• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಗುಡಿಬಂಡೆ ತಾಲೂಕಿನಲ್ಲಿ SSLC ಪರೀಕ್ಷೆ ಬರೆಯಲಿದ್ದಾರೆ 742 ವಿದ್ಯಾರ್ಥಿಗಳು

cknewsnow desk by cknewsnow desk
July 15, 2021
in CHIKKABALLAPUR, NEWS IN USE
Reading Time: 2 mins read
0
ಗುಡಿಬಂಡೆ ತಾಲೂಕಿನಲ್ಲಿ SSLC ಪರೀಕ್ಷೆ ಬರೆಯಲಿದ್ದಾರೆ 742 ವಿದ್ಯಾರ್ಥಿಗಳು
1k
VIEWS
FacebookTwitterWhatsuplinkedinEmail

ಪರೀಕ್ಷೆಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳ ಪರಿಶ್ರಮ; ಸಿದ್ಧತೆ, ಮುನ್ನಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ

by GS Bharath Gudibande

ಗುಡಿಬಂಡೆ: ಜುಲೈನಲ್ಲಿ ನಡೆಯಲಿರುವ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಶಿಕ್ಷಕರು ಹಗಲಿರುಳು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು, ಪರೀಕ್ಷೆಗೆ ಪೂರ್ವ ಸಿದ್ಧತೆಗಳನ್ನು ಭರದಿಂದ ಮಾಡಿಕೊಳ್ಳುತ್ತಿದ್ದೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ ಸಿಕೆನ್ಯೂಸ್ ನೌ ಗೆ ತಿಳಿಸಿದರು.

ಸರಕಾರ ಮತ್ತು ಶಿಕ್ಷಣ ಇಲಾಖೆ ಎಸ್‌ಒಪಿ ಬಿಡುಗಡೆ ಮಾಡಿದ್ದು, ಇದರ ಆಧಾರದ ಮೇಲೆ ತಾಲೂಕಿನಲ್ಲಿ ಪರೀಕ್ಷಾ ಕೇಂದ್ರಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ವಿಶೇಷ ಕೊಠಡಿಗಳು ಸೇರಿದಂತೆ ಎಲ್ಲವನ್ನೂ ಪರಿಶೀಲಿಸಿ ತಯಾರಿಯನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ವೆಂಕಟೇಶಪ್ಪ ಅವರು ನೀಡಿದ ಮಾಹಿತಿ ಹೀಗಿದೆ;

ಪರೀಕ್ಷೆಗೆ ಹಾಜರಾಗುವ ಶಿಕ್ಷಕರಿಗೆ ಲಸಿಕೆ ಕಡ್ಡಾಯ

ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳು ತಾಲೂಕು ಆಡಳಿತ ಹಾಗೂ ತಾಲೂಕು ಆರೋಗ್ಯ ಇಲಾಖೆಯ ಸಹಕಾರದಿಂದ ಕೋವಿಡ್ ಲಸಿಕೆ ಪಡೆಯಬೇಕೆಂದು ಎಸ್ಒಪಿಯಲ್ಲಿ ಸೂಚಿಸಲಾಗಿದೆ. ಪರೀಕ್ಷೆ ಆರಂಭದೊಳಗೆ ಮೊದಲ ಡೋಸ್ ಲಸಿಕೆಯನ್ನು ಹಾಜರಾಗುವ ಎಲ್ಲಾ ಶಿಕ್ಷಕರು ತಪ್ಪದೇ ಪಡೆದಿರಬೇಕು. ಈ ಬಗ್ಗೆ ಎಲ್ಲ ಶಿಕ್ಷಕರಿಗೆ ಸೂಚಿಸಲಾಗಿದೆ.

ಪರೀಕ್ಷಾ ಕೊಠಡಿ ಸ್ಯಾನಿಟೈಸ್

ಪರೀಕ್ಷಾ ಕೊಠಡಿ, ಶೌಚಾಲಯ ಸೇರಿ ಎಲ್ಲವನ್ನೂ ತಪ್ಪದೇ ಸ್ಯಾನಿಟೈಸ್ ಮಾಡಬೇಕು. ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಹಾಗೂ ದೈಹಿಕ ಅಂತರ ಕಾಪಾಡಿಕೊಳ್ಳವಂತೆ ಪರೀಕ್ಷಾ ಮೇಲ್ವಿಚಾರಕರು ನೋಡಿಕೊಳ್ಳಬೇಕು.

1 ಪರೀಕ್ಷಾ ಕೇಂದ್ರಕ್ಕೆ 100 ವಿದ್ಯಾರ್ಥಿಗಳು

ಪ್ರತಿ ಒಂದು ಪರೀಕ್ಷಾ ಕೊಠಡಿಗೆ 12 ವಿದ್ಯಾರ್ಥಿಗಳು, ಒಂದು ಡೆಸ್ಕ್ʼಗೆ ಒಬ್ಬ ವಿದ್ಯಾರ್ಥಿ ಮಾತ್ರವೇ ಕೂರಬೇಕು. ವಿದ್ಯಾರ್ಥಿಗಳು ತಮ್ಮ ಮನೆಯಿಂದ ನೀರಿನ ಬಾಟಲ್ ಮತ್ತು ಊಟದ ಡಬ್ಬಿ ತರುವುದಕ್ಕೆ ಅವಕಾಶ ಕಲ್ಪಿಸುವುದು. ಅಲ್ಲದೆ, ಒಂದು ಪರೀಕ್ಷಾ ಕೇಂದ್ರದಲ್ಲಿ ನೂರು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ.

ಪ್ರತಿ ಕೇಂದ್ರದಲ್ಲಿ ವಿಶೇಷ ಕೊಠಡಿ

ವಿದ್ಯಾರ್ಥಿಗಳಲ್ಲಿ ಕೆಮ್ಮು, ನೆಗಡಿ, ಜ್ವರದಂಥ ಲಕ್ಷಣಗಳಿದ್ದರೆ ಅಥವಾ ವಿದ್ಯಾರ್ಥಿಗಳಲ್ಲಿ ಈ ತರಹದ ಲಕ್ಷಣಗಳು ಕಂಡು ಬಂದರೆ ಅಂಥ ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ.

ಕೋವಿಡ್ ಕೇರ್ ಸೆಂಟರ್

ಪರೀಕ್ಷಾ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟೀವ್ ಕಂಡು ಬಂದಿದ್ದರೆ, ಅಂತಹ ವಿದ್ಯಾರ್ಥಿಗಳನ್ನು ಕೋವಿಡ್ ಕೇರ್ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷಾ ಕೇಂದ್ರ ಹಾಗೂ ಒಟ್ಟು ವಿದ್ಯಾರ್ಥಿಗಳು

ಕೋವಿಡ್ ಕಾರಣ ತಾಲೂಕಿನಲ್ಲಿ ಈ ಬಾರಿ ಒಟ್ಟು 7 ಕೇಂದ್ರಗಳನ್ನು ಮಾಡಲಾಗಿದೆ. ಗುಡಿಬಂಡೆ ಪಟ್ಟಣದಲ್ಲಿ 2 ಪರೀಕ್ಷಾ ಕೇಂದ್ರ ಹಾಗೂ ಸೋಮೇನಹಳ್ಳಿ, ಹಂಪಸಂದ್ರ, ಜೆ.ಪಿ.ನಗರ ಆದರ್ಶ ವಿದ್ಯಾಲಯ, ಹಾಗೂ ಬೀಚಗಾನಹಳ್ಳಿ ಪ್ರೌಢಶಾಲೆಗಳಲ್ಲಿ ಮುಖ್ಯ ಪರೀಕ್ಷೆಯನ್ನು 732 ವಿದ್ಯಾರ್ಥಿಗಳು, 1 ಪುನರಾವರ್ತಿತ,  9 ವಲಸೆ ಮಕ್ಕಳು ಸೇರಿ 742 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆಗೆ ತಾಲೂಕಿನ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆಗೆ ಬರುವಾಗ ಸ್ಯಾನಿಟೈಸ್, ಥರ್ಮಲ್ ಸ್ಕ್ಯಾನಿಂಗ್, ಸಾಮಾಜಿಕ ಅಂತರ, ಮಾಸ್ಕ್ ಸೇರಿ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ. ಪರೀಕ್ಷಾ ಹಿತದೃಷ್ಟಿಯಿಂದ 128 ಶಿಕ್ಷಕರನ್ನು ಕೊಠಡಿ ಮೇಲ್ವಿಚಾರಕ ಹಾಗೂ ಒಟ್ಟು 250 ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. ವಿದ್ಯಾರ್ಥಿಗಳ ಪರೀಕ್ಷೆಗಾಗಿ ಶ್ರಮಿಸುತ್ತಿರುವ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಧನ್ಯವಾದಗಳು.

ವೆಂಕಟೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಗುಡಿಬಂಡೆ

ವಿದ್ಯಾರ್ಥಿಗಳು ಭಯವಿಲ್ಲದ ಪರೀಕ್ಷೆ ಬರೆಯಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಪೋಷಕರು ತಮ್ಮ ಮಕ್ಕಳನ್ನು ಮುಕ್ತವಾಗಿ ಕರೆದುಕೊಂಡು ಪರೀಕ್ಷೆ ಬರೆಸಲು ಮನವಿ, ಪರೀಕ್ಷೆ ನಡೆಯುವ ಕೇಂದ್ರಗಳ ಸಮೀಪ 200 ಮೀ ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ.

ಚಂದ್ರಶೇಖರ್, ನೋಡಲ್ ಅಧಿಕಾರಿ ಹಾಗೂ ಇಸಿಒ ಕೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಗುಡಿಬಂಡೆ

Tags: chikkaballapuracovid19gudibandekarnataka fight back coronasslc examination
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

by cknewsnow desk
April 28, 2024
0

ತಜ್ಞರ ಶಿಫಾರಸು ಒಪ್ಪಿಕೊಂಡ ರಾಜ್ಯ ಸರಕಾರ

Next Post
1 ಕೋಟಿ ಆರ್ಥಿಕ ಅವಕಾಶಗಳ ಸೃಷ್ಟಿಗೆ ʼಮಿಷನ್‌ ಯುವ ಸಮೃದ್ಧಿʼ

1 ಕೋಟಿ ಆರ್ಥಿಕ ಅವಕಾಶಗಳ ಸೃಷ್ಟಿಗೆ ʼಮಿಷನ್‌ ಯುವ ಸಮೃದ್ಧಿʼ

Leave a Reply Cancel reply

Your email address will not be published. Required fields are marked *

Recommended

ಪುನೀತ್‌ ಈಗ ಕರ್ನಾಟಕ ರತ್ನ

ಅಪ್ಪು ಆದರ್ಶಗಳನ್ನು ನಮ್ಮದಾಗಿಸಿಕೊಳ್ಳೋಣ

3 years ago
ಮರೆಯಬೇಡಿ ಮಕ್ಕಳ ಲಸಿಕೆ

ಹನಿ ರಕ್ತವೂ ಅಮೃತಸ್ವರೂಪ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ