• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ರಾಜ್ಯದಲ್ಲಿ 29 ಲಕ್ಷ ವ್ಯಾಕ್ಸಿನ್, ಲಸಿಕೆ ನೀಡಿಕೆಯಲ್ಲಿ ನಾವೇ ನಂ.1

cknewsnow desk by cknewsnow desk
September 18, 2021
in COVID-19, STATE
Reading Time: 1 min read
0
REPUBLIC OF CHIKKABALLAPURA: ಪತ್ರಕರ್ತರಿಗೂ ಕಿಮ್ಮತ್ತಿಲ್ಲ, ಅಧಿಕಾರಿಗಳದ್ದೇ ಎಲ್ಲ!!
992
VIEWS
FacebookTwitterWhatsuplinkedinEmail

ದೇಶದಲ್ಲಿ ನೀಡಿದ ಲಸಿಕೆಗಳ ಪೈಕಿ ಶೇ.11ರಷ್ಟು ಪಾಲು ರಾಜ್ಯದ್ದು: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 29 ಲಕ್ಷ ಲಸಿಕೆ ನೀಡಿದ್ದು, ಇನ್ನೂ 1.68 ಲಕ್ಷ ದಾಖಲು ಮಾಡಬೇಕಿದೆ. ದೇಶದಲ್ಲಿ ನೀಡಿದ ಒಟ್ಟು ಲಸಿಕೆಯಲ್ಲಿ ಶೇ.11 ರಷ್ಟು ರಾಜ್ಯದಲ್ಲಿ ನೀಡಲಾಗಿದೆ. ಈ ಮೂಲಕ ಕರ್ನಾಟಕ ಹೊಸ ಸಾಧನೆ ಮಾಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು ಲಸಿಕೆ ನೀಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿತ್ತು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರೋತ್ಸಾಹ ನೀಡಿದರು. ಒಂದು ದಿನದಲ್ಲಿ 30 ಲಕ್ಷ ಲಸಿಕೆ ನೀಡುವ ಗುರಿ ಹಾಕಿಕೊಂಡಿದ್ದು, ಶನಿವಾರ ಬೆಳಗ್ಗೆ 8.30 ವೇಳೆಗೆ 29,50,093 ಲಸಿಕೆ ನೀಡಿರುವುದು ಕೋವಿಡ್ ನಲ್ಲಿ ದಾಖಲಾಗಿದೆ. ಇನ್ನೂ 1.68 ಲಕ್ಷ ಡೋಸ್ ಲಸಿಕೆ ನೀಡಿರುವುದನ್ನು ದಾಖಲು ಮಾಡಬೇಕಿದೆ. ಇದರಿಂದಾಗಿ 31 ಲಕ್ಷ ಲಸಿಕೆ ನೀಡಿದಂತಾಗುತ್ತದೆ. ದೇಶದಲ್ಲಿ ನೀಡಿದ ಒಟ್ಟು ಲಸಿಕೆಯಲ್ಲಿ ಶೇ.11 ರಷ್ಟು ರಾಜ್ಯದಲ್ಲಿ ನೀಡಲಾಗಿದೆ ಎಂದು ವಿವರಿಸಿದರು.

ಪ್ರತಿ ಅರ್ಹ ಹತ್ತು ಲಕ್ಷ ಜನಸಂಖ್ಯೆಗೆ ಹೆಚ್ಚು ಲಸಿಕೆ ನೀಡಿದ ರಾಜ್ಯಗಳ ಪೈಕಿ ಕರ್ನಾಟಕವು 62,003 ಲಸಿಕೆ ನೀಡುವ ಮೂಲಕ ಮೊದಲ ಸ್ಥಾನದಲ್ಲಿದೆ. 14,401 ಲಸಿಕೆ ಕೇಂದ್ರಗಳನ್ನು ಸಿದ್ಧಪಡಿಸಲಾಗಿದ್ದು, ಒಂದು ಕಡೆ ಸರಾಸರಿ 205 ಲಸಿಕೆ ನೀಡಲಾಗಿದೆ. 14 ಜಿಲ್ಲೆಗಳು ಗುರಿಗಿಂತ ಅಧಿಕ ಸಾಧನೆ ಮಾಡಿವೆ. 4 ಜಿಲ್ಲೆಗಳು ಮಾತ್ರ ಗುರಿಗಿಂತ 75% ನಷ್ಟು ಸಾಧನೆ ಮಾಡಿವೆ ಎಂದರು.

ಇಡೀ ದೇಶದಲ್ಲಿ ಅತಿ ಹೆಚ್ಚು ಲಸಿಕೆಯನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ (4.09 ಲಕ್ಷ) ನೀಡಲಾಗಿದೆ. ಬೆಳಗಾವಿಯಲ್ಲಿ 2.57 ಲಕ್ಷ ಲಸಿಕೆ ನೀಡಲಾಗಿದೆ. ಜಿಲ್ಲಾಮಟ್ಟದ ಸಾಧನೆಯಲ್ಲಿ ಎರಡು ಸ್ಥಾನಗಳು ರಾಜ್ಯಕ್ಕೆ ಬಂದಿವೆ. ರಾಜ್ಯದಲ್ಲಿ ಒಟ್ಟು 14.96 ಲಕ್ಷ ಲಸಿಕೆಗಳನ್ನು ಮಹಿಳೆಯರು ಪಡೆದಿದ್ದು, ಪುರುಷರಿಗಿಂತ (14.53 ಲಕ್ಷ) ಮುಂದೆ ಇದ್ದಾರೆ. ಇವೆಲ್ಲ ಸೇರಿ ಈವರೆಗೆ ಒಟ್ಟು 5 ಕೋಟಿ ಲಸಿಕೆ ನೀಡಿದ್ದು, ಕಳೆದ 20 ದಿನಗಳಲ್ಲಿ 1 ಕೋಟಿ ಲಸಿಕೆ ನೀಡಲಾಗಿದೆ. 1 ಕೋಟಿ ಜನರಿಗೆ ಎರಡೂ ಡೋಸ್ ನೀಡಲಾಗಿದೆ ಎಂಬ ಹೆಗ್ಗಳಿಕೆ ಬಂದಿದೆ. ಕಲಬುರ್ಗಿಯಲ್ಲಿ ಗುರಿಗಿಂತ ಕೇವಲ 41%, ಕೊಪ್ಪಳದಲ್ಲಿ 62%, ಉಡುಪಿಯಲ್ಲಿ 63% ಆಗಿದೆ. ಬೆಂಗಳೂರು ನಗರದಲ್ಲಿ 143%, ಶಿವಮೊಗ್ಗದಲ್ಲಿ 134%, ಧಾರವಾಡ, ಹಾಸನ, ಚಿಕ್ಕಬಳ್ಳಾಪುರ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ 120% ಸಾಧನೆ ಮಾಡಿವೆ ಎಂದರು.

Total number of doses administered in Karnataka on Sep 17 after complete data upload is
3️⃣1️⃣,4️⃣3️⃣,5️⃣9️⃣8️⃣

Congratulations to all involved! @narendramodi @CMofKarnataka @mansukhmandviya #COVID19 #vaccination pic.twitter.com/j7jMBMDpDr

— Dr Sudhakar K (Modi ka Parivar) (@DrSudhakar_) September 18, 2021

ರಕ್ತ ಸಂಗ್ರಹ, ಅಂಗಾಂಗ ದಾನ

ಇದೇ ದಿನ ರಾಜ್ಯದಲ್ಲಿ ರಕ್ತದಾನ ಶಿಬಿರ ನಡೆದಿದ್ದು, ಒಟ್ಟು 5,201 ಯುನಿಟ್ ರಕ್ತ ಸಂಗ್ರಹವಾಗಿದೆ. ಬಿಬಿಎಂಪಿಯಲ್ಲಿ 1,240 ಯುನಿಟ್, ಬಳ್ಳಾರಿಯಲ್ಲಿ 298, ದಕ್ಷಿಣ ಕನ್ನಡದಲ್ಲಿ 295 ಯುನಿಟ್ ಸಂಗ್ರಹವಾಗಿದೆ. ಎರಡು ವಾರಗಳಲ್ಲಿ ಒಂದು ಲಕ್ಷ ಯುನಿಟ್ ರಕ್ತ ಸಂಗ್ರಹಿಸಬೇಕೆಂಬ ಗುರಿ ಇದ್ದು, ಇದಕ್ಕಾಗಿ ಸೂಚನೆ ನೀಡಲಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.1 ಜನರಿಗೆ ರಕ್ತ ಬೇಕಿದೆ ಎಂದರು.

Tags: covid19dr k sudhakarindiakarnataka fights coronakarnataka no 1vaccination
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಇಪ್ಪತ್ತು ದಿನದಲ್ಲಿ ಸಿಇಟಿ ಫಲಿತಾಂಶ

ನಾಳೆ ಸಿಇಟಿ ಫಲಿತಾಂಶ ಪ್ರಕಟ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಿಗೆ ತಲಾ 25 ಆಮ್ಲಜನಕ ಸಾಂದ್ರಕ ಕೊಟ್ಟ ಸರಕಾರ; ಗ್ರಾಮ ಮಟ್ಟದ ಕೋವಿಡ್ ಕಾರ್ಯಪಡೆಗೆ 50,000 ಅಡ್ವಾನ್ಸ್

ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಿಗೆ ತಲಾ 25 ಆಮ್ಲಜನಕ ಸಾಂದ್ರಕ ಕೊಟ್ಟ ಸರಕಾರ; ಗ್ರಾಮ ಮಟ್ಟದ ಕೋವಿಡ್ ಕಾರ್ಯಪಡೆಗೆ 50,000 ಅಡ್ವಾನ್ಸ್

5 years ago
ಕೆಲಸ ಮಾಡಲು ಆಗದಿದ್ದರೆ ಮತ್ಯಾಕೆ ಭರವಸೆ ಕೊಡ್ತೀರಿ?

ಕೆಲಸ ಮಾಡಲು ಆಗದಿದ್ದರೆ ಮತ್ಯಾಕೆ ಭರವಸೆ ಕೊಡ್ತೀರಿ?

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ