• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಮಾಸ್ಕ್‌ ತೊರೆದು ಮೈಮರೆತ ಜನ; ಅಪ್ಪಳಿಸಲು ಕಾದಿದೆ 3ನೇ ಅಲೆ

cknewsnow desk by cknewsnow desk
August 11, 2021
in CHIKKABALLAPUR, STATE
Reading Time: 2 mins read
0
ಬೆಂಗಳೂರಿಗರಿಗೆ ಲಸಿಕೆ! ಮುಗ್ಧ ಹಳ್ಳಿ ಜನರಿಗೆ ವೈರಸ್‌ ಹಂಚಿಕೆ!!; ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತವರು ಜಿಲ್ಲೆ ಚಿಕ್ಕಬಳ್ಳಾಪುರದಲ್ಲೇ ಹಳ್ಳ ಹಿಡಿಯುತ್ತಿದೆ ಕೋವಿಡ್ ಲಸಿಕೆ ಅಭಿಯಾನ
1.1k
VIEWS
FacebookTwitterWhatsuplinkedinEmail

ಗುಡಿಬಂಡೆ ತಾಲೂಕಿನಲ್ಲಿ ಶೂನ್ಯಕ್ಕೆ ಹೋಗಿದ್ದ ಸೋಂಕು ಮತ್ತೆ ಅಬ್ಬರಿಸುವ ಭೀತಿ

by GS Bharath Gudibande

  • photo by anna shvets from pexels

ಗುಡಿಬಂಡೆ: ಮೊದಲ ಮತ್ತು ಎರಡನೇ ಅಲೆ ಮುಗಿದಿದೆ. ಜನರಿಗೆ ಸರಕಾರ ರಿಲ್ಯಾಕ್ಸೇಷನ್ ಕೊಟ್ಟಿದೆ ಅನ್ನುವಷ್ಟರಲ್ಲಿ 3ನೇ ಅಲೆಯ ಭೀತಿ ಶುರುವಾಗಿದ್ದರೂ ಸಾರ್ವಜನಿಕರು ಮಾಸ್ಕ್ ಮತ್ತು ಸಮಾಜಿಕ ಅಂತರ ಪಾಲಿಸದೇ ಅಸಡ್ಡೆ ತೋರುತ್ತಿದ್ದಾರೆ.

ಕೊರೋನಾ ಲಾಕ್ ಡೌನ್ ಸಡಲಿಕೆ ಮಾಡುತ್ತಿದ್ದಂತೆ ಜನರು ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸದೆ ಉದಾಸೀನ, ನಿರ್ಲಕ್ಷ್ಯ ತೋರುತ್ತಿದ್ದು, ಮತ್ತೊಮ್ಮೆ ತಾಲೂಕಿನಲ್ಲಿ ಸೂಂಕಿನ ಹೆಚ್ಚಳವಾಗುತ್ತಾ ಎನ್ನುವ ಆತಂಕ ಉಂಟಾಗಿದೆ.

ಪ್ರವಾಸಿಗರಿಂದ ಸೋಂಕಿನ ಭೀತಿ

ಶನಿವಾರ, ಭಾನುವಾರ ಬಂದರೆ ಬೆಂಗಳೂರು ಸೇರಿದಂತೆ ಇತರೆ ದೂರದ ಊರುಗಳಿಂದ ಪಟ್ಟಣದ ಬೆಟ್ಟ, ಕೆರೆ ಹೀಗೆ ಪ್ರವಾಸಿ ತಾಣಗಳನ್ನು ನೋಡಲು ಸಾವಿರಾರು ಜನ ಬರುತ್ತಿರುವುದು, ಸಾರ್ವಜನಿಕರ ಆಂತಕಕ್ಕೆ ಕಾರಣವಾಗಿದೆ, ಅವರಿಂದ ತಾಲೂಕಿಗೆ ಕಾದಿದೆಯಾ ಆಪತ್ತು ಎಂಬ ಭೀತಿ ಉಂಟಾಗಿದೆ. ಈ ಕುರಿತು ಅಧಿಕಾರಿಗಳು ಕಠಿಣ ಕ್ರಮಕೈಗೊಳ್ಳಬೇಕಾಗಿದೆ.

ವೀಕೆಂಡ್‌ ಬಂದರೆ ಪ್ರವಾಸಿಗರು ಭಾರೀ ಪ್ರಮಾಣದಲ್ಲಿ ಗುಡಿಬಂಡೆಗೆ ಬರುತ್ತಿದ್ದಾರೆ. ಪ್ರವಾಸಿಗರು ಬರುವುದಕ್ಕೆ ಯಾವ ಅಡ್ಡಿಯೂ ಇಲ್ಲ. ಆದರೆ, ಅವರಲ್ಲಿ ಬಹುತೇಕರು ಕೋವಿಡ್‌ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ. ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಮೂರನೇ ಅಲೆ ಭೀತಿಯೂ ಇರುವುದರಿಂದ ಪಟ್ಟಣದ ಜನ ಹೆಚ್ಚು ಆತಂಕ್ಕೆ ಗುರಿಯಾಗಿದ್ದಾರೆ. ಪ್ರವಾಸಿಗರು ಮಾಸ್ಕ್‌ ಧರಿಸುತ್ತಿಲ್ಲ. ಅಲ್ಲದೆ, ಕೆಲವರು ಅಲ್ಲಲ್ಲಿಯೇ ಮಾಸ್ಕ್‌ಗಳನ್ನು, ಪ್ಲಾಸ್ಟಿಕ್‌ ವಸ್ತುಗಳನ್ನು ಬಿಸಾಡಿ ಹೋಗುತ್ತಿದ್ದಾರೆ. ಹೀಗಾಗಿ ಸ್ಥಳೀಯ ಆಡಳಿತ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯ ಮಾಡುತ್ತಿದ್ದಾರೆ.

ಒಂದು ಅಂದಾಜಿನಂತೆ; ವೀಕೆಂಡ್‌ನಲ್ಲಿ ಅಂದಾಜು 200 ಕಾರು, ನೂರಾರು ಬೈಕ್‌ಗಳಲ್ಲಿ ಸುಮಾರು ಎರಡರಿಂದ ಮೂರು ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಗುಡಿಬಂಡೆಗೆ ಭೇಟಿ ನೀಡುತ್ತಿದ್ದಾರೆ.

ಬೆಂಗಳೂರು, ಆಂಧ್ರಕ್ಕೆ ನಿತ್ಯ ಓಡಾಟ

ವಾಣಿಜ್ಯ ಚಟುವಟಿಕೆಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರಕಾರ ನೀಡಿರುವ ಸಡಲಿಕೆಯನ್ನೇ ನೆಪ ಮಾಡಿಕೊಂಡ ಜನರುಪ್ರತಿನಿತ್ಯ ಬೇರೆ ಊರುಗಳಿಗೆ ಓಡಾಟ ಆರಂಭಿಸಿದ್ದಾರೆ. ಅಲ್ಲದೆ, ಗುಡಿಬಂಡೆಗೆ ಆಂಧ್ರದ ಗಡಿ ಹೊಂದಿಕೊಂಡಿರುವ ಕಾರಣಕ್ಕೆ ಪಕ್ಕದಲ್ಲೇ ಇರುವ ಆ ರಾಜ್ಯದ ಊರುಗಳಿಗೆ ಗುಡಿಬಂಡೆ ಜನರು ಭೇಟಿ ನೀಡುವುದು ಸಾಮಾನ್ಯವಾಗಿದೆ. ಮುಖ್ಯವಾಗಿ ವಾಣಿಜ್ಯ ಕೆಲಸ-ಕಾರ್ಯಗಳಿಗಾಗಿ ಹಿಂದೂಪುರಕ್ಕೆ ಹೋಗಿ ಬರುವುದು ಸಾಮಾನ್ಯ.

ಇದಲ್ಲದೆ; ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗೌರಿಬಿದನೂರು ಮುಂತಾದ ಕಡೆಗಳಿಗೂ ಜನರ ಸಂಚಾರ ಹೆಚ್ಚಾಗಿದ್ದು, ಅಂಥವರ ಮೇಲೆ ನಿಗಾ ಇಡುವುದು ಸಾಧ್ಯವಾಗುತ್ತಿಲ್ಲ. ಎಷ್ಟೇ ಜಾಗೃತಿ-ಎಚ್ಚರಿಕೆ ಹೇಳಿದರೂ ಜನರು ಅಧಿಕಾರಿಗಳ ಮಾತು ಕೇಳುತ್ತಿಲ್ಲ, ಬದಲಿಗೆ ಹದಿನೆಂಟು ವರ್ಷಕ್ಕೂ ಮೇಲ್ಪಟ್ಟ ಅನೇಕರು ಲಸಿಕೆ ಪಡೆದಿಲ್ಲದಿರುವುದು ಕಂಡು ಬಂದಿದೆ.

ಅಧಿಕಾರಿಗಳ ಶ್ರಮ ವ್ಯರ್ಥವಾಗದಿರಲಿ

ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಪಟ್ಟ ಶ್ರಮದಿಂದ ಈಗ ಸೋಂಕಿನ ಸಂಖ್ಯೆ ಕಡಿಮೆಯಾಗಿ ಇಡೀ ತಾಲೂಕು ಸುರಕ್ಷತವಾಗಿದೆ, ಲಾಕ್‌ಡೌನ್ ಸಡಲಿಕೆಯಿಂದ ಬೆಂಗಳೂರು, ಸೇರಿದಂತೆ ರಾಜ್ಯದ ಹಲವು ಪ್ರದೇಶಗಲ್ಲಿ ಸೋಂಕು ತೀವ್ರವಾಗುತ್ತಿದ್ದು, ಜನರು ಸರಕಾರದ ನಿಯಮಗಳನ್ನು ಪಾಲಿಸಬೇಕಾಗಿದೆ. ಮೇಲಾಗಿ, ಬೆಂಗಳೂರು ಸೇರಿದಂತೆ ಹೊರಗಿನಿಂದ ಬರುವವರ ಮೇಲೆ ಕಣ್ಣಿಡಬೇಕಾಗಿದೆ.

ಇದಲ್ಲದೆ, ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಗಡಿಗಳನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಸಂಚರಿಸುವ ಜನರನ್ನು ರಾಟ್‌ ಅಥವಾ ಆರ್‌ಟಿಪಿಸಿಆರ್‌ ಪರೀಕ್ಷೆಗೆ ಒಳಪಡಿಸವುದೂ ಸೇರಿ ಗಡಿ ಪ್ರದೇಶಗಳ ಮೇಲೆ ಗಮನ ಕೊಡುವ ಅಗತ್ಯವೂ ಇದೆ.

ಜನರು ಮಾಸ್ಕ್ ಮತ್ತು ದೈಹಿಕ ಅಂತರ ಪಾಲಿಸಿ ಅನಗತ್ಯ ಓಡಾಟ ನಿಲ್ಲಿಸಬೇಕು, ತಾಲೂಕಿನ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಅನಧಿಕೃತವಾಗಿ ಪ್ರವೇಶ ಮಾಡುವವರಿಗೆ ದಂಡ ವಿಧಿಸಲಾಗುತ್ತದೆ. ಯಾರೂ ಕೂಡ ನಿಯಮಗಳನ್ನು ಮೀರಿ ವರ್ತಿಸಬಾರದು.

ಸಿಬ್ಗತ್ ವುಲ್ಲಾ. ಗುಡಿಬಂಡೆ ತಹಶೀಲ್ದಾರ್

ತಾಲೂಕಿನ ವಿವಿಧ ಹಳ್ಳಿಗಳಿಂದ ಪಟ್ಟಣಕ್ಕೆ ಆಗಮಿಸುವ ಜನರು ಸರಕಾರದ ನಿಯಮಗಳನ್ನು ಪಾಲಿಸಬೇಕು. ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ ಅರಿವು ಮೂಡಿಸಲಾಗುತ್ತಿದೆ. ಎಲ್ಲರೂ ಕಡ್ಡಾಯವಾಗಿ ನಿಯಮಗಳನ್ನು ಪಾಲಿಸುವುದರಿಂದ 3ನೇ ಅಲೆ ಬಾರದಂತೆ ತಡೆಯಬಹುದು.

ರಾಜಶೇಖರ್, ಮುಖ್ಯಾಧಿಕಾರಿ, ಗುಡಿಬಂಡೆ ಪಟ್ಟಣ ಪಂಚಾಯಿತಿ

Tags: chichikkaballapuracovid third wavegudibandemaskphysical distance
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಅಗಸ್ಟ್‌ 15ರಂದು ಬಳ್ಳಾರಿ & ಚಾಮರಾಜನಗರ ಜಿಲ್ಲೆಗಳಲ್ಲಿ  ಧ್ವಜಾರೋಹಣ ಮಾಡಲು ಸಚಿವರೇ ಇಲ್ಲ

ಅಗಸ್ಟ್‌ 15ರಂದು ಬಳ್ಳಾರಿ & ಚಾಮರಾಜನಗರ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರೇ ಇಲ್ಲ

Leave a Reply Cancel reply

Your email address will not be published. Required fields are marked *

Recommended

ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ಸೆಪ್ಟೆಂಬರ್ 20ಕ್ಕೆ ಸಿಇಟಿ ಫಲಿತಾಂಶ

5 years ago
ಆಟ ಮುಗಿಸಿದ ಅಪ್ಪು, ಇನ್ನಿಬ್ಬರಿಗೆ ಬೆಳಕು

ಆಟ ಮುಗಿಸಿದ ಅಪ್ಪು, ಇನ್ನಿಬ್ಬರಿಗೆ ಬೆಳಕು

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ