ದಾವಣಗೆರೆ: ಇಂದಿಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ರಾಜ್ಯ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರಿಗೆ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಜವಾಬ್ದಾರಿ ವಹಿಸಲಾಗಿದೆ.
ಈ ಮೂಲಕ ಪಕ್ಷದಲ್ಲಿ ಈಶ್ವರಪ್ಪ ಅವರ ಪ್ರಾಮುಖ್ಯತೆ ಕುಗ್ಗಿಲ್ಲ ಎಂಬುದು ಮತ್ತೊಮ್ಮೆ ರುಜುವಾತಾಗಿದ್ದು, ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲೂ ಎಲ್ಲರ ಲೆಕ್ಕಾಚಾ ರ ತಲೆಕೆಳಗು ಮಾಡಿ ಸ್ಥಾನ ಪಡೆದಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವರು, ಪಕ್ಷದ ಪ್ರಮುಖರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಮತ್ತೂ ಪಕ್ಷದ ವರಿಷ್ಠರಿಗೆ ಆಭಾರಿಯಾಗಿದ್ದೇನೆ. ಪಕ್ಷದ ಸಂಘಟನೆಯ ಬಲವರ್ಧನೆಯೇ ನನ್ನ ಪ್ರಮುಖ ಆದ್ಯತೆ ಎಂದು ತಿಳಿಸಿದ್ದಾರೆ.