• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ದೇಗುಲ ರಕ್ಷಣೆಗೆ ಕಾನೂನು

cknewsnow desk by cknewsnow desk
September 20, 2021
in STATE
Reading Time: 1 min read
0
ವಿಧಾನಮಂಡಲ ಅಧಿವೇಶನ
944
VIEWS
FacebookTwitterWhatsuplinkedinEmail

ಈ ಅಧಿವೇಶನದಲ್ಲಿ ಮಸೂದೆ ಮಂಡನೆ; ಸಂಪುಟ ಸಭೆಯಲ್ಲಿ ಸರಕಾರ ನಿರ್ಧಾರ

ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಸಾರ್ವಜನಿಕ ಸ್ಥಳಗಳಲ್ಲಿರುವ ದೇಗುಲಗಳ ತೆರವು ತಡೆಯಲು ಪ್ರಸಕ್ತ ಅಧಿವೇಶನದಲ್ಲಿಯೇ ಪ್ರತ್ಯೇಕ ವಿಧೇಯಕ ಮಂಡನೆ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ.

ಸುಪ್ರೀಂ ಕೋರ್ಟ್ ಆದೇಶದಂತೆ ಮೈಸೂರಿನ 193 ದೇಗುಲಗಳನ್ನು ತೆರವು ಮಾಡಲು ಮುಂದಾದ ಜಿಲ್ಲಾಡಳಿತವು, ಅನೇಕ ದೇವಾಲಯಗಳನ್ನು ಕೆಡವಿ ಹಾಕಿತ್ತು. ಇದು ಆಡಳಿರೂಢ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳನ್ನೂ ಕೆರಳಿಸಿತ್ತು.

ವಿಷಯದ ತೀವ್ರತೆಯನ್ನು ಮನಗಂಡು ಎಚ್ಚೆತ್ತ ಸರಕಾರವು, ದೇವಾಲಯಗಳ ರಕ್ಷಣೆಗೆ ಪ್ರತ್ಯೇಕ ವಿಧೇಯಕವನ್ನು ಇದೇ ಅಧಿವೇಶದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲು ನಿರ್ಧರಿಸಿದೆ. ಅಲ್ಲದೆ, ಸುಪ್ರೀಂ ಕೋರ್ಟ್ʼಗೆ ಮೇಲ್ಮನವಿಯನ್ನೂ ಸಲ್ಲಿಕೆ ಮಾಡಲು ತೀರ್ಮಾನಿಸಿದೆ.

ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಲಾಗಿದೆ. ದೇವಾಲಯಗಳ ತೆರವು ಕಾರ್ಯಾಚರಣೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿರುವ ಆಕ್ರೋಶದ ಬಗ್ಗೆ ಮುಖ್ಯಮಂತ್ರಿಗಳು ಸಂಪುಟ ಸಹೋದ್ಯೋಗಿಗಳ ಜತೆ ವಿಷದವಾಗಿ ಚರ್ಚೆ ಮಾಡಿದ್ದಾರೆಂದು ಮೂಲಗಳು ತಿಳಿಸಿವೆ.

ಬಿಜೆಪಿಯೇ ನಾಯಕರೇ ಟೀಕಿಸಿದ್ದರು!

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಸಂಸದ ಪ್ರತಾಪ ಸಿಂಹ ಸೇರಿದಂತೆ ಬಿಜೆಪಿಯ ಅನೇಕ ನಾಯಕರು ದೇವಾಲಯಗಳ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಮುಸ್ಲಿಂ, ಕ್ರಿಶ್ಚಿಯನ್ ಪ್ರಾರ್ಥನಾ ಮಂದರಗಳನ್ನು ಬಿಟ್ಟು ಹಿಂದು ದೇವಾಲಯಗಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಪ್ರತಾಪ್ ಸಿಂಹ ಸರಕಾರದ ವಿರುದ್ಧ ನೇರವಾಗಿ ಕಿಡಿಕಾರಿದ್ದರು. ಅಲ್ಲದೆ, ಈ ಬಗ್ಗೆ ಮುಖ್ಯಮಂತ್ರಿಗೂ ದೂರು ನೀಡಿದ್ದರು.

ದೇವಾಲಯಗಳ ತೆರವು ಕೋಟ್ಯಂತರ ಹಿಂದುಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದೆ. ಇದಕ್ಕೆ ನಮ್ಮ ಪೂರ್ಣ ವಿರೋಧವಿದೆ ಎಂದು ಬಹಿರಂಗವಾಗಿಯೇ ಹೇಳಿದ್ದರು ಸಿ.ಟಿ.ರವಿ. ಇದಾದ ಮೇಲೆ ಮೈಸೂರು ಜಿಲ್ಲಾಡಳಿತಕ್ಕೆ ತುರ್ತು ಸೂಚನೆ ನೀಡಿದ್ದ ಸಿಎಂ ಬೊಮ್ಮಾಯಿ, ದೇಗುಲ ತೆರವಿಗೆ ಬ್ರೇಕ್ ಹಾಕಿದ್ದರು.

ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯ ನಂತರ ಮಾತನಾಡಿದ್ದ ಸಿಎಂ, ಜನರು ಮೆಚ್ಚುವ ರೀತಿಯಲ್ಲಿ ನಾವು ಆಡಳಿತ ನೀಡುತ್ತೇವೆ. ಯಾರೊಬ್ಬರಿಗೂ ತೊಂದರೆ ಆಗದಂತೆ ಸರಕಾರ ನಡೆಸುತ್ತೇವೆ. ಮೈಸೂರಿನಲ್ಲಿ ದೇಗುಲ ತೆರವು ಮಾಡಿದ್ದು ಭಕ್ತರಿಗೆ ತೀವ್ರ ನೋವು ಉಂಟಾಗಿದೆ ಎಂಬುದು ನಮಗೆ ಗೊತ್ತಾಗಿದೆ. ಮುಂದೆ ಇಂಥ ಘಟನೆ ನಡೆಯದಂತೆ ಎಚ್ಚರ ವಹಿಸಲಾಗುವುದು ಎಂದು ಭರವಸೆ ನೀಡಿದ್ದರು.

ಇದರ ಜತೆಗೆ, ಮಾಜಿ ಸಿಎಂ ಯಡಿಯೂರಪ್ಪ ಅವರು, ದೇವಾಲಯಗಳ ತೆರವು ಕಾರ್ಯಾಚರಣೆ ತಡೆಗೆ ಸುಪ್ರೀಂ ಕೋರ್ಟ್ʼಗೇ ಮೊರೆ ಹೋಗುವಂತೆ ಸರಕಾರಕ್ಕೆ ಸಲಹೆ ಮಾಡಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ತರಾಟೆ

ಸರಕಾರ ದಿಢೀರನೇ ದೇಗುಲಗಳ ರಕ್ಷಣೆಗೆ ವಿಧೇಯಕ ಮಂಡಿಸಲು ನಿರ್ಧರಿಸಿರುವುದರ ಹಿಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ಒತ್ತಡವೀ ಇದೆ. ದೇವಾಲಯಗಳ ನೆಲಸಮಕ್ಕೆ ಸರಕಾರವೇ ಕುಮ್ಮಕ್ಕು ನೀಡಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಆರೋಪ ಮಾಡಿದ್ದರು.

ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದ ಎಚ್ಡಿಕೆ; “ಸುಪ್ರೀಂ ಕೋರ್ಟ್ ಆದೇಶದ ನೆಪದಲ್ಲಿ ಮೈಸೂರು ಜಿಲ್ಲೆಯ 93 ದೇವಾಲಯಗಳ ಧ್ವಂಸಕ್ಕೆ ರಾಜ್ಯ ಬಿಜೆಪಿ ಸರ್ಕಾರದ ದ್ವಂದ್ವ ನೀತಿಯೇ ಕಾರಣ. ಒಂದು ಸರ್ಕಾರಕ್ಕಿಂತ ಜಿಲ್ಲಾಡಳಿತ ದೊಡ್ಡದೇ? ಒಂದೆಡೆ ದೇಗುಲಗಳ ಧ್ವಂಸ ನಡೆಯುತ್ತಿದೆ. ಇನ್ನೊಂದೆಡೆ ಆಡಳಿತ ಪಕ್ಷದ ಮಿತ್ರಸಂಘಟನೆ ಹಿಂದೂ ಜಾಗರಣ ವೇದಿಕೆ ಹಾದಿಬೀದಿಯಲ್ಲಿ ಪ್ರತಿಭಟನೆ ಮಾಡುತ್ತಿದೆ!
ಇದರ ಅರ್ಥವೇನು? ದೇಗುಲಗಳ ಧ್ವಂಸ ಮತ್ತು ಪ್ರತಿಭಟನೆ ಹಿಂದೆ ಬಿಜೆಪಿ ಇದೆ ಎಂಬ ಅನುಮಾನ ಕಾಡುತ್ತಿದೆ. ಸರಕಾರ ಮನಸ್ಸು ಮಾಡಿದರೆ ತಕ್ಷಣವೇ ದೇಗುಲಗಳ ನೆಲಸಮ ನಿಲ್ಲಿಸಬಹುದು. ಸರಕಾರ ಅದನ್ನು ಮಾಡುತ್ತಿಲ್ಲ. ಹಿಂದುಗಳ ರಕ್ಷಣೆಯ ಪೇಟೆಂಟ್ ಪಡೆದು ರಾಜಕಾರಣ ಮಾಡುವ ಭಾರತೀಯ ಜನತಾ ಪಕ್ಷದ ಸರಕಾರವೇ ರಾಜ್ಯದಲ್ಲಿದೆ. ಹಾಗಾದರೆ, ದೇವಾಲಯಗಳನ್ನೇಕೆ ನೆಲಸಮ ಮಾಡಲಾಗುತ್ತಿದೆ? ಸರಕಾರವೇ ಇದಕ್ಕೆ ಉತ್ತರ ನೀಡಬೇಕು.ಸರಕಾರಕ್ಕೆ ನಿಜಕ್ಕೂ ದೇಗುಲ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಸುಪ್ರೀಂ ಕೊರ್ಟ್ʼಗೆ ಮೇಲ್ಮನವಿ ಸಲ್ಲಿಸಲಿ. ಎಲ್ಲ ಪಕ್ಷಗಳನ್ನು ಕರೆದು ಚರ್ಚೆ ನಡೆಸಲಿ.

ಅದನ್ನು ಬಿಟ್ಟು ಮಗುವನ್ನೂ ಚಿವುಟಿ, ತೊಟ್ಟಿಲನ್ನೂ ತೂಗುವ ಕೆಲಸ ಮಾಡುವುದು ಬೇಡ. ದೇವಾಲಯಗಳಿಗೆ ರಕ್ಷಣೆ ನೀಡಲು ಸರಕಾರ ಸಂಪೂರ್ಣ ವಿಫಲವಾಗಿದೆ. ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತಿದೆ. ಜನರ ಗಮನ ಬೇರೆಡೆಗೆ ಸೆಳೆಯಲು ಸರಕಾರವೇ ಈ ನಾಟಕ ಆಡುತ್ತಿದೆಯಾ ಎಂಬ ಸಂಶಯ ಉಂಟಾಗುತ್ತಿದೆ. ಇದೂ ಬಿಜೆಪಿಯ ಕಾರ್ಯಸೂಚಿಯೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು.

ದೇವಾಲಯಗಳ ನೆಲಸಮಕ್ಕೆ ಬಿಜೆಪಿ ಸರಕಾರವೇ ಕಾರಣ. ಒಂದು ಕಡೆ ಅಧಿಕಾರಿಗಳಿಗೆ ಸೂಚನೆ ನೀಡಿ, ಮತ್ತೊಂದು ದೇಗುಲಗಳ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸಿದ್ದರು.

Tags: basavaraj bommaibjpkarnatakaKarnataka templesmysoretemple demolitiontemple prevention bill
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಸಿಇಟಿ ಫಲಿತಾಂಶ 2021: ಇತಿಹಾಸ ಸೃಷ್ಟಿಸಿದ ಮೈಸೂರು ವಿದ್ಯಾರ್ಥಿ

ಸಿಇಟಿ ಫಲಿತಾಂಶ 2021: ಇತಿಹಾಸ ಸೃಷ್ಟಿಸಿದ ಮೈಸೂರು ವಿದ್ಯಾರ್ಥಿ

Leave a Reply Cancel reply

Your email address will not be published. Required fields are marked *

Recommended

ರಾಮಮಂದಿರ ನಿರ್ಮಾಣ ದೇಶ ಒಗ್ಗೂಡಿಸುವ ಕಾರ್ಯ ಎಂದ ಸಚಿವ ಡಾ.ಕೆ.ಸುಧಾಕರ್ ಅವರಿಂದ ಚಿಂತಾಮಣಿಯಲ್ಲಿ ಆರೆಸ್ಸೆಸ್‌ ಕಚೇರಿ ಲೋಕಾರ್ಪಣೆ

ರಾಮಮಂದಿರ ನಿರ್ಮಾಣ ದೇಶ ಒಗ್ಗೂಡಿಸುವ ಕಾರ್ಯ ಎಂದ ಸಚಿವ ಡಾ.ಕೆ.ಸುಧಾಕರ್ ಅವರಿಂದ ಚಿಂತಾಮಣಿಯಲ್ಲಿ ಆರೆಸ್ಸೆಸ್‌ ಕಚೇರಿ ಲೋಕಾರ್ಪಣೆ

6 years ago
ಆಷಾಢದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕಿಲ್ಲ ಅಡ್ಡಿ

ಆಷಾಢದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕಿಲ್ಲ ಅಡ್ಡಿ

4 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ