• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರದಲ್ಲಿ ಮೊದಲ ದಿನ ಶಾಲೆ ಸುಖಾಂತ್ಯ; ಎಲ್ಲೂ ಸಮಸ್ಯೆ ಇಲ್ಲ

cknewsnow desk by cknewsnow desk
August 23, 2021
in CHIKKABALLAPUR, STATE
Reading Time: 1 min read
0
ಚಿಕ್ಕಬಳ್ಳಾಪುರದಲ್ಲಿ ಮೊದಲ ದಿನ ಶಾಲೆ ಸುಖಾಂತ್ಯ; ಎಲ್ಲೂ ಸಮಸ್ಯೆ ಇಲ್ಲ

ಸರಕಾರಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಸಚಿವ ಡಾ.ಕೆ.ಸುಧಾಕರ್ ಅವರಿಗೆ ರಾಖಿ ಕಟ್ಟಿದರು.

966
VIEWS
FacebookTwitterWhatsuplinkedinEmail

ಇಂದಿನಿಂದ 9-12ನೇ ತರಗತಿಗಳ ಆರಂಭ: ಶಾಲೆಗಳಿಗೆ ಸಚಿವ ಡಾ.ಕೆ.ಸುಧಾಕರ್ ಭೇಟಿ

ಚಿಕ್ಕಬಳ್ಳಾಪುರ: ರಾಜ್ಯ ಸರಕಾರದ ಸೂಚನೆಯಂತೆ ರಾಜ್ಯಾದ್ಯಂತ ಹಲವು ದಿನಗಳ ಬಳಿಕ 9ರಿಂದ 12 ತರಗತಿಗಳು ಸೋಮವಾರದಿಂದ ಆರಂಭಗೊಂಡಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲ ಎಲ್ಲ ತಾಲೂಕುಗಳಲ್ಲಿ ತರಗತಿಗಳು ಸುಖಾಂತ್ಯಗೊಂಡಿವೆ.

ಹಾಝರಾತಿ ಉತ್ತಮವಾಗಿತ್ತು. ಕೆಲ ವಿದ್ಯಾರ್ಥಿಗಳು ಮಾತ್ರ ತರಗತಿಗಳಿಗೆ ಹಾಜರಾಗದೇ ಆನ್‌ಲೈನ್‌ ಮೂಲಕವೇ ಪಾಠ ಕೇಳಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಡಿಬಂಡೆ, ಬಾಗೇಪಲ್ಲಿ, ಗೌರಿಬಿನೂರು, ಶಿಡ್ಲಘಟ್ಟ, ಚಿಂತಾಮಣಿ ತಾಲೂಕುಗಳಲ್ಲಿ ಯಾವುದೇ ಸಮಸ್ಯೆ ಇಲ್ಲದೆ ತರಗತಿಗಳು ಉತ್ತಮವಾಗಿ ನಡೆದಿವೆ.

ರಾಜ್ಯಾದ್ಯಂತ ಇಂದಿನಿಂದ 9 ಹಾಗೂ 10 ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಲ್ಲಿ ಭೌತಿಕ ತರಗತಿಗಳು ಪುನರಾರಂಭವಾಗಿತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರದ ವಾಪಸಂದ್ರದಲ್ಲಿರುವ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಲಾಯಿತು.#ಮರಳಿಶಾಲೆಗೆ

1/2 pic.twitter.com/8PNAS5iz5p

— Dr Sudhakar K (Modi ka Parivar) (@DrSudhakar_) August 23, 2021

ಶಾಲೆ-ಶಾಲೆಗಳಿಗೆ ಸಚಿವ ಭೇಟಿ

ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ಚಿಕ್ಕಬಳ್ಳಾಪುರ ನಗರದ ವಿವಿಧ ಸರಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ, ಕೊರೊನಾ ಹಿನ್ನಲೆಯಲ್ಲಿ ಶಾಲೆಗಳಲ್ಲಿ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಮೊದಲಿಗೆ ನಗರದ ಬಿಬಿ ರಸ್ತೆಯಲ್ಲಿರುವ ಜೂನಿಯರ್ ಕಾಲೇಜು ಆವರಣದ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಠಿಯಿಂದ ಶಾಲೆಯಲ್ಲಿ ಕೈಗೊಂಡಿರುವ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿ ಶಿಕ್ಷಕರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳು ನಿರ್ಭಯವಾಗಿ ಶಾಲೆಗಳಿಗೆ ಬರಬಹುದು ಎಂದು ಸ್ಥೈರ್ಯ ತುಂಬಿದರು.

ನಂತರ ನಗರದ ವಾಪಸಂದ್ರದಲ್ಲಿರುವ ಸರಕಾರಿ ಬಾಲಕಿಯರ ಪ್ರೌಢಶಾಲೆಗೆ ಭೇಟಿ ನೀಡಿದ ಸಚಿವರು, ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, “ಕೊರೊನಾ ಹೊಡೆತದಿಂದ ಅನೇಕ ಕ್ಷೇತ್ರಗಳಿಗೆ ಅಪಾರ ನಷ್ಟ ಉಂಟಾಗಿದೆ. ಅದೇ ರೀತಿಯಾಗಿ ದೇಶದ ಅಭಿವೃದ್ಧಿ ವಿಚಾರದಲ್ಲಿ ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಣ ಕ್ಷೇತ್ರಕ್ಕೂ ಕೂಡ ತುಂಬಲಾರದ ನಷ್ಟ ಉಂಟಾಗಿದೆ. ಈ ನಿಟ್ಟಿನಲ್ಲಿ ಮಕ್ಕಳ ಆರೋಗ್ಯದ ಜತೆಗೆ ಅವರ ಶೈಕ್ಷಣಿಕ ಬದುಕನ್ನು ರೂಪಿಸುವುದೂ ಕೂಡ ಸರ್ಕಾರದ ಮುಖ್ಯ ಜವಾಬ್ಧಾರಿಯಾಗಿದೆ. ಈ ನಿಟ್ಟಿನಲ್ಲಿ ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಕೋವಿಡ್ -19 ಅನ್ನು ಪರಿಣಾಮಕಾರಿಯಾಗಿ ನಿಯಂತ್ರಣಕ್ಕೆ ತಂದು ಇದೀಗ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಪ್ರಸ್ತುತ 9 ರಿಂದ 12ನೇ ತರಗತಿಯವರಿಗೆ ತರಗತಿಗಳನ್ನು ಆರಂಭಿಸಲಾಗಿದೆ ಎಂದರು.

ಪ್ರಾರಂಭದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಯಿತು. ಅದಾದ ಬಳಿಕ ಹಂತಹಂತವಾಗಿ ಉನ್ನತ ಶಿಕ್ಷಣಕ್ಕೆ ಅನುವು ಮಾಡಿಕೊಡಲಾಯಿತು. ಇದೀಗ 9ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳು ಮಾನಸಿಕವಾಗಿ ಸದೃಢವಾಗಬೇಕು ಎಂಬುದರ ಬಗ್ಗೆ ಮಕ್ಕಳಿಗೆ ನೈತಿಕ ಸ್ಫೂರ್ತಿ ತುಂಬುವ ಉದ್ದೇಶದಿಂದ ಶಾಲೆಗಳಿಗೆ ಭೇಟಿ ನೀಡಲಾಗಿದೆ ಎಂದು ಅವರು ತಿಳಿಸಿದರು.

ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಪ್ರಸ್ತುತ ಒಂದು ತರಗತಿಯಲ್ಲಿ ಗರಿಷ್ಠ 20 ಮಂದಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಶಾಲೆ ಆರಂಭಕ್ಕೆ ಆರೋಗ್ಯ ಇಲಾಖೆಯಿಂದಲೇ ಎಲ್ಲಾ ರೀತಿಯ ಮಾರ್ಗಸೂಚಿಗಳನ್ನು ನೀಡಲಾಗಿದೆ. ಶಿಕ್ಷಣ ಇಲಾಖೆ ಅದನ್ನು ಯಥಾವತ್ತಾಗಿ ಪಾಲನೆ ಮಾಡಲು ಸೂಚಿಸಿದೆ. ವಿದ್ಯಾರ್ಥಿಗಳಲ್ಲಿ ಶೀತ, ಜ್ವರ, ಕೆಮ್ಮು ಸೇರಿದಂತೆ ಇತರೆ ಕೊರೊನಾ ಸೊಂಕಿನ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಅವರನ್ನು ಪರೀಕ್ಷೆ ಮಾಡಲಾಗುತ್ತದೆ. ಒಂದು ವೇಳೆ ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಮಗುವನ್ನು ಮನೆಗೆ ಕಳುಹಿಸಿಕೊಡುವುದು, ಇಲ್ಲವೇ ಹೆಚ್ಚಿನ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತದೆ. ಶಿಕ್ಷಕರು, ಬೋಧಕೇತರ ಸಿಬ್ಬಂದಿ ಕಡ್ಡಾಯವಾಗಿ ಕನಿಷ್ಠ ಮೊದಲ ಡೋಸ್ ಲಸಿಕೆಯಾದರೂ ಪಡೆದಿರಬೇಕು ಸೇರಿದಂತೆ ಇತರೆ ನಿಯಮಗಳನ್ನು ಮಾರ್ಗಸೂಚಿಯಲ್ಲಿ ಹೊರಡಿಸಲಾಗಿದ್ದು, ಅದರಂತೆ ಎಲ್ಲಾ ಶಾಲೆಗಳಲ್ಲೂ ತರಗತಿಗಳು ಆರಂಭವಾಗಿವೆ ಎಂದು ಸಚಿವರು ಹೇಳಿದರು.

ಸಚಿವರಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

ಇದೇ ಸಂದರ್ಭದಲ್ಲಿ ಸರಕಾರಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಸಚಿವ ಡಾ.ಕೆ.ಸುಧಾಕರ್ ಅವರಿಗೆ ರಾಖಿ ಕಟ್ಟುವ ಮೂಲಕ ಸಹೋದರತ್ವ ಮೆರೆದರು. ಗಾಯಕ ಮಹಾಲಿಂಗಯ್ಯ ಮಠದ್ ಅವರ ಗಾಯನ ತಂಡವು ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡದ್ದು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಆರ್.ಲತಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯರಾಮರೆಡ್ಡಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags: covid19educationKarnataka fight back corona. Karnatakaminister dr k sudhakarschools reopen
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ʼಧನಲಾಭʼ ಎಂಬ ನಕಲಿ ರಸಗೊಬ್ಬರ

ʼಧನಲಾಭʼ ಎಂಬ ನಕಲಿ ರಸಗೊಬ್ಬರ

Leave a Reply Cancel reply

Your email address will not be published. Required fields are marked *

Recommended

ಬೆಡ್‌ ಬ್ಲಾಕಿಂಗ್‌ ದಂಧೆಗೆ ಮುಲಾಮು: ಇನ್ಮುಂದೆ ಹೊಸ ತಂತ್ರಾಂಶದ ಮೂಲಕ Q ಪದ್ಧತಿಯಲ್ಲಿ ಬೆಡ್‌ ಹಂಚಿಕೆ, ವಂಚನೆಗೆ ಚಾನ್ಸೇ ಇಲ್ವಂತೆ!!

ಬೆಡ್‌ ಬ್ಲಾಕಿಂಗ್‌ ದಂಧೆಗೆ ಮುಲಾಮು: ಇನ್ಮುಂದೆ ಹೊಸ ತಂತ್ರಾಂಶದ ಮೂಲಕ Q ಪದ್ಧತಿಯಲ್ಲಿ ಬೆಡ್‌ ಹಂಚಿಕೆ, ವಂಚನೆಗೆ ಚಾನ್ಸೇ ಇಲ್ವಂತೆ!!

5 years ago
ಸೋವಿಯತ್‌ ಹಾದಿಯಲ್ಲಿ ಚೀನಾ

ಸೋವಿಯತ್‌ ಹಾದಿಯಲ್ಲಿ ಚೀನಾ

4 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ