• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

NEP ಎಂದರೆ ನಾಗಪುರ ಎಜ್ಯುಕೇಶನ್‌ ಪಾಲಿಸಿ!

cknewsnow desk by cknewsnow desk
September 5, 2021
in POLITICS, STATE
Reading Time: 1 min read
1
NEP ಎಂದರೆ ನಾಗಪುರ ಎಜ್ಯುಕೇಶನ್‌ ಪಾಲಿಸಿ!
945
VIEWS
FacebookTwitterWhatsuplinkedinEmail

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವ್ಯಾಖ್ಯಾನ

ಬೆಂಗಳೂರು: ಬಿಜೆಪಿ ಸರಕಾರ ತರಾತುರಿಯಲ್ಲಿ ಜಾರಿಗೆ ತರಲು ಮುಂದಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ- NEP ಅಲ್ಲ, ಅದು ನಾಗ್ಪುರ ಶಿಕ್ಷಣ ನೀತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನಲ್ಲಿ ಚರ್ಚೆ ಆಗದೇ ಇರುವ ನೀತಿಯನ್ನು ರಾಜ್ಯದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವುದರ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡಲಿದೆ. ನೀವು ಏನೇ ತಿಪ್ಪರಲಾಗ ಹಾಕಿದರೂ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆಯಾಗದೇ ಇದನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ’ ಎಂದು ಅವರು ಖಡಾಖಂಡಿತವಾಗಿ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಜಿಲ್ಲಾವಾರು ಮುಖಂಡರ ಸಭೆ ನಡೆಸಿದ ಡಿಕೆಶಿ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರವಾಗಿ ಪಕ್ಷದ ನಿಲುವು ಹಾಗೂ ಪಕ್ಷದ ಸಂಘಟನೆ ಬಗ್ಗೆ ಅವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು; 

  • ‘ರಾಷ್ಟ್ರೀಯ ಶಿಕ್ಷಣ ನೀತಿ ಎಂದರೆ ಅದರ ಬಗ್ಗೆ ರಾಷ್ಟ್ರಾದ್ಯಂತ ವ್ಯಾಪಕ ಚರ್ಚೆ ಆಗಬೇಕು. ಸಂಸತ್ತು, ವಿಧಾನಸಭೆ, ವಿಧಾನ ಪರಿಷತ್ʼನಲ್ಲಿ ಚರ್ಚಿಸಬೇಕು. ಆದರೆ ಅದ್ಯಾವುದೂ ನಡೆದಿಲ್ಲ. ಸದನ ಸಮಿತಿ ರಚಿಸಿ, ರಾಜ್ಯದ ಉದ್ದಗಲಕ್ಕೂ ಜನರ ಜತೆ ಚರ್ಚಿಸಿ, ಅಭಿಪ್ರಾಯ ಪಡೆಯುವವರೆಗೂ ರಾಜ್ಯದಲ್ಲಿ ಇದರ ಜಾರಿಗೆ ನಾವು ಅವಕಾಶ ನೀಡುವುದಿಲ್ಲ.
  • ನಾನು ಕೂಡ ಶಿಕ್ಷಣ ಕ್ಷೇತ್ರದಲ್ಲಿ ಬಹಳ ಆಸಕ್ತಿ ಹೊಂದಿದ್ದು, ವಿದ್ಯಾಸಂಸ್ಥೆಗಳನ್ನು ನಡೆಸುತ್ತಾ ಬಂದಿದ್ದೇನೆ. ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿಯಾಗಿದ್ದೇನೆ. ಈ ನೂತನ ಶಿಕ್ಷಣ ನೀತಿ ಏನು? ಅದರಿಂದ ಆಗುವ ಪ್ರಯೋಜನೆಗಳೇನು? ಎಂಬುದನ್ನು ಅರ್ಥ ಮಾಡಿಕೊಳ್ಳಲು ನನ್ನಿಂದಲೇ ಸಾಧ್ಯವಾಗುತ್ತಿಲ್ಲ.
  • ಇದನ್ನು ಅರ್ಥ ಮಾಡಿಕೊಳ್ಳಲು ಹಲವು ಬಾರಿ ವಿದ್ಯಾರ್ಥಿಗಳು, ಶಿಕ್ಷಕರು, ತಜ್ಞರ ಜತೆ ಚರ್ಚೆ ಮಾಡಿ ಪ್ರಯತ್ನಪಟ್ಟರೂ ಇದರ ಒಳಗುಟ್ಟು ಏನು ಎಂಬುದೇ ಅರ್ಥವಾಗುತ್ತಿಲ್ಲ. ರಾಜ್ಯ ಬಿಜೆಪಿ ಸರಕಾರ ಯಾಕಿಷ್ಟು ಆತುರದಲ್ಲಿ ಇದನ್ನು ಜಾರಿ ತರಲು ಮುಂದಾಗಿದೆಯೋ ತಿಳಿಯುತ್ತಿಲ್ಲ. ಶಿಕ್ಷಕರು ಇಲ್ಲ, ವಿದ್ಯಾರ್ಥಿಗಳು ಶಾಲೆ ಸೇರಲು ಸಾಧ್ಯವಾಗಿಲ್ಲ. ಇಂಥ ಪರಿಸ್ಥಿತಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಪಟ್ಟ ಯಾರ ಜತೆಗೂ ಸರಕಾರ ಈ ನೂತನ ಶಿಕ್ಷಣ ನೀತಿ ಬಗ್ಗೆ ಚರ್ಚೆ ಮಾಡಿಲ್ಲ. ಸಂಸತ್ತಿನಿಂದ ಹಿಡಿದು, ವಿಧಾನ ಮಂಡಲದ ಉಭಯ ಸದನಗಳವರೆಗೂ ಎಲ್ಲೂ ಚರ್ಚೆ ಆಗಿಲ್ಲ.
  • ಶಿಕ್ಷಣ ರಾಜ್ಯಗಳಿಗೆ ಸಂಬಂಧಿಸಿದ ವಿಚಾರ. ರಾಷ್ಟ್ರ ಮಟ್ಟದಲ್ಲಿ ನೀತಿ ನಿರೂಪಿಸಬೇಕು ನಿಜ. ಆದರೆ, ಅದರ ಬಗ್ಗೆ ಎಲ್ಲ ಕಡೆಗಳಲ್ಲೂ ವ್ಯಾಪಕ ಚರ್ಚೆ ಆಗಬೇಕಲ್ಲವೇ? ಚರ್ಚೆಯೇ ನಡೆಯದೇ, ಏಕಾಎಕಿ ಈ ನೀತಿ ಜಾರಿಗೊಳಿಸುತ್ತೇವೆ ಎಂದು ಶಿಕ್ಷಣ ಸಚಿವರು ಹೇಳಿಕೆ ನೀಡಿರುವುದರಿಂದ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಎಲ್ಲರೂ ಗಾಬರಿ ಬಿದ್ದಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈ ನೀತಿ ಬಗ್ಗೆ ವಿಧಾನಸಭೆ, ವಿಧಾನ ಪರಿಷತ್, ಶಿಕ್ಷಣ ಸಂಸ್ಥೆಗಳು, ಪೋಷಕರು, ಶಿಕ್ಷಕರ ಮಟ್ಟದಲ್ಲಿ ಸಂಪೂರ್ಣವಾಗಿ ಚರ್ಚೆಯಾಗುವವರೆಗೂ ಈ ನೀತಿ ಜಾರಿಯನ್ನು ತಡೆ ಹಿಡಿಯಬೇಕು. ಅಲ್ಲಿಯವರೆಗೂ ನಾವು ಕೂಡ ಇದನ್ನು ವಿರೋಧಿಸುತ್ತೇವೆ.
  • ಈ ನೀತಿಯಲ್ಲಿ ಕೆಲವು ಉತ್ತಮ ಅಂಶಗಳು ಇರಬಹುದು. ಇದು ಮಕ್ಕಳು, ರಾಜ್ಯ, ದೇಶದ ಭವಿಷ್ಯದ ವಿಚಾರ. ಈ ನೀತಿಯಲ್ಲಿ ತ್ರಿಭಾಷಾ ಸೂತ್ರ ಪರಿಚಯಿಸುವ ಮೂಲಕ ಹಿಂಬಾಗಿಲಿನಿಂದ ಹಿಂದಿ ಭಾಷೆ ಹೇರಿಕೆಗೆ ಪ್ರಯತ್ನಿಸಲಾಗುತ್ತಿದೆ. ಈ ವಿಚಾರವಾಗಿ ಕನ್ನಡಪರ ಸಂಘಟನೆಗಳು ನನ್ನನ್ನು ಸಂಪರ್ಕಿಸುತ್ತಿದ್ದಾರೆ. ಇದೇ ನೀತಿಯನ್ನು ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವ ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್ ನಲ್ಲಿ ಯಾಕೆ ಜಾರಿತರಲು ಪ್ರಯತ್ನಿಸುತ್ತಿಲ್ಲ. ಕೇರಳ ಹಾಗೂ ತಮಿಳುನಾಡಿನಲ್ಲಿ ಇದರ ವಿಚಾರದಲ್ಲಿ ಮಾತು ಕೂಡ ಆಡುವ ಸ್ಥಿತಿ ಇಲ್ಲ. ಮಾತನಾಡಿದರೆ, ಅಲ್ಲಿನ ಜನ ಬಡಿಯುತ್ತಾರೆ.
  • ಶಿಕ್ಷಣ ಸಚಿವರಿಗೆ ಸಾಮಾನ್ಯ ಪ್ರಜ್ಞೆಯೇ ಇಲ್ಲ ಎಂದು ಕಾಣುತ್ತದೆ. ಮುಖ್ಯಮಂತ್ರಿಗಳು ಅವರದೇ ಜಂಜಾಟದಲ್ಲಿ ಮುಳುಗಿರಬೇಕು! ಹೀಗಾಗಿ ಸಭೆಗಳ ಮೇಲೆ ಸಭೆ ನಡೆಯುತ್ತಿದ್ದರೂ ಈ ಬಗ್ಗೆ ಅವರು ಗಮನ ಹರಿಸಿಲ್ಲ. ಈ ನೀತಿಯಲ್ಲಿ ವಿದ್ಯಾರ್ಥಿ ಪದವಿ ಅವಧಿಯಲ್ಲಿ ಎರಡು ಮೂರು ವಿಷಯಗಳನ್ನು ವಿದ್ಯಾಭ್ಯಾಸ ಮಾಡಬಹುದಂತೆ. ಇದು ಹೇಗೆ ಸಾಧ್ಯ? ಇದಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆಯೇ? ಸರ್ಕಾರ ವಿದ್ಯಾರ್ಥಿಗಳಿಗೆ ಕಂಪ್ಯೂಟರ್, ಟ್ಯಾಬ್ ಒದಗಿಸಿದೆಯೇ? ಆನ್ಲೈನ್ ಶಿಕ್ಷಣಕ್ಕೆ ಒತ್ತು ನೀಡಲು ರಾಜ್ಯಾದ್ಯಂತ ಇಂಟರ್ ನೆಟ್ ವ್ಯವಸ್ಥೆ ಕಲ್ಪಿಸಿದೆಯೇ? ಈ ಶಿಕ್ಷಣ ನೀತಿ ಕೇವಲ ನಗರದ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆಯೇ ಹೊರತು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಯಾವುದೇ ಲಾಭವಿಲ್ಲ, ಅನುಕೂಲವೂ ಇಲ್ಲ.
  • ನಮ್ಮಲ್ಲಿ ಎಲ್ಲ ವರ್ಗದ ಜನ ಆತಂಕಕ್ಕೆ ಒಳಗಾಗಿದ್ದು, ಈ ನೀತಿ ಜಾರಿಗೊಳಿಸುವುದನ್ನು ನಿಲ್ಲಿಸಬೇಕು. ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತಿದ್ದೇನೆ. ಈ ವಿಚಾರವಾಗಿ ನಾವು ಶಿಕ್ಷಣ ತಜ್ಞರ ಜತೆ ಚರ್ಚೆ ಮಾಡಿ ಅಧಿವೇಶನದಲ್ಲಿ ನಮ್ಮ ಪಕ್ಷದ ಅಭಿಪ್ರಾಯ ಮಂಡಿಸುತ್ತೇವೆ.

ಪಕ್ಷ ಸಂಘಟನೆಗೆ ಜಿಲ್ಲಾವಾರು ಮುಖಂಡರ ಸಭೆ

  • ಇಂದು ಮತ್ತು ನಾಳೆ ಕಾಂಗ್ರೆಸ್ ಪಕ್ಷದ ಜಿಲ್ಲಾವಾರು ಅಧ್ಯಕ್ಷರುಗಳು, ಶಾಸಕರು, ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳನ್ನು ಕರೆದು ಪಕ್ಷದ ಸಂಘಟನೆ, ಮುಂಬರುವ ಜಿಲ್ಲಾ ಹಾಗೂ ತಾಲೂಕೂ ಪಂಚಾಯ್ತಿ, ವಿಧಾನ ಪರಿಷತ್ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಮುಂದೆ ಯಾವ ರೀತಿ ಸಜ್ಜಾಗಬೇಕು ಎಂಬುದರ ಬಗ್ಗೆ ಅವರ ಅಭಿಪ್ರಾಯ ಪಡೆದು, ಮಾರ್ಗದರ್ಶನ ನೀಡಲಾಗುತ್ತಿದೆ.
  • ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ಪ್ರತಿ ಗ್ರಾಮಪಂಚಾಯ್ತಿಯಲ್ಲೂ ‘ಗಾಂಧೀಜಿ ಗ್ರಾಮ ಸ್ವರಾಜ್ಯ’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. ನಮ್ಮೆಲ್ಲ ನಾಯಕರು ಅಕ್ಟೋಬರ್ ತಿಂಗಳಲ್ಲಿ ದಿನಕ್ಕೆ 2 ಗ್ರಾಮ ಪಂಚಾಯ್ತಿಯಲ್ಲಿ ಪಕ್ಷದ ಸಭೆ ನಡೆಸಬೇಕು. ಅಲ್ಲಿ ಪ್ರತಿಭಟನೆ ಅಥವಾ ಕಾರ್ಯಕರ್ತರ ಸಭೆ ಮಾಡಬಹುದು. ಕಡ್ಡಾಯವಾಗಿ ತಿಂಗಳಲ್ಲಿ ನಿತ್ಯ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಸಭೆಗಳನ್ನು ಮಾಡಬೇಕು.
  • ಈ ಸಭೆಯಲ್ಲಿ ಎಲ್ಲ ನಾಯಕರು ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಿದ್ದೇವೆ. ಪಕ್ಷದ ಸಂಘಟನೆ ದೃಷ್ಟಿಯಿಂದ, ಎಲ್ಲೆಲ್ಲಿ ಸಮಿತಿ ರಚನೆ ಆಗಬೇಕು, ಯಾವ ವಿಭಾಗಗಳಲ್ಲಿ ಪದಾಧಿಕಾರಿಗಳ ನೇಮಕವಾಗಬೇಕು ಎಂಬುದರ ಬಗ್ಗೆ ಗಮನ ಹರಿಸಬೇಕು. ಈ ತಿಂಗಳಲ್ಲೇ ಪ್ರತಿ ಗ್ರಾಮ ಪಂಚಾಯ್ತಿಯಲ್ಲಿ ಆಯಾ ಘಟಕಗಳ ಸಮಿತಿ ಮಾಡಬೇಕು. ಅವರ ಸಭೆಗಳು ಕೂಡ ಆರಂಭವಾಗಬೇಕು.
  • ಈ ನಿಟ್ಟಿನಲ್ಲಿ ಇಂದು ಹಾಗೂ ನಾಳೆ ಸಂಜೆವರೆಗೂ ಈ ಸಭೆಗಳು ನಡೆಯಲಿವೆ. ಈಗಾಗಲೇ ನಾವು ಪಕ್ಷದಲ್ಲಿ ಸಹಕಾರ, ಸಂಚಾರ, ಸಾಂಸ್ಕೃತಿಕ ಘಟಕಗಳ ನೇಮಕ ಮಾಡುತ್ತಿದ್ದು, ಎಲ್ಲ ಘಟಕಗಳಲ್ಲೂ ಬ್ಲಾಕ್ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಸಮಿತಿ ರಚಿಸುತ್ತಿದ್ದೇವೆ.
  • ಕರ್ನಾಟಕದ ಉಸ್ತುವಾರಿ ವಹಿಸಿರುವ ರಣದೀಪ್ ಸಿಂಗ್ ಸುರ್ಜೆವಾಲ ಅವರು ವಿಭಾಗೀಯ ಮಟ್ಟದ ಸಭೆ ಮಾಡಿದ್ದರು. ಅಲ್ಲಿ ಎಲ್ಲರ ಅಭಿಪ್ರಾಯ ಪಡೆದು, ಪಕ್ಷದ ಸಂಘಟನೆ ವಿಚಾರವಾಗಿ ಕೆಲವು ಸಲಹೆಗಳನ್ನು ನೀಡಿದ್ದು, ಅವುಗಳನ್ನು ಜಾರಿಗೊಳಿಸಲು ನಾವು ಕ್ರಮಕೈಗೊಳ್ಳುತ್ತಿದ್ದೇವೆ.

ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

  • ವಿಧಾನ ಪರಿಷತ್ ಸೇರಿದಂತೆ ಮುಂಬರುವ ಮುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಿದ್ದು, 10 ದಿನಗಳ ಕಾಲಾವಕಾಶ ನೀಡಿದ್ದೇವೆ. ಈಗಾಗಲೇ ಪದವೀಧರ ಕ್ಷೇತ್ರದ ಅಭ್ಯರ್ಥಿಗೆ ಅರ್ಜಿ ಕರೆಯಲಾಗಿದೆ. ಬೇರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಅಭ್ಯರ್ಥಿಗಳ ಅರ್ಜಿಯನ್ನು ಸದ್ಯದಲ್ಲೇ ಕರೆಯಲಾಗುವುದು. ಆ ಬಗ್ಗೆ ಅಲ್ಲಿನ ನಾಯಕರ ಜತೆ ಚರ್ಚೆ ಮಾಡಿ ವಾಸ್ತವಾಂಶ ಹಾಗೂ ಅಭಿಪ್ರಾಯ ಪಡೆಯುತ್ತಿದ್ದೇನೆ. ಈ ತಿಂಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತೇವೆ.’

Tags: bjpCongressDK Shivakumardr cn ashwathnarayankarnatakaNagpurnepnepKarnatakaPoliticsrss
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಶಿಕ್ಷಕರಿಗೆ ಶಿಕ್ಷೆಯೇ!? ಇಲ್ಲಿದ್ದಾರೆ ಅತಿಥಿಗಳೆಂಬ ಅನಾಥರು!

ಶಿಕ್ಷಕರಿಗೆ ಶಿಕ್ಷೆಯೇ!? ಇಲ್ಲಿದ್ದಾರೆ ಅತಿಥಿಗಳೆಂಬ ಅನಾಥರು!

Comments 1

  1. Pingback: NEPಯನ್ನು 'ನಾಗಪುರ ಎಜ್ಯುಕೇಷನ್ ಪಾಲಿಸಿ' ಎಂದ ಡಿಕೆಶಿಗೆ ಸಚಿವರು ಕೊಟ್ಟ ಉತ್ತರವೇನು? - cknewsnow

Leave a Reply Cancel reply

Your email address will not be published. Required fields are marked *

Recommended

ಸ್ವಿಚ್ ಆಫ್ ಆದ ದಾರಿ ದೀಪಗಳು; ಗುಡಿಬಂಡೆ ಕೆರೆ ಏರಿ ಮೇಲೆ ಕಗ್ಗತ್ತಲು

ಸ್ವಿಚ್ ಆಫ್ ಆದ ದಾರಿ ದೀಪಗಳು; ಗುಡಿಬಂಡೆ ಕೆರೆ ಏರಿ ಮೇಲೆ ಕಗ್ಗತ್ತಲು

5 years ago
ಪ್ರವಾಸಿಗರು ಅನ್ಲಾಕ್; ಗುಡಿಬಂಡೆಯತ್ತ ಬೆಂಗಳೂರಿಗರ ಲಾಂಗ್‌ ಡ್ರೈವ್

ಜುಲೈ 18ರಂದು ಗುಡಿಬಂಡೆ ಬೆಟ್ಟದಲ್ಲಿ ಕುಂಭಾಭಿಷೇಕ

4 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ