• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ವಿಧ್ಯುಕ್ತ ಜಾರಿ

cknewsnow desk by cknewsnow desk
August 23, 2021
in EDITORS'S PICKS, NATION, STATE
Reading Time: 2 mins read
0
ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ವಿಧ್ಯುಕ್ತ ಜಾರಿ
973
VIEWS
FacebookTwitterWhatsuplinkedinEmail

ದೇಶದಲ್ಲೇ ಎಲ್ಲರಿಗಿಂತ ಮೊದಲೇ ಕರ್ನಾಟಕದ ದಾಪುಗಾಲು: ವರ್ಚುಯಲ್ ಸಭೆಯಲ್ಲಿ ಹಸಿರು ನಿಶಾನೆ ತೋರಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

  • ಶಿಕ್ಷಣ ನೀತಿಯಡಿ ಕಲಿಕೆ; ಈ ವರ್ಷದಿಂದಲೇ ಉನ್ನತ ಶಿಕ್ಷಣದಲ್ಲಿ ದಾಖಲಾತಿ ಆರಂಭ
  • ಈ ವರ್ಷ ದಾಖಲಾಗುವ ಎಲ್ಲ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ
  • ಕನೆಕ್ಟ್ ಕರ್ನಾಟಕ: ಈ ವರ್ಷದಿಂದಲೇ ಹೊಸ ಡಿಜಿಟಲ್ ನೀತಿ
  • ಸಂಶೋಧನೆಗೆ ಒತ್ತು: ಸಂಶೋಧನೆ & ಅಭಿವೃದ್ಧಿ ನೀತಿಯೂ ಈ ವರ್ಷವೇ ಜಾರಿ
  • ಈ ವರ್ಷವೇ ಪ್ರಾಥಮಿಕ & ಪ್ರೌಢ ಶಿಕ್ಷಣ ಪರಿಷತ್‌ ಸ್ಥಾಪನೆ

ಬೆಂಗಳೂರು: ಇಡೀ ದೇಶದಲ್ಲಿಯೇ ಎಲ್ಲ ರಾಜ್ಯಗಳಿಗಿಂತ ಮೊದಲು ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ಸೋಮವಾರ ವಿಧ್ಯುಕ್ತವಾಗಿ ಜಾರಿಗೆ ತರಲಾಯಿತು. ಇದರೊಂದಿಗೆ ರಾಜ್ಯವು ಶೈಕ್ಷಣಿಕ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆ ಇರಿಸಿದಂತಾಗಿದೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನವದೆಹಲಿಯಿಂದಲೇ ವರ್ಚುಯಲ್ ವೇದಿಕೆ ಮೂಲಕ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಗೆ ಹಸಿರು ನಿಶಾನೆ ತೋರಿಸಿದರಲ್ಲದೆ, ಶಿಕ್ಷಣ ಕ್ಷೇತ್ರದಲ್ಲಿ ಸದಾ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ ಇಂದಿನಿಂದ ಹೊಸ ಮನ್ವಂತರ ಆರಂಭವಾಗಿದೆ ಎಂದು ಘೋಷಿಸಿದರು.

ಇದೇ ವೇದಿಕೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕಲಿಕೆಗೆ ಉನ್ನತ ಶಿಕ್ಷಣ ವಿಭಾಗದಲ್ಲಿ ಇಂದಿನಿಂದಲೇ ವಿದ್ಯಾರ್ಥಿಗಳ ದಾಖಲಾತಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈ ಬಾರಿ ಮೊದಲ ವರ್ಷದ ಪದವಿಗೆ ದಾಖಲಾಗುವ ಎಲ್ಲ ವಿದ್ಯಾರ್ಥಿಗಳಿಗೂ ಸರಕಾರವೇ ಉಚಿತವಾಗಿ ಟ್ಯಾಬ್ಲೆಟ್ ಪಿಸಿಗಳನ್ನು ನೀಡಲಿದೆ ಎಂದು ಘೋಷಣೆ ಮಾಡಿದರು.

ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ನೀಡುವ ವಿಚಾರವಾಗಿ ಉನ್ನತ ಶಿಕ್ಷಣ ಸಚಿವರಾದ ಡಾ.ಅಶ್ವತ್ಥನಾರಾಯಣ ಅವರು ನನಗೆ ಸಲಹೆ ನೀಡಿದ್ದರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅವುಗಳ ಅಗತ್ಯದ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಹೀಗಾಗಿ ಈ ಬಾರಿ ಮೊದಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ಆದಷ್ಟು ಬೇಗ ನೀಡಲಾಗುವುದು ಎಂದು ಸಿಎಂ ಹೇಳಿದರು.

ಅಲ್ಲದೆ, ರಾಜ್ಯದ ಡಿಜಿಟಲ್ ನೀತಿ ಹಾಗೂ ಸಂಶೋಧನೆ- ಅಭಿವೃದ್ಧಿ ನೀತಿಯನ್ನೂ ಈ ವರ್ಷದಿಂದಲೇ ಜಾರಿ ಮಾಡಲಾಗುವುದು ಎಂದು ಘೋಷಣೆ ಮಾಡಿದರು.

ರಾಜ್ಯದ ಗುಣಗಾನ ಮಾಡಿದ ಪ್ರಧಾನ್

ನಮ್ಮ ದೇಶದ ಎಲ್ಲ ರಾಜ್ಯಗಳ ಪೈಕಿ ಎಲ್ಲರಿಗಿಂತ ಮೊದಲೇ ಕರ್ನಾಟಕ ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತಂದಿದ್ದು, ಇದು ರಾಜ್ಯದ ದಿಕ್ಕನ್ನೇ ಬದಲಿಸುತ್ತದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಇಂದಿನಿಂದ ಹೊಸ ಮನ್ವಂತರ ಆರಂಭವಾಗಿದ್ದು, ಇಡೀ ದೇಶದಲ್ಲೇ ಕರ್ನಾಟಕವು ಶಿಕ್ಷಣ ಕ್ಷೇತ್ರದಲ್ಲಿ ಬಹುದೊಡ್ಡ ದಾಪುಗಾಲು ಇಟ್ಟಿದೆ. ಇಡೀ ದೇಶವನ್ನೇ ನವ ದಿಕ್ಕಿನತ್ತ ಚಲಿಸುವಂತೆ ಮಾಡಬಲ್ಲ ಶಿಕ್ಷಣ ನೀತಿಯು, ಬಹ ಶಿಸ್ತಿಯ ಹಾಗೂ ಬಹು ಆಯ್ಕೆಯ ಕಲಿಕೆಗೆ ಉತ್ತೇಜನ ನೀಡಲಿದ್ದು, ವಿದ್ಯಾರ್ಥಿಗಳು ತಮಗಿಷ್ಟವಾದ ವಿಷಯವನ್ನು ಮುಕ್ತವಾಗಿ ಅಧ್ಯಯನ ಮಾಡಬಹುದಾಗಿದೆ ಎಂದು ಪ್ರಧಾನ್ ಹೇಳಿದರು.

ಉನ್ನತ ಶಿಕ್ಷಣ: ಇಂದಿನಿಂದ ವಿದ್ಯಾರ್ಥಿಗಳ ದಾಖಲಾತಿ

ಶಿಕ್ಷಣ ನೀತಿ ಜಾರಿಗೆ ಬಂದ ಬೆನ್ನಲ್ಲೇ ಉನ್ನತ ಶಿಕ್ಷಣಕ್ಕೆ ನೂತನ ವಿದ್ಯಾರ್ಥಿಗಳನ್ನು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ದಾಖಲು ಮಾಡಿಕೊಳ್ಳುವ ಪ್ರಕ್ರಿಯೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ವೇದಿಕೆಯಲ್ಲೇ ಚಾಲನೆ ನೀಡಿದರು. ಇದರನ್ವಯ ಅಕ್ಟೋಬರ್ 1ರಿಂದ ಪದವಿ ಮೊದಲ ವರ್ಷದ ತರಗತಿಗಳು ಆರಂಭವಾಗಲಿವೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿಯೇ ಶಿಕ್ಷಣ ನೀತಿಯನ್ನು ಎಲ್ಲರಿಗಿಂತ ಮೊದಲೇ ಜಾರಿ ಮಾಡುತ್ತಿರುವ ನಮ್ಮ ರಾಜ್ಯವೂ, ಮುಂಬರುವ ದಿನಗಳಲ್ಲಿ ಡಿಜಿಟಲ್ ಕಲಿಕೆಯನ್ನು ಉತ್ತೇಜಿಸಲು, ಅಂತರ್ಜಾಲದಿಂದ ಪ್ರತಿ ಹಳ್ಳಿಯನ್ನು ಬೆಸೆಯಲು ಕಟಿಬದ್ಧವಾಗಿದ್ದು, ಇದಕ್ಕಾಗಿ ʼಹೊಸ ಡಿಜಿಟಲ್ ಪಾಲಸಿʼ ಜಾರಿಗೆ ತರುವುದಾಗಿ ಘೋಷಣೆ ಮಾಡಿದರು.

ಮೊದಲಿನಿಂದಲೂ ಕರ್ನಾಟಕವು ಶೈಕ್ಷಣಿಕವಾಗಿ ಅದರಲ್ಲೂ ವೈಜ್ಞಾನಿಕ ಅಧ್ಯಯನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ಹೀಗಾಗಿ ನೂತನ ʼಸಂಶೋಧನೆ ಮತ್ತು ಅಭಿವೃದ್ಧಿ ನೀತಿʼಯನ್ನು ಜಾರಿಗೆ ತರಲಾಗುವುದು. ಈ ಮೂಲಕ ವೈಜ್ಞಾನಿಕ ಸಂಶೋಧನೆ, ಅಭಿವೃದ್ಧಿಗೆ ಅತಿ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಮುಖ್ಯಮಂತ್ರಿ @BSBommai ರವರು ಎನ್.ಇ.ಪಿ ಸಹಾಯವಾಣಿ, ಉನ್ನತ ಶಿಕ್ಷಣ ಅಂತಾರಾಷ್ಟ್ರೀಕರಣ, 2021-22ನೇ ಸಾಲಿಗೆ ಉನ್ನತ ಶಿಕ್ಷಣಕ್ಕೆ ಪ್ರವೇಶಾತಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಅಧ್ಯಕ್ಷ ಡಾII ಕೆ.ಕಸ್ತೂರಿರಂಗನ್ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು. (2/3) pic.twitter.com/cxEm3wyR9a

— CM of Karnataka (@CMofKarnataka) August 23, 2021

ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆಗೂ ಚಾಲನೆ

ರಾಜ್ಯ ಸರಕಾರದ ಕಾಲೇಜು ಶಿಕ್ಷಣ ಇಲಾಖೆ ರೂಪಿಸಿರುವ ಮಹತ್ವಾಕಾಂಕ್ಷಿ ಯೋಜನೆಯಾದ ʼಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆʼ ಎಂಬ ವಿದ್ಯಾರ್ಥಿಗಳ ದಾಖಲಾತಿ ವ್ಯವಸ್ಥೆಗೂ ಇದೇ ವೇಳೆ ಮುಖ್ಯಮಂತ್ರಿ ಚಾಲನೆ ನೀಡಿದರು.

ಆದ್ಯತೆಯ ಮೇರೆಗೆ ಶಿಕ್ಷಣ ನೀತಿಯನ್ನು ಜಾರಿ ಮಾಡಲಾಗುವುದು. ಇದಕ್ಕೆ ಬೇಕಾದ ಎಲ್ಲ ಸಹಕಾರ, ಸಂಪನ್ಮೂಲವನ್ನು ಒದಗಿಸಲಾಗುವುದು. ಇವತ್ತಿನಿಂದಲೇ ರಾಜ್ಯದಲ್ಲಿ ಅಧಿಕೃತವಾಗಿ ಶಿಕ್ಷಣ ನೀತಿ ಜಾರಿಗೆ ಬಂದಿದ್ದು, ಇದಕ್ಕೆ ಪೂರಕವಾಗಿ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲೂ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕವೇ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲಾಗುತ್ತಿದೆ ಎಂದರು ಸಿಎಂ.

ಎನ್ಇಪಿ ವೆಬ್ ಮತ್ತು ಸಹಾಯವಾಣಿ

ರಾಷ್ಟೀಯ ಶಿಕ್ಷಣ ನೀತಿಯ ಜಾರಿ ಸಂದರ್ಭದಲ್ಲಿ ಯಾವುದೇ ಗೊಂದಲ, ಸಮಸ್ಯೆ ಆಗಬಾರದು ಎನ್ನುವ ಕಾರಣಕ್ಕೆ ಕಾಲೇಜು ಶಿಕ್ಷಣ ಇಲಾಖೆ ರೂಪಿಸಿರುವ ಶಿಕ್ಷಣ ನೀತಿಯ ವೆಬ್ಸೈಟ್ ಮತ್ತು ಸಹಾಯವಾಣಿಗೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ ನೀಡಿದರು. 080-24486666 ಸಂಖ್ಯೆಯನ್ನು ಎಲ್ಲರೂ ಸಂಪರ್ಕ ಮಾಡಬಹುದು.

ಇದೇ ಕಾರ್ಯಕ್ರಮದಲ್ಲಿ ಹೊಸ ಶಿಕ್ಷಣ ನೀತಿಯಡಿ ಉನ್ನತ ಶೀಕ್ಷಣವನ್ನು ಜಾಗತೀಕರಣಗೊಳಿಸುವ ನಿಟ್ಟಿನಲ್ಲಿ ಅಮೆರಿಕದ ಪೆನ್ಸಿಲ್ವೇನಿಯಾ ರಾಜ್ಯದ ಮಾಂಟಿಗೋಮೆರಿ ಕಮ್ಯುನಿಟಿ ಕಾಲೇಜಿನ ಜತೆ ಕಾಲೇಜು ಶಿಕ್ಷಣ ಇಲಾಖೆ ಒಪ್ಪಂದ ಮಾಡಿಕೊಂಡಿದ್ದು, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಅನಾವರಣಗೊಳಿಸಿದರು.

ಜಾಗತಿಕ ಮಟ್ಟಕ್ಕೆ ಉನ್ನತ ಶಿಕ್ಷಣ

ಈ ಸಂದರ್ಭದಲ್ಲಿ ಮಾತನಾಡಿದ ಡಾ.ಅಶ್ವತ್ಥನಾರಾಯಣ ಅವರು, ಶಿಕ್ಷಣ ನೀತಿ ಜಾರಿಯ ಬಗ್ಗೆ ಈವರೆಗೆ ರಾಜ್ಯ ಸರಕಾರ ಕೈಗೊಂಡ ಎಲ್ಲ ಕ್ರಮಗಳನ್ನು ಪಟ್ಟಿ ಮಾಡಿದರಲ್ಲದೆ, ಹೊಸ ಶಿಕ್ಷಣ ನೀತಿಯು ರಾಜ್ಯಕ್ಕೆ ಅತ್ಯಗತ್ಯವಾಗಿತ್ತು. ರಾಜ್ಯದ ಸಮಗ್ರ ವಿಕಾಸಕ್ಕೆ ಇದು ಮುಂದಿನ ದಿನಗಳಲ್ಲಿ ದೊಡ್ಡ ಕಾಣಿಕೆ ನೀಡಲಿದೆ ಎಂದರು.

ಈ ದಿನವು ಐತಿಹಾಸಿಕ ಏಕೆಂದರೆ, ನಮ್ಮ ಕರ್ನಾಟಕ ರಾಜ್ಯವು 21ನೇ ಶತಮಾನದಲ್ಲಿ ಭಾರತವನ್ನು "ವಿಶ್ವ ಗುರು" ಸ್ಥಾನಕ್ಕೇರಿಸುವ ಶತಮಾನದ ಮೊದಲ ರಾಷ್ಟ್ರೀಯ ಶಿಕ್ಷಣ ನೀತಿ–2020ರ ಅನುಷ್ಠಾನವನ್ನು ಸಾರ್ವಜನಿಕವಾಗಿ ಘೋಷಿಸುವ ಮೂಲಕ, ಈ ಘನ ಉದ್ದೇಶಕ್ಕಾಗಿ ತನ್ನ ಬದ್ಧತೆಯನ್ನು ಸಾಬೀತು ಪಡಿಸುತ್ತಿದೆ.#NEPKarnataka @CMofKarnataka @dpradhanbjp pic.twitter.com/rQuVyX3Zyd

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) August 23, 2021

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ.ನಾಗೇಶ್ ಕೂಡ ಮಾತನಾಡಿದರು. ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜು ಇಲಾಖೆಯ ಆಯುಕ್ತ ಪ್ರದೀಪ್ ಶಿಕ್ಷಣ ನೀತಿಯ ಪ್ರಾತ್ಯಕ್ಷಿಕೆ ನೀಡಿದರು. ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ.ಗೋಪಾಲ ಜೋಶಿ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ನೀತಿ ನಿರೂಪಕರಿಗೆ ಗೌರವ


ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿ ಅಧ್ಯಕ್ಷರಾಗಿದ್ದ ಇಸ್ರೋ ಸಂಸ್ಥೆಯ ವಿಶ್ರಾಂತ ಅಧ್ಯಕ್ಷ ಡಾ.ಕಸ್ತೂರಿ ರಂಗನ್, ಶಿಕ್ಷಣ ತಜ್ಞರಾದ ಪ್ರೊ.ಎಂ.ಕೆ.ಶ್ರೀಧರ್, ಪ್ರೊ.ಟಿ.ವಿ.ಕಟ್ಟೀಮನಿ ಹಾಗೂ ಅನುರಾಗ್ ಬೇಹರ್ ಅವರನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರು ಇದೇ ವೇಳೆ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಸ್ತೂರಿ ರಂಗನ್ ಅವರು; ಕರ್ನಾಟಕ ಸರಕಾರವು ಅತಿದೊಡ್ಡ, ಮಹತ್ವದ ನಿರ್ಧಾರ ಕೈಗೊಂಡಿದೆ. ಹೊಸ ಶಿಕ್ಷಣ ನೀತಿಯೂ ಪ್ರತಿಯೊಂದು ಹಂತದಲ್ಲೂ ಸಮಾಜವನ್ನು ಜ್ಞಾನದ ಮೂಲಕ ಬದಲಾವಣೆ ಮಾಡುತ್ತಾ ಹೋಗುತ್ತದೆ ಎಂದರು.

ಶಿಕ್ಷಣ ನೀತಿಯ ಕರಡು ಸಿಕ್ಕಿದ ಕೂಡಲೇ ರಾಜ್ಯ ಸರಕಾರ ಕಾರ್ಯಪಡೆಯನ್ನು ರಚನೆ ಮಾಡಿತು. ಕೇಂದ್ರ ಸರಕಾರ ನೀತಿಯನ್ನು ಘೋಷಣೆ ಮಾಡಿದ ನಂತರ ನಾನು ಬೆಂಗಳೂರಿಗೆ ವಾಪಸ್ ಬಂದೆ. ಆ ಕೂಡಲೇ ನಮ್ಮ ಮನೆಗೆ ಬಂದ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಡಾ.ಅಶ್ವತ್ಥನಾರಾಯಣ ಅವರು, ಆದಾಗ್ಗೆ ಕೈಗೊಂಡಿದ್ದ ಕ್ರಮಗಳ ಬಗ್ಗೆ ವಿವರಿಸಿದರು. ಅವರಿಬ್ಬರೂ ನಮಗಿಂತ ವೇಗವಾಗಿದ್ದರು. ನನಗೆ ಬಹಳ ಆಶ್ಚರ್ಯವಾಯಿತು. ಅಂದು ನಡೆದ ಚರ್ಚೆಯಂತೆ ಇಂದು ಶಿಕ್ಷಣ ನೀತಿ ಕರ್ನಾಟಕದಲ್ಲಿ ಅನುಷ್ಠಾನಕ್ಕೆ ಬರುತ್ತಿದೆ ಎಂದು ಹೇಳಿದರು ಕಸ್ತೂರಿ ರಂಗನ್.

ಇವತ್ತು ನನಗೆ ಅತಿ ಹೆಚ್ಚು ಸಂತಸದ ದಿನ. ಸಚಿವ ಅಶ್ವತ್ಥನಾರಾಯಣ ಅವರು ಹೇಳಿದಂತೆ‌ ಮಾಡಿ ತೋರಿಸಿದರು. ಸಣ್ಣ ಪುಟ್ಟ ದೋಷಗಳು ಬರಬಹುದು. ಆದರೆ ಎದೆಗುಂದದೆ ಕೆಲಸ‌ ಮಾಡಿ. ಈ ವಿಷಯದಲ್ಲಿ ಅಶ್ವತ್ಥನಾರಾಯಣ ಅವರನ್ನು ಅಭಿನಂದಿಸುವುದಾಗಿ ಕಸ್ತೂರಿ ರಂಗನ್ ಹೇಳಿದರು.

Tags: implement in Karnatakaindianation education policynep2020new education policy
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಚಿಕ್ಕಬಳ್ಳಾಪುರದಲ್ಲಿ ಮೊದಲ ದಿನ ಶಾಲೆ ಸುಖಾಂತ್ಯ; ಎಲ್ಲೂ ಸಮಸ್ಯೆ ಇಲ್ಲ

ಚಿಕ್ಕಬಳ್ಳಾಪುರದಲ್ಲಿ ಮೊದಲ ದಿನ ಶಾಲೆ ಸುಖಾಂತ್ಯ; ಎಲ್ಲೂ ಸಮಸ್ಯೆ ಇಲ್ಲ

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಬಂದ್ ಇಲ್ಲ

ಕರ್ನಾಟಕ ಬಂದ್ ಇಲ್ಲ

5 years ago
ಶಿಕ್ಷಣದಲ್ಲಿ ಕೇಂದ್ರೀಕರಣ ವ್ಯವಸ್ಥೆ; ಸಿಎಂ ನೇತೃತ್ವದಲ್ಲಿ ಶಿಕ್ಷಣ ಆಯೋಗ ರಚನೆಗೆ ಶಿಫಾರಸು

ಶಿಕ್ಷಣದಲ್ಲಿ ಕೇಂದ್ರೀಕರಣ ವ್ಯವಸ್ಥೆ; ಸಿಎಂ ನೇತೃತ್ವದಲ್ಲಿ ಶಿಕ್ಷಣ ಆಯೋಗ ರಚನೆಗೆ ಶಿಫಾರಸು

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ