• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಆಸ್ಪತ್ರೆ ಹಾಸಿಗೆಯಲ್ಲಿ ಮಲಗಿರುವ ಗೆಳೆಯ ಜಿ.ಮಾದೇಗೌಡರಿಗೆ ಬರ್ತ್‌ ಡೇ ವಿಶ್‌ ಮಾಡಿ ಪ್ರೀತಿಯ ಪತ್ರ ಬರೆದ ಎಸ್‌.ಎಂ.ಕೃಷ್ಣ

cknewsnow desk by cknewsnow desk
July 9, 2021
in STATE
Reading Time: 1 min read
1
ಆಸ್ಪತ್ರೆ ಹಾಸಿಗೆಯಲ್ಲಿ ಮಲಗಿರುವ ಗೆಳೆಯ ಜಿ.ಮಾದೇಗೌಡರಿಗೆ ಬರ್ತ್‌ ಡೇ ವಿಶ್‌ ಮಾಡಿ ಪ್ರೀತಿಯ ಪತ್ರ ಬರೆದ ಎಸ್‌.ಎಂ.ಕೃಷ್ಣ
967
VIEWS
FacebookTwitterWhatsuplinkedinEmail

ರಾಜ್ಯದ ಅಪರೂಪದ, ವಿರಳ ರಾಜಕಾರಣಿಗಳಲ್ಲಿ ಒಬ್ಬರಾದ ಜಿ.ಮಾದೇಗೌಡರು ಅನಾರೋಗ್ಯದಿಂದ ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಜನ್ಮದಿನದ ನಿಮಿತ್ತ ಅವರ ಚಿರಕಾಲದ ಮಿತ್ರ, ಒಡನಾಡಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಸ್.‌ಎಂ.ಕೃಷ್ಣ ಅವರು ಆತ್ಮೀಯವಾಗಿ ಪತ್ರವೊಂದನ್ನು ಬರೆದಿದ್ದಾರೆ. ಆ ಪತ್ರದ ಪೂರ್ಣಪಾಠ ಇಲ್ಲಿದೆ.

ಮಂಡ್ಯ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿ ಗ್ರಾಮೀಣ ಸೊಗಡನ್ನು ಮೈಗೂಡಿಸಿಕೊಂಡು ಕಳೆದ ಆರು ದಶಕಗಳಿಂದ ಸಾರ್ವಜನಿಕ ಬದುಕು ಸವೆಸಿದ ನನ್ನ ಸನ್ಮಿತ್ರ ಹಾಗೂ ಹಿರಿಯ ಸೋದರ ಸಮಾನರಾದ ಶ್ರೀ ಜಿ.ಮಾದೇಗೌಡ ರವರಿಗೆ 95ನೇ ಹುಟ್ಟುಹಬ್ಬದ ಶುಭಕಾಮನೆಗಳು

ತೀವ್ರ ಅನಾರೋಗ್ಯ ಸಮಸ್ಯೆಯಿಂದ ಕಳೆದ ಕೆಲವು ಸಮಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೌಡರ ಆರೋಗ್ಯ ಬೇಗ ಸುಧಾರಿಸಿ ಮತ್ತೆ ನಮ್ಮೊಂದಿಗೆ ಬೆರೆತು ನಾಡಿನ ಒಳಿತಿಗಾಗಿ ಮತ್ತಷ್ಟು ಮಾರ್ಗದರ್ಶನ ನೀಡಲಿ ಎಂದು ಆಶಿಸುತ್ತೇನೆ.

1962ರಲ್ಲಿ ನಾನು ಮತ್ತು ಅವರು ಒಟ್ಟಿಗೆ ಶಾಸನಸಭೆ ಪ್ರವೇಶಿಸಿ ಅಲ್ಲಿಂದ ಇಲ್ಲಿಯವರೆಗೆ ಹಲವು ಏಳುಬೀಳುಗಳ ನಡುವೆ ನಾಡಿನ ಒಳಿತಿಗೆ ಶ್ರಮಿಸಿದ್ದೇವೆ. ತಮ್ಮ ಛಲಬಿಡದ ಹೋರಾಟಗಳಿಂದ ಸದಾ ಸಮಾಜಮುಖಿಯಾಗಿ ಚಿಂತಿಸುವ ಗೌಡರ ಜೀವನ ಆದರ್ಶನೀಯ. ಮಳವಳ್ಳಿ ಮತ್ತು ಕಿರುಗಾವಲು ಕ್ಷೇತ್ರವನ್ನು ಏಳು ಬಾರಿ ಪ್ರತಿನಿಧಿಸಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿದ್ದ ಶ್ರೀಯುತರಿಗೆ ರಾಜಕೀಯ ಜೀವನದಲ್ಲಿ ಮತ್ತಷ್ಟು ಅವಕಾಶಗಳು ಲಭಿಸಬೇಕಾಗಿತ್ತು ಎಂಬುದು ನನ್ನ ಭಾವನೆ.

ತಾವು ಗುರಿಯಿಟ್ಟ ಕಾರ್ಯಕ್ಕೆ ಯಶಸ್ಸು ಲಭಿಸಲು ಹಠವಾದಿಯಂತೆ ಹೋರಾಟ ನಡೆಸುತ್ತಿದ್ದ ಗೌಡರ ಶ್ರಮಕ್ಕೆ ಕೆಎಂ ದೊಡ್ಡಿ ಅಂತಹ ಗ್ರಾಮೀಣ ಪ್ರದೇಶದಲ್ಲಿ ಭಾರತಿ ವಿದ್ಯಾಸಂಸ್ಥೆ ಸ್ಥಾಪಿಸಿ ಲಕ್ಷಾಂತರ ಗ್ರಾಮೀಣ ವಿದ್ಯಾರ್ಥಿಗಳ ಜೀವನಕ್ಕೆ ಬೆಳಗಾದದ್ದು ಜೀವಂತ ಸಾಕ್ಷಿಯಾಗಿದೆ. ಕೆಎಂ ದೊಡ್ಡಿಯಲ್ಲೇ ರೈತರ ಒಳತಿಗಾಗಿ ಚಾಂಷುಗರ್ ಕಾರ್ಖಾನೆ ಸ್ಥಾಪಿಸಲು ಅವರು ಪಟ್ಟ ಶ್ರಮ ಅನನ್ಯವಾದದ್ದು.

ನಾನು ಮತ್ತು ಅವರು ಒಂದೇ ತಾಲೂಕಿನವರಾಗಿದ್ದು, ಹಲವು ಬಾರಿ ಒಟ್ಟಿಗೆ ಶಾಸನಸಭೆಯಲ್ಲಿ ಕಾರ್ಯನಿರ್ವಹಿಸಿದ್ದು, ತಮ್ಮ ಗ್ರಾಮೀಣ ಶೈಲಿಯ ನಡವಳಿಕೆಯಿಂದ ಆಳುವ ವರ್ಗದ ಗಮನ ಸೆಳೆದು ತನ್ನ ಕ್ಷೇತ್ರಕ್ಕೆ ಸಲ್ಲಬೇಕಾದ ಕಾರ್ಯಗಳನ್ನು ಕಾರ್ಯಗತಗೊಳಿಸುತ್ತಿದ್ದರು. ಎಂದಿಗೂ ಯಾರ ಮುಂದೆ ತಲೆತಗ್ಗಿಸದೆ ಆಳುವ ವರ್ಗದೊಂದಿಗೆ ಸದಾ ಸಂಘರ್ಷಮಯ ರಾಜಕಾರಣ ನಡೆಸಿದ್ದ ಗೌಡರು ನೋಡಲು ಒರಟರಂತೆ ಕಂಡರು ಸ್ನೇಹಜೀವಿ. ಅವರ ನಡುವೆ ಅಪಾರ ಸ್ನೇಹ ಭಾವವಿತ್ತು.

ನನ್ನನ್ನು ರಾಜ್ಯದ ಮುಖ್ಯಮಂತ್ರಿಯಾಗಿ ಕಾಣಬೇಕೆಂದು 1992ರಲ್ಲಿ ದೆಹಲಿ ಮತ್ತು ಬೆಂಗಳೂರಿನಲ್ಲಿ ಅಹರ್ನಿಶಿ ದುಡಿದು ಹಲವು ಸಭೆಗಳ ಮುಂದಾಳತ್ವ ವಹಿಸಿದ್ದರು. ಆದರೆ ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಯಾವುದೋ ವಿಷಗಳಿಗೆಯಿಂದ ನಮ್ಮಿಬ್ಬರ ಮಧ್ಯೆ ಕಂದಕ ಉಂಟಾಗಿದ್ದು ವಿಪರ್ಯಾಸ.

1982ರಲ್ಲಿ ಕಾವೇರಿಯ ಮಧ್ಯಂತರ ತೀರ್ಪು ಬಂದಾಗ ಮಂಡ್ಯ ಜಿಲ್ಲೆ ಅಕ್ಷರಶಃ ರಣರಂಗವಾಗಿತ್ತು. ಅಂದು ಸಂಸತ್ ಸದಸ್ಯರಾಗಿದ್ದ ಗೌಡರು ಜನರ ಆಕ್ರೋಶವನ್ನು ಅರಿತು ಶಾಸನಸಭೆ ಅಧ್ಯಕ್ಷನಾಗಿದ್ದ ನನ್ನೊಂದಿಗೆ ಅಂದಿನ ಮುಖ್ಯಮಂತ್ರಿ ಶ್ರೀ ಬಂಗಾರಪ್ಪನವರ ಮೇಲೆ ಒತ್ತಡ ತಂದು ಯಾವುದೇ ಕಾರಣಕ್ಕೂ ಕಾವೇರಿ ಮಧ್ಯಂತರ ತೀರ್ಪನ್ನು ಪಾಲಿಸಲು ಸಾಧ್ಯವಿಲ್ಲವೆಂದೂ ಶಾಸನ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲು ಮಾದೇಗೌಡರು ಕಾರಣೀಭೂತರಾದರು. ಅಂದೇ ಕಾವೇರಿ ಚಳವಳಿಯ ಮುಂದಾಳತ್ವ ವಹಿಸಿಕೊಂಡು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯನ್ನು ಸ್ಥಾಪಿಸಿ ಹೋರಾಟಕ್ಕಿಳಿದರು.

1994-95ರಲ್ಲಿ ಅವರು ಕಾಂಗ್ರೆಸ್ ಪಕ್ಷದ ಸಂಸತ್ ಸದಸ್ಯರಾಗಿದ್ದರು. ಅಂದಿನ ಪ್ರಧಾನಿ ಶ್ರೀ ಪಿ.ವಿ.ನರಸಿಂಹರಾವ್ ರವರು ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ ನೀಡಿದಾಗ ಅದನ್ನು ಧಿಕ್ಕರಿಸಿ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜನರೊಂದಿಗೆ ಆಹೋರಾತ್ರಿ ಹೋರಾಟಕ್ಕಿಳಿದರು ಅಂದಿನ ಮುಖ್ಯಮಂತ್ರಿ ಶ್ರೀ ಎಚ್.ಡಿ.ದೇವೇಗೌಡರು ತಮಿಳುನಾಡಿಗೆ ನೀರು ಬಿಟ್ಟಿದ್ದನ್ನು ಪ್ರತಿಭಟಿಸಿ ಇಡೀ ವಿರೋಧ ಪಕ್ಷವನ್ನು ಮಂಡ್ಯದಲ್ಲಿ ಜಮಾವಣೆಗೊಳಿಸಿ ಚಳುವಳಿಯನ್ನು ಉಗ್ರರೂಪಗೊಳಿಸಿದರು. ಆ ಚಳುವಳಿಯಲ್ಲಿ ನಾನು ಸೇರಿದಂತೆ ಹಾಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರೈತಸಂಘದ ಪ್ರೊಫೆಸರ್ ನಂಜುಂಡಸ್ವಾಮಿ ಸೇರಿದಂತೆ ಹಲವು ಘಟಾನುಘಟಿಗಳು ಮಂಡ್ಯದ ಸಿಲ್ವರ್ ಜುಬಿಲಿ ಪಾರ್ಕ್ ಹಾಗೂ ರೈತ ಸಭಾಂಗಣದಲ್ಲಿ ಸರಣಿ ಪ್ರತಿಭಟನಾ ಸಭೆಗಳನ್ನು ಗೌಡರ ನೇತೃತ್ವದಲ್ಲಿ ನಡೆಸಿದ್ದು ಹಚ್ಚಹಸಿರಾಗಿದೆ.

ರಾಜಕೀಯದ ಜತೆಗೆ ಸಾಹಿತ್ಯ ಆಸಕ್ತರಾಗಿದ್ದ ಮಾದೇಗೌಡರು ಮಂಡ್ಯದಲ್ಲಿ 63ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಯಶಸ್ವಿಯಾಗಿ ನಡೆಸಲು ಕಾರಣರಾದರು. ಅಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ನಾನು ಸಂಪೂರ್ಣ ಸಹಕಾರವನ್ನು ಗೌಡರಿಗೆ ನೀಡಿ ಹೆಗಲು ನೀಡಿದ್ದೆ.

ಮಂಡ್ಯ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿಯವರ ನೆನಪುಗಳನ್ನು ಉಳಿಸಲು ಗಾಂಧಿ ಭವನ ನಿರ್ಮಿಸಿ ಗಾಂಧಿ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾಗಿ ಗಾಂಧಿ ಗ್ರಾಮ ನಿರ್ಮಿಸಲು ಇಳಿವಯಸ್ಸಿನಲ್ಲೂ ಶ್ರಮಿಸಿದರು. ಇಷ್ಟೆಲ್ಲಾ ಜನಪರ ಬದ್ಧತೆಯನ್ನು ಹೊಂದಿರುವ ಮಾದೇಗೌಡರ ಸೇವೆ ಮತ್ತಷ್ಟು ಅಗತ್ಯವಿದೆ.

ಭಗವಂತನ ದಯೆಯಿಂದ 95 ವಸಂತಗಳನ್ನು ಪೂರೈಸಿರುವ ಗೌಡರು ಶೀಘ್ರ ಗುಣಮುಖರಾಗಿ ಮತ್ತೆ ನಮ್ಮೊಂದಿಗೆ ಬರೆಯುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ.

-ಎಸ್.ಎಂ.ಕೃಷ್ಣ

Tags: g madegowdakarnatakamaddurmandyasm krishnasm krishna letter to g madegowda
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಆಸ್ಟ್ರೇಲಿಯಾದ ಕನ್ನಡ ಸಂಘದಿಂದ ಗುಡಿಬಂಡೆಗೆ ಬರುತ್ತಿವೆ 4 ಆಮ್ಲಜನಕ ಸಾಂದ್ರಕ

ಆಸ್ಟ್ರೇಲಿಯಾದ ಕನ್ನಡ ಸಂಘದಿಂದ ಗುಡಿಬಂಡೆಗೆ ಬರುತ್ತಿವೆ 4 ಆಮ್ಲಜನಕ ಸಾಂದ್ರಕ

Comments 1

  1. Pingback: ನಾಡು ಕಂಡ ಅನನ್ಯ ರಾಜಕಾರಣಿ ಜಿ.ಮಾದೇಗೌಡರು ಇನ್ನಿಲ್ಲ - cknewsnow

Leave a Reply Cancel reply

Your email address will not be published. Required fields are marked *

Recommended

ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ

ರಾಜ್ಯಸಭೆ ಚುನಾವಣೆ: ರೆಸಾರ್ಟ್‌ ಕಡೆಗೆ ಕಾಂಗ್ರೆಸ್ ಶಾಸಕರು

2 years ago
ಧನ್ವಂತರಿ ಭಾರತೀಯರ ಮೊದಲ ವೈದ್ಯ

ಧನ್ವಂತರಿ ಭಾರತೀಯರ ಮೊದಲ ವೈದ್ಯ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ