• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ಮನಸ್ಸನ್ನು ಸ್ವಚ್ಛಗೊಳಿಸುವ, ದೇಹಕ್ಕೆ ಕಸುವು ತುಂಬುವ ಮತ್ತೂ ಆ ʼಆದಿಯೋಗಿʼ ತೋರಿದ ಯೋಗಮಾರ್ಗಕ್ಕೆ ಶಿರ ಸಾಷ್ಠಾಂಗ ನಮಸ್ಕಾರ

cknewsnow desk by cknewsnow desk
June 30, 2021
in GUEST COLUMN
Reading Time: 2 mins read
1
ಮನಸ್ಸನ್ನು ಸ್ವಚ್ಛಗೊಳಿಸುವ, ದೇಹಕ್ಕೆ ಕಸುವು ತುಂಬುವ ಮತ್ತೂ ಆ ʼಆದಿಯೋಗಿʼ ತೋರಿದ  ಯೋಗಮಾರ್ಗಕ್ಕೆ ಶಿರ ಸಾಷ್ಠಾಂಗ ನಮಸ್ಕಾರ
970
VIEWS
FacebookTwitterWhatsuplinkedinEmail

ಇಂದು 7ನೇ ಅಂತಾರಾಷ್ಟ್ರೀಯ ಯೋಗ ದಿನ

ಪದ್ಮಾಸನದಲ್ಲಿ ಮಹಾಶಿವ / Photo by: CkPhotography ಸಿಕೆಪಿ@ckphotographi


ಈಗಾಗಲೇ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆರಂಭವಾಗಿದೆ. ಇಡೀ ಜಗತ್ತಿನ ಉದ್ದಗಲಕ್ಕೂ ಭಾರತೀಯ ಪ್ರಾಚೀನ ಪರಂಪರೆಯ ಆಸ್ಮಿತೆ ಸದ್ದು ಮಾಡುತ್ತಿದೆ. ಕೋವಿಡ್‌ ಕಾರಣಕ್ಕೆ ವರ್ಚುಯುಲ್‌ ಯೋಗಾಭ್ಯಾಸಕ್ಕೆ ಒತ್ತು ಕೊಡಲಾಗಿದೆ. ಸೋಂಕಿನ ಕಾಯಿಲೆ ಸಂಕಷ್ಟ ಕಾಲದಲ್ಲಿ ಮನಸ್ಸು-ದೇಹಕ್ಕೆ ಚೈತನ್ಯ ತುಂಬಬಲ್ಲ ಯೋಗ ಹಿಂದೆಂದಿಗಿಂತ ಈಗಿನಿಂದ ಹೆಚ್ಚು ಅನಿವಾರ್ಯ. ಈ ಬಗ್ಗೆ ಬಹಳ ಅರ್ಥಪೂರ್ಣವಾಗಿ ಬರೆದಿದ್ದಾರೆ ನಮ್ಮ ಅಂಕಣಕಾರ ಡಾ.ಗುರುಪ್ರಸಾದ್‌ ರಾವ್‌ ಹವಲ್ದಾರ್.‌

ವಿಶ್ವಾದ್ಯಂತ ಇಂದು ಯೋಗ ದಿನವನ್ನು ಆಚರಿಸಲಾಗುತ್ತಿದೆ. ಯೋಗ, ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆ. ಸಾವಿರಾರು ವರ್ಷಗಳಿಂದಲೂ ಭಾರತೀಯರ ಜೀವನದ ಒಂದು ಭಾಗವಾಗಿದೆ.

ಜಗತ್ತಿನಾದ್ಯಂತ 170ಕ್ಕೂ ಹೆಚ್ಚು ದೇಶಗಳ ನಾಗರೀಕರು ಯೋಗವನ್ನು ದಿನನಿತ್ಯದ ಬದುಕಿನಲ್ಲಿ ಆಚಾರಿಸುತ್ತಾ ಅನೇಕ ರೀತಿಯಲ್ಲಿ ಮಾನಸಿಕ ದೈಹಿಕ ಆರೋಗ್ಯವನ್ನು ಸದೃಢಗೊಳಿಸಿಕೊಂಡಿದ್ದಾರೆ.

ಆದಿಯೋಗಿ

ಯೋಗದ ಮೂಲ ಎಲ್ಲಿ ಎಂದೂ ನೋಡುತ್ತಾ ಹೋದರೆ ಭಗವಾನ್ ಶಿವನಲ್ಲಿ ಅದು ಕಂಡು ಬರುತ್ತದೆ. ಶಿವ ಭಾರತೀಯರ ಆರಾಧ್ಯ ದೈವವಾಗಿದ್ದು, ಈತನನ್ನು ‘ಆದಿಯೋಗಿ’ ಅಥವಾ ಯೋಗದ ಮೊದಲ ಗುರು ಎಂದು ಕರೆಯಲಾಗುತ್ತದೆ. ಪುರಾತನ ಕಾಲದಿಂದಲೂ ಈ ನಂಬಿಕೆ ಇದೆ. ಶಿವನು ಈ ದಿನ (ಜೂನ್ 21)ದಂದು ಮನುಕುಲಕ್ಕೆ ಯೋಗದ ಜ್ಞಾನ ನೀಡಿದನೆಂದು ಪುರಾಣಗಳಲ್ಲಿ ಹೇಳಲಾಗಿದೆ. ಹಾಗಾಗಿ ಯೋಗದ ಆದಿಗುರು ಶಿವನೇ ಆಗಿದ್ದಾನೆ. ಇಂದು ದಿನನಿತ್ಯ ಯೋಗ ಅಭ್ಯಸಿಸುವ ಅವಶ್ಯಕತೆಯನ್ನು ವಿಶ್ವಕ್ಕೆ ಸಾರಿದ್ದು ಭಾರತೀಯರೇ.

‘ಯೋಗ’ ಎನ್ನುವ ಶಬ್ದದ ಉಗಮ ಸಂಸ್ಕೃತದ “ಯುಜ್”ನಿಂದ ಆಗಿದೆ. “ಯುಜ್” ಎಂದರೆ ʼಜೋಡಿಸುʼ, ʼಕೂಡಿಸುʼ, ʼಸಂಬಂಧಿಸುʼ ಎಂದು. ಪತಂಜಲಿ ಮಹರ್ಷಿಗಳ ಪ್ರಕಾರ ‘ಯೋಗಃಚಿತ್ತವೃತ್ತಿ ನಿರೋಧಃ’ ಯೋಗವೆಂದರೆ ಮನಸ್ಸಿನ ಚಂಚಲ ವೃತ್ತಿಗಳನ್ನು ನಿರೋಧಿಸುವುದು.

“ವಸಿಷ್ಠ ಮಹರ್ಷಿಗಳು “ಮನಃ ಪ್ರಶಮನೋಪಾಯಃ ಯೋಗಃ ಇತಿ ಅಭಿಧೀಯತೆ” ಮನಸ್ಸನ್ನು ಪ್ರಶಾಂತಗೊಳಿಸುವ ಸುಂದರ ಉಪಾಯವೇ ಯೋಗವೆಂದು ಹೇಳಿದ್ದಾರೆ. “ಯೋಗಃ ಸಮತ್ವಂ ಉಚ್ಚತೇ’ ಯೋಗವೆಂದರೆ ಕಾರ್ಯವ್ಯವಹಾರದಲ್ಲಿ ಸಮಭಾವ, ಸಮಚಿತ್ತವಾಗಿರುವುದು. ಸ್ತುತಿ-ನಿಂದನೆ, ಮಾನ-ಅಪಮಾನ, ಸುಖ-ದುಃಖ, ನೋವು-ನಲಿವು ಇತರೆ ಪರಿಸ್ಥಿತಿಗಳಲ್ಲಿ ಸಮಭಾವವನ್ನು ಹೊಂದುವುದೇ ಯೋಗವೆಂದು ಭಗವದ್ಗೀತೆ ಹೇಳುತ್ತದೆ.

ಯೋಗವು ಮನಸ್ಸು ಮತ್ತು ದೇಹ; ಚಿಂತನೆ ಮತ್ತು ಕ್ರಿಯೆ; ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೆಯೇ ಪ್ರಕೃತಿ ಮತ್ತು ಮನುಷ್ಯ ನಡುವೆ ಸಾಮರಸ್ಯವನ್ನುಂಟು ಮಾಡುತ್ತದೆ. ಯೋಗವು ಆರೋಗ್ಯ ಮತ್ತು ಯೋಗಕ್ಷೇಮದ ಸಮಗ್ರ ವಿಧಾನವಾಗಿದೆ. ನಮ್ಮ ಜೀವನಶೈಲಿ ಹಾಗೂ ಪ್ರಜ್ಞೆ ರಚಿಸುವ ಮೂಲಕ ಹಮಾಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಯೋಗವೆಂದರೆ ಕೆಲವರು ಪ್ರಾಣಾಯಾಮ ಅಥವಾ ಯೋಗಾಸನವೆಂದು ತಿಳಿದಿದ್ದಾರೆ. ಆದರೆ ಯೋಗವು ಆತ್ಮನ ಚಂಚಲ ಮನಸ್ಸನ್ನು ಏಕಾಗ್ರಗೊಳಿಸಬಲ್ಲ ಮನೋ ವ್ಯಾಯಾಮ. ಯೋಗವೆಂದರೆ ಸರ್ವ ಮನೋವೃತ್ತಿಗಳ ಮೇಲೆ ಪ್ರಭುತ್ವವನ್ನು ಸ್ಥಾಪಿಸುವುದು.

ಅಂತಾರಾಷ್ಟ್ರೀಯ ಯೋಗ ದಿನ

ನಮ್ಮ ಭಾರತೀಯತೆಯ ಆಸ್ಮಿತೆಯೇ ಆಗಿರುವ ಯೋಗಕ್ಕೆ ಇಂದು ಜಗತ್ಮಾನ್ಯತೆ ಸಿಕ್ಕಿದೆ. ಅದನ್ನು ಜಗತ್ತಿನ ಬಹುತೇಕ ದೇಶಗಳಲ್ಲಿ ಅಳವಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಕರಡು ಪ್ರಸ್ತಾವನೆಯನ್ನು 2014 ಡಿಸೆಂಬರ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ಕಾಯಂ ಪ್ರತನಿಧಿ ಅಶೋಕ್ ಕುಮಾರ್ ಮಂಡಿಸಿದ್ದರು. ವಿಶ್ವಸಂಸ್ಥೆಗೆ ಇದು ಐತಿಹಾಸಿಕ ಕ್ಷಣವಾಗಿದ್ದು, ಅದರ ಸದಸ್ಯ ರಾಷ್ಟ್ರಗಳು ಅಭೂತಪೂರ್ವ ಬೆಂಬಲ ಸೂಚಿಸಿದ್ದವು. ವಿಶ್ವಸಂಸ್ಥೆಯ 193 ರಾಷ್ಟ್ರಗಳ ಪೈಕಿ 177 ದೇಶಗಳು ಯೋಗಕ್ಕೆ ಅನುಮೋದನೆ ನೀಡಿದ್ದವು.

2015 ಜೂನ್ 21ರಂದು ಮೊದಲ ಬಾರಿಗೆ ʼಅಂತಾರಾಷ್ಟ್ರೀಯ ಯೋಗ ದಿನಾಚರಣೆʼಯನ್ನು ವಿಶ್ವದ್ಯಾಂತ ವರ್ಷಂಪ್ರತಿ ಆಚರಿಸಲಾಗುತ್ತದೆ. ಕೇಂದ್ರ ಸರಕಾರದ ಆಯುಶ್ ಸಚಿವಾಲಯದ ನೇತೃತ್ವದಲ್ಲಿ ಆ ದಿನವನ್ನು ರಾಜಪಥದಲ್ಲಿ ಭಾರಿ ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ 84 ರಾಷ್ಟ್ರಗಳ ಗಣ್ಯರು ಭಾಗವಹಿಸಿದ ಕಾರ್ಯಕ್ರಮದಲ್ಲಿ 21 ಯೋಗ ಆಸನಗಳನ್ನು ಅಭ್ಯಸಿಸಲಾಯಿತು.

ಜೂನ್ 21ರ ದಿನ

ಜೂನ್ 21 ಉತ್ತರ ಗೋಳಾರ್ಧದ ವರ್ಷದ ಅತಿ ದೀರ್ಘವಾದ ದಿನ. ಪ್ರಧಾನಿ ಮೋದಿ ತಮ್ಮ ಹೇಳಿಕೆಯಲ್ಲಿ, “ಭಾರತೀಯರು ಪ್ರಕೃತಿಗೆ ಗೌರವ ಸಲ್ಲಿಸುವುದು ಆಧ್ಯಾತ್ಮಿಕತೆಯ ಅವಿಭಾಜ್ಯ ಅಂಗವಾಗಿದೆ. ಹಾಗೆಯೇ ಪ್ರಕೃತಿಯ ಕೊಡುಗೆಯನ್ನು ಅತ್ಯಂತ ಪವಿತ್ರವೆಂದು ಪರಿಗಣಿಸುತ್ತೇವೆ” ಎಂದಿದ್ದರು.

ವರ್ಷದಲ್ಲಿ ಉತ್ತರ ಗೋಳಾರ್ಧದ ಅತಿ ಉದ್ದದ ಹಾಗೂ ದಕ್ಷಿಣ ಗೋಳಾರ್ಧದ ಅತಿ ಚಿಕ್ಕ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಆಯ್ಕೆ ಮಾಡಲಾಗಿದೆ. ಇದನ್ನು ಬೇಸಿಗೆ ಅಯನ ಸಂಕ್ರಾಂತಿ ದಿನವೆಂದು (ವರ್ಷದಲ್ಲಿನ ಅತ್ಯಂತ ಹೆಚ್ಚು ಹಗಲುಳ್ಳ ದಿನ) ಕರೆಯಲಾಗುತ್ತದೆ. ಯೋಗದ ದೃಷ್ಟಿಕೋನದಲ್ಲಿ ಇದು ಅತ್ಯಂತ ಹೆಚ್ಚು ಮಹತ್ತ್ವ ಪಡೆದಿದೆ. ಇದು ದಕ್ಷಿಣಯಾನಕ್ಕೆ ಪರಿವರ್ತನೆ ಎಂದು ಗುರುತಿಸಲಾಗುತ್ತದೆ. ದಕ್ಷಿಣಯಾನವನ್ನು ಆಧ್ಯಾತ್ಮಿಕ ಅಭ್ಯಾಸಗಳಿಗೆ ನೈಸರ್ಗಿಕ ಬೆಂಬಲವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ಈ ಪರಿವರ್ತನೆಯು ಯೋಗ ಅಭ್ಯಾಸಿಗರಿಗೆ ಬೆಂಬಲಿಸಲಾಗುತ್ತದೆ ಎಂಬ ನಂಬಿಕೆಯಿದೆ. ಬೇಸಿಗೆ ಅಯನ ಸಂಕ್ರಾಂತಿಯ ಬಳಿಕ ಮೊದಲ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎಂದು ಕರೆಯಲಾಗುತ್ತದೆ.

ಯೋಗ ವಿಜ್ಞಾನದ ಮಹತ್ತ್ವ

ಎಲ್ಲ ವಿಜ್ಞಾನಗಳಿಗಿಂತ ಭಿನ್ನವಾದ ಇನ್ನೊಂದು ವಿಜ್ಞಾನವಿದೆ. ಅದುವೇ ಯೋಗ ವಿಜ್ಞಾನ. ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಇದನ್ನು ಪ್ರಾಯೋಗಿಕವಾಗಿ ಕಲಿಸಲಾಗುತ್ತದೆ. ಈ ಸಂಸ್ಥೆಯ ಅಂಗಸಂಸ್ಥೆಯಾದ ‘ರಾಜಯೋಗ ಶಿಕ್ಷಣ ಮತ್ತು ಸಂಶೋಧನೆ ಪ್ರತಿಷ್ಠಾನವು ಯೋಗ-ವಿಜ್ಞಾನವನ್ನು ಪ್ರಚಾರ ಮತ್ತು ಪ್ರಸಾರ ಮಾಡುವ ಕಾರ್ಯದಲ್ಲಿ ನಿರತವಾಗಿದೆ. ಇಲ್ಲಿ ಧರ್ಮ, ಜಾತಿ, ಮತ, ವಯಸ್ಸು. ವರ್ಣ ಭೇದವಿಲ್ಲದೆ ಸರ್ವರಿಗೂ ಯೋಗ ಶಿಕ್ಷಣವನ್ನು ಉಚಿತವಾಗಿ ಕಲಿಸಲಾಗುತ್ತದೆ. ಈ ಯೋಗ ವಿಜ್ಞಾನವು ಮನಸ್ಸು, ಬುದ್ಧಿ, ಸಂಸ್ಕಾರ, ಸ್ವಭಾವ, ವ್ಯವಹಾರ ಚಾರಿತ್ರ್ಯ ಇತ್ಯಾದಿಗಳಿಗೆ ಸಂಬಂಧಿಸಿದೆ. ಇಲ್ಲಿ ಆತ್ಮ ಮತ್ತು ಪರಮಾತ್ಮನ ನಡುವೆ ಸರ್ವಪ್ರಕಾರದ ಸಂಬಂಧವು ಹೇಗೆ ಜೋಡಿಸಬೇಕು ಎಂಬುದನ್ನು ತಿಳಿಸಲಾಗುತ್ತದೆ. ಈ ಸಂಬಂಧಗಳಲ್ಲಿ ತಂದೆ, ಶಿಕ್ಷಕ, ಗುರುವಿನ ಸಂಬಂಧ ಅತಿ ಮುಖ್ಯ. ವರ್ತಮಾನ ಸಮಯದಲ್ಲಿ ಯೋಗದಲ್ಲಿ ಹಠಯೋಗ, ಸನ್ಯಾಸ ಯೋಗ, ಭಕ್ತಿಯೋಗ, ಕರ್ಮಯೋಗ, ಜ್ಞಾನಯೋಗ, ರಾಜಯೋಗ, ಶುಭಯೋಗ, ಲಾಭಯೋಗ, ಯೋಗಾ-ಯೋಗ ಇತ್ಯಾದಿ ಅನೇಕ ಪ್ರಕಾರಗಳಿವೆ.

ಪರಮಾತ್ಮನೇ ಕಲಿಸುವ ರಾಜಯೋಗ

ಆತ್ಮನಾಗಿ ಪರಮಾತ್ಮನ ಜೊತೆ ಮನನ, ಚಿಂತನೆ, ಮಿಲನ ಮಾಡಿದಾಗ ಯೋಗಿಯು ಮಗ್ನಾವಸ್ಥೆ ತಲುಪುತ್ತಾನೆ. ಸ್ವಯಂ ಪರಮಾತ್ಮನೇ ಕಲಿಸುವ ರಾಜಯೋಗವು ಅತ್ಯಂತ ಸರಳ ಹಾಗೂ ಸಹಜ. ಇದರಲ್ಲಿ ಮಾನವನ ಪ್ರವೃತ್ತಿಗಳ ಪರಿವರ್ತನೆ ಮತ್ತು ಶುದ್ಧೀಕರಣವಾಗಿ ಅವನ ಆಹಾರ-ವ್ಯವಹಾರಗಳು ಸುಧಾರಣೆಗೊಂಡು ಸಂಸ್ಕಾರಗಳು ಸತೋಪ್ರಧಾನವಾಗುತ್ತವೆ. ಹಾಗಾಗಿ ಸಾಮಾನ್ಯ ಮಾನವನು ದೇವ-ಮಾನವನಾಗುತ್ತಾನೆ. ಯೋಗವೆಂಬ ಈ ವಿಜ್ಞಾನವು ಮನುಷ್ಯನ ಉದ್ವೇಗಗಳನ್ನು ನಿಯಂತ್ರಿಸುತ್ತದೆ. ಅವನ ವಿಚಾರಗಳನ್ನು ವ್ಯವಸ್ಥಿತ ಹಾಗೂ ಸರಳಿತಗೊಳಿಸುತ್ತದೆ. ಈ ವಿಜ್ಞಾನದಿಂದ ವ್ಯಕ್ತಿಯ ಮಾನಸಿಕ ಏಕಾಗ್ರತಾ ಶಕ್ತಿಯು ಹೆಚ್ಚುತ್ತದೆ. ಅಪಾರ ಶಾಂತಿಯ ಅನುಭವ ಆಗುತ್ತದೆ. ಪರಮಾತ್ಮನ ದಿವ್ಯಗುಣಗಳಾದ ಶಾಂತಿ, ಪವಿತ್ರತೆ, ಆನಂದ, ದಯಾ, ಸುಖ, ಪ್ರೇಮ ಇತರೆ ದಿವ್ಯಗುಣಗಳ ಅನುಭವ ಆಗುತ್ತದೆ. ಅವನ ವರ್ತನೆಯಲ್ಲಿ ಪರಿವರ್ತನೆಯಾಗಿ ಮನಸ್ತಾಪ, ಈರ್ಷೆ-ದ್ವೇಷ, ಕ್ರೋಧ ಇತರೆ ವಿಕಾರಿ ಗುಣಗಳು ದೂರವಾಗುತ್ತವೆ. ಅವನ ಮನಸ್ಸಿನಲ್ಲಿ ಉದ್ವೇಗಗಳ ಜ್ವಾಲಾಮುಖಿ ಸ್ಫೋಟಗೊಳ್ಳುವುದಿಲ್ಲ. ಮಾನಸಿಕ ಚಿಂತೆ ಇರುವುದಿಲ್ಲ. ಏಕರಸ ಸ್ಥಿತಿ ಅಥವಾ ಆನಂದದ ಸ್ಥಿತಿ ಅವನದಾಗಿರುತ್ತದೆ.

ನಿರಂತರ ಅಭ್ಯಾಸದ ಮೂಲಕ ದೇಹ ಮತ್ತು ಇಂದ್ರಿಯಗಳ ನಿಯಂತ್ರಣದೊಂದಿಗೆ ಮಾನವ ಪ್ರಜ್ಞೆಯನ್ನು ಪರಿವರ್ತಿಸುತ್ತದೆ. ಮಾನವ ದೇಹವು ಇಡೀ ಶರೀರದ ವಾಹನವಾಗಿದೆ.

ಯೋಗದ ಗುರಿಯು ಕೇವಲ ದೇಹವನ್ನು ಸರಿಪಡಿಸುವುದು ಮಾತ್ರವಲ್ಲ. ಮನಸ್ಸು, ದೇಹ ಮತ್ತು ಆತ್ಮ ಸೇರಿದ ಎಲ್ಲ ಮೂರು ಅಂಶಗಳನ್ನು ಶುದ್ದೀಕರಿಸಲು ನೆರವಾಗುತ್ತದೆ. ಇದು ನಾವು ಮತ್ತು ಪ್ರಕೃತಿ ಮಾತೆಯ ಜೊತೆ ಸಂರ್ಪಕವನ್ನು ಕಲ್ಪಿಸುತ್ತದೆ. ಇದು ನಮ್ಮನ್ನು ನಮ್ಮ ನೈಜತೆಯ ಹತ್ತಿರಕ್ಕೆ ಕೊಂಡೊಯ್ಯುತ್ತದೆ.

ಇಂದಿನ ಆಧುನಿಕ ಯುಗದಲ್ಲಿ ಅನೇಕ ಸಮಸ್ಯೆಗಳಿಂದ ಬಳಲುತ್ತಿರುವ ನಾವು ನಮ್ಮ ಜೀವನಶೈಲಿಯಿಂದಾಗಿ ಅನೇಕ ಸಮಸ್ಯೆಗಳನ್ನು ಒತ್ತಡ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದೇವೆ, ಮಧುಮೇಹ ಹಾಗೂ ರಕ್ತದೊತ್ತಡದಂಥ ಜೀವನಶೈಲಿ ಸಂಬಂಧಿತ ರೋಗಗಳನ್ನು ನಿಯಂತ್ರಿಸಲು ನಾವು ವಿಧಾನಗಳನ್ನು ಹುಡುಕಿದ್ದೇವೆ. ಆದರೆ ಸಂವಹನ ಮಾಡದ ರೋಗಗಳಿಗೆ ಹೊರೆ ವರ್ಗಾಯಿಸಿಕೊಂಡಿದೆ. ಶಾಂತಿಯಿಲ್ಲದೆ ನರಳಾಡುತ್ತಿರುವ ಇಂದಿನ ಯುವ ಜನಾಂಗ ಔಷಧಿಗಳಲ್ಲಿ ಆಶ್ರಯ ಪಡೆಯುತ್ತಾರೆ. ಯೋಗವನ್ನು ಅಭ್ಯಾಸ ಮಾಡುವುದರ ಮೂಲಕ ಒತ್ತಡ ಹಾಗೂ ಬಹು ಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯಬಹುದಾಗಿದೆ.

“ದೇಹವು ಮನಸ್ಸಿನ ದೇವಸ್ಥಾನವಾಗಿದ್ದರೆ, ಯೋಗವು ಸುಂದರವಾದ ದೇವಸ್ಥಾನವನ್ನು ಸಷ್ಟಿಸುತ್ತದೆ.

ಈ ಬಾರಿ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕೇಂದ್ರ ಸರಕಾರ ಯೋಗ ದಿನವನ್ನು ಲೇಹ್ʼನಲ್ಲಿ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಿತ್ತು. ಆದರೆ ಕೋವಿಡ್‌ ಕಾರಣದಿಂದ ರದ್ದುಗೊಳಿಸಲಾಯಿತು. ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಡಿಜಿಟಲ್ ಆಗಿದೆ. ವರ್ಚುಯಲ್ ಮೀಡಿಯಾ ವೇದಿಕೆಗಳ ಮೂಲಕ ಯೋಗ ದಿನಾಚರಣೆ ನಡೆಯಲಿದೆ. ಪ್ರಧಾನಿ ಸಂದೇಶವನ್ನು ನೀಡಲಿದ್ದಾರೆ. ವಿದೇಶಗಳಲ್ಲಿರುವ ಭಾರತೀಯ ದೂತವಾಸ ಕಚೇರಿಗಳು ಡಿಜಿಟಲ್ ಮಾಧ್ಯಮಗಳ ಮೂಲಕ ಯೋಗ ದಿನಾಚರಣೆಯನ್ನು ಉತ್ತೇಜಿಸುವ ಕೆಲಸ ಮಾಡುತ್ತಿವೆ.

‘Yoga at Home and Yoga with Family’ ( ಮನೆ ಮತ್ತು ಕುಟುಂಬದೊಂದಿಗೆ ಯೋಗ) ಎಂಬುದು ಈ ವರ್ಷದ ಯೋಗ ದಿನಾಚರಣೆಯ ಥೀಮ್ ಆಗಿದೆ. ಜೂ.21ರಂದು ಬೆಳಗ್ಗೆ 7 ಗಂಟೆಗೆ ಯೋಗ ದಿನಾಚರಣೆಯ ಕಾರ್ಯಕ್ರಮ ಅಧಿಕೃತವಾಗಿ ಪ್ರಾರಂಭಗೊಳ್ಳಲಿದೆ. ಅದೇ ರೀತಿ ನಮ್ಮ ರಾಜ್ಯದಲ್ಲಿ ಈ ದಿನದಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವರ್ಚುವಲ್‌ ವೇದಿಕೆ ಮೂಲಕ ಯೋಗಾಭ್ಯಾಸ ನಡೆಸಲಿದ್ದಾರೆ.

ಮತ್ತು ಕ್ರೀಡಾ ಮತ್ತು ಯುವಜನ ಸಬಲೀಕರಣ, ನಿಮ್ಹಾನ್ಸ್‌, ಪರಿವರ್ತನಾ ಯೋಗಾ ಪ್ರತಿಷ್ಠಾನ ಹಾಗೂ ಆರ್ಟ್‌ ಆಫ್‌ ಲಿವಿಂಗ್‌ ಸಹಯೋಗದಲ್ಲಿ ನಡೆಯಲಿದೆ. ಸೋಂಕಿನ ಕಾಯಿಲೆ ಇರುವ ಕಾರಣಕ್ಕೆ ಈ ಕಾರ್ಯಕ್ರಮಕ್ಕೆ ʼಕೋವಿಡ್-‌19, ಯುವಜನರು, ಯೋಗ, ಧ್ಯಾನʼ ಎಂಬ ಥೀಮ್ ಮೂಲಕ ಆಚರಿಸಲಾಗುತ್ತದೆ.

ಯೋಗವು ಇಂದು ವಿಶ್ವದಾದ್ಯಂತ ಜನರ ಮೆಚ್ಚುಗೆಗೆ ಪಾತ್ರವಾಗಿದ್ದು, ತಮ್ಮ ಬದುಕಿನ ದೈನಂದಿನ ಚಟುವಟಿಕೆಗಳನ್ನಾಗಿ ಮಾಡಿಕೊಂಡು ಮಾನಸಿಕ ದೈಹಿಕ ಒತ್ತಡದಿಂದ ಹೊರಬಂದಿದ್ದಾರೆ. ನಾವೆಲ್ಲರೂ ಯೋಗವನ್ನು ಅಭ್ಯಾಸ ಮಾಡುತ್ತಾ ಸದೃಢ ಭಾರತವನ್ನು ಕಟ್ಟೋಣ.

*****

ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.
Tags: 7th international yoga dayAdiyogi Shivaindiakarnatakalord shivamaha shivaWorldyoga day
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

by cknewsnow desk
January 27, 2024
0

"ಒಬ್ಬರ ಜನನವು ಅವರ ಹಣೆಬರಹವನ್ನು ನಿಶ್ಚಯಿಸುವುದಿಲ್ಲ" ಎಂದ ಜನ ನಾಯಕ; ಅಪ್ಪಟ ಭಾರತರತ್ನ, ಮೀಸಲು ಕೊಟ್ಟು ಬದುಕು ಕಟ್ಟಿಕೊಟ್ಟ ಭಾರತದ ಭಾಗ್ಯವಿದಾತ

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

by cknewsnow desk
January 21, 2024
0

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ಶ್ರೀರಾಮಪ್ರಭುವೇ ಕ್ಷಮಿಸು! ನಿನ್ನ ಹೆಸರಿಟ್ಟುಕೊಂಡವರೆಲ್ಲ ನಿನ್ನವರಲ್ಲ!!

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಮಂದಿರಕ್ಕೆ ಅಂಕುರಾರ್ಪಣೆ ಆಗಿದ್ದು ಹೇಗೆ?

by cknewsnow desk
January 19, 2024
0

ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

by cknewsnow desk
December 28, 2023
0

ನಿಜದ ಜಾಡು ಹಿಡಿದು ಹೊರಟ ನಿಡುಮಾಮಿಡಿ ಶ್ರೀಗಳ ಹೋರಾಟಕ್ಕೆ 33 ವರ್ಷ

ಅಖಂಡ ಭಾರತದ ಅಷ್ಟದಿಕ್ಕುಗಳ ಆಮೂಲಾಗ್ರ ಅಭಿವೃದ್ಧಿಗೆ ಸುವರ್ಣ ಅಧ್ಯಾಯ ಬರೆದವರೇ ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ

ಅಟಲ್ ಎಂದರೆ ಅಜಾತಶತ್ರು

by cknewsnow desk
December 25, 2023
0

ಇಂದು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ, ಉತ್ತಮ ಆಡಳಿತ ದಿನ by Dr.Gurupeasad Hawaldar ಜಾಗತಿಕ ಮಟ್ಟದ ಶ್ರೇಷ್ಠ ನಾಯಕರ ಸಾಲಿನಲ್ಲಿ ಗೌರವಿಸಲ್ಪಡುವ  ನಿಸ್ವಾರ್ಥ ರಾಜಕಾರಣಿ,...

ಶಿಕ್ಷಣ, ಶಿಕ್ಷಕ ಮತ್ತು ಬದಲಾವಣೆ; ನೂತನ ಶಿಕ್ಷಣ ನೀತಿಯ ಹೊತ್ತಿನಲ್ಲಿ ಓಶೋ ಜೋಶ್..

ಓಶೋ: ಬೆರಗು, ಬೆಡಗು ಮತ್ತು ವಿಸ್ಮಯ

by cknewsnow desk
December 11, 2023
0

ಇಂದು ಓಶೋ ಜನ್ಮದಿನ

Next Post
ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ: ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ

ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ: ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ

Comments 1

  1. Pingback: ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ: ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ - cknewsnow

Leave a Reply Cancel reply

Your email address will not be published. Required fields are marked *

Recommended

ವಿಷ ವಿಲೇವಾರಿಗೆ ಅಡ್ಡಿಪಡಿಸಿದ ಹಳ್ಳಿಗರಿಗೆ ಹಣದ ಆಮಿಷ!

ವಿಷ ವಿಲೇವಾರಿಗೆ ಅಡ್ಡಿಪಡಿಸಿದ ಹಳ್ಳಿಗರಿಗೆ ಹಣದ ಆಮಿಷ!

4 years ago
ಕಲ್ಯಾಣ ಕರ್ನಾಟಕಕ್ಕೆ ರೂ. 3,000 ಕೋಟಿ

ಕಲ್ಯಾಣ ಕರ್ನಾಟಕಕ್ಕೆ ರೂ. 3,000 ಕೋಟಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ