ನೈಟ್ ಕರ್ಫ್ಯೂ ಮುಂದುವರಿಕೆ, ಮಾಲ್ ಆರಂಭ; ಪಬ್‌ಗಳು ಓಪೆನ್ ಇಲ್ಲ, ಬಾರ್‌ಗಳಿಗೆ ಅವಕಾಶ: ಅನ್‌ಲಾಕ್ 3.0ದಲ್ಲೂ ಚಿತ್ರಮಂದಿರಗಳ ಬಂದ್ / ಏನೆಲ್ ಓಪೆನ್? ಏನೆಲ್ಲ ಇನ್ನೂ ಬಂದ್?
Lead photo: KR Puram Hanging Bridge, Bengaluru / by CkPhotography ಸಿಕೆಪಿ@ckphotographi
ಬೆಂಗಳೂರು: ಅನ್‌ಲಾಕ್ 3.0 ನಿಮಿತ್ತ ರಾಜ್ಯ ಸರಕಾರ ಮತ್ತಷ್ಟು ರಿಯಾಯಿತಿಗಳನ್ನು ಘೋಷಣೆ ಮಾಡಿದೆ. ವಾರಾಂತ್ಯದ ಕರ್ಫ್ಯೂವನ್ನು ತೆಗೆದು ಹಾಕಲಾಗಿದ್ದು, ನೈರ್ಟ್ ಕರ್ಫ್ಯೂವನ್ನು ಉಳಿಸಿಕೊಳ್ಳಲಾಗಿದೆ.
ಹೊಸ ಕ್ರಮಗಳು ಸೋಮವಾರ (ಮೇ 5) ರಿಂದ ಈ ತಿಂಗಳ 19ರವರೆಗೂ ಜಾರಿಯಲ್ಲಿರುತ್ತವೆ.
ಅನ್‌ಲಾಕ್ ಮುಖ್ಯಾಂಶಗಳು ಹೀಗಿವೆ:
- ಸರಕಾರಿ ಮತ್ತು ಖಾಸಗಿ ಕಚೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ.100ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
- ಮಾಲ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
- ನಮ್ಮ ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ.100ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
- ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. ದೇವಾಲಯ, ಮಸೀದಿ, ಚರ್ಚ್ ಜನರಿಗೆ ಮುಕ್ತ.
- ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ.
- ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
- ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ.
- ಅಂತ್ಯ ಸಂಸ್ಕಾರಕ್ಕೆ 20 ಜನರು ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.
- ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
- ಇನ್ನು ಮುಂದೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿ ಇರುವುದಿಲ್ಲ.
- ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
- ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
- ಪಬ್‌ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್‌ಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.
- ಚಿತ್ರಮಂದಿರಗಳು ಆರಂಭ ಇಲ್ಲ.
• ಜಿಲ್ಲೆಯಲ್ಲಿರುವ ಪರಿಸ್ಥಿತಿಗೆ ಅನುನುಗುಣವಾಗಿ ಆಯಾ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳಲು ಸೂಚಿಸಲಾಗಿದೆ.
• ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರಕಾರದ ಮಾರ್ಗಸೂಚಿ ಪಾಲಿಸಬೇಕೆಂದು ಸರಕಾರ ಸೂಚಿಸಿದೆ.