• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ನಂದಿಬೆಟ್ಟ ಪ್ರವೇಶಕ್ಕೆ ನಿರ್ಬಂಧ; ಜುಲೈ 19ರಿಂದ ಹೊಸ ನಿಯಮ

cknewsnow desk by cknewsnow desk
July 15, 2021
in STATE
Reading Time: 2 mins read
0
ರೂಪಾಂತರಗೊಂಡ ಕೊರೊನ ವೈರಸ್; ಹೊಸ ವರ್ಷಕ್ಕೆ ಮೂರು ದಿನ ನಂದಿ ಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ಇಲ್ಲ
982
VIEWS
FacebookTwitterWhatsuplinkedinEmail

ಏನೀ ಹೊಸ ನಿಯಮ? ಇಲ್ಲಿದೆ ಪೂರ್ಣ ವಿವರ

by M Krishnappa Chikkaballapura

ಚಿಕ್ಕಬಳ್ಳಾಪುರ: ಪರಿಸರ ಸಂರಕ್ಷಣೆ, ವಾಹನ ದಟ್ಟಣೆ ಹಾಗೂ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಜುಲೈ 19ರಿಂದ ನಂದಿಬೆಟ್ಟದ ವಾಹನ ನಿಲ್ದಾಣದಲ್ಲಿನ ವಾಹನ ನಿಲುಗಡೆ ಸಾಮಥ್ಯಕ್ಕನುಗುಣವಾಗಿ ಪ್ರವಾಸಿಗರಿಗೆ ಅವಕಾಶ ನೀಡಲಾಗುವುದು.

ಸಪ್ತಗಿರಿಗಳ ಧಾಮ, ಸಪ್ತ ನದಿಗಳ ಉಗಮ ಸ್ಥಾನವಾದ ನಂದಿಬೆಟ್ಟವನ್ನು ವೀಕ್ಷಿಸಲು ಜಿಲ್ಲಾಡಳಿತ ರೂಪಿಸಲಿರುವ ನೂತನ ನಿಯಮ ರೂಪಿಸಲಾಗಿದೆ. ಪ್ರವಾಸಿಗರು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು;

  • ಜಿಲ್ಲಾಧಿಕಾರಿ ಆರ್.ಲತಾ

ಕೋವಿಡ್-19 ಲಾಕ್‌ಡೌನ್ ಪ್ರಯುಕ್ತ ಏಪ್ರಿಲ್ 27ರಿಂದ ಜಾರಿಯಲ್ಲಿದ್ದ ನಿರ್ಬಂಧವನ್ನು ತೆರೆವುಗೊಳಿಸಿ ಜೂನ್ 21ರಿಂದ ನಂದಿಬೆಟ್ಟಕ್ಕೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶಕ್ಕೆ ಅನುಮತಿ ನೀಡಿದ್ದರಿಂದ ಜುಲೈ 10ರಂದು 2858 ಮತ್ತು ಜುಲೈ 11ರಂದು 4895 ಪ್ರವಾಸಿಗರು ಭೇಟಿ ನೀಡಿದ್ದರು.

ಜನಸಂದಣಿ ದಿನೇದಿನೆ ಹೆಚ್ಚಾಗುತ್ತಿರುವುದನ್ನು ಗಮನಿಸಿ ಜುಲೈ 7ರಂದು ವಾರಾಂತ್ಯದ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿತ್ತು. ʼಬಡವರ ಊಟಿʼ ಎಂದೇ ಹೆಸರಾಗಿರುವ ನಂದಿಬೆಟ್ಟವೂ ಬೆಂಗಳೂರು ರಾಜಧಾನಿಗೆ ಹತ್ತಿರವಿರುದರಿಂದ ಹೆಚ್ಚೆಚ್ಚು ಪ್ರವಾಸಿಗರು ಬರುತ್ತಾರೆ. ನಂದಿಬೆಟ್ಟದ ಮೇಲೆ ಮುಂದಾಗಬಹುದಾದ ಜನಸಂದಣಿಯನ್ನು ತಡೆಗಟ್ಟಿ ಸುರಕ್ಷಿತವಾಗಿ ಪ್ರವಾಸಿಗರು ಬಂದು ಹೋಗಲು ವೈಜ್ಞಾನಿಕವಾಗಿ ವ್ಯವಸ್ಥಿತ ಯೋಜನೆಯನ್ನು ರೂಪಿಸುವ ಉದ್ದೇಶ ಹೊಂದಿದೆ.

ಈ ಹಿನ್ನಲೆಯಲ್ಲಿ ಜುಲೈ 19ರಿಂದ ವಾಹನ ನಿಲುಗಡೆಗೆ ಅವಕಾಶವಿರುವಷ್ಟು ಮಂದಿಯನ್ನು ಮಾತ್ರ ಪ್ರವೇಶ ಪಾಸ್ ನೀಡಿ ನಂದಿಬೆಟ್ಟಕ್ಕೆ ಭೇಟಿ ನೀಡಲು ಯೋಜಿಸಲಾಗಿದೆ. ಅದಕ್ಕೆ ಪ್ರವಾಸಿಗರು ಸಹಕರಿಸಬೇಕು. ಆರಂಭದಲ್ಲಿ ಈ ಪ್ರಕ್ರಿಯೆಯು ಒಂದೆರಡು ವಾರ ಭೌತಿಕವಾಗಿ ನಡೆಯಲಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಆನ್‌ಲೈನ್ ಮೂಲಕ ನಿರ್ವಹಿಸಲಾಗುವುದು.

ಶೇ.50ರಷ್ಟು ಪಾಸ್ʼಗಳನ್ನು ಆನ್‌ಲೈನ್‌ನಲ್ಲಿ ಶೇ.50 ಪಾಸ್ʼಗಳನ್ನು ಬೆಟ್ಟಕ್ಕೆ ಪ್ರವೇಶಿಸುವ ಮುಖ್ಯದ್ವಾರದಲ್ಲಿ ನೀಡಲಾಗುತ್ತದೆ. ಸಾರ್ವಜನಿಕರು ಕೋವಿಡ್ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಪಾಲಿಸಿ ಪಾಸ್ ಪಡೆಯಬೇಕು. ಆರಂಭದಲ್ಲಿ ತುಸು ಗೊಂದಲವಾದರೂ ಸಹ ಮುಂದಿನ ದಿನಗಳಲ್ಲಿ ಈ ರೀತಿಯ ವ್ಯವಸ್ಥಿತ ವೀಕ್ಷಣೆಯಿಂದ ಪ್ರವಾಸಿತಾಣವನ್ನು ವೈಜ್ಞಾನಿಕವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಅನುಕೂಲವಾಗಲಿದೆ.

ಪ್ರಸ್ತುತ ನಂದಿ ಗಿರಿಧಾಮದ ಮೇಲಿರುವ ವಾಹನ ನಿಲ್ದಾಣದಲ್ಲಿ ಪ್ರಸ್ತುತ 310 ಕಾರು, 550 ದ್ವಿಚಕ್ರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಇದೆ. ಬೆಟ್ಟದ ಕೆಳಭಾಗದಲ್ಲಿ 350 ಕಾರು ಹಾಗೂ 200 ದ್ವಿಚಕ್ರ ವಾಹನ ಪಾರ್ಕಿಂಗ್ ಮಾಡಬಹುದಾಗಿದೆ. ಈ ನಿಲುಗಡೆಯಲ್ಲಿ ಪಾರ್ಕ್ ಮಾಡಲು ವ್ಯವಸ್ಥೆ ಇರುವ ವಾಹನಗಳಲ್ಲಿನ ಪ್ರವಾಸಿಗರಿಗೆ ಮಾತ್ರ ಪಾಸ್ ವಿತರಿಸಿ ನಂದಿಬೆಟ್ಟ ವೀಕ್ಷಿಸಲು ಅನುಮತಿ ನೀಡಲಾಗುವುದು. ಈ ಕುರಿತು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಅವರ ನಿರ್ದೇಶನದಂತೆ ಈ ನಿರ್ಧಾರಕ್ಕೆ ಬರಲಾಗಿದೆ.

  • courtesy: Namma chikkaballapura Facebook page

ತಪ್ಪಲಿನಲ್ಲಿ 7 ಎಕರೆ ಜಾಗದಲ್ಲಿ ಪಾರ್ಕಿಂಗ್‌ ವ್ಯವಸ್ಥೆ

ಕೆಲವೊಂದು ಹೊಸ ನಿಯಮಗಳನ್ನು ಜಾರಿಗೆ ತರುವ ಮೂಲಕ ನಂದಿ ಪ್ರವಾಸ ತಾಣವನ್ನು ಸಂರಕ್ಷಿಸುವ ಜೊತೆಗೆ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ. ಇದಲ್ಲದೆ ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಹಯೋಗದೊಂದಿಗೆ 7 ಎಕರೆ ಜಮೀನು ವ್ಯಾಪ್ತಿಯಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ಅಭಿವೃದ್ಧಿ ಮಾಡಿ ಅಲ್ಲಿಂದ ಬಸ್‌ಗಳ ಮೂಲಕ ಪ್ರವಾಸಿರನ್ನು ನಂದಿ ಗಿರಿಧಾಮಕ್ಕೆ ಕರೆದೊಯ್ಯಲು ನೂತನ ವ್ಯವಸ್ಥೆಯನ್ನು ಮಾಡಲಾಗುವುದು. ಇದರಿಂದ ಪರಿಸರ ಸಂರಕ್ಷಣೆ ಮಾಡುವುದರೊಂದಿಗೆ ವಾಹನ ದಟ್ಟಣೆ ಮತ್ತು ಜನಸಂದಣಿಯನ್ನು ನಿಯಂತ್ರಿಸಲು ಶಾಶ್ವತ ಪರಿಹಾರವಾಗಲಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಜುಲೈ 14 ರಿಂದಲೇ ಹಲವು ನೂತನ ಕ್ರಮಗಳನ್ನು ಕೈಗೊಂಡಿದೆ.

ರೋಪ್ ವೇ ನಿರ್ಮಾಣಕ್ಕೆ ಅಗತ್ಯಕ್ರಮ

ನಂದಿ ಗಿರಿಧಾಮದಲ್ಲಿ ರೋಪ್ ವೇ ನಿರ್ಮಾಣ ಸಂಬಂಧ ಸರಕಾರಿ ಸಂಸ್ಥೆಯಾದ ಮೇ 11 ಐಡೆಕ್ ಸಂಸ್ಥೆ ಹಾಗೂ ಖಾಸಗಿ ಸಂಸ್ಥೆಯಾದ ಬಾಂಬೆ ರೋಪ್ ವೇ ಸಂಸ್ಥೆಗಳಿಂದ ಸ್ಥಳ ಪರಿಶೀಲನೆ ಮಾಡಲಾಗುತ್ತಿದೆ. ಈಗಾಗಲೇ ಮಣ್ಣಿನ ಗುಣಮಟ್ಟ ಪರೀಕ್ಷೆ, ಸ್ಥಳೀಯ ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಹಾಗೂ ಡ್ರೋಣ್ ಸರ್ವೆ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ರೋಪ್ ವೇ ಆದಂತಹ ಸಂದರ್ಭದಲ್ಲಿಯೂ ಸಹ ಈಗ ನಿರ್ಮಿಸುತ್ತಿರುವ ಪಾರ್ಕಿಂಗ್ ವ್ಯವಸ್ಥೆಯನ್ನು ಬಳಸಿಕೊಳ್ಳಲು ಅನುಕೂಲವಾಗಲಿದೆ.

ನಂದಿಗಿರಿ ಪ್ರವಾಸ ಸ್ವಲ್ಪ ದಿನ ಮುಂದೂಡಿ

ಜುಲೈ 19ರಿಂದ ಹೊಸ ನಿಯಮಗಳನ್ನು ಜಾರಿಗೆ ತರುತ್ತಿರುವ ಹಿನ್ನಲೆಯಲ್ಲಿ ಹೊಸ ವ್ಯವಸ್ಥೆ ಸಮರ್ಪಕವಾಗಿ ಜಾರಿಯಾಗುವವರೆಗೆ ಹಾಗೂ ವಾರಾಂತ್ಯದಲ್ಲಿ ಪ್ರವಾಸಿಗರು ನಂದಿಬೆಟ್ಟ ಪ್ರವೇಶವನ್ನು ಸ್ವಲ್ಪ ದಿನದ ಮಟ್ಟಿಗೆ ಮುಂದೂಡಿ. ಬೆಳಗಿನ ಜಾವ ಕಾಯುವಂತದ್ದು, ಜನಸಂದಣಿ, ವಾಹನದಟ್ಟಣೆ ಮಾಡುವಂತದ್ದನ್ನು ಮಾಡಬೇಡಿ. ಪಾಸ್ ಸಿಕ್ಕಿದವರು ಮಾತ್ರವೇ ನಂದಿಬೆಟ್ಟ ಪ್ರವೇಶ ಮಾಡಿ. ಇನ್ನು ಮುಂದೆ ವಾಹನಗಳಿಗೂ ಮತ್ತು ಪ್ರವಾಸಿಗರಿಗೂ ಪ್ರತ್ಯೇಕವಾಗಿ ಪಾಸ್ ನೀಡಲಾಗುವುದು. ಭೇಟಿ ನೀಡಿದ ಪ್ರವಾಸಿಗರು ಪಾಸ್ʼಗಳನ್ನು ಹಿಂತಿರುಗಿಸಬೇಕು. ಈ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ. ಈ ವ್ಯವಸ್ಥೆಯು ಸ್ವಲ್ಪ ದಿನದ ಮಟ್ಟಿಗೆ ಭೌತಿಕವಾಗಿ ನಡೆಯಲಿದೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಅಭಿವೃದ್ಧಿಪಡಿಸಿ ಆನ್‌ಲೈನ್ʼನಲ್ಲಿ ಶೇ.50 ಮತ್ತು ಭೌತಿಕವಾಗಿ ಶೇ.50ರಷ್ಟು ಪಾಸ್ʼಗಳನ್ನು ನೀಡುವ ವ್ಯವಸ್ಥೆ ಮಾಡಲಾಗುವುದು.

ಪತ್ರಿಕಾಗೋಷ್ಠಿಯಲ್ಲಿ ತೋಟಗಾರಿಕೆ ಇಲಾಖೆಯ ವಿಶೇಷ ಅಧಿಕಾರಿ ಗೋಪಾಲ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಜಿತೇಂದ್ರನಾಥ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

  • ಈ ಸುದ್ದಿ ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ನಂದಿಬೆಟ್ಟಕ್ಕೆ ರೋಪ್ ವೇ; ಜುಲೈ 23ಕ್ಕೆ ಸಚಿವ ಸಿ.ಪಿ.ಯೋಗೇಶ್ವರ ಸ್ಥಳ ಪರಿಶೀಲನೆ
Tags: chikkaballapurakarnatakaKarnataka tourismnand hill stationNandi hillsnew rules for tourists
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ರಾಜ್ಯದಲ್ಲಿ 28,000 ಕೋಟಿ ರೂ. ಮೊತ್ತದ ಹೂಡಿಕೆಗೆ ಒಪ್ಪಂದ

ರಾಜ್ಯದಲ್ಲಿ 28,000 ಕೋಟಿ ರೂ. ಮೊತ್ತದ ಹೂಡಿಕೆಗೆ ಒಪ್ಪಂದ

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆಯಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ

ಗುಡಿಬಂಡೆಯಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ

5 years ago
ದಸರಾ ಉದ್ಘಾಟನೆಗೆ ಮುನ್ನ ಚಾಮುಂಡೇಶ್ವರಿ ಅಮ್ಮನವರಲ್ಲಿ ಮೂರು ಬೇಡಿಕೆ ಇಟ್ಟ ಡಾ.ಸಿ.ಎನ್.ಮಂಜುನಾಥ್

ದಸರಾ ಉದ್ಘಾಟನೆಗೆ ಮುನ್ನ ಚಾಮುಂಡೇಶ್ವರಿ ಅಮ್ಮನವರಲ್ಲಿ ಮೂರು ಬೇಡಿಕೆ ಇಟ್ಟ ಡಾ.ಸಿ.ಎನ್.ಮಂಜುನಾಥ್

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ