• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕಿಸಾನ್‌ ರೈಲಿನಲ್ಲಿ ದೆಹಲಿಗೆ ಹೊರಟ ಕೋಲಾರದ ಮಾವು; ರೈತನಿಗೂ ಲಾಭ, ಗ್ರಾಹಕನಿಗೂ ಕಡಿಮೆ ಬೆಲೆ

P K Channakrishna by P K Channakrishna
July 26, 2021
in COVID-19, KOLAR, STATE
Reading Time: 2 mins read
0
ಕಿಸಾನ್‌ ರೈಲಿನಲ್ಲಿ ದೆಹಲಿಗೆ ಹೊರಟ ಕೋಲಾರದ ಮಾವು; ರೈತನಿಗೂ ಲಾಭ, ಗ್ರಾಹಕನಿಗೂ ಕಡಿಮೆ ಬೆಲೆ
931
VIEWS
FacebookTwitterWhatsuplinkedinEmail

ಹಣ್ಣಿನ ರಾಜನಿಗೂ ಬಂತು ಶುಕ್ರದೆಸೆ: ಬೇಡಿಕೆ ಹೆಚ್ಚಿದರೆ ಇನ್ನಷ್ಟು ಕಿಸಾನ್‌ ರೈಲು

ಕೋಲಾರ: ಜಿಲ್ಲೆಯಲ್ಲಿ ಬೆಳೆಯುವ ರುಚಿಯಾದ ʼಹಣ್ಣಿನ ರಾಜʼ ಮಾವಿಗೆ ಶುಕ್ರದೆಸೆ ಬಂದಿದೆ.

ಇಸ್ರೇಲ್‌ ನೆರವಿನಿಂದ ಜಿಲ್ಲೆಯಲ್ಲಿ ಮಾವು ಕೃಷಿಗೆ ಉತ್ತೇಜನ ನೀಡಲು ಉಷ್ಕೃಷ್ಟತಾ ಕೇಂದ್ರಕ್ಕೆ ಚಾಲನೆ ನೀಡಿದ ನಂತರ ಜಿಲ್ಲೆಯಿಂದ ಕಿಸಾನ್‌ ರೈಲಿನ ಮೂಲಕ ಸ್ವಾದಿಷ್ಟ ಮಾವಿನ ಹಣ್ಣನ್ನು ರಾಜಧಾನಿ ದೆಹಲಿಗೆ ಕಳಿಸಲಾಯಿತು.

ಚಿಂತಾಮಣಿ ತಾಲೂಕಿನ ದೊಡ್ಡನೆತ್ತ ರೈಲು ನಿಲ್ದಾಣದಿಂದ (ಈ ನಿಲ್ದಾಣ ಶ್ರೀನಿವಾಸಪುರ-ಚಿಂತಾಮಣಿ ನಡುವೆ ಬರುತ್ತದೆ..) ನವದೆಹಲಿಯ ಆದರ್ಶ ನಗರಕ್ಕೆ ಮಾವು ತುಂಬಿಕೊಂಡು ಹೊರಟ ಮೊದಲ ರೈಲಿಗೆ ಕೋಲಾರದ ಸಂಸದ ಮುನಿಸ್ವಾಮಿ ಶನಿವಾರ ಚಾಲನೆ ನೀಡಿದರು.

ರಾಜ್ಯದಲ್ಲಿ ಈ ಬಾರಿ ಮಾವಿನ ಫಸಲು ವಿಪುಲವಾಗಿ ಬಂದಿದ್ದು, ಕೋವಿಡ್‌ನಿಂದ ಉತ್ತಮ ಬೆಲೆ ಸಿಗದಂಥ ಪರಿಸ್ಥಿತಿ ಉಂಟಾಗಿತ್ತು. ಇದೇ ವೇಳೆಯಲ್ಲಿ ಸಂಸದ ಮುನಿಸ್ವಾಮಿ ಅವರ ಒತ್ತಾಸೆಯಿಂದ ಕಿಸಾನ್‌ ರೈಲಿನ ಮೂಲಕ ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲ ಪ್ರದೇಶಗಳಿಗೆ ಕೋಲಾರದ ಮಾವನ್ನು ರವಾನೆ ಮಾಡಲಾಗುತ್ತಿದೆ. ಆ ಕಾರ್ಯ ಇಂದಿನಿಂದ ಆರಂಭವಾಗಿದೆ.

ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶ ಹೊಂದಿರುವ ಕಿಸಾನ್ ವಿಶೇಷ ಸರಕು ಸಾಗಣೆ ರೈಲಿನಲ್ಲಿ ತರಕಾರಿ ಮತ್ತು ಹಣ್ಣನ್ನು ಎಲ್ಲೆಡೆ ಸಾಗಿಸಲಾಗುತ್ತಿದೆ. ಅದೂ ಈಗ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೂ ಬಂದಿದೆ. ವಾರಕ್ಕೊಮ್ಮೆ ಸಂಚರಿಸುವ ಈ ರೈಲಿನಲ್ಲಿ ಬೇಡಿಕೆಯ ಆಧಾರದ ಮೇಲೆ ಮಾವಿನ ಹಣ್ಣನ್ನು ತುಂಬಿ ಕಳಿಸಲಾಗುವುದು ಎಂದು ಸಂಸದ ಮುನಿಸ್ವಾಮಿ ತಿಳಿಸಿದರು.

ಹಣ್ಣು ಹಾಳಾಗುವುದು ತಪ್ಪುತ್ತದೆ

ಕಿಸಾನ್ ರೈಲು ಮೂಲಕ ಮಾವು ಸಾಗಣೆ ಮಾಡುವುದು ಉತ್ತಮ ಹಾಗೂ ರೈತರಿಗೆ ಲಾಭದಾಯ ಕೂಡ. ಈವರೆಗೆ ದಿಲ್ಲಿ ಸೇರಿದಂತೆ ಉತ್ತರ ಭಾರತದ ನಾನಾ ರಾಜ್ಯಗಳಿಗೆ ಲಾರಿಗಳ ಮೂಲಕವೇ ಮಾವು ಸಾಗಣೆಯಾಗುತ್ತಿತ್ತು. ಮೇಲಾಗಿ, ಮಾವು ಫಸಲು ಬರುವ ಹಂಗಾಮಿನಲ್ಲಿಯೇ ಮಹಾರಾಷ್ಟ್ರ ಮುಂತಾದ ರಾಜ್ಯಗಳಲ್ಲಿ ಮುಂಗಾರು ಮಳೆ ತೀವ್ರವಾಗಿರುತ್ತದೆ. ಹೀಗಾಗಿ ಸಾಗಾಣೆ ಸಮಯ ಹೆಚ್ಚಾಗಿ ಹಣ್ಣು ಹಾಳಾಗುತ್ತಿತ್ತು.

ದೆಹಲಿ ಮಟ್ಟಿಗೆ ಹೇಳುವುದಾದರೆ ರಸ್ತೆ ಮೂಲಕ ಸಾಗಣೆಗೆ ಕೊನೆಪಕ್ಷ 4ರಿಂದ 5 ದಿನ ಬೇಕಾಗುತ್ತಿತ್ತು. ಈಗ ಕಿಸಾನ್‌ ರೈಲು ಮೂಲಕ ಕೇವಲ 40 ಗಂಟೆಗಳ ಒಳಗಾಗಿ, ಆಂದರೆ, ಸೋಮವಾರ ಬೆಳಗಿನ ಜಾವಕ್ಕೆಲ್ಲ ಕೋಲಾರದ ಮಾವು ದಿಲ್ಲಿಯ ಮಾರುಕಟ್ಟೆ ಸೇರಲಿದೆ. ಹಣ್ಣು ತಾಜಾ ಇರುತ್ತದೆ ಮಾತ್ರವಲ್ಲದೆ ಕೆಡುವುದೂ ಇಲ್ಲ. ಇದರಿಂದ ರೈತರಿಗೆ ಹೆಚ್ಚು ಲಾಭ ಸಿಗುತ್ತದೆ ಎಂದು ಸಂಸದ ಮುನಿಸ್ವಾಮಿ ಮಾಹಿತಿ ನೀಡಿದರು.

ರೈತ, ಗ್ರಾಹಕನಿಗೆ ಲಾಭದಾಯಕ

ರೈಲು ಮೂಲಕ ಹಣ್ಣು ಸಾಗಿಸಿದರೆ ಸಾಗಣೆ ವೆಚ್ಚವೂ ಕಡಿಮೆ ಆಗುತ್ತದೆ. ರಸ್ತೆಯ ಮೂಲಕ ಸಾಗಣೆ ಮಾಡಿದರೆ ಪ್ರತೀ ಕೆ.ಜಿ. ಮಾವಿಗೆ ಕೊನೆಪಕ್ಷ 6ರಿಂದ 7 ರೂ. ವೆಚ್ಚ ಆಗುತ್ತದೆ. ಅದೇ ಈ ಕಿಸಾನ್ ರೈಲಿನಲ್ಲಿ ಕೇವಲ 2.50‌ ರೂ.ಗಳಿಂದ 3 ರೂ. ಮಾತ್ರ ಖರ್ಚಾಗುತ್ತದೆ. ಇದರಿಂದ ರೈತನಿಗೂ, ಗ್ರಾಹಕನಿಗೂ ಏಕಕಾಲದಲ್ಲಿ ಲಾಭವಾಗುತ್ತದೆ ಎಂದು ಮುನಿಸ್ವಾಮಿ ಹೇಳಿದರು.

ಈ ಮೊದಲ ರೈಲಿನ 25 ಬೋಗಿಗಳಲ್ಲಿ 250 ಟನ್‌ ಮಾವಿನ ಹಣ್ಣನ್ನು ದೆಹಲಿಗೆ ಕಳಿಸಲಾಗಿದೆ. ಒಂದು ವೇಳೆ ಹೆಚ್ಚೆಚ್ಚು ಬೇಡಿಕೆ ಬಂದರೆ, ಇನ್ನೂ ಹೆಚ್ಚಿನ ಕಿಸಾನ್‌ ರೈಲುಗಳನ್ನು ಓಡಿಸಲಾಗುವುದು ಎಂದು ನೈರುತ್ಯ ರೈಲ್ವೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿ.ಆರ್.ಎಂ.) ಅಶೋಕ್ ವರ್ಮ ಅವರು ಹೇಳಿದರು.

ನೈರುತ್ಯ ರೈಲ್ವೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿ.ಆರ್.ಎಂ.) ಅಶೋಕ್ ವರ್ಮ, ವಾಣಿಜ್ಯ ವಿಭಾಗದ ಡಿ.ಆರ್.ಎಂ ಕೃಷ್ಣಾರೆಡ್ಡಿ, ಚಿಂತಾಮಣಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ. ವೇಣುಗೋಪಾಲ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ರೈತರ ಬೇಡಿಕೆಯೂ ಇತ್ತು

ಕೋಲಾರ ಜಿಲ್ಲೆಯ ಶ್ರೀನಿವಾಸಪಪುರ, ಮುಳಬಾಗಿಲು ತಾಲೂಕುಗಳಲ್ಲಿ ವ್ಯಾಪಕವಾಗಿ ಮಾವು ಬೆಳೆಯಲಾಗುತ್ತದೆ. ಸುಮಾರು 52,000 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇಂಥ ಹಿರಿಮೆ ಇದ್ದರೂ ನಾನಾ ಕಾರಣಗಳಿಂದ ರೈತರು ಫಸಲು ಕಳೆದುಕೊಂಡು ನಷ್ಟ ಅನುಭವಿಸುತ್ತಿದ್ದಾರೆ. ಕೀಟಬಾಧೆ, ರೋಗಬಾಧೆಯಿಂದ ಕೈಸುಟ್ಟುಕೊಳ್ಳುತ್ತಿದ್ದಾರೆ. ಉತ್ತಮ ಫಸಲು ಬಂದರೂ ಸೂಕ್ತ ಮಾರುಕಟ್ಟೆಗಾಗಿ ಒದ್ದಾಡುತ್ತಿದ್ದರು ರೈತರು. ಈ ಹಿನ್ನೆಲೆಯಲ್ಲಿ ಕಿಸಾನ್‌ ರೈಲು ಬೆಳೆಗಾರನಿಗೆ ವರದಾನವಾಗಿದೆ.

ಇಡೀ ಕರ್ನಾಟಕದಲ್ಲಿ ಮಾವು ಬೆಳೆಗೆ ಕೋಲಾರ ಜಿಲ್ಲೆಯಲ್ಲಿ ಬೆಳೆಯುವ ಮಾವಿಗೆ ಬಹಳ ವಿಶೇಷ ಇದೆ. ಇಲ್ಲಿ ಬಹಳ ರುಚಿಕರವಾದ ಬಂಗಿನಪಲ್ಲಿ, ತೋತಾಪುರಿ, ರಸಪುರಿ, ಅಲ್ಫಾನ್ಸೋ, ಕೇಸರ್‌, ಸೆಂಧೂರ, ದಶಹರಿ, ಮಲ್ಲಿಕಾ, ತೋತಾಪುರಿ, ಮಲಗೋವಾ, ರಾಜಗಿರಾ, ನೀಲಂ ತಳಿಯ ಮಾವು ಬೆಳೆಯಲಾಗುತ್ತದೆ. ಈಗ ಉತ್ತರ ಭಾರತೀಯರು ಈ ತಳಿಗ ತಾಜಾ ಹಣ್ಣಿನ ರುಚಿಯನ್ನು ಸವಿಯಬಹುದಾಗಿದೆ. ಹಣ್ಣನ್ನು ಅತ್ಯುತ್ತಮವಾಗಿ ಕಾಟನ್‌ ಬಾಕ್ಸ್‌ಗಳಲ್ಲಿ ಪ್ಯಾಕ್‌ ಮಾಡಿ ರೈಲಿನಲ್ಲಿ ಜೋಡಿಸಲಾಗಿದೆ. ಅಲ್ಲದೆ, ರೈಲಿನಲ್ಲಿನ ಗಾಳಿ ಹಣ್ಣನ್ನು ಕೆಡಲು ಬಿಡುವುದಿಲ್ಲ.

  • ಈ ಸುದ್ದಿಯನ್ನು ಓದಲು ಈ ಲಿಂಕ್‌ ಕ್ಲಿಕ್‌ ಮಾಡಿ
ಕೋಲಾರದ ಮಾವಿಗೆ ಬರಲಿದೆ ಒಳ್ಳೆಯ ಕಾಲ; ಶ್ರೀನಿವಾಸಪುರದ ರುಚಿಕರ ಮ್ಯಾಂಗೋಗೆ ಶಕ್ತಿ ತುಂಬಲಿದೆ ಇಸ್ರೇಲ್
Tags: S Muniswamy
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕರ್ನಾಟಕ ಪಕ್ಕದ ರಾಜ್ಯ ತೆಲಂಗಾಣದಲ್ಲಿ ಕೋವಿಡ್‌ ಲಾಕ್‌ಡೌನ್‌ ಸಂಪೂರ್ಣ ರದ್ದು; ಭಾನುವಾರದಿಂದ ಎಲ್ಲ ಎಂದಿನಂತೆ!

ಕರ್ನಾಟಕ ಪಕ್ಕದ ರಾಜ್ಯ ತೆಲಂಗಾಣದಲ್ಲಿ ಕೋವಿಡ್‌ ಲಾಕ್‌ಡೌನ್‌ ಸಂಪೂರ್ಣ ರದ್ದು; ಭಾನುವಾರದಿಂದ ಎಲ್ಲ ಎಂದಿನಂತೆ!

Leave a Reply Cancel reply

Your email address will not be published. Required fields are marked *

Recommended

ಬಿಜೆಪಿ ಬೆಳವಣಿಗೆ ಹೈಡ್ರಾಮ & ಎಲ್ಲ ಯಡಿಯೂರಪ್ಪ ತಂತ್ರಗಾರಿಕೆ, ಸಹಿ ಸಂಗ್ರಹವೂ ಅವರದ್ದೇ ಕೆಲಸ ಎಂದು ಹೇಳಿದ ಸಿದ್ದರಾಮಯ್ಯ

ಸಂಬಳವಿಲ್ಲದೆ ಸಂಕಷ್ಟದಲ್ಲಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾದರಾ? ಶಾಲಾ ಶುಲ್ಕ ಸಂಘರ್ಷಕ್ಕೆ ಸಿದ್ದರಾಮಯ್ಯ ಸಿಟ್ಟು

5 years ago
ಗುಡಿಬಂಡೆಯಲ್ಲಿ ಶಾಲೆ ಅಡುಗೆ ಸಿಬ್ಬಂದಿಗೆ ಒಬ್ಬರಿಗೆ ಕೊರೋನಾ ಪಾಸಿಟಿವ್

ಗುಡಿಬಂಡೆಯಲ್ಲಿ ಶಾಲೆ ಅಡುಗೆ ಸಿಬ್ಬಂದಿಗೆ ಒಬ್ಬರಿಗೆ ಕೊರೋನಾ ಪಾಸಿಟಿವ್

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ