಿ ವಿಚಾರದಲ್ಲಿ ಕಲಹಕ್ಕಿಳಿಯುವುದರಲ್ಲಿ ಲಾಭವಿಲ್ಲ.

ದಕ್ಷಿಣ ಭಾರತದ ರಾಜ್ಯಗಳು, ಭಾಷೆ, ಸಂಸ್ಕೃತಿ ವಿಚಾರದಲ್ಲಿ ಈಗಿನ ಕೇಂದ್ರ ಸರಕಾರ ಅತ್ಯಂತ ಆಕ್ರಮಣಕಾರಿಯಾಗಿ ನಡೆದುಕೊಳ್ಳುತ್ತಿದೆ. ಇಂಥ ಹೊತ್ತಿನಲ್ಲಿ ಕರ್ನಾಟಕ ಮತ್ತು ತಮಿಳುನಾಡು ಕಾವೇರಿ ವಿಚಾರದ ಮೂಲಕ ಒಡೆದುಹೋಗಬಾರದು. ನಮ್ಮ ಅಸ್ಮಿತೆಗಳ ರಕ್ಷಣೆಗಾಗಿ ನಾವು ಈಗ ಒಗ್ಗಟ್ಟಿನಿಂದ ಇರಬೇಕಾದ ಕಾಲ ಎಂಬುದನ್ನು ಸ್ಟಾಲಿನ್ ಗಮನಿಸಬೇಕು.

ಕರ್ನಾಟಕ ದ್ರೋಹ ಬಗೆದಿಲ್ಲ

ತಮಿಳುನಾಡು ಸರಕಾರ ಮೇಕೆದಾಟು ಜಲಾಶಯವನ್ನು ಆಗಲು ಬಿಡಲಿ. ಇದರಿಂದ ತಮಿಳುನಾಡಿಗೆ ಯಾವ ತೊಂದರೆಯೂ ಇಲ್ಲ ಎಂಬುದನ್ನು ಈಗಾಗಲೇ ವಿವರಿಸಲಾಗಿದೆ. ಇದು ನೀರಾವರಿ ಉದ್ದೇಶದ ಯೋಜನೆಯಲ್ಲ. ಬದಲಿಗೆ ಕುಡಿಯುವ ನೀರಿನ ಉದ್ದೇಶದ ಯೋಜನೆಯಾಗಿದೆ. ಈ ವಿಚಾರವನ್ನು ಸ್ಟಾಲಿನ್ ಅವರು ಗಮನಿಸಬೇಕು. ಜಲಾಶಯದ ವಿಚಾರದಲ್ಲಿ ಕರ್ನಾಟಕದೊಂದಿಗೆ ಸಹಕರಿಸಬೇಕು. ಕಳೆದ ಮೂರ್ನಾಲ್ಕು ವರ್ಷಗಳಿಂದ ಕರ್ನಾಟಕ ತಮಿಳುನಾಡಿಗೆ ನಿಗದಿಗಿಂತಲೂ ಹೆಚ್ಚಿನ ಪ್ರಮಾಣದ ನೀರು ಕೊಟ್ಟಿದೆ. ಪಕೃತಿ ಸಹಕರಿಸಿದಾಗ ಹೆಚ್ಚಿನ ನೀರನ್ನು ಹರಿಸಿದೆ. ಬರಗಾಲದಂಥ ಸಂದರ್ಭದಲ್ಲೂ ಕರ್ನಾಟಕವು ತಮಿಳುನಾಡಿಗೆ ಎಂದೂ ದ್ರೋಹ ಬಗೆದಿಲ್ಲ. ಹೀಗಾಗಿ ನೀರಿನ ಹಂಚಿಕೆ ವಿಚಾರದಲ್ಲಿ ಸೋದರ ಸ್ಟಾಲಿನ್ ಅವರಿಗೆ ಯಾವ ಅನುಮಾನಗಳೂ, ಆತಂಕಗಳೂ ಬೇಡ. ತಮಿಳುನಾಡು ರೈತರನ್ನು ವಂಚಿಸಿ ಕರ್ನಾಟಕ ತನ್ನ ರೈತರನ್ನು ರಕ್ಷಿಸಿದ ಉದಾಹರಣೆ ಇಲ್ಲ.

ರೈತರೆಂದರೆ ರೈತರೇ, ಭೂಮಿತಾಯಿಯ ಮಕ್ಕಳು. ನಮ್ಮ ಅಣ್ಣ ತಮ್ಮಂದಿರು. ಕಾವೇರಿ ವಿಚಾರದಲ್ಲಿ ಈಗ ನಾವಿಬ್ಬರು. ಅಂದರೆ ರಾಜಕಾರಣಿಗಳೂ ಅಣ್ಣತಮ್ಮಂದಿರಾಗೋಣ. ಸೋದರ ಭಾವನೆಯೊಂದಿಗೆ ಸ್ಟಾಲಿನ್ ಒಂದು ಹೆಜ್ಜೆ ಮುಂದೆ ಬಂದರೆ ನಾನಂತೂ ಎರಡು ಹೆಜ್ಜೆ ಮುಂದಿಡುವೆ.

-ಎಚ್.‌ಡಿ.ಕುಮಾರಸ್ವಾಮಿ

ಕಾವೇರಿಗಾಗಿ ಎರಡೂ ರಾಜ್ಯಗಳು ಕಲಹಕ್ಕಿಳಿದಿದ್ದು ಸಾಕು. ದಕ್ಷಿಣ ಭಾರತೀಯರಾಗಿ ಈಗ ನಾವು ಕಲಹ ಮಾಡುವ ಸಂದರ್ಭವಿಲ್ಲ. ಸೋದರತೆ ಮೂಲಕ ಇದನ್ನು ಬಗೆಹರಿಸಿಕೊಳ್ಳಬೇಕು. ಈ ಮೂಲಕ ನಾವು ಒಗ್ಗಟ್ಟಾಗೇ ಉಳಿಯಬೇಕು. ಸ್ಟಾಲಿನ್ ಅವರ ಅಧಿಕಾರವಧಿಯಲ್ಲಿ ಈ ಪ್ರಯತ್ನ ಆಗಲಿ. ಅದಕ್ಕೆ ನನ್ನ ಬೆಂಬಲ ಇರಲಿದೆ. ಈ ರಾಜ್ಯಗಳ ಸೋದರತೆ ರಕ್ಷಣೆ ಈಗಿನ ಅಗತ್ಯ.

ತಮಿಳುನಾಡು ಸರಕಾರ ಮೇಕೆದಾಟು ಜಲಾಶಯ–ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಪ್ರತಿಕೂಲವಾಗುವಂಥ ಹೆಜ್ಜೆ ಇಟ್ಟಿದೆ. ಇದರ ಬಗ್ಗೆ ಗಮನಹರಿಸಬೇಕಿದ್ದ ರಾಜ್ಯದ ಬಿಜೆಪಿ ಸರಕಾರ ಆಂತರಿಕ ಕಲಹದಿಂದ ಶರಶಯ್ಯೆಯಲ್ಲಿ ಮಲಗಿದೆ. ಸರಕಾರವನ್ನೇ ನಡೆಸಲಾಗದೇ ನಲುಗಿ ಹೋಗಿರುವ ಬಿಜೆಪಿಗೆ ಇನ್ನು ನೆಲ–ಜಲ, ಭಾಷೆ–ನುಡಿ ಬಗ್ಗೆ ಅಕ್ಕರೆ ಇದ್ದೀತೆ.

***

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಅನುಮತಿ ನೀಡದಂತೆಯೂ, ಈ ವರ್ಷ ತಮಿಳುನಾಡಿಗೆ ಸಿಗಬೇಕಾದ ನೀರಿನ ವಿಚಾರದಲ್ಲಿ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಿದ್ದರು. ಈ ಬಗ್ಗೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಬೇಕಿದ್ದ ಸರಕಾರ ಮೈಮರೆತು ಕುಳಿತಿದೆ ಎಂದು ಕಿಡಿಕಾರಿದ್ದಾರೆ.

ಮೇಕೆದಾಟು ಅಣೆಕಟ್ಟು ಯೋಜನೆ ರೂಪಿಸಲೂ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಆಗಿರಲಿಲ್ಲ. ನನ್ನ ಸರಕಾರ ಅದನ್ನು ಜಾರಿಗೆ ತಂದು ಧೈರ್ಯ ತೋರಿತು. ಆದರೆ, ಅದನ್ನು ಉಳಿಸಿಕೊಳ್ಳಲೂ ಬಿಜೆಪಿಗೆ ಆಗುತ್ತಿಲ್ಲ. ರಾಜ್ಯ–ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದರೂ ಯೋಜನೆ ಅನಿಶ್ಚಿತತೆ ಎದುರಿಸುತ್ತಿದೆ. ಸ್ವರ್ಗ ಸೃಷ್ಟಿಸುವ ಬಿಜೆಪಿ ಮಾತು ಸುಳ್ಳಾಗಿದೆ ಎಂದು ಎಚ್‌ಡಿಕೆ ಹೇಳಿದ್ದಾರೆ.

Tags: bs yediyurappacauvery issuehd kumaraswamyindiakarnatakamk stalintamilnadu
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
148 ದೈಹಿಕ ಶಿಕ್ಷಕರಿಗೆ ಮುಂಬಡ್ತಿ: ಒಳ್ಳೆಯ ಸುದ್ದಿ ಕೊಟ್ಟ ಶಿಕ್ಷಣ ಸಚಿವ ಸುರೇಶ್ ಕುಮಾರ್

148 ದೈಹಿಕ ಶಿಕ್ಷಕರಿಗೆ ಮುಂಬಡ್ತಿ: ಒಳ್ಳೆಯ ಸುದ್ದಿ ಕೊಟ್ಟ ಶಿಕ್ಷಣ ಸಚಿವ ಸುರೇಶ್ ಕುಮಾರ್

Leave a Reply Cancel reply

Your email address will not be published. Required fields are marked *

Recommended

ಕೋವಿಡ್‌ ವಾರಿಯರ್ಸ್‌ ಬೇಡಿಕೆಗೆ ಸ್ಪಂದಿಸಿದ ಸರಕಾರ; ತಜ್ಞ ವೈದ್ಯರು, ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳ ಭತ್ಯೆಗಳ ಪರಿಷ್ಕರಣೆ

ಕೋವಿಡ್‌ ವಾರಿಯರ್ಸ್‌ ಬೇಡಿಕೆಗೆ ಸ್ಪಂದಿಸಿದ ಸರಕಾರ; ತಜ್ಞ ವೈದ್ಯರು, ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳ ಭತ್ಯೆಗಳ ಪರಿಷ್ಕರಣೆ

5 years ago
ನನಗೆ ಗೊತ್ತಿಲ್ಲದ್ದು ನಿಮಗೆ ಗೊತ್ತಾಗುತ್ತಾ? ಎಂದು ಪತ್ರಕರ್ತನಿಗೆ ಟಾಂಗ್‌ ಕೊಟ್ಟ ಸಿಎಂ

ನನಗೆ ಗೊತ್ತಿಲ್ಲದ್ದು ನಿಮಗೆ ಗೊತ್ತಾಗುತ್ತಾ? ಎಂದು ಪತ್ರಕರ್ತನಿಗೆ ಟಾಂಗ್‌ ಕೊಟ್ಟ ಸಿಎಂ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ