• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home BUSINESS

ಇಂಡಿಯಾದಲ್ಲಿ ಇನ್ನು ಇ-ರುಪಿ; ಚಾಲನೆ ಕೊಟ್ಟ ಪ್ರಧಾನಿ

cknewsnow desk by cknewsnow desk
August 2, 2021
in BUSINESS, NATION
Reading Time: 1 min read
0
ಕೊರೊನಾ ಇನ್ನೂ ಮುಗಿದಿಲ್ಲ, ನಿರ್ಬಂಧ ತೆರವಿನ ನಂತರ ಪರಿಸ್ಥಿತಿ ಕಳವಳಕಾರಿ ಎಂದರು ಪ್ರಧಾನಿ
998
VIEWS
FacebookTwitterWhatsuplinkedinEmail

ನವದೆಹಲಿ: ಡಿಜಿಟಲ್‌ ಪಾವತಿ ವ್ಯವಸ್ಥೆಗೆ ಉತ್ತೇಜ ನೀಡುವ ಉದ್ದೇಶಕ್ಕಾಗಿ ಕೇಂದ್ರ ಸರಕಾರವೇ ಅಭಿವೃದ್ಧಿಪಡಿಸಿರುವ ʼಇ-ರುಪಿʼಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ದೇಶಕ್ಕೆ ಸಮರ್ಪಣೆ ಮಾಡಿದರು.

ಸರಕಾರದ ಹಣಕಾಸು ಸೌಲಭ್ಯಗಳು ಸೋರಿಕೆಯಾಗದೆ, ಅಂದರೆ ಮೂರನೇ ಕೈ ಪ್ರಮೇಯ ಇಲ್ಲದೇ ವೇರವಾಗಿ ಜನರಿಗೇ ತಲುಪಿಸುವ ಉದ್ದೇಶದಿಂದ ಇ-ರುಪಿ ವ್ಯವಸ್ಥೆಯನ್ನು ಪರಿಚಯಿಸಲಾಗಿದ್ದು, ಈ ಮೂಲಕ ಪ್ರತಿಯೊಬ್ಬ ಪ್ರಜೆಗೂ ಅನುಕೂಲವಾಗಲಿದೆ ಎಂದು ಪ್ರಧಾನಿ ಮೋದಿ ಅವರು ಹೇಳಿದರು.

ಡಿಜಿಟಲ್‌ ಆಡಳಿತಕ್ಕೆ ಹೊಸ ಆಯಾಮ ನೀಡುವ ದಿಸೆಯಲ್ಲಿ ಭಾರತ ಇಂದು ಮಹತ್ವದ ಹೆಜ್ಜೆ ಇರಿಸಿದೆ. ಈಗಾಗಲೇ ಇರುವ ಡಿಜಿಟಲ್‌ ಪಾವತಿಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲು ಇ-ರುಪಿ ಹೆಚ್ಚು ಪರಿಣಾಮಕಾರಿಯಾಗಿ ನೆರವಾಗುತ್ತದೆ. ಇದು ಅತ್ಯಂತ ಪಾರದರ್ಶಕ ಹಾಗೂ ಸೋರಿಕೆ ರಹಿತವಾಗಿರುತ್ತದೆ ಎಂದು ಅವರು ವಿವರಿಸಿದರು.

ಮೊದಲಿಗೆ ಇ-ರುಪಿ ಸೇವೆಯನ್ನು ಆರೋಗ್ಯಕ್ಕೆ ಸಂಬಂಧಿಸಿದ ಹಣ ಪಾವತಿಗೆ ಬಳಕೆ ಮಾಡಲಾಗುವುದು. ಅಲ್ಲದೆ, ಖಾಸಗಿ ಆಸ್ಪತ್ರೆಗಳಲ್ಲಿ ಹಣ ಪಾವತಿ ಮಾಡಿ ಕೊವಿಡ್ ಲಸಿಕೆ ಪಡೆಯುವವರು ಸೇರಿ ತಮ್ಮ ಸುತ್ತಮುತ್ತಲಿನ ನೂರು ಜನರಿಗೆ ಕೊವಿಡ್ ಲಸಿಕೆ ನೀಡಲು ನೆರವಾಗುವವರಿದ್ದರೆ ಅಂಥವರು ಇ-ರುಪಿ ವೋಚರ್ ಪಡೆಯಬಹುದು. ಭವಿಷ್ಯದ ದಿನಗಳಲ್ಲಿ ಆಹಾರ ವಿತರಣೆ, ಆರೋಗ್ಯ ಸೇವೆ ಸೇರಿ ವಿವಿಧ ವಲಯಗಳಲ್ಲಿ ಇ-ರುಪಿ ಬಳಕೆ ಮಾಡಲಾಗುವುದು ಎಂದು ಪ್ರಧಾನಿ ಹೇಳಿದರು.

Launching e-RUPI. Watch. https://t.co/JeQo93yZXM

— Narendra Modi (@narendramodi) August 2, 2021

ಬಳಕೆ ಹೇಗೆ?

ಇ-ರುಪಿ ಪಾವತಿ ವ್ಯವಸ್ಥೆಯಲ್ಲಿ ಫಲಾನುಭವಿಗಳು ಎಲೆಕ್ಟ್ರಾನಿಕ್‌ ವೋಚರ್‌ ಅಥವಾ ಕೂಪನ್‌ಗಳನ್ನು ಪಡೆಯುತ್ತಾರೆ. ಅವುಗಳನ್ನು ಅವರು ಆನ್‌ಲೈನ್‌ ಬ್ಯಾಂಕಿಂಗ್‌, ಪೇಮೆಂಟ್‌ ಅಪ್ಲಿಕೇಷನ್‌ ಇಲ್ಲವೇ ಯಾವುದೇ ಸಾಂಪ್ರದಾಯಿಕ ಪಾವತಿ ವಿಧಾನರಹಿತವಾಗಿ ಬಳಸಬಹುದು. ಇನ್ನೂ ಸರಳವಾಗಿ ಹೇಳುವುದಾದರೆ, ಇ-ರುಪಿ ಕೂಪನ್‌ಗಳನ್ನು ಕ್ಯೂ ಆರ್‌ ಕೋಡ್‌ ಎಸ್‌ಎಂಎಸ್‌ ಸ್ಟ್ರಿಂಗ್‌ ಆಧಾರವಾಗಿ ಬಳಕೆ ಮಾಡಬಹುದು.

ಕೇಂದ್ರ ಸರಕಾರವು ಇ-ರುಪಿ ಮೂಲಕ ಫಲಾನುಭವಿಗಳಿಗೆ ಹಣ ವರ್ಗಾಯಿಸಲು ಈ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ.  ಮುಖ್ಯವಾಗಿ ಆರೋಗ್ಯ ಸೇವೆಗಳಿಗಾಗಿ ಆಸ್ಪತ್ರೆಗಳಲ್ಲೂ ಗ್ರಾಹಕರು ಬಳಕೆ ಮಾಡಬಹುದು. ಕೇಂದ್ರದ ಹಣಕಾಸು ಸೇವಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಹಾಗೂ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಹಯೋಗದಲ್ಲಿ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಇ-ರುಪಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ. ಅಲ್ಲದೆ, ಈ-ರುಪಿ ತಂತ್ರಾಂಶವು ಯುಪಿಐ ಐಡಿ ವ್ಯವಸ್ಥೆಯಡಿಯಲ್ಲಿ ಕಾರ್ಯನಿರ್ವಹಿಸಲಿದ್ದು, ಯಾವುದೇ ಮಧ್ಯವರ್ತಿಯ ಪಾತ್ರವಿಲ್ಲದೆ ನೇರವಾಗಿ ಆಯಾ ವ್ಯಕ್ತಿಗೆ ಹಣ ಪಾವತಿಯಾಗುತ್ತದೆ.

The launch of e-RUPI is in line with our efforts to make India a leader in Fintech and leverage technology to boost 'Ease of Living.' pic.twitter.com/NGsWfJepZX

— Narendra Modi (@narendramodi) August 2, 2021
Tags: Digital Payment SystemDigital VoucherE-RUPIindiaprime minister narendra modi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಬಾಗೇಪಲ್ಲಿ ನಂತರ ಗುಡಿಬಂಡೆಯಲ್ಲಿ ನಾಳೆ ಶಾಸಕರಿಂದ 35,000 ಫುಡ್‌ ಕಿಟ್‌ ವಿತರಣೆ

ತಂತ್ರಜ್ಞಾನ ಬಳಸಿ ಕೃಷಿ ಮಾಡಿ: ರೈತರಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸಲಹೆ

Leave a Reply Cancel reply

Your email address will not be published. Required fields are marked *

Recommended

ಬೆಂಗಳೂರು ಕಂಬಳಕ್ಕೆ ಐಶ್ವರ್ಯಾ ರೈ, ಅನುಷ್ಕಾ ಶೆಟ್ಟಿ

ಬೆಂಗಳೂರು ಕಂಬಳಕ್ಕೆ ಐಶ್ವರ್ಯಾ ರೈ, ಅನುಷ್ಕಾ ಶೆಟ್ಟಿ

3 years ago
ಆರೋಗ್ಯ ಸಚಿವರ ತವರಿನಲ್ಲಿರುವ ನೂರೆಂಟು ವರ್ಷಗಳ ನಿಸ್ವಾರ್ಥ ಸೇವೆಯ ಇತಿಹಾಸವುಳ್ಳ #CSI ಆಸ್ಪತ್ರೆ ಮೇಲೆ ಖಾಸಗಿ ನರ್ಸಿಂಗ್‌ ಹೋಂ ವಕ್ರದೃಷ್ಟಿ; ಸರ್ವೀಸ್‌ ಬದಲು ಭರ್ತಿ ಸುಲಿಗೆ!!

ಆರೋಗ್ಯ ಸಚಿವರ ತವರಿನಲ್ಲಿರುವ ನೂರೆಂಟು ವರ್ಷಗಳ ನಿಸ್ವಾರ್ಥ ಸೇವೆಯ ಇತಿಹಾಸವುಳ್ಳ #CSI ಆಸ್ಪತ್ರೆ ಮೇಲೆ ಖಾಸಗಿ ನರ್ಸಿಂಗ್‌ ಹೋಂ ವಕ್ರದೃಷ್ಟಿ; ಸರ್ವೀಸ್‌ ಬದಲು ಭರ್ತಿ ಸುಲಿಗೆ!!

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ