• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home KOLAR

2025ಕ್ಕೆ 10 ದಶಲಕ್ಷ ಆರ್ಥಿಕ ಅವಕಾಶ ಸೃಷ್ಟಿ; ಕೋಲಾರ ಸೇರಿ 8 ಜಿಲ್ಲೆಗಳಲ್ಲಿ ಪೈಲೆಟ್‌ ಪ್ರಾಜೆಕ್ಟ್

cknewsnow desk by cknewsnow desk
June 24, 2021
in KOLAR, NEWS IN USE, STATE
Reading Time: 1 min read
0
2025ಕ್ಕೆ 10 ದಶಲಕ್ಷ ಆರ್ಥಿಕ ಅವಕಾಶ ಸೃಷ್ಟಿ;  ಕೋಲಾರ ಸೇರಿ 8 ಜಿಲ್ಲೆಗಳಲ್ಲಿ ಪೈಲೆಟ್‌ ಪ್ರಾಜೆಕ್ಟ್
928
VIEWS
FacebookTwitterWhatsuplinkedinEmail

ಜುಲೈ 15ರೊಳಗೆ ಕಾರ್ಯಯೋಜನೆ ವರದಿ ಸಲ್ಲಿಕೆಗೆ ಸೂಚನೆ: ಕೌಶಲ್ಯ ಮತ್ತು ಉದ್ಯಮಶೀಲತೆ” ಕಾರ್ಯಪಡೆ ಸಭೆ ನಡೆಸಿದ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಬೆಂಗಳೂರು:  2025ರ ಹೊತ್ತಿಗೆ ಕೌಶಲ್ಯ ಮತ್ತು ಉದ್ಯಮಶೀಲತೆ ವಲಯದಲ್ಲಿ 10 ದಶಲಕ್ಷ ಆರ್ಥಿಕ ಅವಕಾಶಗಳನ್ನು ಸೃಷ್ಟಿ ಮಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಅತಿದೊಡ್ಡ ಹೆಜ್ಜೆ ಇರಿಸಿದೆ ಎಂದು ಕೌಶಲ್ಯಾಭಿವೃದ್ಧಿ ಖಾತೆ ಮಂತ್ರಿಗಳೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಗುರುವಾರ “ಕೌಶಲ್ಯ ಮತ್ತು ಉದ್ಯಮಶೀಲತೆ” ಕಾರ್ಯಪಡೆಯ ಸಭೆ ನಡೆಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಈ ಯೋಜನೆಯನ್ನು ಆದ್ಯತೆಯ ಮೇರೆಗೆ ಜಾರಿ ಮಾಡುವ ನಿಟ್ಟಿನಲ್ಲಿ ಜುಲೈ 15ರೊಳಗೆ ಕಾರ್ಯಯೋಜನೆಯ ವರದಿ ಸಲ್ಲಿಸುವಂತೆ ಕಾರ್ಯಪಡೆಗೆ ಸೂಚಿಸಲಾಗಿದೆ ಎಂದರು.

ಕೋವಿಡ್‌ ಸಂಕಷ್ಟದಿಂದ ರಾಜ್ಯದಲ್ಲಿ ಆರ್ಥಿಕ ಅವಕಾಶಗಳು, ಉದ್ಯೋಗ ಸರಪಳಿಯ ಮೇಲೆ ಮಾರಕ ಪರಿಣಾಮ ಬೀರಿದ್ದು, ಇದಕ್ಕೆ ಬಹುದೊಡ್ಡ ಚೇತರಿಕೆ ನೀಡುವ ನಿಟ್ಟಿನಲ್ಲಿ “ಮಿಷನ್‌ ಯುವ ಸಮೃದ್ಧಿ” ಹೆಸರಿನಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಈ ಬಗ್ಗೆ ಅವರು ವಿವರವಾಗಿ ಹೇಳಿದ್ದಿಷ್ಟು:
  • ಮೈಸೂರು, ಮಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಯಚೂರು, ಕೊಪ್ಪಳ, ಧಾರವಾಡ ಸೇರಿ 8 ಜಿಲ್ಲೆಗಳಲ್ಲಿ ಮೊದಲ ಹಂದಲ್ಲಿ ಈ ಕಾರ್ಯಕ್ರಮವನ್ನು ಪೈಲೆಟ್‌ ಪ್ರಾಜೆಕ್ಟ್‌ ಆಗಿ ಅನುಷ್ಟಾನಕ್ಕೆ ತರಲಾಗುವುದು.
  • ಸರಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ಜಾರಿಗೆ ಬರುತ್ತಿದ್ದು, ಮುಖ್ಯವಾಗಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಯುವಕರಲ್ಲಿ ಉದ್ಯಮಶೀಲತೆ ಹೆಚ್ಚಿಸುವುದು ಹಾಗೂ ಯುವಜನರ ಆರ್ಥಿಕ ಅವಕಾಶಗಳನ್ನು ಹೆಚ್ಚಿಸುವುದು ಇದರ ಉದ್ದೇಶವಾಗಿದೆ.
  • ಪ್ರಾಥಮಿಕ ಹಂತದಿಂದಲೇ ಉದ್ಯಮಶೀಲತೆ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಅಂಶವೂ ಯೋಜನೆಯಲ್ಲಿ ಅಡಕವಾಗಿದೆ.
  • ಮುಖ್ಯವಾಗಿ 6 ಅಂಶಗಳ ಆಧಾರದ ಮೇಲೆ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಡಿಜಿಟಲ್‌ ಕುಶಲತೆ, ಉದ್ಯಮಶೀಲತೆ, ವೃತ್ತಿ ಮಾರ್ಗದರ್ಶನ, ಯುವ ಉದ್ಯಮಶೀಲತೆ, ಕೃಷಿ ತಂತ್ರಜ್ಞಾನ, ಆರ್ಥಿಕ ಅವಕಾಶಗಳು & ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಸ್ಥಳೀಯ ಮಟ್ಟದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿ ಮಾಡುವುದು.
  • ಕೃಷಿ, ಕೃಷಿ ತಂತ್ರಜ್ಞಾನ, ತೋಟಗಾರಿಕೆ, ಪಶು ಸಂಗೋಪನೆ, ಪ್ರಾಥಮಿಕ ಶಿಕ್ಷಣ, ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ಐಟಿ-ಬಿಟಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಕೈಗಾರಿಕೆ, ಕಾರ್ಮಿಕ ಸೇರಿದಂತೆ ಹಲವಾರು ಇಲಾಖೆಗಳನ್ನು ಈ ಮಹತ್ವದ ಯೋಜನೆಯಲ್ಲಿ ಒಳಗೊಳ್ಳುವಂತೆ ಮಾಡಲಾಗಿದೆ.
  • ಮುಖ್ಯವಾಗಿ ಉದ್ಯಮಶೀಲತೆಯಲ್ಲಿ ಮುಂದೆ ಬರುವ ಯುಜನ ಜನರಿಗೆ ವ್ಯವಸ್ಥಿತವಾಗಿ ಉದ್ಯೋಗ ಮಾಡುವ ಅಥವಾ ಉದ್ಯಮ ಸ್ಥಾಪನೆ ಮಾಡುವ, ಅದಕ್ಕಾಗಿ ಸಂಪನ್ಮೂಲ ಪಡೆಯುವುದು, ತದ ನಂತರ ಉತ್ತಮ ರೀತಿಯಲ್ಲಿ ಗಳಿಕೆ ಮಾಡುವ ಬಗ್ಗೆ ವೈಜ್ಞಾನಿಕವಾಗಿ ಜಾಗತಿಕ ಗುಣಮಟ್ಟದಂತೆ ತರಬೇತಿ.
  • ಕೃಷಿ ಮತ್ತು ಕೃಷಿ ತಂತ್ರಜ್ಞಾನಕ್ಕೆ ಹೆಚ್ಚು ಒತ್ತು ಕೊಡುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕ ಅವಕಾಶಗಳನ್ನು ಹೆಚ್ಚಿಸುವುದು ಬಹುದೊಡ್ಡ ಗುರಿ.
  • ಭಾರೀ ಪ್ರಮಾಣದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುವುದು.

ಕಾರ್ಯಪಡೆಯ ಅಧ್ಯಕ್ಷ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್‌, ಕೌಶಲ್ಯ-ಉದ್ಯಮಶೀಲತೆ ಕಾರ್ಯಪಡೆಯ ಸಹ ಸಂಚಾಲಕರಾದ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್‌ ಹಾಗೂ ಉದ್ಯಮಿ ಮದನ್‌ ಪದಕಿ (ಒನ್‌ ಬ್ರಿದ್ಜ್‌ ಕಂಪನಿ ಸಿಇಒ), ಮುಖ್ಯಮಂತ್ರಿಗಳ ಸಲಹೆಗಾರ ಹಾಗೂ ವಿಷನ್‌ ಗ್ರೂಪ್‌ ಚೇರ್ಮನ್‌ ಪ್ರಶಾಂತ್‌ ಪ್ರಕಾಶ್‌ ಸೇರಿದಂತೆ ಕಾರ್ಯಪಡೆ ಎಲ್ಲ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದರು. ಕೆಲವರು ವರ್ಚುವಲ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

Tags: deputy chief ministerdr cn ashwathnarayanjobskarnatakaKarnataka Skill and Entrepreneurship Task Forcekolarskill developmentyouthyuva samridhi project
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಿಜೆಪಿ ಮುಖಂಡ ಆರ್.ವೆಂಕಟೇಶ್ ಬಾಗೇಪಲ್ಲಿ ತಾಲೂಕು ಕೆಡಿಪಿ ಸದಸ್ಯರಾಗಿ ನಾಮ ನಿರ್ದೇಶನ

ಬಿಜೆಪಿ ಮುಖಂಡ ಆರ್.ವೆಂಕಟೇಶ್ ಬಾಗೇಪಲ್ಲಿ ತಾಲೂಕು ಕೆಡಿಪಿ ಸದಸ್ಯರಾಗಿ ನಾಮ ನಿರ್ದೇಶನ

Leave a Reply Cancel reply

Your email address will not be published. Required fields are marked *

Recommended

ಕೇಂದ್ರ ಸರಕಾರದಿಂದ ಆರ್ಥಿಕ ದೌರ್ಜನ್ಯ; ದೇಶಕ್ಕೆ ಲೆಕ್ಕ ಕೊಟ್ಟ ಸಿದ್ದರಾಮಯ್ಯ

ಕೇಂದ್ರ ಸರಕಾರದಿಂದ ಆರ್ಥಿಕ ದೌರ್ಜನ್ಯ; ದೇಶಕ್ಕೆ ಲೆಕ್ಕ ಕೊಟ್ಟ ಸಿದ್ದರಾಮಯ್ಯ

2 years ago
ನೇಮಕವಾದ ವೈದ್ಯರು 4,000, ಕೆಲಸಕ್ಕೆ ಹಾಜರಾಗಿದ್ದು 2,500!!

ನೇಮಕವಾದ ವೈದ್ಯರು 4,000, ಕೆಲಸಕ್ಕೆ ಹಾಜರಾಗಿದ್ದು 2,500!!

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ