• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಇಂದು ಸಂಪುಟ ಸಾಕಾರ; 2.15ಕ್ಕೆ ಪ್ರಮಾಣ

P K Channakrishna by P K Channakrishna
August 4, 2021
in POLITICS, STATE
Reading Time: 1 min read
0
ಅನ್‌ಲಾಕ್‌ ಆದ ಮೇಲೆ ಹೆಚ್ಚುತ್ತಿದೆ ಅಪರಾಧ: ಗೃಹ ಸಚಿವ ಬೊಮ್ಮಾಯಿ
971
VIEWS
FacebookTwitterWhatsuplinkedinEmail

ಡೆಪ್ಯೂಟಿ ಮುಖ್ಯಮಂತ್ರಿಗಳು ಅನುಮಾನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ರಚನೆಗೆ ಬಿಜೆಪಿ ವರಿಷ್ಠರು ಗ್ರೀನ್‌ ಸಿಗ್ನಲ್‌ ನೀಡಿದ್ದು, ನೂತನ ಸಚಿವರ ಪಟ್ಟಿ ಸಿಎಂ ಕೈ ಸೇರಿದೆ.

ಇಂದು (ಬುಧವಾರ) ಮಧ್ಯಾಹ್ನ 2.15ಕ್ಕೆ ರಾಜಭವನದಲ್ಲಿ ನಡೆಯುವ ಸರಳ ಸಮಾರಭದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋತ್‌ ಅವರು ನೂತನ ಸಚಿವರಿಗೆ ಅಧಿಕಾರ ಗೌಪ್ಯತೆಯ ಪ್ರಮಾನ ಬೋಧಿಸಲಿದ್ದಾರೆ. ಕಾರ್ಯಕ್ರಮಕ್ಕೆ ಶಿಷ್ಟಾಚಾರ ವಿಭಾಗ ಸಿದ್ಧತೆ ಮಾಡಿಕೊಂಡಿದ್ದು. ಸೀಮಿತ ಗಣ್ಯರಿಗೆ ಆಹ್ವಾನ ನೀಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಆದರೆ, ಮುಖ್ಯಮಂತ್ರಿ ಅವರು ಸಂಜೆ ಪ್ರಮಾಣ ಕಾರ್ಯಕ್ರಮ ನಡೆಯಲಿದೆ ಎಂದು ದಿಲ್ಲಿಯಲ್ಲಿ ತಿಳಿಸಿದರು.

ಸಿಕೆನ್ಯೂಸ್‌ ನೌ ಗೆ ಸಿಕ್ಕಿರುವ ಮಾಹಿತಿ ಪ್ರಕಾರ 22ರಿಂದ 24 ಸಚಿವರು ಪ್ರಮಾಣ ಸ್ವೀಕರಿಸಲಿದ್ದು, ನಾಳೆ ದಿಲ್ಲಿಯಿಂದ ವಾಪಸ್‌ ಬೆಂಗಳೂರಿಗೆ ಬರಲಿರುವ ಸ್ವತಃ ಮುಖ್ಯಮಂತ್ರಿ ಅವರೇ ಎಲ್ಲ ಹೊಸ ಸಚಿವರಿಗೆ ಕರೆ ಮಾಡಿ ಪ್ರಮಾಣ ಸ್ವೀಕಾರಕ್ಕೆ ಬರುವಂತೆ ಹೇಳಿದ್ದಾರೆ. ಬಿಜೆಪಿಯ ಇನ್ನೊಂದು ಮೂಲ ತಿಳಿಸಿರುವಂತೆ ಇನ್ನೊಂದೆರಡು ಹೆಸರುಗಳು ಹೆಚ್ಚಬಹುದು ಎನ್ನಲಾಗಿದೆ.

ಹೊಸ ಸಚಿವರ ಪಟ್ಟಿಗಳ ಬಗ್ಗೆ ಸಾಕಷ್ಟು ಚರ್ಚೆ, ಲೆಕ್ಕಾಚಾರ ನಡೆದ ಮೇಲೆ ಹೈಕಮಾಂಡ್‌ ಫೈನಲ್‌ ಪಟ್ಟಿಯನ್ನು ನೀಡಿದೆ. ಇಂದು ಮುಖ್ಯಮಂತ್ರಿಯ ಜತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಕೂಡ ಬೆಂಗಳೂರಿಗೆ ಬರಲಿದ್ದು, ನಂತರ ಪಟ್ಟಿ ಹೊರಬೀಳಬಹುದು ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು, ಯಡಿಯೂರಪ್ಪ ಸಂಪುಟದಲ್ಲಿದ್ದ ಯಾರಿಗೆಲ್ಲ ಸಚಿವ ಸ್ಥಾನ ಸಿಗುವದಿಲ್ಲ ಎಂಬ ಮಾಹಿತಿ ಬಿಜೆಪಿ ವಲಯದಲ್ಲಿ ತೀವ್ರ ಕಂಪನಗಳನ್ನೇ ಉಂಟು ಮಾಡಿದೆ. ತಡರಾತ್ರಿ ಹೊತ್ತಿಗೆ ಸಿಕ್ಕಿದ ಮಾಹಿತಿಯಂತೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಹಿರಿಯ ನಾಯಕರಾದ ವಿ.ಸೋಮಣ್ಣ, ಕೋಟಾ ಶ್ರೀನಿವಾಸ ಪೂಜಾರಿ, ಆರ್.ಶಂಕರ್‌, ಪ್ರಭು ಚೌಹಾಣ್‌ ಅವರಿಗೆ ಅವಕಾಶ ಇಲ್ಲ ಎನ್ನಲಾಗಿದೆ.

ಇನ್ನು, ಹಿಂದಿನ ಸಂಪುಟದಲ್ಲಿ ಡಿಸಿಎಂಗಳ ಪೈಕಿ ಸೀನಿಯರ್‌ ಆಗಿದ್ದ ಗೋವಿಂದ ಕಾರಜೋಳ ಅವರಿಗೆ ಸಚಿವ ಸ್ಥಾನ ಮಾತ್ರ ಸಿಗಲಿದೆ ಎಂದಬ ಸುದ್ದಿ ಹೊರಬಂದಿದೆ. ಇನ್ನು, ಆಲ್‌ಮೋಸ್ಟ್‌ ಫೈನಲ್ಲೇ ಆಗಿ ಹೋಗಿತ್ತು ಎನ್ನಲಾಗಿದ್ದ ಬಿ.ಶ್ರೀರಾಮುಲು ಅವರು ಅವರು ಉಪ ಮುಖ್ಯಮಂತ್ರಿಯಾಗುತ್ತಾರಾ ಎಂಬ ಬಗ್ಗೆ ಮಧ್ಯರಾತ್ರಿ ಹೊತ್ತಿಗೆ ಅನುಮಾನ ಹುತ್ತ ಸುತ್ತಿಕೊಂಡಿದೆ. ಇನ್ನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಪ್ತರೂ ಹಾಗೂ ಯಡಿಯೂರಪ್ಪ ಅವರ ಕ್ಲೋಸ್‌ ಸರ್ಕಲ್‌ನಲ್ಲಿ ಗುರುತಿಸಿಕೊಂಡಿದ್ದ ಆರ್.‌ಅಶೋಕ್‌ ಅವರಿಗೂ ಕೇವಲ ಮಂತ್ರಿ ಸ್ಥಾನವಷ್ಟೇ ಸಿಗುತ್ತಿದೆ ಎಂಬ ವಾರ್ತೆ ಹರಿದಾಡುತ್ತಿದೆ.

ಉಪ ಮುಖ್ಯಮಂತ್ರಿಗಳು ಬೇಕೆ ಬೇಡವೇ ಎಂಬ ಬಗ್ಗೆ ಚರ್ಚೆ ಆಗಿದೆ. ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲು ಆಗಿಲ್ಲ. ನಾಳೆ ಈ ಬಗ್ಗೆ ನಡ್ಡಾ ಅವರು ಮಾಜಿ ಮುಖ್ಯಮಂತ್ರಿಳಾದ ಯಡಿಯೂರಪ್ಪ ಅವರ ಜತೆ ಚರ್ಚೆ ನಡೆಸಲಿದ್ದಾರೆ. ಎಲ್ಲದ್ದಕ್ಕೂ ಇಂದು ತೆರೆ ಬೀಳಲಿದೆ. ಎಷ್ಟು ಸಚಿವರು ಎಂಬುದಕ್ಕೆ ಇಂದು ಉತ್ತರ ಸಿಗಲಿದೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ಇಂದು ನವದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಶ್ರೀ @ArunSinghbjp ಅವರನ್ನು ಭೇಟಿ ಮಾಡಿದರು. pic.twitter.com/1EAGJlZfjc

— BJP Karnataka (@BJP4Karnataka) August 3, 2021

ಎಸ್.ಟಿ.ಸೋಮಶೇಖರ್‌ ಅವರಿಗೆ ಆತಂಕ

ಇನ್ನು, ಶತಾಯಗತಾಯ ಸಂಪುಟಕ್ಕೆ ಸೇರಲೇಬೇಕೆಂದು ಲಾಬಿ ನಡೆಸುತ್ತಿರುವ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಇನ್ನೊಂದು ಆತಂಕ ಎದುರಾಗಿದೆ. ಭ್ರಷ್ಟಾಚಾರ ಪ್ರಕರಣ ಒಂದಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ರಾಜ್ಯ ಹೈಕೋರ್ಟ್‌ ಮಾಜಿ ಮುಖ್ಯಮಂತ್ರಿ ಪುತ್ರನಿಗೆ ನೊಟೀಸ್‌ ನೀಡಲು ಆದೇಶ ನೀಡಿದೆ. ಇದೇ ಪ್ರಕರಣದಲ್ಲಿ ಮಾಜಿ ಸಚಿವ ಎಸ್.ಟಿ.ಸೋಮಶೇಖರ್‌ ಅವರಿಗೂ ನೀಟೀಸ್‌ ಜಾರಿ ಮಾಡಲು ನ್ಯಾಯಾಲಯ ಆದೇಶ ನೀಡಿದೆ.

ವಲಸಿಗರಲ್ಲಿ ಸಚಿವ ಸ್ಥಾನ ಪಡೆಯುವ ಹೆಸರುಗಳಲ್ಲಿ ಒಂದಾಗಿದ್ದ ಸೋಮಶೇಖರ್‌ ಇದೀಗ ಕೊಂಚ ಆತಂಕಕ್ಕೆ ಸಿಲುಕಿದ್ದಾರೆ. ಈ ಆದೇಶ ಹೊರಬೀಳು ಹೊತ್ತಿಗೆ ಸಂಪುಟ ಪಟ್ಟಿ ಮುಖ್ಯಮಂತ್ರಿ ಕೈ ಸೇರಿರಲಿಲ್ಲ. ಈಗ ಅವರ ಬಳಿ ಇರುವ ಪಟ್ಟಿಯಲ್ಲಿ ಸೋಮಶೇಖರ್‌ ಹೆಸರು ಇದೆಯಾ? ಇಲ್ಲವಾ? ಎನ್ನುವುದು ಯಕ್ಷಪ್ರಶ್ನೆಯಾಗಿದೆ. ಒಂದು ವೇಳೆ ಅವರು ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದರೂ ಮುಂದೆ ಇದರ ಬಿಸಿ ಇದ್ದೇ ಇರುತ್ತದೆ ಎಂದು ಹೇಳಲಾಗಿದೆ.

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹಳಬರು+ಹೊಸಬರು+ವಲಸಿಗರು=29 ಸಚಿವರ ಬೊಮ್ಮಾಯಿ ಸಂಪುಟ

ಹಳಬರು+ಹೊಸಬರು+ವಲಸಿಗರು=29 ಸಚಿವರ ಬೊಮ್ಮಾಯಿ ಸಂಪುಟ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರದಲ್ಲಿ ಭೂಕಂಪ, ಎರಡು ಸಲ ಕಂಪಿಸಿದ ಭೂಮಿ

ಚಿಕ್ಕಬಳ್ಳಾಪುರದಲ್ಲಿ ಭೂಕಂಪ, ಎರಡು ಸಲ ಕಂಪಿಸಿದ ಭೂಮಿ

4 years ago
ಕೆರೆಗಳಿಗೆ ಎಳ್ಳೂನೀರು, ಪರರ ಪಾಲಾಗುತ್ತಿದೆ ಮಳೆನೀರು

ಕೆರೆಗಳಿಗೆ ಎಳ್ಳೂನೀರು, ಪರರ ಪಾಲಾಗುತ್ತಿದೆ ಮಳೆನೀರು

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ