ಸುಮಾರು 45 ಯುನಿಟ್ ಬ್ಲಡ್ ಸಂಗ್ರಹ
By Ra Na Gopala Reddy Bagepalli
ಬಾಗೇಪಲ್ಲಿ: ದೇಶಕ್ಕೆ ಯಾವುದೇ ವಿಪತ್ತು ಎದುರಾದರೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮುಂದೆ ಬಂದು ಕೆಲಸ ಮಾಡುತ್ತದೆ. ಸ್ವಯಂ ಸೇವಕರು ಜೀವದ ಹಂಗು ತೊರೆದು ಸೇವೆ ಮುಂದಾಗುತ್ತಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ ಹೇಳಿದರು.
ಬಾಗೇಪಲ್ಲಿ ಬಿಜೆಪಿ ಯುವ ಮೋರ್ಚಾ ಹಾಗೂ ರಾಷ್ಟ್ರೋತ್ಥಾನ ರಕ್ತ ನಿಧಿ ಆಶ್ರಯದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರರು- ವೀರ ಯೋಧರ ಸ್ಮರಣಾರ್ಥ ಶ್ರೀ ಕ್ಷೇತ್ರ ಗಡಿದಂನಲ್ಲಿರುವ ಶ್ರೀ ಗಾಯತ್ರಿ ಬ್ರಾಹ್ಮಣರ ಸಮದಾಯ ಭವನದಲ್ಲಿ ಸ್ವಯಂ ಪ್ರೇರಿತ ರಕ್ತ ದಾನ ಶಿಬಿರವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿರು.
ಕೋವಿಡ್ ಸಂಕಷ್ಟದ ಸಮಯದಲ್ಲಿ ರಕ್ತದ ಅಭಾವ ಎದುರಾಗಿರುವುದನ್ನು ಮನಗಂಡು ಈ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಸುಮಾರು 45 ಯುನಿಟ್ ರಕ್ತದಾನ ಮಾಡಿರುವ ಪಕ್ಷದ ಕಾರ್ಯಕರ್ತರ ಸೇವೆ ಶ್ಲಾಘನೀಯ ಎಂದು ಅವರು ಹೇಳಿದರು.
ರಕ್ತದಾನ ಅತ್ಯಂತ ಶ್ರೇಷ್ಠ ದಾನ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ, ದಾನದಿಂದಲೇ ಪಡೆಯಬೇಕಾದ ಅನಿವಾರ್ಯತೆ ಇದೆ. ಇದೇ ಕಾರಣಕ್ಕೆ ಎಲ್ಲರೂ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಜೀವದಾನಕ್ಕೆ ಮುಂದಾಗಿದ್ದಾರೆ ಎಂದು ಅವರು ಹೇಳಿದರು.
ಬಾಗೇಪಲ್ಲಿ ಪಟ್ಟಣದ ಯುವ ಮೋರ್ಚಾ ಅಧ್ಯಕ್ಷ ಕೆ.ವಿ.ಮಂಜುನಾಥ ರೆಡ್ಡಿ ಮಾತನಾಡಿ; ಕೊರೋನಾ ಹಿನ್ನೆಲೆಯಲ್ಲಿ ರಕ್ತದ ಕೊರತೆಯುಂಟಾಗಿತ್ತು. ಬೇಡಿಕೆಗೆ ತಕ್ಕಂತೆ ರಕ್ತ ಪೂರೈಕೆ ದೊಡ್ಡ ಸವಾಲಾಗಿತ್ತು. ಕೆಲ ಯುವಕರು ತಾವಾಗಿಯೇ ಮುಂದೆ ಬಂದು ನಮ್ಮ ಬ್ಲಡ್ ಬ್ಯಾಂಕ್‌ನಲ್ಲಿ ರಕ್ತದಾನ ಶಿಬಿರ ನಡೆಸಿದ್ದಾರೆ. ಇದರಿಂದ ಸುಮಾರು 45 ಯುನಿಟ್ ಬ್ಲಡ್ ನಮ್ಮಲ್ಲೀಗ ಸಂಗ್ರಹವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಾಗೇಪಲ್ಲಿ ತಾಲೂಕು ಮಂಡಲಾಧ್ಯಕ್ಷ ಪ್ರತಾಪ್, ವೆಂಕಟೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯರು, ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸುರೇಶ್, ಎಸ್. ಸಿ ಯುವ ಮೋರ್ಚಾ ಅಧ್ಯಕ್ಷ ಹಾಗೂ ಕೆಡಿಪಿ ಸದಸ್ಯ ವೆಂಕಟೇಶ್, ಪ್ರಭಾಕರ ರೆಡ್ಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಸುಬ್ರಹ್ಮಣ್ಯಂ, ಲೋಕೇಶ್, ಗೋಪಾಲ್, ದೀರಜ್,ಮಂಜುಳಾ, ವನಜಾ, ರೂಪಾ, ಗಂಗುಲಮ್ಮ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.