• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಮನೆ ಬಾಗಿಲಲ್ಲೇ ಪಾಲಿಟೆಕ್ನಿಕ್ʼಗೆ ದಾಖಲಾದ ಬಡ ವಿದ್ಯಾರ್ಥಿಗೆ ಪೂರ್ಣ ಉಚಿತ ಶಿಕ್ಷಣ

cknewsnow desk by cknewsnow desk
September 4, 2021
in EDITORS'S PICKS, NATION, STATE
Reading Time: 1 min read
0
ಮನೆ ಬಾಗಿಲಲ್ಲೇ ಪಾಲಿಟೆಕ್ನಿಕ್ʼಗೆ ದಾಖಲಾದ ಬಡ ವಿದ್ಯಾರ್ಥಿಗೆ ಪೂರ್ಣ ಉಚಿತ ಶಿಕ್ಷಣ
992
VIEWS
FacebookTwitterWhatsuplinkedinEmail

ವಿದ್ಯಾರ್ಥಿ, ಪೋಷಕರ ಜತೆ ಮಾತನಾಡಿದ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

  1. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಡುತಿನಿ ಗ್ರಾಮದ ವಿದ್ಯಾರ್ಥಿಗೆ ಸಹಾಯ ಹಸ್ತ
  2. ಅಲೆಮಾರಿ ಜನಾಂಗದ ಬಡ ವಿದ್ಯಾರ್ಥಿ ಮೌನೇಶ್
  3. ವಿದ್ಯಾರ್ಥಿ ಮನೆ ಬಾಗಿಲಿಗೇ ಹೋಗಿ ದಾಖಲು ಮಾಡಿಕೊಂಡ ಪ್ರಾಂಶುಪಾಲರು
  4. ಪ್ರಾಂಶುಪಾಲರು, ಸಿಬ್ಬಂದಿ ಸೇವಾ ನಿಷ್ಠೆಗೆ ಸಚಿವರ ಮೆಚ್ಚುಗೆ
  5. ಉನ್ನತ ಶಿಕ್ಷಣ, ಉದ್ಯೋಗಕ್ಕೆ ಸರಕಾರದ ಸಹಕಾರದ ಭರವಸೆ ನೀಡಿದ ಸಚಿವರು
  6. ಕುಡಿತಿನಿಯಲ್ಲಿ ತಾಂತ್ರಿಕ ಶಿಕ್ಷಣದ ಮಹತ್ವದ ಸಾರಿದ ಪ್ರಾಂಶುಪಾಲರು

👌🏻

SSLCಯಲ್ಲಿ ಶೇ.90 ಅಂಕ ಗಳಿಸಿದ್ದರೂ ಮುಂದಿನ ವಿದ್ಯಾಭ್ಯಾಸಕ್ಕೆ ಹಣ ಹೊಂದಿಸುವ ಚಿಂತೆಯಲ್ಲಿದ್ದ ಬಳ್ಳಾರಿ ಜಿಲ್ಲೆ ಕುಡತಿನಿಯ ಅಲೆಮಾರಿ ಜನಾಂಗದ ವಿದ್ಯಾರ್ಥಿ ಎಂ.ಮೌನೇಶನನ್ನು ಶೈಕ್ಷಣಿಕವಾಗಿ ದತ್ತು ಪಡೆಯುವ ಮೂಲಕ ಕೂಡ್ಲಿಗಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರಾದ ಎಸ್.ಮಲ್ಲಪ್ಪ ಅವರು ಪ್ರಶಂಸಾರ್ಹ ಕಾರ್ಯ ಮಾಡಿದ್ದಾರೆ.👏🏼 https://t.co/V6heRWlkVH

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) September 4, 2021

ಬೆಂಗಳೂರು: ಪ್ರತಿಭೆಯಿಂದಲೇ ತನ್ನ ಮನೆ ಬಾಗಿಲಲ್ಲೇ ಪಾಲಿಟೆಕ್ನಿಕ್ʼಗೆ ಪ್ರವೇಶ ಪಡೆದ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಡುತಿನಿ ಗ್ರಾಮದ ಪ್ರತಿಭಾವಂತ ಬಡ ವಿದ್ಯಾರ್ಥಿ ಎಂ.ಮೌನೇಶ್ʼಗೆ ಡಿಪ್ಲೊಮಾ ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಭರವಸೆ ನೀಡಿದ್ದಾರೆ.

ಶನಿವಾರದಂದು ಸಚಿವರು ಮೌನೇಶ್ ಮತ್ತವರ ಪೋಷಕರಿಗೆ ಕರೆ ಮಾಡಿ ಮಾತನಾಡಿದರಲ್ಲದೆ, ಹತ್ತನೇ ತರಗತಿಯಲ್ಲಿ ಶೇ.90ರಷ್ಟು ಅಂಕ ಪಡೆದು ತೇರ್ಗಡೆಯಾದ ವಿದ್ಯಾರ್ಥಿಯನ್ನು ಶ್ಲಾಘಿಸಿದರಲ್ಲದೆ, ಮುಂದಿನ ಮೂರು ವರ್ಷಗಳ ವಿದ್ಯಾಭ್ಯಾಸವನ್ನು ಸರಕಾರ ಸಂಪೂರ್ಣ ಉಚಿತವಾಗಿ ನೀಡಲಿದೆ ಎಂದು ಭರವಸೆ ನೀಡಿದರು.

ಇದೇ ವೇಳೆ ಮೌನೇಶ್ ಪೋಷಕರ ಜತೆಯೂ ಮಾತನಾಡಿದ ಸಚಿವರು, ನಿಮ್ಮ ಪುತ್ರನಿಗೆ ಉಚಿತ ಶಿಕ್ಷಣ ನೀಡಲಾಗುವುದು. ಯಾವುದೇ ಚಿಂತೆ ನಿಮಗೆ ಬೇಡ. ಎಲ್ಲವನ್ನೂ ಸರಕಾರವೇ ನೋಡಿಕೊಳ್ಳಲಿದೆ. ತದ ನಂತರ ಉದ್ಯೋಗ ಅಥವಾ ಉನ್ನತ ಶಿಕ್ಷಣಕ್ಕೆ ತೆರಳಬೇಕಾದರೂ ಸರಕಾರ ಸಹಕಾರ ನೀಡುತ್ತದೆ ಎಂದು ಸಚಿವರು ಹೇಳಿದರು. ವಿದ್ಯಾರ್ಥಿ ಮೌನೇಶ್ ಹಾಗೂ ಅವರ ಪೋಷಕರು ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು.

ಪ್ರಾಂಶುಪಾಲರ ಕಾರ್ಯಕ್ಕೆ ಮೆಚ್ಚುಗೆ

ವಿದ್ಯಾರ್ಥಿಯ ಮನೆ ಬಾಗಿಲಿಗೇ ತೆರಳಿ ಪ್ರವೇಶಾತಿ ನೀಡಿದ ಕೂಡ್ಲಿಗಿಯ ಸರಕಾರಿ ಪಾಲಿಟೆಕ್ನಿಕ್ʼನ ಪ್ರಾಂಶುಪಾಲರು, ಬೋಧಕ ಸಿಬ್ಬಂದಿಯನ್ನು ಇದೇ ವೇಳೆ ಸಚಿವ ಅಶ್ವತ್ಥನಾರಾಯಣ ಅವರು ಮನಸಾರೆ ಶ್ಲಾಘಿಸಿದರು. ಪ್ರಾಂಶುಪಾಲ ಎಸ್.ಮಲ್ಲಪ್ಪ ಅವರಿಗೆ ಕರೆ ಮಾಡಿ ಮಾತನಾಡಿದ ಸಚಿವರು, “ನೀವು ಬಹಳ ಒಳ್ಳೆಯ ಕೆಲಸ ಮಾಡಿದ್ದೀರಿ. ಆ ವಿದ್ಯಾರ್ಥಿಗೆ ತಗುಲುವ ಎಲ್ಲ ವೆಚ್ಚವನ್ನೂ ಸರಕಾರವೇ ಭರಿಸಲಿದೆ. ನಿಮ್ಮದೇ ವೆಚ್ಚದಲ್ಲಿ ಬಡ ವಿದ್ಯಾರ್ಥಿಯೊಬ್ಬರನ್ನು ದತ್ತು ಪಡೆದು, ಅವರ ಮನೆ ಬಾಗಿಲಿಗೇ ಹೋಗಿ ದಾಖಲು ಮಾಡಿಕೊಂಡಿರುವ ಕ್ರಮ ಮಾದರಿಯಾದದ್ದುʼ ಎಂದು ಹೇಳಿದರು.

ಒಳ್ಳೆಯ ಉಪ ಕ್ರಮ ಎಂದ ಸಚಿವರು

ನಂತರ ಈ ಬಗ್ಗೆ ಮಾತನಾಡಿದ ಸಚಿವರು, “ಇದೊಂದು ಅತ್ಯುತ್ತಮ ಪ್ರಯತ್ನ. ಆ ಪಾಲಿಟೆಕ್ನಿಕ್ʼನ ಪ್ರಾಚಾರ್ಯರು, ಬೋಧಕರ ಬದ್ಧತೆ ನನ್ನ ಹೃದಯ ಗೆದ್ದಿದೆ. ತಾಂತ್ರಿಕ ಮತ್ತು ಉನ್ನತ ಶಿಕ್ಷಣವನ್ನು ವಿದ್ಯಾರ್ಥಿಗಳ ಮನೆ ಬಾಗಿಲಿಗೇ ತಲುಪಿಸಬೇಕು ಎಂಬ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯವನ್ನು ಹಾಗೂ ಶೈಕ್ಷಣಿಕ ಸಮಾನತೆಯನ್ನೂ ಇವರು ಆರಂಭದಲ್ಲೇ ಸಾಕಾರ ಮಾಡಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಈ ವರ್ಷದಿಂದ ಹೊಸದಾಗಿ ಆರಂಭ ಮಾಡಲಾದ ಡಿಪ್ಲೊಮಾ ಕೋರ್ಸಗಳಲ್ಲಿ ಒಂದಾದ ʼಸೈಬರ್ ಫಿಸಿಕಲ್ ಸಿಸ್ಟಮ್ಸ್ ಅಂಡ್ ಸೆಕ್ಯೂರಿಟಿʼ ವಿಭಾಗದ ಕೊನೆಯ ಒಂದು ಸೀಟು ಉಳಿದಿತ್ತು. ಆ ಸೀಟಿಗೆ ಬಹಳ ಬೇಡಿಕೆ ಇದ್ದರೂ ಪಾಲಿಟೆಕ್ನಿಕ್ ಪ್ರಾಚಾರ್ಯರಾದ ಎಸ್.ಮಲ್ಲಪ್ಪ, ಇತರೆ ಬೋಧಕರು ಹಾಗೂ ಸಿಬ್ಬಂದಿ ತಾಲೂಕಿನ ಕುಡಿತಿನಿ ಗ್ರಾಮದ ಗುಡಿಸಲಿನಲ್ಲಿ ವಾಸಿಸುವ ಅಲೆಮಾರಿ ಜನಾಂಗದ ಬಡ ಪ್ರತಿಭಾವಂತ ವಿದ್ಯಾರ್ಥಿ ಎಂ.ಮೌನೇಶ್ʼಗೆ ನೀಡಿದ್ದಾರೆ. ಇದು ಒಳ್ಳೆಯ ಕ್ರಮ ಎಂದು ಸಚಿವರು ತಿಳಿಸಿದರು.

ಪ್ರಾಂಶುಪಾಲರು ಏನಂದರು?

ವಿದ್ಯಾರ್ಥಿ ಎಂ.ಮೌನೇಶ್ʼಗೆ ಮೂರು ವರ್ಷದಲ್ಲಿ ಆಗುವ ಎಲ್ಲ ಖರ್ಚು-ವೆಚ್ಚವನ್ನು ನಾನೇ ಭರಿಸುವುದಾಗಿ ಹೇಳಿದ್ದೆ. ಬಳಿಕ ಮಾನ್ಯ ಸಚಿವರು ಸರಕಾರವೇ ಎಲ್ಲ ವೆಚ್ಚ ಭರಿಸಲಿದೆ ಎಂದು ಘೋಷಣೆ ಮಾಡಿದರು. ಹಾಗೆಯೇ; ಡಿಪ್ಲೊಮಾದಲ್ಲಿ ಈಗಾಗಲೇ ಅಳವಡಿಸಿಕೊಂಡಿರುವ ಜಾಗತಿಕ ಮಟ್ಟಕ್ಕೆ ಸಮನಾದ ಪಠ್ಯಕ್ರಮ, ಡಿಜಿಟಲ್ ಶಿಕ್ಷಣ, ಕಲಿಕಾ ನಿರ್ವಹಣಾ ವ್ಯವಸ್ಥೆ (LMS), ಸ್ಮಾರ್ಟ್ ಕ್ಲಾಸ್ ರೂಂ ಹಾಗೂ ಉಚಿತ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಈ ವಿದ್ಯಾರ್ಥಿಗೆ ಒದಗಿಸಲಾಗುವುದು ಎಂದು ಪ್ರಾಂಶುಪಾಲ ಎಸ್. ಮಲ್ಲಪ್ಪ ತಿಳಿಸಿದರು.

ಮೌನೇಶ್ ಬಹಳ ಬಡತನದಲ್ಲಿದ್ದಾನೆ. ಅವರು ಒಂದು ಕೊಳಗೇರಿಯಲ್ಲಿ ವಾಸ ಮಾಡುತ್ತಿದ್ದು, ಅಲ್ಲಿ ಸುಮಾರು 150 ಮನೆಗಳಿವೆ. ನಾನು, ನಮ್ಮ ಬೋಧಕರು ಮತ್ತು ಸಿಬ್ಬಂದಿ ಜತೆ ತೆರಳಿ ಅಲ್ಲಿನ ಜನರಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದೇನೆ. ನಮಗೆ ಸರಕಾರದಿಂದಲೂ ಉತ್ತಮ ಪ್ರೋತ್ಸಾಹವಿದೆ. ಪಾಲಿಟೆಕ್ನಿಕ್ʼನಲ್ಲಿ ಕಲಿಯಲು ಸಾಕಷ್ಟು ಸೌಲಭ್ಯಗಳಿವೆ. ಇದೆಲ್ಲವನ್ನೂ ನಾನು ಜನರಿಗೆ ವಿವರಿಸಿ ಹೇಳಿದ್ದೇನೆ. ಎಲ್ಲರಿಗೂ ಮೌನೇಶ್ ದಾಖಲಾತಿ ಮತ್ತು ದತ್ತು ಸ್ವೀಕಾರ ವಿಷಯ ಪ್ರೇರಣೆ ನೀಡಿದೆ ಎಂದು ಮಲ್ಲಪ್ಪ ಹೇಳಿದರು.

ಮುಖ್ಯವಾಗಿ ನಮ್ಮ ಪಾಲಿಟೆಕ್ನಿಕ್ʼನ ಸಹೋದ್ಯೋಗಿಗಳು ಮುಂದಿನ ವರ್ಷದಿಂದ ತಲಾ ಒಬ್ಬೊಬ್ಬ ಬಡ ವಿದ್ಯಾರ್ಥಿಯನ್ನು ದತ್ತು ತೆಗೆದುಕೊಂಡು ಓದಿಸುವ ಸಂಕಲ್ಪ ಮಾಡಿದ್ದಾರೆ. ಇದು ನನಗೆ ತುಂಬಾ ಸಂತೋಷ ಉಂಟು ಮಾಡಿದೆ. ಪಾಲಿಟೆಕ್ನಿಕ್ʼನಲ್ಲಿ ಮೂರು ವರ್ಷ ವ್ಯಾಸಂಗ ಮುಗಿದ ಮೇಲೆ ಅವರು ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳುವ ಅವಖಾಶವೂ ಇದೆ. ಅಗತ್ಯಬಿದ್ದರೆ ಉನ್ನತ ಓದಿಗೂ ಹೋಗಬಹುದು. ಸರಕಾರದ ಸೌಲಭ್ಯಗಳ ಬಗ್ಗೆ ನಾವು ವ್ಯಾಪಕವಾಗಿ ಪ್ರಚಾರ ಮಾಡುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

Tags: diplomadr cn ashwathnarayankarnatakakudliginep2020nepKarnatakapolytechnicpoor studenttechnical educationvijayanagara
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್ʼಗೆ ಸ್ವಾಯತ್ತತೆ

ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್ʼಗೆ ಸ್ವಾಯತ್ತತೆ

Leave a Reply Cancel reply

Your email address will not be published. Required fields are marked *

Recommended

ಅಳಿದುಳಿದ ಚಿನ್ನಕ್ಕಾಗಿ ಡ್ರಿಲ್ಲಿಂಗ್; ಕೆಜಿಎಫ್ ನಿರೀಕ್ಷೆಗೆ ಮತ್ತೆ ನೀರು, ಮಾಜಿ ಮಿನಿ ಇಂಗ್ಲೆಂಡ್‌ ಮುಖದಲ್ಲಿ ಮಂದಹಾಸ

ಅಳಿದುಳಿದ ಚಿನ್ನಕ್ಕಾಗಿ ಡ್ರಿಲ್ಲಿಂಗ್; ಕೆಜಿಎಫ್ ನಿರೀಕ್ಷೆಗೆ ಮತ್ತೆ ನೀರು, ಮಾಜಿ ಮಿನಿ ಇಂಗ್ಲೆಂಡ್‌ ಮುಖದಲ್ಲಿ ಮಂದಹಾಸ

6 years ago
11 ಸಲ ಕಾಲ್‌ ಮಾಡಿದ  ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!

ಪೇಶ್ವೆ ಡಿಎನ್ ಎ ವ್ಯಕ್ತಿ ಬಗ್ಗೆ ಹೇಳಿದ್ದೇನೆಯೆ ಹೊರತು ಬ್ರಾಹ್ಮಣರನ್ನು ನಿಂದಿಸಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

4 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ