• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

ಅನುಶ್ರೀ ಪರ ಒತ್ತಡವಿಲ್ಲ ಎಂದರು ಗೃಹ ಸಚಿವರು

cknewsnow desk by cknewsnow desk
September 8, 2021
in CRIME, STATE
Reading Time: 1 min read
0
ಅನುಶ್ರೀ ಪರ ಒತ್ತಡವಿಲ್ಲ ಎಂದರು ಗೃಹ ಸಚಿವರು

Photo courtesy: Anchor Anushree Facebook page

971
VIEWS
FacebookTwitterWhatsuplinkedinEmail

ನಿರೂಪಕಿ ವಿರುದ್ಧ ಹೇಳಿಕೆಯನ್ನೇ ನೀಡಿಲ್ಲ ಎಂದ ಡಾನ್ಸರ್; ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

ಬೆಂಗಳೂರು: ಕನ್ನಡ ಕಿರುತೆರೆಯ ಸ್ಟಾರ್‌ ನಿರೂಪಕಿ ಅನುಶ್ರೀ ಡ್ರಗ್‌ ಕೇಸ್‌ಗೆ ಸಂಬಂಧಿಸಿ ಮತ್ತೆ ರಾಜ್ಯದ ಕೋಲಾಹಲ ಉಂಟಾಗಿದೆ.

ಮಂಗಳೂರು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿರುವ ಆರೋಪ ಪಟ್ಟಿ ಮತ್ತು ಅದರಲ್ಲಿರುವ ಅಂಶಗಳ ಬಗ್ಗೆ ಬೆಳಗ್ಗೆಯಿಂದ ಮಾಧ್ಯಮಗಳಲ್ಲಿ ಕೋಲಾಹಲ ನಡೆಯುತ್ತಿದ್ದು, ಇದರ ತೀವ್ರತೆಯನ್ನು ಸಾಮಾಜಿಕ ಹೋರಾಟಗಾರ ಪ್ರಶಾಂತ ಸಂಬರಗಿ ಹಾಗೂ ಪತ್ರಕರ್ತ-ಸಿನಿಮಾ ನಿರ್ದೇಶಕ ಇಂದ್ರಜಿತ್‌ ಮತ್ತಷ್ಟು ಹೆಚ್ಚಿಸುತ್ತಿದ್ದಾರೆ.

ಇನ್ನೊಂದೆಡೆ ಸರಕಾರವೂ ಎಚ್ಚೆತ್ತುಕೊಂಡಿದೆ. ಮಾದಕ ವಸ್ತುಗಳ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ನಟಿ ಹಾಗೂ ನಿರೂಪಕಿ ಅನುಶ್ರೀ ಡ್ರಗ್‌ ಕೇಸ್‌ ಪ್ರಕರಣದಲ್ಲಿ ಯಾವುದೇ ರಾಜಕೀಯ ನಾಯಕನೂ ಸರಕಾರದ ಮೇಲೆ ಒತ್ತಡ ಹೇರುತ್ತಿಲ್ಲ ಎಂದು ತಿಳಿಸಿದ್ದಾರೆ.

ಆದರೆ, ಸರಕಾರದ ಮೇಲೆ ಹಾಗೂ ಪೊಲೀಸರ ಮೇಲೆ ಒತ್ತಡ ಹೇರಲಾಗಿದೆ ಎಂದು ಸಂಬರಗಿ ಹಾಗೂ ಇಂದ್ರಜಿತ್‌ ಇಬ್ಬರೂ ಹೇಳುತ್ತಿದ್ದು, ಅನುಶ್ರೀ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಂತಾಗಿದೆ.

ಬೆಳಗಾವಿಯಲ್ಲಿ ಇಂದು ಬೆಳಗ್ಗೆ ಈ ಮಾತನಾಡಿದ ಅರ ಜ್ಞಾನೇಂದ್ರ, “ಮಾದಕ ವಸ್ತು ಪ್ರಕರಣದಲ್ಲಿ ಪೊಲೀಸರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅಪರಾಧ ಮಾಡಿ ಯಾರೂ ಕೂಡ ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಡ್ರಗ್ಸ್‌ ಬಗ್ಗೆ ನಮ್ಮ ಸರಕಾರ ಶೂನ್ಯ ಸಹಿಷ್ಣುತೆ ಹೊಂದಿದೆ” ಎಂದು ಹೇಳಿದರು.

  • ಅರಗ ಜ್ಞಾನೇಂದ್ರ, ಗೃಹ ಸಚಿವ

ಅನುಶ್ರೀ ಡ್ರಗ್‌ ಪ್ರಕರಣ ಸೇರಿದಂತೆ ಇನ್ನಾವಿದೇ ಮಾದಕ ವಸ್ತು ಪ್ರಕರಣದ ಬಗ್ಗೆ ಯಾವ ರಾಜಕೀಯ ನಾಯಕನೂ ನಮ್ಮ ಮೇಲೆ ಒತ್ತಡ ಹೇರುತ್ತಿಲ್ಲ. ನಮ್ಮ ಪೊಲೀಸರು ಸ್ವತಂತ್ರವಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನು, ಆರೋಪ ಪಟ್ಟಿಯಿಂದ ಅನುಶ್ರೀ ಹೆಸರನ್ನು ಕೈಬಿಟ್ಟ ಬಗ್ಗೆ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತೇನೆ.

-ಅರಗ ಜ್ಞಾನೇಂದ್ರ, ಗೃಹ ಸಚಿವ

ಆರೋಪ ಪಟ್ಟಿನಲ್ಲಿ ಅನುಶ್ರೀ ಹೆಸರನ್ನು ಕೈಬಿಟ್ಟಿರುವ ಪೊಲೀಸರ ಕ್ರಮದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಗೃಹ ಸಚಿವರು, ಈ ಬಗ್ಗೆ  ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಅನುಶ್ರೀ ಹೆಸರು ಕೈಬಿಟ್ಟಿರುವ ಮಾಹಿತಿ ನನ್ನಲ್ಲಿ ಇಲ್ಲ ಎಂದರು.

ಈಗಾಗಲೇ ಕನ್ನಡ ಚಿತ್ರರಂಗದ ಕೆಲ ತಾರೆಯರು ಮಾದಕ ವಸ್ತು ಜಾಲದಲ್ಲಿ ಸಿಲುಕಿಕೊಂಡಿರುವ ಬಗ್ಗೆ ನಮ್ಮ ಪೊಲೀಸರು ವ್ಯಾಪಕ ತನಿಖೆ ನಡೆಸಿ ನ್ಯಾಯಾಯಲಕ್ಕೆ ವಿವರಗಳನ್ನು ಸಲ್ಲಿಸಿದ್ದಾರೆ. ಅದೇ ರೀತಿ ಅನುಶ್ರೀ ಪ್ರಕರಣವನ್ನೂ ಪರಿಗಣಿಸಲಾಗುವುದು. ಎಷ್ಟೇ ಪ್ರಭಾವಿಗಳಾದರೂ ಸರಕಾರ ಎಲ್ಲ ರೀತಿ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಅರಗ ಜ್ಞಾನೇಂದ್ರ ಪುನರುಚ್ಛರಿಸಿದರು.

ಆರೋಪ ಪಟ್ಟಿಯಲ್ಲಿ ಏನಿದೆ?

ಇದೇ ವೇಳೆ ನಿರೂಪಕಿ ಅನುಶ್ರೀ ಅವರು ಡ್ರಗ್‌ ಲೋಕದ ಜತೆ ನಂಟು ಹೊಂದಿರುವ ಬಗ್ಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಈ ಡ್ರಗ್ಸ್​ ಕೇಸ್​ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರಕರಣದ ಚಾರ್ಜ್​ಶೀಟ್ʼನಲ್ಲಿರುವ​ ಮಾಹಿತಿ ಲಭ್ಯವಾಗಿದ್ದು, ಅದರಲ್ಲಿ ಅನುಶ್ರೀ ಬಗ್ಗೆ ಉಲ್ಲೇಖವಿದೆ. ನ್ಯಾಯಾಲಯಕ್ಕೆ ಸಲ್ಲಿಸಿದೆ ಎನ್ನಲಾದ ಆರೋಪ ಪಟ್ಟಿಯನ್ನು ಇಟ್ಟುಕೊಂಡು ಅನೇಕ ಕಡೆ ಚರ್ಚೆ ನಡೆಯುತ್ತಿದೆ.

ಅನುಶ್ರೀ ಡ್ರಗ್ಸ್ ಸೇವನೆ ಜತೆಗೆ ಅದರ ಸಾಗಾಟ ಅಥವಾ ಇನ್ನೊಬ್ಬರಿಗೆ ನೀಡುತ್ತಿದ್ದರು ಎಂದು ಈ ಪ್ರಕರಣದ ಎ2 ಆರೋಪಿ ಆಗಿರುವ ಕಿಶೋರ್​ ಅಮನ್​ ಶೆಟ್ಟಿ ಹೇಳಿಕೆಯನ್ನು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ.

ಕಿಶೋರ್ ಶೆಟ್ಟಿ ನೀಡಿರುವ ಹೇಳಿಕೆಯಂತೆ, ಅವರ ರೂಮ್​ಗೆ ಅನುಶ್ರೀ ಡ್ರಗ್ಸ್​ ತರುತ್ತಿದ್ದರು. ಕಿಶೋರ್, ತರುಣ್ ಜೊತೆ ಸಾಕಷ್ಟು ಸಲ ಅನುಶ್ರೀ ಕೂಡ ಡ್ರಗ್ಸ್​ ಸೇವನೆ ಮಾಡಿದ್ದರು ಎಂದು ಹೇಳಿಕೆಯಲ್ಲಿ ದಾಖಲಿಸಲಾಗಿದೆ. ಇಡೀ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್​ಶೀಟ್​ನಲ್ಲಿ ಎ2 ಕಿಶೋರ್ ಶೆಟ್ಟಿ ಹೇಳಿಕೆಯನ್ನು ವಿಸ್ತೃತವಾಗಿ ಉಲ್ಲೇಖಿಸಲಾಗಿದೆ ಎಂದು ಹೆಚ್ಚು ಚರ್ಚೆ ಆಗುತ್ತಿರುವ ಅಂಶ.

ರಿಯಾಲಿಟಿ ಶೋನ ಕೊರಿಯೋಗ್ರಾಫರ್​ ಆಗಿದ್ದ ತರುಣ್​ ಮುಖಾಂತರ ತನಗೆ ಅನುಶ್ರೀ ಪರಿಚಯವಾಗಿತ್ತು. ತರುಣ್​ ರೂಮ್​ನಲ್ಲಿ ತಡರಾತ್ರಿವರೆಗೂ ಅನುಶ್ರೀಗೆ ಡಾನ್ಸ್ ಪ್ರಾಕ್ಟೀಸ್ ಮಾಡಿಸುತ್ತಿದ್ದೆವು. ಡಾನ್ಸ್ ಪ್ರಾಕ್ಟೀಸ್​ಗೆ ಬರುವಾಗ ಅನುಶ್ರೀ ಎಕ್ಸ್‌ಟಸಿ ಡ್ರಗ್ಸ್​ ಖರೀದಿಸಿ ತರುತ್ತಿದ್ದರು. ನಮಗೆ ಎಕ್ಸ್‌ಟಸಿ ಡ್ರಗ್ಸ್ ನೀಡಿ ಅನುಶ್ರೀ ಕೂಡ ಸೇವಿಸುತ್ತಿದ್ದರು. ಅನುಶ್ರೀಗೆ ಡ್ರಗ್ಸ್ ಪೆಡ್ಲರ್​ಗಳ ಪರಿಚಯವಿದೆ ಎಂಬುದಾಗಿ ಆರೋಪ ಪಟ್ಟಿಯಲ್ಲಿ ದಾಖಲಿಸಲಾಗಿದೆ ಎನ್ನಲಾಗುತ್ತಿದೆ.

ಡ್ರಗ್ಸ್ ಎಲ್ಲಿ ಸಿಗುತ್ತದೆ? ಯಾರು ಪೂರೈಸುತ್ತಾರೆಂದು ಆಕೆಗೆ ಗೊತ್ತಿತ್ತು. ಡ್ರಗ್ಸ್​ ಅಷ್ಟು ಸುಲಭವಾಗಿ ಅನುಶ್ರೀಗೆ ಹೇಗೆ ಸಿಗುತ್ತಿತ್ತೋ ಗೊತ್ತಿಲ್ಲ’ ಎಂದು ಚಾರ್ಜ್​ಶೀಟ್​​ನಲ್ಲಿ ಎ2 ಕಿಶೋರ್​ ಶೆಟ್ಟಿ ಹೇಳಿಕೆಯನ್ನು ಉಲ್ಲೇಖಿಸಲಾಗಿದೆಯಂತೆ.

ನಿರಾಕರಿಸಿದ ಕಿಶೋರ್​ ಅಮನ್​ ಶೆಟ್ಟಿ

ಬೆಳಗ್ಗೆಯಿಂದ ಮಾಧ್ಯಮಗಳಲ್ಲಿ ಆರೋಪ ಪಟ್ಟಿಯ ಬಗ್ಗೆ ಮಾಹಿತಿ ಸ್ಫೋಟಗೊಳ್ಳುತ್ತಿದ್ದಂತೆ ಮಾಧ್ಯಮಗಳಲ್ಲಿ ಪ್ರತ್ಯಕ್ಷರಾದ ಕಿಶೋರ್​ ಅಮನ್​ ಶೆಟ್ಟಿ, ʼಅನುಶ್ರೀ ಅವರ ಬಗ್ಗೆ ನಾನು ಈ ರೀತಿಯ ಹೇಳಿಕೆಯನ್ನೇ ನೀಡಿಲ್ಲʼ ಎಂದು ಹೇಳಿದ್ದಾರೆ. ನಾನು ಪೊಲೀಸರಿಗೆ ಹಾಗೆ ಹೇಳಿಯೇ ಇಲ್ಲ ಎಂದು ಹೇಳಿಕೊಳ್ಳುತ್ತಿರುವ ಶೆಟ್ಟಿ, ಈ ಬಗ್ಗೆ ಕಾನೂನು ತ್ಞರ ಜತೆ ಚರ್ಚೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.

Tags: anchor anushreearaga jnanedraBengalurudrug casekannada cinemakarnatakaMangalorepolice
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮಧ್ಯಂತರ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಜಾಕ್ಪಾಟ್;  ಪರೀಕ್ಷೆ ಇಲ್ಲದೆ ಪಾಸ್‌: ಫೈನಲ್ ಸೆಮಿಸ್ಟರಿಗೆ ಎಕ್ಸಾಮ್

ಬಾಗೇಪಲ್ಲಿ ನ್ಯಾಷನಲ್ ಪಿಯು ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊ.ಕೆ.ಟಿ. ವೀರಾಂಜನೇಯ

Leave a Reply Cancel reply

Your email address will not be published. Required fields are marked *

Recommended

ಮಾರ್ಚ್ʼನಲ್ಲಿ ಲೋಕಸಭೆ ಚುನಾವಣೆ ವೇಳಾಪಟ್ಟಿ; ರಾಜ್ಯದಲ್ಲಿ ಎರಡು ಹಂತದ ಮತದಾನ?

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಿಗೆ ನ.13ಕ್ಕೆ ಉಪ ಚುನಾವಣೆ ನಿಗದಿ

2 years ago
45 ದಿನ ಆದ ಮೇಲೆ ಕಣ್ ಬಿಟ್ಟ ಆಂಬ್ಯುಲೆನ್ಸ್‌

45 ದಿನ ಆದ ಮೇಲೆ ಕಣ್ ಬಿಟ್ಟ ಆಂಬ್ಯುಲೆನ್ಸ್‌

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ