• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

17,121 ಮಹಿಳಾ ಸ್ವಸಹಾಯ ಗುಂಪುಗಳಿಗೆ 149 ಕೋಟಿ ರೂ. ಸಮುದಾಯ ಬಂಡವಾಳ ನಿಧಿ

cknewsnow desk by cknewsnow desk
July 1, 2021
in STATE
Reading Time: 1 min read
0
17,121 ಮಹಿಳಾ ಸ್ವಸಹಾಯ ಗುಂಪುಗಳಿಗೆ 149 ಕೋಟಿ ರೂ. ಸಮುದಾಯ ಬಂಡವಾಳ ನಿಧಿ
926
VIEWS
FacebookTwitterWhatsuplinkedinEmail

2021-22ನೇ 400 ಕೋಟಿ ರೂ. ನಿಧಿ ಕೊಡಲಾಗುವುದು ಎಂದ ಉಪ ಮುಖ್ಯಮಂತ್ರಿ

ಬೆಂಗಳೂರು: ಸ್ವಯಂ ಉದ್ಯೋಗದಿಂದ ಆರ್ಥಿಕ ಸ್ವಾವಲಂಬನೆ ಸಾಧಿಸುತ್ತಿರುವ ಗ್ರಾಮ ಮಟ್ಟದ ಸಂಜೀವಿನಿ ಘಟಕಗಳಡಿ ಕಾರ್ಯ ನಿರ್ವಹಿಸುವ 17,121 ಮಹಿಳಾ ಸ್ವಸಹಾಯ ಗುಂಪುಗಳಿಗೆ 149 ಕೋಟಿ ರೂ. ಸಮುದಾಯ ಬಂಡವಾಳ ನಿಧಿಯನ್ನು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ಉದ್ಯಮಶೀಲತಾ ಇಲಾಖೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಬಿಡುಗಡೆ ಮಾಡಿದರು.

ಬೆಂಗಳೂರಿನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ, ಸಮುದಾಯ ಬಂಡವಾಳ ನಿಧಿ ಬಿಡುಗಡೆ ಜತೆಗೆ ಅತ್ಯುತ್ತಮವಾಗಿ ಕೆಲಸ ಮಾಡಿ ರಾಷ್ಟ್ರೀಯ ಪುರಸ್ಕಾರಕ್ಕೆ ಪಾತ್ರರಾದ ಸ್ವಸಹಾಯ ಗುಂಪಿಗೆ  ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಾ.ಅಶ್ವತ್ಥನಾರಾಯಣ; “ಡೇ-ಎನ್‌ಆರ್‌ಎಲ್‌ಎಂ (ರಾಷ್ಟ್ರೀಯ ಜೀವನೋಪಾಯ ಇಲಾಖೆ) ವತಿಯಿಂದ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟಗಳಿಗೆ ಒಳಪಡುವ ಸ್ವಸಹಾಯ ಗುಂಪುಗಳಿಗೆ 14,221.75 ಲಕ್ಷ ರೂ. ಹಾಗೂ ಎನ್‌ಆರ್‌ಇಟಿಪಿ (national rural economic transformation project) ಕಾರ್ಯಕ್ರಮದಡಿ ಕೆಲಸ ಮಾಡುವ 74 ಗ್ರಾಮ ಪಂಚಾಯಿತಿಗಳ ಒಕ್ಕೂಟಗಳಲ್ಲಿರುವ 862 ಸ್ವಸಹಾಯ ಗುಂಪುಗಳಿಗೆ 6.82 ಕೋಟಿ ರೂ. ಸೇರಿ ಒಟ್ಟು 17,121 ಸ್ವಸಹಾಯ ಗುಂಪುಗಳಿಗೆ 149 ಕೋಟಿ ರೂ. ಸಮುದಾಯ ಬಂಡವಾಳ ನಿಧಿ ಬಿಡುಗಡೆ ಮಾಡಲಾಗಿದೆ ಎಂದರು.

2021-22ನೇ ಸಾಲಿನಲ್ಲಿ ಈ ಸ್ವಸಹಾಯ ಗುಂಪುಗಳಿಗೆ ಒಟ್ಟು 400 ಕೋಟಿ ರೂ. ಸಮುದಾಯ ಬಂಡವಾಳ ನಿಧಿ ಬಿಡುಗಡೆ ಮಾಡಬೇಕು ಎನ್ನುವುದು ಸರಕಾರದ ಉದ್ದೇಶವಾಗಿದೆ ಎಂದು ಡಿಸಿಎಂ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಬಂಡವಾಳದ ನೆರವಿನಿಂದ ಸ್ವಸಹಾಯ ಗುಂಪುಗಳಲ್ಲಿ ಸದಸ್ಯರಾಗಿರುವ ಮಹಿಳೆಯರು ಕೃಷಿ, ಹೈನುಗಾರಿಕೆ, ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ ಸಾಕಣೆ, ಗುಡಿ ಕೈಗಾರಿಕೆ, ಟೈಲರಿಂಗ್‌, ಹೋಟೆಲ್‌ ಉದ್ಯಮ ಇತ್ಯಾದಿಗಳನ್ನು ಕೈಗೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾಬಲಂಬನೆ ಸಾಧಿಸಲು ಸರಕಾರ ಪ್ರೋತ್ಸಾಹ ನೀಡುತ್ತಿದೆ ಎಂದು ಅವರು ಹೇಳಿದರು.

ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳ್ಳಲು ಈ ಕಾರ್ಯಕ್ರಮ ಸಹಕಾರಿಯಾಗಿದೆ. ಇದಕ್ಕೆ ಇನ್ನೂ ಹೆಚ್ಚಿನ ಆರ್ಥಿಕ ಶಕ್ತಿ ತುಂಬಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

1 ಲಕ್ಷ ರೂ. ರಾಷ್ಟ್ರೀಯ ಪುರಸ್ಕಾರ

ಲಾಭ ಗಳಿಕೆ, ಬಂಡವಾಳ  ನಿಧಿ ಸದುಪಯೋಗದ ಮೂಲಕ ಅತ್ಯುತ್ತಮ ಕಾರ್ಯ ನಿರ್ವಹಣೆ ಮಾಡಿ ಮಹಿಳಾ ದಿನಾಚರಣೆ ಪ್ರಯುಕ್ತ ರಾಷ್ಟ್ರಮಟ್ಟದ ಪುರಸ್ಕಾರಕ್ಕೆ ಪಾತ್ರವಾದ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕು ಮಾಗಡಿ ಗ್ರಾಮ ಪಂಚಾಯಿತಿಯ ʼರೇಣುಕಾ ದೇವಿʼ ಸ್ವಸಹಾಯ ಗುಂಪಿಗೆ 1 ಲಕ್ಷ ರೂ. ನಗದು, ಪ್ರಶಸ್ತಿ ಫಲಕವನ್ನೊಳಗೊಂಡ ಪುರಸ್ಕಾರವನ್ನು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಪ್ರದಾನ ಮಾಡಿದರು. ಗುಂಪಿನ ಪರವಾಗಿ ರೇಖಾ ತಳವಾರ ಅವರು ನಗದು ಮತ್ತು ಪ್ರಶಸ್ತಿ ಸ್ವೀಕರಿಸಿದರು.

ವಿಡಿಯೊ ಸಂವಾದದ ಮೂಲಕ ಮೈಸೂರು, ರಾಮನಗರ. ಕೊಪ್ಪಳ ಸೇರಿದಂತೆ ಇತರ ಜಿಲ್ಲೆಗಳ ಸ್ವಸಹಾಯ ಗುಂಪುಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಇಲಾಖೆಯ ಕಾರ್ಯದರ್ಶಿ ಡಾ.ಸೆಲ್ವಕುಮಾರ್‌, ಸಂಜೀವಿನಿ ಅಭಿಯಾನ ನಿರ್ದೇಶಕಿ ಎನ್.‌ಮಂಜುಶ್ರೀ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಅರ್ ವಿಶ್ವನಾಥ ಮುಂತಾದವರು ಹಾಜರಿದ್ದರು.


  • ಮೇಲಿನ ಚಿತ್ರ: ಗದಗ ಜಿಲ್ಲೆಯ ರೇಣುಕಾದೇವಿ ಸ್ವಸಹಾಯ ಗುಂಪಿನ ಮಹಿಳೆಯರಿಗೆ ಡಿಸಿಎಂ ಅಶ್ವತ್ಥನಾರಾಯಣ ಅವರು ಒಂದು ಲಕ್ಷ ನಗದು, ರಾಷ್ಟ್ರೀಯ ಪುರಸ್ಕಾರ ನೀಡಿದರು. ಈ ಸಂದರ್ಭದಲ್ಲಿ ಮಂಜುಶ್ರೀ, ಸೆಲ್ವಕುಮಾರ್ ಇದ್ದರು.
Tags: Community Investment Funddr cn ashwath narayankarnatakaNational Rural Livelihoods Missionnrlmsanjeevini
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಿಕೆನ್ಯೂಸ್‌ ನೌ  ಇನ್ನೊಮ್ಮೆ ಬದಲಾಗಿದೆ!

ಸಿಕೆನ್ಯೂಸ್‌ ನೌ ಇನ್ನೊಮ್ಮೆ ಬದಲಾಗಿದೆ!

Leave a Reply Cancel reply

Your email address will not be published. Required fields are marked *

Recommended

ಸಿಎಂ ಕುರ್ಚಿ ಮೇಲೆ ಕೂತಿದ್ದಾಗಲೂ ಯೋಗಿಯಂತೆ ಬದುಕಿದ ಎನ್ಟಿಆರ್ ಅವರೇ ಸಾಧ್ಯವಾದರೆ ಮತ್ತೆ ಹುಟ್ಟಿಬನ್ನಿ

ಸಿಎಂ ಕುರ್ಚಿ ಮೇಲೆ ಕೂತಿದ್ದಾಗಲೂ ಯೋಗಿಯಂತೆ ಬದುಕಿದ ಎನ್ಟಿಆರ್ ಅವರೇ ಸಾಧ್ಯವಾದರೆ ಮತ್ತೆ ಹುಟ್ಟಿಬನ್ನಿ

6 years ago
ಪೇಪರ್ ಕಪ್ಪಿನಲ್ಲಿ ಟೀ ಹೀರಿದ ಅಡಗೂರು ವಿಶ್ವನಾಥ್ ಜತೆ ರೈಲ್ವೆ ಫ್ಲಾಟ್ ಫಾರಂ ಮೇಲೊಂದು ವೃತ್ತಾಂತ

ಪೇಪರ್ ಕಪ್ಪಿನಲ್ಲಿ ಟೀ ಹೀರಿದ ಅಡಗೂರು ವಿಶ್ವನಾಥ್ ಜತೆ ರೈಲ್ವೆ ಫ್ಲಾಟ್ ಫಾರಂ ಮೇಲೊಂದು ವೃತ್ತಾಂತ

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ