• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಹೊರಮಾವು ನರ್ಸಿಂಗ್ ಕಾಲೇಜು ತಾತ್ಕಾಲಿಕ ಬಂದ್

cknewsnow desk by cknewsnow desk
September 4, 2021
in COVID-19, KOLAR
Reading Time: 1 min read
0
ಹೊರಮಾವು ನರ್ಸಿಂಗ್ ಕಾಲೇಜು ತಾತ್ಕಾಲಿಕ ಬಂದ್

ಹೊರಮಾವು ನರ್ಸಿಂಗ್ ಕಾಲೇಜು

950
VIEWS
FacebookTwitterWhatsuplinkedinEmail

ಕೆಜಿಎಫ್‌ ನರ್ಸಿಂಗ್‌ ಕಾಲೇಜಿನ ಮೇಲೂ ನಿಗಾ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಹೊರಮಾವು ನರ್ಸಿಂಗ್ ಕಾಲೇಜು ಹಾಗೂ ಕೆಜಿಎಫ್ʼನ ನರ್ಸಿಂಗ್ ಕಾಲೇಜಿನಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬಂದಿದ್ದು, ಹೊರರಾಜ್ಯದಿಂದ ವಿದ್ಯಾರ್ಥಿಗಳು ಬರುವುದರಿಂದ ಶಿಕ್ಷಣ ಸಂಸ್ಥೆಗಳು ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಹೊರಮಾವು ಕ್ರಿಸ್ಟಿಯನ್ ನರ್ಸಿಂಗ್ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 300 ಮಂದಿ ಪೈಕಿ 34 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ತಾತ್ಕಾಲಿಕವಾಗಿ ಕಾಲೇಜು ಮುಚ್ಚಿಸಿ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ಶಿಕ್ಷಣ ಸಂಸ್ಥೆಗಳು ಎಚ್ಚರ ವಹಿಸಬೇಕೆಂದು ಸೂಚಿಸಲಾಗಿದೆ ಎಂದರು.

ಕರ್ನಾಟಕ ಶೈಕ್ಷಣಿಕ ಕೇಂದ್ರವಾಗಿದ್ದು, ಅನೇಕ ವಿದ್ಯಾರ್ಥಿಗಳು ಬರುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು 800 ನರ್ಸಿಂಗ್ ಕಾಲೇಜುಗಳಿವೆ. ಕೆಜಿಎಫ್ ಹಾಗೂ ಹೊರಮಾವು ನರ್ಸಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕೋವಿಡ್ ಸೋಂಕಿಗೀಡಾಗಿರುವುದು ಕಂಡುಬಂದಿದೆ. ಹೊರಮಾವು ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಕೇರಳ ಮತ್ತು ಪಶ್ಚಿಮ ಬಂಗಾಳದಿಂದ ಬಂದವರಾಗಿದ್ದಾರೆ. 600 ವಿದ್ಯಾರ್ಥಿಗಳ ಪೈಕಿ 34 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದ್ದು, ಬಹುತೇಕ ಲಕ್ಷಣ ರಹಿತರಾಗಿದ್ದಾರೆ. ಇವರೆಲ್ಲರೂ ಕೇರಳದಿಂದ ಬಂದಿದ್ದು, ಇವರ ಮಾದರಿಯನ್ನು ಜೀನೋಮಿಕ್ ಸೀಕ್ವೆನ್ಸ್’ಗೂ ಕಳುಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸೋಂಕಿತ ವಿದ್ಯಾರ್ಥಿಗಳನ್ನು ಕೋವಿಡ್ ಕೇರ್ ಸೆಂಟರ್, ಹೋಟೆಲ್ ಮೊದಲಾದ ಕಡೆ ಐಸೋಲೇಶನ್ ಮಾಡಲಾಗುವುದು. ಇನ್ನೂ ಹಲವರನ್ನು ಸಂಸ್ಥೆಯಲ್ಲೇ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುವುದು. 7-8 ದಿನಗಳ ಕಾಲ ಸಂಸ್ಥೆಯನ್ನು ಮುಚ್ಚಿ, ಬಳಿಕ ಮತ್ತೆ ಪರೀಕ್ಷೆ ಮಾಡಲಾಗುವುದು. ಈ ಸಂಸ್ಥೆ ಇರುವ ಪ್ರದೇಶವನ್ನು ಸೂಕ್ಷ್ಮ ಕಂಟೇನ್ ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಸುತ್ತಮುತ್ತಲಿನ 700-800 ನಿವಾಸಿಗಳಲ್ಲಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಪತ್ತೆ ಮಾಡಿ ಪರೀಕ್ಷೆ ಮಾಡಲು ಸೂಚಿಸಲಾಗಿದೆ ಎಂದರು ಅವರು.

ಕೇರಳದಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗಿಯೇ ಇದೆ. ಆ ಕಾರಣದಿಂದ ಗಡಿಭಾಗದಲ್ಲಿ ಪ್ರತ್ಯೇಕ ಸೂಚನೆ, ಮಾರ್ಗಸೂಚಿ ನೀಡಲಾಗಿದೆ. ಶಿಕ್ಷಣ ಸಂಸ್ಥೆಗಳಿಗೂ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಕೇರಳದಿಂದ ಬರುವಾಗಲೇ ನೆಗಟಿವ್ ವರದಿ ಹೊಂದಿರಬೇಕು, ಲಸಿಕೆ ಪಡೆದಿರಬೇಕೆಂದು ಸೂಚಿಸಲಾಗಿದೆ. ಆದರೂ ಈ ರೀತಿ ಸೋಂಕು ಕಂಡುಬಂದಿರುವುದರಿಂದ ಕ್ರಮ ವಹಿಸಲಾಗಿದೆ. ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಇದನ್ನು ಗಂಭೀರವಾಗಿ ಪರಿಗಣಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು.

ಗಣೇಶ ಹಬ್ಬ ಆಚರಣೆ ಭಾವನಾತ್ಮಕವಾದುದು. ಆದರೆ ನೆರೆಯ ಕೇರಳದಲ್ಲಿ ಓಣಂ, ಮೊಹರಂ ನಿಂದ ಕೋವಿಡ್ ಹತೋಟಿ ತಪ್ಪಿದೆ. ಆ ರೀತಿ ರಾಜ್ಯದಲ್ಲಿ ಹಳಿ ತಪ್ಪಬಾರದು ಎಂಬುದು ಸರ್ಕಾರದ ಉದ್ದೇಶ. ಅಂತಿಮವಾಗಿ ಸರ್ಕಾರ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿ ತೀರ್ಮಾನ ಕೈಗೊಳ್ಳಲಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣ ನಿಯಂತ್ರಣದಲ್ಲೇ ಇದೆ ಎಂದು ಸಚಿವರು ತಿಳಿಸಿದರು.

ಶಾಲೆಗಳು ಆರಂಭವಾಗಿದ್ದು, ಎಲ್ಲ ಕಡೆ ಮಕ್ಕಳ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಪೋಷಕರಷ್ಟೇ ಜವಾಬ್ದಾರಿಯನ್ನು ಸರ್ಕಾರ ಹೊತ್ತಿದೆ. ಗಡಿಭಾಗ, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಎಚ್ಚರ ವಹಿಸಲಾಗಿದೆ.  ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ಸಮರ್ಪಕ ಪರಿಶೀಲನೆ ಇರಬೇಕೆಂದು ಸೂಚಿಸಲಾಗಿದೆ ಎಂದರು.

Tags: bangalorecovid19dr k sudhakarhoramavu nursing collegekarnataka fights coronakgf nursing collegekolar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

by cknewsnow desk
October 16, 2026
0

ಕರುಣೆಪೂರಿತ ಸಮಾಜದ ಪುನರುಜ್ಜೀವನಕ್ಕೆ ಶ್ರೀಶ್ರೀ ಮಧುಸೂಧನ ಸಾಯಿ ಅವರ ನೇತೃತ್ವ ಬೇಕೆಂದ ಕೇಂದ್ರ ಸಚಿವರು

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

HDK #preesmeet #Live

by cknewsnow desk
October 15, 2026
0

ಮುಖ್ಯಮಂತ್ರಿ ಡಿಕೆಶಿ ಮತ್ತು ಸ್ಟಿಂಗ್ ಪಿನ್ ಸಂಬಂಧದ ಬಗ್ಗೆ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದ ಕೇಂದ್ರ ಸಚಿವರು

ತಾಪಂ, ಜಿಪಂ ಚುನಾವಣೆ; ಜಿಲ್ಲಾವಾರು ಸಭೆಗಳನ್ನು ಆರಂಭಿಸಿದ HDK

ತಾಪಂ, ಜಿಪಂ ಚುನಾವಣೆ; ಜಿಲ್ಲಾವಾರು ಸಭೆಗಳನ್ನು ಆರಂಭಿಸಿದ HDK

by cknewsnow desk
October 13, 2026
0

ಚಿಕ್ಕಬಳ್ಳಾಪುರ ಜಿಲ್ಲಾ ಮುಖಂಡರೊಂದಿಗೆ ಸಮಾಲೋಚನೆ

ನಾಳೆ ಬಾ ಎತ್ತಿನಹೊಳೆ!

ನಾಳೆ ಬಾ ಎತ್ತಿನಹೊಳೆ!

by cknewsnow desk
October 11, 2026
0

ಚಿಕ್ಕಬಳ್ಳಾಪುರ, ಕೋಲಾರಕ್ಕೆ ಈ ಸರಕಾರಕ್ಕೆ ನೀರು ಕೊಡಲು ಸಾಧ್ಯವಿಲ್ಲ; ಯೋಜನೆ ಇನ್ನೂ ಹಾಸನ ದಾಟಿಲ್ಲ

ಗುಡಿಬಂಡೆಯಲ್ಲಿ ಲೋಕಾಯುಕ್ತ ದಾಳಿ

ಗುಡಿಬಂಡೆಯಲ್ಲಿ ಲೋಕಾಯುಕ್ತ ದಾಳಿ

by cknewsnow desk
January 9, 2024
0

ಕೆ.ಆರ್.ಡಿ.ಎಲ್. ಎಕ್ಸಿಕ್ಯೂಟಿವ್ ಎಂಜಿನಿಯರ್ ಸಂಬಂಧಿತರ ಮನೆ ಮೇಲೆ ದಾಳಿ; ರಾಜ್ಯದ 30 ಕಡೆ ಶೋಧ

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

by cknewsnow desk
December 21, 2023
0

ಕೋವಿಡ್‌ 19 ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆ

Next Post
ಕೋವಿಡ್ ಕೆಸರು; ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಪಂಚಪ್ರಶ್ನೆ ಹಾಕಿದ ಎಚ್ಡಿಕೆ

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಪಾಪದ ಕೆಲಸವಾ?

Leave a Reply Cancel reply

Your email address will not be published. Required fields are marked *

Recommended

ರಾಜ್ಯದಲ್ಲಿ ಕಾಂಗ್ರೆಸ್‌ ಅಲೆ ಎದ್ದಿದೆ ಎಂದ ಸಿದ್ದು

ರಾಜ್ಯದಲ್ಲಿ ಕಾಂಗ್ರೆಸ್‌ ಅಲೆ ಎದ್ದಿದೆ ಎಂದ ಸಿದ್ದು

5 years ago
ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ಅಂಬ್ಯುಲೆನ್ಸ್ ನೌಕರರು ಅತಂತ್ರ, ಆಶಾ ಕಾರ್ಯಕರ್ತೆಯರ ಪರಿಸ್ಥಿತಿ ಆಯೋಮಯ

ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ಅಂಬ್ಯುಲೆನ್ಸ್ ನೌಕರರು ಅತಂತ್ರ, ಆಶಾ ಕಾರ್ಯಕರ್ತೆಯರ ಪರಿಸ್ಥಿತಿ ಆಯೋಮಯ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ