• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಕೋವಿಡ್‌ ಅಟ್ಟಹಾಸದಲ್ಲೂ ಹಳ್ಳಿಮಕ್ಕಳ ಮೊಗದಲ್ಲಿ ಮೂಡಿತು ಮಂದಹಾಸ!!

P K Channakrishna by P K Channakrishna
June 23, 2021
in CHIKKABALLAPUR, EDITORS'S PICKS
Reading Time: 2 mins read
0
ಕೋವಿಡ್‌ ಅಟ್ಟಹಾಸದಲ್ಲೂ ಹಳ್ಳಿಮಕ್ಕಳ ಮೊಗದಲ್ಲಿ ಮೂಡಿತು ಮಂದಹಾಸ!!
921
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ ಬಳಿಯ ಮರಸನಹಳ್ಳಿ ಸರಕಾರಿ ಶಾಲಾ ಮಕ್ಕಳಿಗೆ ಇಸ್ಕಾನ್-ಅಕ್ಷಯ ಪಾತ್ರೆಯಿಂದ ಹ್ಯಾಪಿನೇಸ್ ಕಿಟ್ ವಿತರಣೆ

ಚಿಕ್ಕಬಳ್ಳಾಪುರ: ಈಗಾಗಲೇ ರಾಜ್ಯದಲ್ಲಿ ಅನ್ನ ದಾಸೋಹದಲ್ಲಿ ಹೆಸರು ಮಾಡಿರುವ ಇಸ್ಕಾನ್ ಸಂಸ್ಥೆ ಅಕ್ಷಯ ಪಾತ್ರೆ ವತಿಯಿಂದ ತಾಲೂಕಿನ ಮರಸನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಹ್ಯಾಪಿನೇಸ್ ಕಿಟ್ʼಗಳನ್ನು ವಿತರಣೆ ಮಾಡಲಾಯಿತು.

ಜಿಲ್ಲಾಧಿಕಾರಿ ಆರ್.ಲತಾ ಹಾಗೂ ಅಕ್ಷಯ ಪಾತ್ರೆ ಸಂಸ್ಥೆ ಮುಖ್ಯಸ್ಥ ಗುಣಾಕರ ರಾಮದಾಸ್‌ ಮತ್ತಿತರರು ಮಕ್ಕಳಿಗೆ ಹ್ಯಾಪಿನೇಸ್ ಕಿಟ್ʼಗಳನ್ನು ನೀಡಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಲತಾ ಅವರು, “ಕೋವಿಡ್‌ ಸಂಕಷ್ಟದ ಅವಧಿಯಲ್ಲಿ ಸರಕಾರೇತರ ಸಂಸ್ಥೆಗಳು ಬಡ ಮಕ್ಕಳಿಗೆ ನಾನಾ ರೀತಿಯ ಶಿಕ್ಷಣ ಪರಿಕರಗಳನ್ನು, ಆಹಾರ ಧಾನ್ಯಗಳುಳ್ಳ ಕಿಟ್‌ಗಳನ್ನು ನೀಡುತ್ತಿವೆ. ಇಸ್ಕಾನ್ ಸಂಸ್ಥೆಯ ಈ ಕಾಳಜಿ ನಿಜಕ್ಕೂ ಶ್ಲಾಘನೀಯ ಎಂದರು.

ಸೋಂಕಿನ ಸಂದರ್ಭದಲ್ಲಿ ಮಕ್ಕಳ ಪೋಷಕರು ಕಷ್ಟಕ್ಕೆ ಸಿಲುಕಿದ್ದಾರೆ. ಇಂಥ ವೇಳೆಯಲ್ಲಿ ಖಾಸಗಿ ಸಂಸ್ಥೆಗಳು ಸಹಾಯಹಸ್ತ ಚಾಚುತ್ತಿವೆ. ಇದರಿಂದ ಮಕ್ಕಳಲ್ಲಿ ಓದಿನ ಬಗ್ಗೆ ಆಸಕ್ತಿ ಹೆಚ್ಚುತ್ತಿದ್ದು, ಪೋಷಕರಲ್ಲಿ ಧನ್ಯತಾ ಭಾವ ಮೂಡಿದೆ ಎಂದು ಲತಾ ಅವರು ಹೇಳಿದರು.

ಖಾಸಗಿ ಸಂಸ್ಥೆಗಳು ಗ್ರಾಮೀಣ ಪ್ರದೇಶದ ಮಕ್ಕಳ ಒಳತಿಗೆ ಹೆಚ್ಚು ಗಮನ ಹರಿಸಬೇಕು. ಆ ಮೂಲಕ ಗ್ರಾಮೀಣ ಮಕ್ಕಳ ವಿದ್ಯಾಭ್ಯಾಸಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದ ಅವರು, ಪತ್ರಕರ್ತ ಮರಸನಹಳ್ಳಿ ರವಿಕುಮಾರ್ ಕಾಳಜಿಯಿಂದಾಗಿ ಇಂದು 100ಕ್ಕೂ ಹೆಚ್ಚು ಮಕ್ಕಳಿಗೆ ಈ ಕಿಟ್ ಸಿಕ್ಕಂತಾಗಿದೆ ಎಂದರು  ಜಿಲ್ಲಾಧಿಕಾರಿಗಳು.

ಗ್ರಾಮೀಣ ಭಾಗದ ಮಕ್ಕಳಿಗೆ ಓದುವ ಹಂಬಲ ಹೆಚ್ಚಾಗಿರುತ್ತದೆ. ಆದರೆ, ಅವರಿಗೆ ಸೌಲಭ್ಯಗಳ ಕೊರತೆ ಇರುತ್ತದೆ. ಇಸ್ಕಾನ್‌ನಂಥ ಸಂಸ್ಥೆಗಳು ಮುಂದೆ ಬಂದು ಇಂಥ ಮಕ್ಕಳಿಗೆ ನೆರವಾಗುತ್ತಿರುವುದು ಸಂತೋಷದ ಸಂಗತಿ. ಇನ್ನಷ್ಟು ಜನ ಇಸ್ಕಾನ್‌ನಿಂದ ಪ್ರೇರಣೆ ಪಡೆದು ಹಳ್ಳಿಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಬೇಕು.

-ಆರ್.ಲತಾ / ಜಿಲ್ಲಾಧಿಕಾರಿ

ಅಕ್ಷಯ ಪಾತ್ರೆ ಮುಖ್ಯಸ್ಥ ಗುಣಾಕರ ರಾಮದಾಸ್ ಅವರು ಮಾತನಾಡಿ, “ಬಯಲು ಸೀಮೆಯ ಈ ಭಾಗದಲ್ಲಿ,  ಅದರಲ್ಲೂ ಗ್ರಾಮೀಣ ಪ್ರದೇಶದ ಮಕ್ಕಳಿಗೆ ನೀಡುತ್ತಿರುವ ಹ್ಯಾಪಿನೇಸ್ ‌ಕಿಟ್ʼಗಳನ್ನು ಸದ್ಬಳಕೆಯಾಗಲಿ. ಯಾವುದೇ ಮಗು ಶಿಕ್ಷಣದಿಂದ ಹೊರಗುಳಿಯಬಾರದು. ಅದೇ ರೀತಿ ವಿದ್ಯಾರ್ಥಿಗಳು ಕೂಡ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು. ಯಾರೂ ಶಿಕ್ಷಣದಿಂದ ವಂಚಿತರಾಗಬಾರದು. ಎಲ್ಲರೂ ಪೌಷ್ಠಿಕ ಆಹಾರ ಸಿಗಬೇಕು. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಕೆಲಸ ಮಾಡುತ್ತಿದೆ” ಎಂದರು.

ಕೋವಿಡ್‌ನಿಂದ ಎಲ್ಲ ಕಡೆ ಶಿಕ್ಷಣ ವ್ಯವಸ್ಥೆಗೆ ತೊಂದರೆ ಆಗಿದೆ. ಹೀಗಾಗಿ ಅಕ್ಷಯ ಪಾತ್ರೆ ವತಿಯಿಂದ ಹ್ಯಾಪಿನೆಸ್‌ ಕಿಟ್‌ಗಳನ್ನು ಮಕ್ಕಳಿಗೆ ನೀಡಲಾಗುತ್ತಿದೆ. ಮಕ್ಕಳು ಈ ಕಿಟ್‌ನಲ್ಲಿರುವ ಸಾಮಗ್ರಿಗಳನ್ನು ಸದ್ಬಳಕೆ ಮಾಡಿಕೊಂಡು ವ್ಯಾಸಂಗ ಮಾಡಲಿ.

-ಗುಣಾಕರ ರಾಮದಾಸ್ / ಇಸ್ಕಾನ್‌ನ ಅಕ್ಷಯ ಪಾತ್ರೆ ಮುಖ್ಯಸ್ಥರು

ಇದೇ ವೇಳೆ ಪತ್ರಕರ್ತ ಮರಸನಹಳ್ಳಿ ವಿ.ರವಿಕುಮಾರ್ ಅವರು ಗುಣಾಕರ ರಾಮದಾಸ್ ಹಾಗೂ ಜಿಲ್ಲಾಧಿಕಾರಿ ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಇನ್ನಿತರೆ ಗಣ್ಯರನ್ನು ಗೌರವಿಸಿದರು.

ಮರಸನಹಳ್ಳಿಯಲ್ಲಿ ‌ನಡೆದ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಎಂ.ಜಯರಾಮರೆಡ್ಡಿ, ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಹರ್ಷವರ್ಧನ್, ಶಿಕ್ಷಣ ಇಸ್ಕಾನ್ ಸಂಸ್ಥೆಯ ಪ್ರೇಮ್ ಜಿತ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಾ ವೆಂಕಟೇಶ್, ಸದಸ್ಯರಾದ ಬಾಬು, ವೆಂಕಟಾಚಲಪತಿ, ಸರಕಾರಿ ನೌಕರರ ಸಂಘದ ಸುನಿಲ್ ಪಿ.ಆರ್., ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ  ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ನಾಗರಾಜಪ್ಪ, ಪ್ರಧಾನ ಕಾರ್ಯದರ್ಶಿ ಟಿ.ವಿ.ಶ್ರೀನಿವಾಸ್, ಖಜಾಂಚಿ ವಿಷ್ಣುವರ್ಧನ, ಕಾರ್ಯಕಾರಿ ಸಮಿತಿ ಹಾಗೂ ಮಾಧ್ಯಮ ವಕ್ತಾರ ಅಮರ್, ಸಿ.ಆರ್.ಪಿ.ವೆಂಕಟೇಶ್ ಸೇರಿದಂತೆ ಗ್ರಾಮದ ಇನ್ನಿತರೆ ಮುಖ‌ಂಡರು ಉಪಸ್ಥಿತರಿದ್ದರು.

Tags: chikkaballapuracovid19educationgovernment schoolhappiness kits for kidsiskconmarasanahallischool children
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

by cknewsnow desk
October 16, 2026
0

ಕರುಣೆಪೂರಿತ ಸಮಾಜದ ಪುನರುಜ್ಜೀವನಕ್ಕೆ ಶ್ರೀಶ್ರೀ ಮಧುಸೂಧನ ಸಾಯಿ ಅವರ ನೇತೃತ್ವ ಬೇಕೆಂದ ಕೇಂದ್ರ ಸಚಿವರು

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

HDK #preesmeet #Live

by cknewsnow desk
October 15, 2026
0

ಮುಖ್ಯಮಂತ್ರಿ ಡಿಕೆಶಿ ಮತ್ತು ಸ್ಟಿಂಗ್ ಪಿನ್ ಸಂಬಂಧದ ಬಗ್ಗೆ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದ ಕೇಂದ್ರ ಸಚಿವರು

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

by cknewsnow desk
October 13, 2026
0

ಬೆಂಗಳೂರು ಜೆ.ಪಿ. ಭವನದಿಂದ ನೇರ ಪ್ರಸಾರ

ತಾಪಂ, ಜಿಪಂ ಚುನಾವಣೆ; ಜಿಲ್ಲಾವಾರು ಸಭೆಗಳನ್ನು ಆರಂಭಿಸಿದ HDK

ತಾಪಂ, ಜಿಪಂ ಚುನಾವಣೆ; ಜಿಲ್ಲಾವಾರು ಸಭೆಗಳನ್ನು ಆರಂಭಿಸಿದ HDK

by cknewsnow desk
October 13, 2026
0

ಚಿಕ್ಕಬಳ್ಳಾಪುರ ಜಿಲ್ಲಾ ಮುಖಂಡರೊಂದಿಗೆ ಸಮಾಲೋಚನೆ

ಡಿಕೆಶಿ ನೈಸ್ ಖರೀದಿ; ಹೈಕಮಾಂಡ್ ಅಂಗಳದಲ್ಲಿ ಅಲ್ಲೋಲ ಕಲ್ಲೋಲ

ಡಿಕೆಶಿ ನೈಸ್ ಖರೀದಿ; ಹೈಕಮಾಂಡ್ ಅಂಗಳದಲ್ಲಿ ಅಲ್ಲೋಲ ಕಲ್ಲೋಲ

by cknewsnow desk
October 10, 2026
0

ಹೆಚ್.ಡಿ.ಕುಮಾರಸ್ವಾಮಿ ಆರೋಪದಿಂದ ಕಾಂಗ್ರೆಸ್ ನಲ್ಲಿ ತಳಮಳ

Next Post
ಬೆಲೆ ಏರಿಕೆಯಿಂದ ಜನ ಹೈರಾಣಾಗಿದ್ದಾರೆ, ಕೂಡಲೇ ಅಡುಗೆ ಎಣ್ಣೆ ದರ ನಿಯಂತ್ರಿಸಿ ಎಂದು ಪಿಎಂ, ಸಿಎಂ, ಆಹಾರ ಸಚಿವರಿಗೆ ಪತ್ರ ಬರೆದ ಸಂಸದ ಡಿ.ಕೆ ಸುರೇಶ್

ಕೆಲವರು ಈಗಲೇ ಮುಖ್ಯಮಂತ್ರಿ ಆಗುವುದಾದರೆ ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದ ಸಂಸದ ಡಿ.ಕೆ.ಸುರೇಶ್

Leave a Reply Cancel reply

Your email address will not be published. Required fields are marked *

Recommended

KSRTC ನೌಕರರಿಗೆ ಒಳ್ಳೆಯ ಸುದ್ದಿ

ಟಿಕೆಟ್ ಕೊಡಿ ಅಜ್ಜಿ ಎಂದ ವಿದ್ಯಾರ್ಥಿನಿಯ ಕಪಾಳಕ್ಕೆ ಹೊಡೆದ ಲೇಡಿ ಕಂಡಕ್ಟರ್!‌

3 years ago
ಬಿರುಗಾಳಿ ಮಳೆ, ಆಲಿಕಲ್ಲು ಅಬ್ಬರಕ್ಕೆ ತತ್ತರಿಸಿದ ಗುಡಿಬಂಡೆ

ಬಿರುಗಾಳಿ ಮಳೆ, ಆಲಿಕಲ್ಲು ಅಬ್ಬರಕ್ಕೆ ತತ್ತರಿಸಿದ ಗುಡಿಬಂಡೆ

4 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ