ಬೆಂಗಳೂರು: ನಗರದ ವಿಜಯನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ಶನಿವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರೆ ಸಚಿವರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯದ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಡಾ.ಕೆ.ಸುಧಾಕರ್, ಆರ್.ಅಶೋಕ್, ಕೆ.ಗೋಪಾಲಯ್ಯ, ಎಸ್.ಟಿ.ಸೋಮಶೇಖರ್, ಕೆ.ಸಿ.ನಾರಾಯಣ ಗೌಡ ಅವರುಗಳು ಸ್ವಾಮೀಜಿಗಳ ಆಶೀರ್ವಾದ ಪಡೆದರು.



















