• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಚಾಮರಾಜಪೇಟೆಯಿಂದ ಸಿದ್ದರಾಮಯ್ಯ ಸ್ಪರ್ಧೆ ಖಚಿತ

P K Channakrishna by P K Channakrishna
August 16, 2021
in POLITICS, STATE
Reading Time: 2 mins read
0
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ
972
VIEWS
FacebookTwitterWhatsuplinkedinEmail

ಹಾಗಾದರೆ ಜಮೀರ್‌ ಎಲ್ಲಿಗೆ? ಮಾಜಿ ಸಿಎಂ ರಚಿಸಿದ ರಣವ್ಯೂಹ ಹೇಗಿದೆ?


#CkNewsNowExclusive


ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಮುಖ್ಯಮಂತ್ರಿಯಾಗುವ ಕನಸು ಹೊತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಧಾನಿಯ ಚಾಮರಾಜಪೇಟೆ ವಿಧಾಸಭೆ ಕ್ಷೇತ್ರದಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ತಮ್ಮ ಮುಂದಿನ ರಾಜಕೀಯ ಭವಿಷ್ಯಕ್ಕಾಗಿ ವ್ಯವಸ್ಥಿತ ರಣವ್ಯೂಹ ರೆಡಿ ಮಾಡಿಕೊಂಡಿರುವ ಸಿದ್ದರಾಮಯ್ಯ ತಮ್ಮ ರಾಜಕೀಯ ವಿರೋಧಿಗಳ ಅಡ್ಡಿ ಆತಂಕಗಳ ನಡುವೆಯು ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದ್ದಾರೆ.

ಅವರ ರಾಜಕೀಯ ತಂತ್ರಗಾರಿಕೆ ಪ್ರಕಾರ ಸಿದ್ದರಾಮಯ್ಯ ಅವರಿಗಾಗಿ ಪಟ್ಟ ಶಿಷ್ಯ ಜಮೀರ್ ಅಹಮದ್‌ಖಾನ್, ಚಾಮರಾಜಪೇಟೆ ಕ್ಷೇತ್ರವನ್ನು ಬಿಟ್ಟು ಕೊಡಲಿದ್ದಾರೆ. ಅಲ್ಲಿಂದ ಗುಳೆ ಹೊರಡುವ ಜಮೀರ್ ಹೆಚ್ಚು ಮುಸ್ಲಿಂ ಜನಸಂಖ್ಯೆ ಇರುವ ಶಿವಾಜಿನಗರದಿಂದ ಸ್ಪರ್ಧಿಸಲಿದ್ದಾರೆ.

ಕಳೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ, ಶಿವಾಜಿನಗರದಲ್ಲಿ ಆಯ್ಕೆಗೊಂಡ ರಿಜ್ವಾನ್ ಹರ್ಷದ್ ತಮ್ಮ ತವರು ಮೈಸೂರಿಗೆ ವಲಸೆ ಹೋಗಲಿದ್ದು, ಅಲ್ಲಿನ ನರಸಿಂಹರಾಜ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

  • ರಿಜ್ವಾನ್ ಹರ್ಷದ್
  • ತನ್ವೀರ್ ಸೇಠ್

ಈ ಮೂಲಕ ಒಂದೆ ಕಲ್ಲಿನಲ್ಲಿ ಹಲವು ಹಕ್ಕಿಗಳನ್ನು ಹೊಡೆದುರುಳಿಸುವ ಉಪಾಯ ಹೂಡಿರುವ ಸಿದ್ದರಾಮಯ್ಯ ಅವರು ನರಸಿಂಹರಾಜ ಕ್ಷೇತ್ರದಿಂದ ತಮ್ಮ ರಾಜಕೀಯ ಕಡು ವಿರೋಧಿ ತನ್ವೀರ್ ಸೇಠ್ ಅವರನ್ನು ವಕ್ಕಲೆಬ್ಬಿಸುವ ಹೊಂಚು ಹಾಕಿದ್ದಾರೆ.

ಒಂದಡೆ ಪ್ರಬಲ ರಾಜಕೀಯ ಎದುರಾಳಿಯಾಗಿರುವ ಡಿ.ಕೆ.ಶಿವಕುಮಾರ್ ಉರುಳಿಸುತ್ತಿರುವ ದಾಳಗಳನ್ನು ಎದುರಿಸುತ್ತಲೇ ಮತ್ತೊಂದಡೆ ತಮ್ಮ ರಾಜಕೀಯ ಭವಿಷ್ಯವನ್ನು ಸ್ಥಿರಗೊಳಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಸಿದ್ದರಾಮಯ್ಯ ಅವರಿಗೆ ಸೃಷ್ಠಿಯಾಗಿದೆ.

ಈ ಮಾಸ್ಟರ್ ಪ್ಲ್ಯಾನ್‌ನ ಸ್ವರೂಪವೇ ಬಾದಾಮಿ ಟು ಚಾಮರಾಜಪೇಟೆ ಮತ್ತು ಆಪರೇಷನ್ ಶಿವಾಜಿನಗರ ಮತ್ತು ನರಸಿಂಹರಾಜ  ಕ್ಷೇತ್ರಗಳು.

ಚಾಮರಾಜಪೇಟೆಯಲ್ಲಿ ಕಣಕ್ಕಿಳಿಯುವುದು ತೀರ್ಮಾನಿಸುತ್ತಿದ್ದಂತೆ ಆ ಕ್ಷೇತ್ರದ ಮತದಾರರನ್ನು ಓಲೈಯಿಸಿಕೊಳ್ಳಲು ಸಿದ್ದರಾಮಯ್ಯ ಕಳೆದ ಮೂರು ತಿಂಗಳಲ್ಲಿ ಒಂಭತ್ತು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಆದರೆ, ಈ ಅವಧಿಯಲ್ಲಿ ತಾವು ಸದ್ಯಕ್ಕೆ ಪ್ರತಿನಿಧಿಸುತ್ತಿರುವ ಬಾದಾಮಿ ಕ್ಷೇತ್ರದಕ್ಕೆ ಒಂದೇ ಬಾರಿ ಹೋಗಿರುವುದು. ಇದು ಗಮನಾರ್ಹ ಸಂಗತಿಯಾಗಿದೆ.

ಅತೀ ಹೆಚ್ಚು ಅಲ್ಪಸಂಖ್ಯಾತರು ಮತ್ತು ಕೊಳಗೇರಿಗಳನ್ನು ಒಳಗೊಂಡಿರುವ ಚಾಮರಾಜಪೇಟೆ ಕ್ಷೇತ್ರ ಕಾಂಗ್ರೆಸ್‌ಗೆ ಸುರಕ್ಷಿತ ಕ್ಷೇತ್ರ.

ಜಮೀರ್ ಅಹಮದ್ ತಮ್ಮ ಬೆನ್ನಿಗೆ ನಿಂತಿರುವಾಗ ನಿರಾಯಾಸವಾಗಿ ವಿಧಾನಸಭೆ ಪ್ರವೇಶಿಸಬಹುದು ಎಂಬುದು ಸಿದ್ದರಾಮಯ್ಯ ಅವರ ಲೆಕ್ಕಾಚಾರ.

  • ಡಿ.ಕೆ.ಶಿವಕುಮಾರ್

೨೦೨೩ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿ, ಅಧಿಕಾರಕ್ಕೆ ತರಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೊಂಕಕಟ್ಟಿ ಒಂದಡೆ ನಿಂತಿದ್ದು, ಈ ಬಾರಿ ಮುಖ್ಯಮಂತ್ರಿಯಾಗಬೇಕೆಂಬ ನಿರೀಕ್ಷೆಯಲ್ಲಿದ್ದಾರೆ.

ಮತ್ತೊಂಡೆ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಮಾಡಬೇಕೆಂದು ಅವರ ಬೆಂಬಲಿಗರು ಪಣತೊಟ್ಟಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡೇ ಜಮೀರ್ ಅಹಮದ್‌ಖಾನ್ ಎರಡು ವರ್ಷಗಳಿಗೂ ಮುನ್ನವೇ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆ ಮಾಡಿದರು. ಅದಾದ ನಂತರ ಅವರ ಬೆಂಬಲಿಗರೂ ಇದನ್ನೇ ಪುನರಾವರ್ತನೆ ಮಾಡುತ್ತಿದ್ದಾರೆ.

ವರಿಷ್ಠರ ಎಚ್ಚರಿಕೆಯನ್ನು ಕಡೆಗಣಿಸಿ, ಸಿದ್ದರಾಮಯ್ಯ ಅವರ ಪರ ಸಾರ್ವಜನಿಕವಾಗಿ ಹೇಳಿಕೆ ಕೊಡುತ್ತಿದ್ದಾರೆ. ಇದು ಶಿವಕುಮಾರ್ ಅವರಿಗೆ ಇರಿಸುಮುರಿಸು ತಂದಿದ್ದರೂ, ಏನನ್ನೂ ತೋರ್ಪಡಿಸಿಕೊಳ್ಳುತ್ತಿಲ್ಲ.

ಏನೇ ಆಗಲಿ, ಮೊದಲು ವಿಧಾನಸಭೆ ಪ್ರವೇಶಿಸೋಣ.. ನಂತರ ಮುಂದಿನದ್ದು ಎಂಬ ನಿರ್ಧಾರಕ್ಕೆ ಬಂದಿರುವ ಸಿದ್ದರಾಮಯ್ಯ ಸುಲಭವಾಗಿ ಮತ ಗಳಿಸುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿಯಲ್ಲಿ ಪರಾಜಯಗೊಂಡು ಬಾದಾಮಿಯಲ್ಲಿ ಬಹಳ ಕಷ್ಟಪಟ್ಟು ಅತ್ಯಂತ ಕಡಿಮೆ ಅಂತರದಲ್ಲಿ ಆಯ್ಕೆಗೊಂಡು ವಿಧಾನಸಭೆ ಪ್ರವೇಶ ಮಾಡಿದ್ದರು ಸಿದ್ದರಾಮಯ್ಯ. ಅಂತಹ ಪರಿಸ್ಥಿತಿ ಮತ್ತೆ ಬರಬಾರದೆಂದು ಎರಡು ವರ್ಷಗಳ ಮುನ್ನವೇ ಎಚ್ಚರಿಕೆ ವಹಿಸಿದ್ದಾರೆ.

Tags: chamarajpetnarasimharajarizwan arshadshivaji nagarsiddaramaiahtanveer saitZameer Ahmed Khan
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ತಮಿಳುನಾಡಿನಂತೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಇಳಿಸಲ್ಲ ಎಂದ ಸಿಎಂ ಬೊಮ್ಮಾಯಿ

ತಮಿಳುನಾಡಿನಂತೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಇಳಿಸಲ್ಲ ಎಂದ ಸಿಎಂ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

Recommended

ಕೆರೆ ಕಾಮಗಾರಿ ಕಳಪೆ; ಕೋಲಾರ ಅಧಿಕಾರಿಗಳ ಬೆವರಿಳಿಸಿದ ನಿರ್ಮಲಾ ಸೀತಾರಾಮನ್

ಕೆರೆ ಕಾಮಗಾರಿ ಕಳಪೆ; ಕೋಲಾರ ಅಧಿಕಾರಿಗಳ ಬೆವರಿಳಿಸಿದ ನಿರ್ಮಲಾ ಸೀತಾರಾಮನ್

4 years ago
ಸ್ಟಾಲಿನ್‌ಗೆ ಸಿಎಂ ಲೆಟರ್‌ ಬರೆದದ್ದು ತಪ್ಪೆಂದ ಸಿದ್ದು; ಮೇಕೆದಾಟು ಮಾಡಿಯೇ ತೀರುತ್ತೇವೆ ಎಂದ ಬೊಮ್ಮಾಯಿ

ಮೇಕೆದಾಟು ಯೋಜನೆಗೆ CWC ಒಪ್ಪಿಗೆ ಕೊಟ್ಟ ಕೂಡಲೇ ಕಾಮಗಾರಿ ಆರಂಭ: ಸಿಎಂ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ