• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಅನ್‌ಲಾಕ್‌ ಆದ ಮೇಲೆ ಹೆಚ್ಚುತ್ತಿದೆ ಅಪರಾಧ: ಗೃಹ ಸಚಿವ ಬೊಮ್ಮಾಯಿ

cknewsnow desk by cknewsnow desk
July 15, 2021
in COVID-19, CRIME, STATE
Reading Time: 1 min read
0
ಅನ್‌ಲಾಕ್‌ ಆದ ಮೇಲೆ ಹೆಚ್ಚುತ್ತಿದೆ ಅಪರಾಧ: ಗೃಹ ಸಚಿವ ಬೊಮ್ಮಾಯಿ
935
VIEWS
FacebookTwitterWhatsuplinkedinEmail

ಪೊಲೀಸ್‌ ವರ್ಗಕ್ಕೆ ಲಂಚಕ್ಕೆ ಕಡಿವಾಣ & ಸಿಎಂ ರೇಸ್‌ನಲ್ಲಿ ನಾನು ಇಲ್ಲಎಂದ ಬಸವರಾಜ ಬೊಮ್ಮಾಯಿ

ಮೈಸೂರು: ಲಾಕ್‌ಡೌನ್ ವೇಳೆ ಅಪರಾಧ ಪ್ರಕರಣಗಳು ಕಡಿಮೆಯಾಗಿತ್ತು. ಆದರೆ ಅನ್‌ಲಾಕ್ ಬಳಿಕ ದರೋಡೆ, ಕಳ್ಳತನ, ಸರಗಳ್ಳತನ ಪ್ರಕರಣಗಳು ಹೆಚ್ಚಾಗಿವೆ ಎಂದು ಸ್ವತಃ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೇ ತಿಳಿಸಿದ್ದಾರೆ.

ಮೈಸೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್‌ಡೌನ್ ಮುಗಿದ ಬಳಿಕ ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಲಾಕ್‌ಡೌನ್ ಸಂದರ್ಭದಲ್ಲಿ ಕ್ರೈಂ ರೇಟ್ ಕಡಿಮೆ ಆಗಿತ್ತು. ಆದರೆ ಅನ್‌ಲಾಕ್ ಬಳಿಕ ದರೋಡೆ, ಕಳ್ಳತನ, ಸರಗಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಮೈಸೂರು ನಗರಕ್ಕೆ ಸೀಮಿತವಾಗಿದ್ದ ಸರಗಳ್ಳತನ ಈಗ ಗ್ರಾಮಾಂತರ ಪ್ರದೇಶದಲ್ಲೂ ನಡೆಯುತ್ತಿದೆ ಎಂದರು.

ಸಿಂಥೆಟಿಕ್ ಡ್ರಗ್ಸ್ ತಡೆಗಟ್ಟುವ ಚಾಲೆಂಜ್ ನಮಗಿದೆ. 50 ಕೋಟಿಯಷ್ಟು ಡ್ರಗ್ ನಾಶ ಮಾಡಿದ್ದೇವೆ. 5 ವರ್ಷದಷ್ಟು ಡ್ರಗ್ ಕೇವಲ ಒಂದೇ ವರ್ಷದಲ್ಲಿ ಸಂಗ್ರಹವಾಗಿದೆ. ಸಿಂಥೆಟಿಕ್ ಡ್ರಗ್ಸ್ ತಡೆಗಟ್ಟುವ ಕೆಲಸವಾಗುತ್ತಿದೆ. ಡ್ರಗ್ಸ್ ವಿದೇಶದಿಂದ ಡಾರ್ಕ್ ವೆಬ್ʼನಲ್ಲಿ ಬರುತ್ತಿವೆ. ಬಹಳ ಸೆಕ್ಯುರಿಟಿನಲ್ಲಿ ಬರುತ್ತಿದೆ. ಇದನ್ನು ಕರ್ನಾಟಕ ಪೊಲೀಸರು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ್ದಾರೆ. ಬಹಳಷ್ಟು ಸಾರಿ ಸಾಮಾನ್ಯ ಪೋಸ್ಟ್ʼನಲ್ಲಿ ಡ್ರಗ್ಸ್ ಸರಬರಾಜಾಗುತ್ತದೆ ಎಂದ ಅವರು; ಸ್ಯಾಂಡಲ್‌ವುಡ್ ಡ್ರಗ್ ಕೇಸ್ ಸಂಬಂಧಿಸಿದಂತೆ ವಿದೇಶಿಗರ ಬಂಧನವಾಗಿದೆ. ಕಳೆದ ವರ್ಷದಲ್ಲಿ 15ರಿಂದ 20 ಮಂದಿ ಬಂಧನವಾಗಿದೆ. ಈ ಪೈಕಿ ಆಫ್ರಿಕನ್ನರೇ ಹೆಚ್ಚಿದ್ದಾರೆ ಎಂದರು.

ಪೊಲೀಸರಿಗೆ ಸೌಕರ್ಯಗಳು

ಪೊಲೀಸ್ ಮಕ್ಕಳಿಗೆ ಸ್ಕಾಲರ್‌ಶಿಪ್ ಕುರಿತು ಪ್ರತಿಕ್ರಿಯಿಸಿ ಪೊಲೀಸ್ ಮಕ್ಕಳಿಗೆ ಹಿಂದಿನಿಂದಲೂ ಸ್ಕಾಲರ್‌ಶಿಪ್ ವ್ಯವಸ್ಥೆ ಇದೆ. ಈಗ ಇನ್ನಷ್ಟು ಹೆಚ್ಚಿನ ಅನುದಾನ ನೀಡಲು ತೀರ್ಮಾನ ಮಾಡಿದ್ದೇವೆ. ಎಸ್‌ಎಸ್‌ಎಲ್‌ಸಿ ಮತ್ತು ಅದಕ್ಕಿಂತ ಉನ್ನತ ವ್ಯಾಸಂಗಕ್ಕೆ ವಿದ್ಯಾರ್ಥಿ ವೇತನ ಸಿಗಲಿದೆ. ಈ ಯೋಜನೆ ಮಂಗಳವಾರದಿಂದ (ಜುಲೈ ೧೪) ಆರಂಭ ಆಗಿದೆ. ಪೊಲೀಸರಿಗೆ ವಸತಿ ಗೃಹಗಳ ಸೌಕರ್ಯ ಒದಗಿಸಬೇಕಿದೆ. ಈಗಾಗಲೇ ಶಿಥಿಲಾವಸ್ಥೆಯಲ್ಲಿರುವ ವಸತಿ ಗೃಹಗಳನ್ನು ಗುರುತಿಸಲಾಗಿದೆ. ರಾಜ್ಯಾದ್ಯಂತ ಸುಮಾರು 100 ಹೊಸ ಕಟ್ಟಡಗಳ ನಿರ್ಮಾಣಕ್ಕೂ ಚಿಂತನೆ ನಡೆಸಿದ್ದೇವೆ ಎಂದರು ಬೊಮ್ಮಾಯಿ.

ಕೊರೋನಾ ನಿಯಂತ್ರಣ ವೇಳೆಯಲ್ಲಿ ಇಲಾಖೆಯ ಪೊಲೀಸರು ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಪೈಕಿ 3ರಿಂದ 4ಸಾವಿರ ಮಂದಿ ಪೊಲೀಸರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಪೈಕಿ ಎಲ್ಲರ ಆರೋಗ್ಯದ ಕಡೆಗೂ ಗಮನವಹಿಸಲಾಗುತ್ತಿದೆ. ಡೆತ್ ಅದವರ ಸಂಖ್ಯೆ ಕಡಿಮೆ ಇದೆ. ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ  30ಲಕ್ಷ ಪರಿಹಾರ ನೀಡಲಾಗುತ್ತಿದೆ. ಪೊಲೀಸರ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ವಹಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಪೊಲೀಸ್‌ ವರ್ಗಕ್ಕೆ ಲಂಚಕ್ಕೆ ಕಡಿವಾಣ

ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆಗೆ ಲಂಚ ಪಡೆಯುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಂತಹ ಕೆಲಸಕ್ಕೆಲ್ಲ ಇದೀಗ ಕಡಿವಾಣ ಹಾಕಲಾಗುತ್ತಿದೆ. ಇದು ಹಳೆಯ ಪದ್ದತಿ. ಆದರೆ ಇದಕ್ಕೆ ನಮ್ಮ ಸರಕಾರ ಕಡಿವಾಣ ಹಾಕಿದೆ. ಪೊಲೀಸ್ ಬೋರ್ಡ್ ಬಂದಮೇಲೆ ಹಳೆಯ ಮಾದರಿಯ ವರ್ಗಾವಣೆಯಲ್ಲಿ ವ್ಯವಹಾರ ನಡೆಯೋದಿಲ್ಲ ಎಂದರು ಅವರು.

ನಾನು ಸಿಎಂ ರೇಸ್‌ನಲ್ಲಿ ಇಲ್ಲ

ಸಿಎಂ ರೇಸ್ ಕುರಿತು ಪ್ರತಿಕ್ರಿಯಿಸಿ, ನಾನು ಸಿಎಂ ರೇಸ್‌ನಲ್ಲಿ ಇಲ್ಲ. ನಾನು ಈಗ ಹೋಂ ಮಿನಿಸ್ಟರ್, ಹೋಂನಲ್ಲೇ ಇದ್ದೇನೆ. ಹೋಂನಲ್ಲೇ ಇರುತ್ತೇನೆ, ಇಷ್ಟೇ ಸಾಕು. ನಾನು ಏನೋ ಹೇಳಿ, ನೀವು ಅದಕ್ಕೆ ಇನ್ನೂ ಯಾರು ಯಾರದೋ ಪ್ರತಿಕ್ರಿಯೆ ಪಡೆಯುತ್ತೀರಿ ಎಂದು‌ ಹಾಸ್ಯ ಚಟಾಕಿ ಹಾರಿಸಿದರು ಬೊಮ್ಮಾಯಿ.

Tags: Bengalurucovid19crime rate spikehome minister basavaraj bommaikarnatakakarnataka lockdownmysoreunlock
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಅನುಮತಿ ಇಲ್ಲದೇ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದಾರೆ:  ಸುಮಲತಾ ಆರೋಪ

ಅನುಮತಿ ಇಲ್ಲದೇ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದಾರೆ: ಸುಮಲತಾ ಆರೋಪ

Leave a Reply Cancel reply

Your email address will not be published. Required fields are marked *

Recommended

ಡಾ.ಮನಮೋಹನ್‌ ಸಿಂಗ್‌ ಆರೋಗ್ಯ ಚೇತರಿಕೆ

ಡಾ.ಮನಮೋಹನ್‌ ಸಿಂಗ್‌ ಆರೋಗ್ಯ ಚೇತರಿಕೆ

5 years ago
ಇರಾಕಷ್ಟೇ ಅಲ್ಲ, ಇಡೀ ಕೊಲ್ಲಿಯನ್ನು ಎರಡೂವರೆ ದಶಕ ಕಾಲ ನಿಗಿನಿಗಿ ಕೆಂಡದ ಮೇಲೆ ನಿಲ್ಲಿಸಿಟ್ಟಿದ್ದ ಸದ್ದಾಂ ಹುಸೇನ್‌ ಎಂಬ ಸರ್ವಾಧಿಕಾರಿ, ವಿಲಕ್ಷಣ ವ್ಯಕ್ತಿ ಹೀಗಿದ್ದ ನೋಡಿ!!!

ಇರಾಕಷ್ಟೇ ಅಲ್ಲ, ಇಡೀ ಕೊಲ್ಲಿಯನ್ನು ಎರಡೂವರೆ ದಶಕ ಕಾಲ ನಿಗಿನಿಗಿ ಕೆಂಡದ ಮೇಲೆ ನಿಲ್ಲಿಸಿಟ್ಟಿದ್ದ ಸದ್ದಾಂ ಹುಸೇನ್‌ ಎಂಬ ಸರ್ವಾಧಿಕಾರಿ, ವಿಲಕ್ಷಣ ವ್ಯಕ್ತಿ ಹೀಗಿದ್ದ ನೋಡಿ!!!

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ