• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಸರಕಾರದಿಂದ ಮರಳು ವ್ಯಾಪಾರ!; ಬ್ಯಾಗುಗಳಲ್ಲಿ ತುಂಬಿ ಕೆಜಿ ಲೆಕ್ಕದಲ್ಲಿ ಮಾರಾಟ

cknewsnow desk by cknewsnow desk
June 30, 2021
in STATE
Reading Time: 2 mins read
0
ಸರಕಾರದಿಂದ ಮರಳು ವ್ಯಾಪಾರ!; ಬ್ಯಾಗುಗಳಲ್ಲಿ ತುಂಬಿ ಕೆಜಿ ಲೆಕ್ಕದಲ್ಲಿ ಮಾರಾಟ
956
VIEWS
FacebookTwitterWhatsuplinkedinEmail

ದೇಶದಲ್ಲೇ ವಿನೂತನ ಯೋಜನೆ ಅಂತಾರೆ ಗಣಿ ಸಚಿವ ನಿರಾಣಿ; ಪ್ರಾಯೋಗಿಕವಾಗಿ 5 ಕಡೆ ಘಟಕ, ಸಾರ್ವಜನಿಕರಿಗೆ ಗುಣಮಟ್ಟದ ಮರಳು

Lead Photo by Jess Vide from Pexels

ಬೆಂಗಳೂರು: ದೇಶದಲ್ಲೇ ಪ್ರಪ್ರಥಮ ಬಾರಿಗೆ ಗ್ರಾಹಕರಿಗೆ ಸುಲಭವಾಗಿ ಸಿಗುವಂತೆ ಅನುಕೂಲವಾಗಲು ಇನ್ನು ಮುಂದೆ ಬ್ಯಾಗುಗಳಲ್ಲಿ ಮರಳು ಮಾರಾಟ ಮಾಡುವ ಕೆಲಸಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕೈ ಹಾಕಿದೆ.

ಬ್ಯಾಗುಗಳಲ್ಲಿ ಮಾರಾಟ ಮಾಡುವ ಉದ್ದೇಶವೇನೆಂದರೆ, ಸರಕಾರದ ವತಿಯಿಂದಲೇ ಕೈಗೆಟುಕವ ದರದಲ್ಲಿ ಜನಸಾಮಾನ್ಯರು ಹಾಗೂ ಎಲ್ಲಾ ವರ್ಗದವರಿಗೂ ಮರಳು ಸಿಗಲಿದ್ದು ಇದರ ಪ್ರಸ್ತಾವನೆ ಸಹಾ ಸಿದ್ದವಾಗಿದೆ. ಇದರಿಂದಾಗಿ ಮನೆ ಕಟ್ಟುವವರು ಹಾಗೂ ಇತರರಿಗೆ ಸುಲಭ ಮಾರ್ಗದಲ್ಲಿ ಮರಳು ಲಭ್ಯವಾಗಲಿದೆ.

ಬುಧವಾರದಂದು ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಕಲ್ಲು ಗಣಿಗಾರಿಕೆ ಮರಳು ಕುರಿತು ಜಿಲ್ಲಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿ ಮತ್ತಿತರೆ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಮದ್ಯವನ್ನು ಯಾವ ರೀತಿ ಕರ್ನಾಟಕ ರಾಜ್ಯ ಪಾನೀಯ ನಿಗಮದ ಮೂಲಕ ಮಾರಾಟ ಮಾಡುತ್ತಿದೆಯೋ ಅದೇ ಮಾದರಿಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ತನ್ನದೇ ಆದ ಸಂಸ್ಥೆಯ ಮೂಲಕ ಬ್ಯಾಗುಗಳಲ್ಲಿ ಮರಳು ತುಂಬಿಸಿ ಮಾರಾಟ ಮಾಡಲು ಉದ್ದೇಶಿಸಿದೆ ಎಂದು ಪ್ರಕಟಿಸಿದರು.

ಮರಳು ಸಾಗಾಣಿಕೆ ಮಾಡುವ ವೇಳೆ ಕನಿಷ್ಠ ಶೇ.25ರಿಂದ 30ರಷ್ಟು ಮರಳು ಅನುಪಯುಕ್ತವಾಗುತ್ತಿತ್ತು. ಇದನ್ನು ತಪ್ಪಿಸುವ ಉದ್ದೇಶದಿಂದ 50 ಕೆಜಿಯ ಬ್ಯಾಗ್, 1 ಟನ್ ಹಾಗೂ ಅದಕ್ಕಿಂತ ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕರು ಮರಳನ್ನು ಖರೀದಿಸಬಹುದು ಎಂದು ಹೇಳಿದರು.

ಪ್ರಾಯೋಗಿಕವಾಗಿ ರಾಜ್ಯದ ಐದು ಕಡೆ ಈ ಘಟಕಗಳನ್ನು ಪ್ರಾರಂಭ ಮಾಡಲಾಗುವುದು. ಮರಳು ಮಾರಾಟ ಮಾಡಲು ಬ್ಯಾಗ್‍ಗಳನ್ನು ಸಿದ್ಧಪಡಿಸುವುದು, ಸಾಗಾಣಿಕೆ ಸೇರಿದಂತೆ ಎಲ್ಲ ರೀತಿಯ ತರಬೇತಿಯನ್ನು ಸಂಬಂಧಪಟ್ಟವರಿಗೆ ನೀಡಲಿದ್ದೇವೆ ಎಂದು ತಿಳಿಸಿದರು.

ಬ್ಯಾಗ್ ಮೂಲಕ ಮಾರಾಟ ಮಾಡುವಾಗ ಎ, ಬಿ ಮತ್ತು ಸಿ ಶ್ರೇಣಿ ಎಂದು ವರ್ಗೀಕರಣ ಮಾಡುತ್ತೇವೆ. ಮೊದಲು ಸ್ಟಾಕ್ ಯಾರ್ಡ್‍ಗಳಲ್ಲಿ ಪ್ರತ್ಯೇಕಗೊಳಿಸಿ ನಂತರ ಅದನ್ನು ಕೈಗೆಟಕುವ ದರದಲ್ಲಿ ವಿತರಣೆ ಮಾಡಲಿದ್ದೇವೆ ಎಂದು ತಿಳಿಸಿದರು.

ಮರಳುಗಾರಿಕೆಯನ್ನು ಕೇವಲ ಆರು ತಿಂಗಳು ಮಾತ್ರ ನಡೆಸಬಹುದು. ನದಿಗಳಲ್ಲಿ ನೀರು ಸಂಗ್ರಹಣೆಯಾದರೆ ಮರಳು ತೆಗೆಯಲು ಅವಕಾಶವಿರುವುದಿಲ್ಲ. ಬ್ಯಾಗ್‍ಗಳಲ್ಲಿ ಮರಳು ಸಂಗ್ರಹಿಸಿಟ್ಟುಕೊಂಡರೆ, ವರ್ಷ ಪೂರ್ತಿ ಬಳಕೆ ಮಾಡಬಹುದು ಎಂದು ಸಲಹೆ ಮಾಡಿದರು.

ಬ್ಯಾಗುಗಳಲ್ಲಿ ಮರಳು ಸಂಗ್ರಹಣೆಯಾದರೆ ಸಾರ್ವಜನಿಕರಿಗೆ ಗುಣಮಟ್ಟದ ಮರಳು ಸಿಗಲಿದೆ. ತಮ್ಮ ವಾಹನಗಳಲ್ಲಿ ಎಲ್ಲಿಗೆ ಬೇಕಾದರೂ ಸುಲಭವಾಗಿ ಸಾಗಿಸಬಹುದು.ಇದರಿಂದ ಸಾಗಾಣಿಕೆ ವೆಚ್ಚವು ಕಡಿಮೆಯಾಗಲಿದೆ ಎಂದರು ನಿರಾಣಿ.

ವರ್ಷಪೂರ್ತಿ ಮರಳು ಸಿಗದ ಕಾರಣ ಮಾರುಕಟ್ಟೆಯಲ್ಲಿ ಮರಳಿನ ದರವು ದುಪ್ಪಟ್ಟಾಗುತ್ತಿತ್ತು. ಈಗ ಇಂತಹುದನ್ನು ತಪ್ಪಿಸಲು ಈ ಮಾರ್ಗೋಪಾಯ ಕಂಡುಕೊಳ್ಳಲಾಗಿದೆ ಎಂದು ಹೇಳಿದರು. ಬ್ಯಾಗ್‍ಗಳಲ್ಲಿ ಮರಳನ್ನು ಸಂಗ್ರಹಿಸಿಟ್ಟರೆ ಯಾವಾಗ ಬೇಕಾದರೂ ವಿತರಣೆ ಮಾಡಬಹುದು. ಇದಕ್ಕೆ ದರ ಕಡಿಮೆ ಇರುತ್ತದೆ. ಇದಕ್ಕೆ 50 ರೂ. ಖರ್ಚಾಗಬಹುದು ಎಂದರು ಅವರು.

5 ಲಕ್ಷಕ್ಕಿಂತ ಕಡಿಮೆ ದರದಲ್ಲಿ ಮನೆ ಕಟ್ಟಿಸಿಕೊಳ್ಳುವವರಿಗೆ ಯಾವುದೇ ರೀತಿಯ ರಾಜಧನ ಕಟ್ಟಿಸಿಕೊಳ್ಳುವುದಿಲ್ಲ. ಬಡವರು, ಬಡತನ ರೇಖೆಗಿಂತ ಕೆಳಗಿನವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಶ್ರಯ ಮನೆ ಕಲ್ಪಿಸಿಕೊಳ್ಳುವವರಿಗೆ ಉಚಿತ ಮರಳನ್ನು ವಿತರಿಸಿದ್ದೇವೆ ಎಂದು ತಿಳಿಸಿದರು.

ಬ್ಲಾಕ್‍ಗಳನ್ನು ಗುರುತಿಸಲು ಸೂಚನೆ

ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಮತ್ತು ಅರಣ್ಯ ಉಪ ಸಂರಕ್ಷಣಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಚಿವ ಮುರುಗೇಶ್ ನಿರಾಣಿ ಅವರು, ತತ್‍ಕ್ಷಣವೇ ನದಿ ಪಾತ್ರಗಳಲ್ಲಿ ಒಂದು, ಎರಡು, ಮೂರನೆ ಶ್ರೇಣಿಯ ಮರಳು ಬ್ಲಾಕ್‍ಗಳನ್ನು ಗುರುತಿಸಬೇಕೆಂದು ಸೂಚನೆ ಕೊಟ್ಟರು.

ಕೆಎಸ್‍ಎಂಸಿಎಲ್, ಹೆಚ್‍ಜಿಎಂಎಲ್ ವತಿಯಿಂದ ನಾಲ್ಕು, ಐದು ಮತ್ತು ಆರನೆ ಶ್ರೇಣಿಯ ನದಿ ಪಾತ್ರಗಳಲ್ಲಿ ಮರಳು ಗಣಿಗಾರಿಕೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಮರಳು ಬ್ಲಾಕ್‍ಗಳನ್ನು ಗುರುತಿಸಿ ಅಧಿಸೂಚನೆ ಹೊರಡಿಸಿ ಕಾರ್ಯಾದೇಶ ನೀಡಲಾಗಿದೆ. ಬೇರೆ ಜಿಲ್ಲೆಗಳಲ್ಲಿ ಇದು ಏಕೆ ಸಾಧ್ಯವಾಗಿಲ್ಲ. ಕೂಡಲೇ ಬ್ಲಾಕ್ ಗುರುತಿಸುವ ಕಾರ್ಯ ಮಾಡಿ ಎಂದು ಸೂಚಿಸಿದರು.

ಡ್ರೋಣ್ ಮೂಲಕ ಸಮೀಕ್ಷೆ ನಡೆಸಬೇಕು. ಹೊಸದಾಗಿ ಟೆಂಡರ್ ಕರೆಯುವುದು ಅಥವಾ ಮರು ಟೆಂಡರ್ ಕರೆದಾದರೂ ಬ್ಲಾಕ್‍ಗಳನ್ನು ಗುರುತಿಸಬೇಕು. ಇಲ್ಲಸಸಲ್ಲದ ಸಬೂಬು ಹೇಳಬೇಡಿ ಎಂದು ನಿರಾಣಿ ತಾಕೀತು ಮಾಡಿದರು.

ಈಗಾಗಲೇ ನೂತನ ಮರಳು ನೀತಿ ಸಿದ್ದವಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆಸಿ ಅದಷ್ಟು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದೇವೆ. ಇದು ದೇಶಕ್ಕೆ ಮಾದರಿಯಾದ ನೀತಿ ಇದಾಗಲಿದೆ ಎಂದು ಅಭಿಪ್ರಾಯಪಟ್ಟರು.

ಗಣಿ ಬಾಧಿತ ಜಿಲ್ಲೆಗಳ ಬಗ್ಗೆ ಕಾಳಜಿ

ಗಣಿ ಬಾಧಿತ ಜಿಲ್ಲೆಗಳಾದ ತುಮಕೂರು, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಜಿಲ್ಲಾ ಅದಿರು ನಿಧಿಯಿಂದ ದೊಡ್ಡ ದೊಡ್ಡ ಯೋಜನೆಗಳನ್ನು ರೂಪಿಸಲು ವಿಸ್ತೃತ ಯೋಜನ ವರದಿ (ಡಿಪಿಆರ್) ಸಿದ್ದಪಡಿಸಲು ಸಚಿವ ನಿರಾಣಿ ಅವರು ಸೂಚಿಸಿದರು.

ಈ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ,ಸೇರಿದಂತೆ ಮತ್ತಿತರ ಜೊತೆ ಪ್ರತ್ಯೇಕವಾಗಿ ವಿಡಿಯೋ ಸಂವಾದ ನಡೆಸಿದ ಅವರು, ಕೂಡಲೇ ಡಿಪಿಆರ್ ಸಿದ್ದಪಡಿಸಲು ನಿದೇರ್ಶನ ನೀಡಿದರು. ಈ ಮೂರು ಜಿಲ್ಲೆಗಳಲ್ಲಿ ಡಿಎಂಎಪ್ ನಿಧಿಯಿಂದ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೈರ್ಮಲೀಕರಣ, ಸಮುದಾಯ ಭವನ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅವಕಾಶ ಇದೆ.

ಡಿಎಂಎಪ್ ನಿಧಿ ಬಳಕೆ ಮಾಡಿಕೊಳ್ಳುವ ಸಂಬಂಧ ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಿಕೊಡಲಾಗುವುದು. ವಿಶೇಷವಾಗಿ ಚಿತ್ರದುರ್ಗ, ಬಳ್ಳಾರಿ, ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಜಾರಿ ಮಾಡುವ ಕುರಿತಾಗಿ ಡಿಪಿಆರ್ ಸಿದ್ದಪಡಿಸಬೇಕೆಂದು ಹೇಳಿದರು. ಇದಕ್ಕೆ ಸಮ್ಮತಿಸಿದ ಮೂರು ಜಿಲ್ಲೆಗಳ ಅಧಿಕಾರಿಗಳು ಅದಷ್ಟು ಶೀಘ್ರ ಇಲಾಖೆಗೆ ವಿಸ್ತೃತ ಯೋಜನ ವರದಿಯನ್ನು ಸಿದ್ದಪಡಿಸುವುದಾಗಿ ಭರವಸೆ ಕೊಟ್ಟರು.

Tags: construction sandgovernment sand salekarnatakakarnataka government sand businessmrugesh niranisand in bags
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವೈದ್ಯೋ ನಾರಾಯಣೋ ಹರಿಃ

ವೈದ್ಯೋ ನಾರಾಯಣೋ ಹರಿಃ

Leave a Reply Cancel reply

Your email address will not be published. Required fields are marked *

Recommended

ಕಾಲ್ನಡಿಗೆಯಿಂದಲೇ ಭಾರತಕ್ಕೆ ಜ್ಞಾನದ ಉಸಿರು ತುಂಬಿದ ಮಹಾನ್‌ ಸಂತ

ಕಾಲ್ನಡಿಗೆಯಿಂದಲೇ ಭಾರತಕ್ಕೆ ಜ್ಞಾನದ ಉಸಿರು ತುಂಬಿದ ಮಹಾನ್‌ ಸಂತ

4 years ago
ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು

ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪುನಾರಚನೆ; ನಾಲ್ವರಿಗೆ ಕೊಕ್‌, ಅವರ ಬದಲಿಗೆ ಮೂವರು ಡಿಸಿಎಂಗಳು, ನಿರ್ಮಲಕುಮಾರ್ ಸುರಾನಾಗೆ ಸ್ಥಾನ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ