• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

ಹೊಸೂರು ಶಾಸಕರ ಪುತ್ರ ಸೇರಿ 7 ಯುವಜನರ ದುರ್ಮರಣ

cknewsnow desk by cknewsnow desk
August 31, 2021
in CRIME, STATE
Reading Time: 2 mins read
0
ಹೊಸೂರು ಶಾಸಕರ ಪುತ್ರ ಸೇರಿ 7 ಯುವಜನರ ದುರ್ಮರಣ

ಶಾಸಕ ವೈ.ಪ್ರಕಾಶ್‌ ಮತ್ತು ಅವರ ಪುತ್ರ ಕರುಣಾಸಾಗರ್‌

1.3k
VIEWS
FacebookTwitterWhatsuplinkedinEmail

ಢಿಕ್ಕಿ ರಭಸಕ್ಕೆ ಆಡಿ Q3 ಛಿಧ್ರ, ಒಳಗಿದ್ದವರೂ ನಜ್ಜುಗುಜ್ಜು; ಕೋರಮಂಗಲದಲ್ಲಿ ಭೀಕರ ಅಪಘಾತ

ಬೆಂಗಳೂರು: ಪೊಲೀಸರ ಎಚ್ಚರಿಕೆಯ ಮಾತನ್ನೂ ಕೇಳಲಿಲ್ಲ. ಅತಿ ವೇಗವನ್ನೂ ಗಣನೆಗೆ ತೆಗೆದುಕೊಳ್ಳಲಿಲ್ಲ. ಕೊನೆಗೆ ಬ್ರೇಕ್‌ ತುಳಿಯುವ ಬದಲು ಎಕ್ಸಿಲೇಟರ್‌ ತುಳಿದು ಈ ಘೋರ ದುರಂತಕ್ಕೆ ಶಾಸಕರ ಪುತ್ರ ಕಾರಣನಾದನಾ?

ತಡರಾತ್ರಿ ನಗರದ ಕೋರಮಂಗಲದ 80 ಅಡಿ ರಸ್ತೆಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ನೆರೆಯ ತಮಿಳುನಾಡಿನ ಹೊಸೂರು ಕ್ಷೇತ್ರದ ಶಾಸಕ ವೈ.ಪ್ರಕಾಶ್ ಅವರ ಪುತ್ರ ಕರುಣಾಸಾಗರ್‌, ಭಾವೀ ಸೊಸೆ ಸೇರಿ ಏಳು ಜನ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ ಘಟನೆ ಅನೇಕ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ವೇಗವಾಗಿ ನುಗ್ಗಿಬಂದ ಆಡಿ Q3 ಐಶಾರಾಮಿ ಕಾರು ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್‌ʼನಿಂದ ಹಾರಿಬಂದು ಗೋಡೆಗೆ ಬಲವಾಗಿ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಕಾರಿನಲ್ಲಿದ್ದ 7 ಯುವಜನರು ಸಾವನ್ನಪ್ಪಿದ್ದು, ಮೃತರಲ್ಲಿ ಮೂವರು ಮಹಿಳೆಯರು, ನಾಲ್ವರು ಪುರುಷರು ಇದ್ದಾರೆ.

ಅಪಘಾತದಿಂದ ಇಡೀ ಬೆಂಗಳೂರು ಬೆಚ್ಚಿಬಿದ್ದಿದ್ದು, ದುರಂತದ ದೃಶ್ಯಗಳು ಭೀಕರವಾಗಿವೆ. ನಗರದಲ್ಲಿ ಪದೇಪದೆ ಸಂಭವಿಸುತ್ತಿರುವ ಐಶಾರಾಮಿ ಕಾರುಗಳ ಅಪಘಾತಗಳ ಪ್ರಕರಣಗಳಿಗೆ ಈ ಘಟನೆ ಹೊಸ ಸೇರ್ಪಡೆಯಾಗಿದೆ.

ಮೃತಪಟ್ಟವರನ್ನು ಹೊಸೂರು ಶಾಸಕರ ಪುತ್ರ ಕರುಣಾಸಾಗರ್, ಅವರ ಭಾವೀ ಪತ್ನಿ ಬಿಂದು, ಇಶಿತಾ, ಡಾ.ಧನುಶಾ, ಅಕ್ಷಯ್ ಗೋಯಲ್, ಉತ್ಸವ್, ರೋಹಿತ್ ಎಂದು ತಿಳಿದು ಬಂದಿದೆ.‌ ಇವರೆಲ್ಲರಿಗೂ 20ರಿಂದ 30 ವರ್ಷದ ವಯಸ್ಸು ಎಂದು ಗೊತ್ತಾಗಿದೆ. ತಡರಾತ್ರಿ 1.52ರ ಸುಮಾರಿನಲ್ಲಿ ದುರಂತ ಘಟಿಸಿದೆ.

ಕರುಣಾಸಾಗರ್‌ ಚಿತ್ರಗಳು

ಇವರಿದ್ದ ಕಾರು ಅತಿ ವೇಗದಿಂದ ಬಂದು ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ದುರಂತಕ್ಕೀಡಾಗಿದೆ. ಅತಿ ವೇಗದ ಕಾರಣದಿಂದ ಕಾರು ರಸ್ತೆ ಬದಿಯ ಡಿವೈಡರ್‌ʼಗೆ ಢಿಕ್ಕಿ ಹೊಡೆದು ಬಳಿಕ ಗೋಡೆಗೆ ಡಿಕ್ಕಿಯಾದ ಪರಿಣಾಮ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದರಲ್ಲಿದ್ದ ಎಲ್ಲರ ದೇಹಗಳು ಕೂಡ ನಜ್ಜುಗುಜ್ಜಾಗಿವೆ. ಒಳಗಿದ್ದವರ ಕೈ ಕಾಲು ಮುರಿದಿದ್ದವು. ಅಪಘಾತದ ಭಾರೀ ಶಬ್ದ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು ಆ ದೃಶ್ಯಗಳನ್ನು ಕಂಡು ದಿಗ್ಭ್ರಮೆಗೊಂಡಿದ್ದಾರೆ.

ಇನ್ನು, ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಚಕ್ರಗಳು ಕಿತ್ತು ಬಂದಿವೆ. ದುರದೃಷ್ಟವಶಾತ್ ಕಾರಿನಲ್ಲಿದ್ದ ಯಾರೊಬ್ಬರೂ ಸೀಟ್ ಬೆಲ್ಟ್ ಹಾಕಿರಲಿಲ್ಲ. ಅತಿಯಾದ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

ಮೃತಪಟ್ಟ ಕರುಣಾಕರನ್‌ ಶಾಸಕ ಪ್ರಕಾಶ್‌ ಅವರ ಏಕೈಕ ಪುತ್ರನಾಗಿದ್ದು, ಬೆಂಗಳೂರು ಮುರುಗೇಶಪಾಳ್ಯದ ನಿವಾಸಿ, ಚೆನ್ನೈನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಬಿಂದು ಅವರ ಜತೆ ವಿವಾಹ ನಿಶ್ಚಯವಾಗಿತ್ತು. ಅಪಘಾತದ ವಿಷಯ ಗೊತ್ತಾಗುತ್ತಿದ್ದಂತೆ ಶಾಸಕ ಪ್ರಕಾಶ್‌ ಚೆನ್ನೈನಲ್ಲಿದ್ದರು ಎಂಬ ಮಾಹಿತಿ ಸಿಕ್ಕಿದೆ. ಅವರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.

ಇದೇ ವೇಳೆ ಸೇಂಟ್​ ಜಾನ್ಸ್​ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆಯನ್ನು ನಡೆಸಿ ಮೃತದೇಹಗಳನ್ನು ಅವರವರ ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗಿದೆ.

ಅಪಘಾತಕ್ಕೀಡಾದ ಕರುಣಾಸಾಗರ್  ಕಾರು.

ಡ್ರೈವ್‌ ಮಾಡುತ್ತಿದ್ದರು ಕರುಣಾಸಾಗರ್ 

ಐಶಾರಾಮಿ ಕಾರುಗಳು ಮತ್ತು ದ್ವಿಚಕ್ರ ವಾಹನಗಳ ಬಗ್ಗೆ ಭಾರೀ ಕ್ರೇಜ್‌ ಹೊಂದಿದ್ದರೆನ್ನಲಾದ ಕರುಣಾ ಸಾಗರ್  ಅವರೇ ಸ್ವತಃ ಕಾರು ಓಡಿಸುತ್ತಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಲಭ್ಯ ಮಾಹಿತಿಯಂತೆ ಸೋಮವಾರ ರಾತ್ರಿ 11.30ರ ಹೊತ್ತಿಗೆ ಊಟ ಮಾಡಿಕೊಂಡು ನಂತರ ಬೆಂಗಳೂರು ರೌಂಡ್ಸ್‌ ಹಾಕಲು ಹೊರಟ ಈ ಏಳು ಮಂದಿ ಇಡೀ ನಗರವನ್ನು ಸುತ್ತಾಡಿದ್ದಾರೆ. ಭಾವಿ ಪತ್ನಿ ಹಾಗೂ ಗೆಳೆಯ, ಗೆಳತಿಯರನ್ನು ಜತೆಯಲ್ಲಿ ಕೂರಿಸಿಕೊಂಡು ಸಂಭ್ರಮದಿಂದ ಅವರು ಕಾರು ವಿಹಾರ ನಡೆಸಿದ್ದಾರೆ. ಆದರೆ, ಇವರ ಸಂಭ್ರಮ ಅತಿ ವೇಗದ ಕಾರಣಕ್ಕೆ ಬಹಳ ಹೊತ್ತು ಉಳಿಯಲಿಲ್ಲ. ಕಾರು ಅದೇ ಭಾರೀ ವೇಗದಲ್ಲಿ ಕೋರಮಂಗಲದ ಬಳಿಗೆ ಬರುವಷ್ಟರಲ್ಲಿ ಎದುರಿಗೆ ಬಂದ ತಿರುವಿನಲ್ಲಿ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ನಂತರ ಅಷ್ಟೇ ವೇಗದಲ್ಲಿ ಗೋಡೆಗೆ ಬಡಿದಿದೆ. ಕರುಣಾ ಸಾಗರ್  ಕೂಡ ಸೀಟ್ ಬೆಲ್ಟ್ ಹಾಕದೆ ಕಾರು ಚಾಲನೆ ಮಾಡುತ್ತಿದ್ದರು. ಇಷ್ಟು ಭಾರೀ ದುರಂತ ಸಂಭವಿಸಿದರೂ ಕಾರಿನ ಏರ್ʼಬ್ಯಾಗ್ʼಗಳೂ ಬಿಚ್ಚಿಕೊಂಡಿಲ್ಲ ಎಂದು ಪೊಲೀಸ್‌  ಮೂಲಗಳು ತಿಳಿಸಿವೆ.

ಪ್ರಕರಣ ದಾಖಲು

ಪ್ರತ್ಯಕ್ಷದರ್ಶಿಯೊಬ್ಬರು ನೀಡಿದ ದೂರಿನ ಮೇರೆಗೆ ಆಡುಗೋಡಿ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ. ಸೆಕ್ಷನ್​ 304ಎ ಮತ್ತು 279 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಾರಿನಲ್ಲಿದ್ದವರು ಮದ್ಯ ಸೇವನೆ ಮಾಡಿದ್ದರಾ? ಎನ್ನುವ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರ ರಕ್ತದ ಸ್ಯಾಂಪಲ್‌ʼಗಳನ್ನು ಪರೀಕ್ಷೆಗೆ ಕಳಿಸಲಾಗಿದೆ.

ಕೇವಲ ಐವರು ಮಾತ್ರ ಕೂರಬಹುದಾದ ಕಾರಿನಲ್ಲಿ ಏಳು ಜನರು ಕೂತಿದ್ದರು. ಇದು ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಆಡುಗೋಡಿ ವ್ಯಾಪ್ತಿಯಲ್ಲಿ ವೇಗವಾಗಿ ಸುತ್ತಾಡುವಾಗ 11.50ರ ಸುಮಾರಿನಲ್ಲಿ ಒಮ್ಮೆ ಪೊಲೀಸರು ಎಚ್ಚರಿಕೆ ಕೊಟ್ಟು ಕಳಿಸಿದ್ದಾರೆ ಎನ್ನಲಾಗಿದ್ದು, ಆಮೇಲೂ ಅವರು ಜಾಲಿ ರೈಡ್‌ ಮಾಡಿ ಅಪಾಯ ತಂದುಕೊಂಡಿದ್ದಾರೆ ಎಂದು ಗೊತ್ತಾಗಿದೆ. ಬಹುಶ ನಿಯಂತ್ರಣ ತಪ್ಪಿದ ಕಾರನ್ನು ಕಂಟ್ರೋಲ್‌ ಮಾಡಲು ಕರುಣಾ ಸಾಗರ್‌ ಅವರು ಬ್ರೇಕ್‌ ಒತ್ತುವ ಬದಲು ಎಕ್ಸಲೇಟರ್‌ ತುಳಿದಿರಬಹುದು ಎಂಬ ಅನುಮಾನವನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಜತೆ ನಿಕಟ ನಂಟು

ಬೆಂಗಳೂರು ಗಡಿಗೆ ಹೊಂದಿಕೊಂಡಿರುವ ಹೊಸೂರಿನ ಡಿಎಂಕೆ ಶಾಸಕ ವೈ.ಪ್ರಕಾಶ್‌ ಮತ್ತವರ ಕುಟುಂಬ ಮೊದಲಿನಿಂದಲೂ ಬೆಂಗಳೂರು ನಗರದ ಜತೆ ನಿಕಟವಾದ ನಂಟು ಹೊಂದಿದೆ.ರಾಜ್ಯದ ರಾಜಕಾರಣಿಗಳ ಜತೆಗೂ ಪ್ರಕಾಶ್‌ ಒಳ್ಳೆಯ ಬಾಂಧವ್ಯ ಹೊಂದಿದ್ದು, ಮುಖ್ಯವಾಗಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರ ಜತೆ ಒಡನಾಟ ಹೊಂದಿದ್ದಾರೆ. ಅವರ ಸೊಸೆಯಾಗಬೇಕಿದ್ದ ಬಿಂದು ಕೂಡ ಬೆಂಗಳೂರಿನವರೇ.

Tags: audi q3Bangalore accidentBengalurucitycrimedmkhosur mla y prakashkarunasagarkoramangalamajor accidentmla son killed
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಗುಡಿಬಂಡೆ ಹೊಂಗೆ ಉದ್ಯಾನವನಕ್ಕೆ ಮತ್ತೆ ಒಳ್ಳೆಯ ಕಾಲ

ಗುಡಿಬಂಡೆ ಹೊಂಗೆ ಉದ್ಯಾನವನಕ್ಕೆ ಮತ್ತೆ ಒಳ್ಳೆಯ ಕಾಲ

Leave a Reply Cancel reply

Your email address will not be published. Required fields are marked *

Recommended

ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿ ಚಿಕ್ಕಬಳ್ಳಾಪುರದ ಡಾ.ಎಂ.ವಿ.ಸದಾಶಿವ & ಶಿಡ್ಲಘಟ್ಟದ ನರ್ಮದಾ ಶಿವಕುಮಾರ್ ನೇಮಕ

ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿ ಚಿಕ್ಕಬಳ್ಳಾಪುರದ ಡಾ.ಎಂ.ವಿ.ಸದಾಶಿವ & ಶಿಡ್ಲಘಟ್ಟದ ನರ್ಮದಾ ಶಿವಕುಮಾರ್ ನೇಮಕ

6 years ago
ಮುರುಘಾ ಶರಣರು ಅರೆಸ್ಟ್‌

ಮುರುಘಾ ಶರಣರಿಗೆ ಸಪ್ತ ಷರತ್ತುಗಳ ಜಾಮೀನು

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ