• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ತನು-ಮನ ಸೆಳೆದ ವೈಭವಯುತ ಜಂಬೂಸವಾರಿ

cknewsnow desk by cknewsnow desk
October 15, 2021
in STATE
Reading Time: 1 min read
0
ತನು-ಮನ ಸೆಳೆದ ವೈಭವಯುತ ಜಂಬೂಸವಾರಿ
966
VIEWS
FacebookTwitterWhatsuplinkedinEmail

ಅರಮನೆ ನಗರಿಯಲ್ಲಿ ದಸರಾ ಸಂಭ್ರಮ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಕಾರ್ಯಕ್ರಮ ಶುಕ್ರವಾರ ಅರಮನೆ ಆವರಣದಲ್ಲಿ ಸಂಪ್ರದಾಯಕವಾಗಿ ನೆರವೇರಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅರಮನೆಯ ಬಲರಾಮ ದ್ವಾರದ ಬಳಿ ಸಂಜೆ 4.36 ರಿಂದ 4.46 ರೊಳಗೆ ಸಲ್ಲುವ ಮೀನ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆಸಲ್ಲಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅರಮನೆಯ ಬಲರಾಮ ದ್ವಾರದ ಬಳಿ ಸಂಜೆ 4.36 ರಿಂದ 4.46 ರೊಳಗೆ ಸಲ್ಲುವ ಮೀನ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆಸಲ್ಲಿಸಿದರು.

ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಇಂದು ವಿಶ್ವವಿಖ್ಯಾತ ಜಂಬೂಸವಾರಿಗೆ ಮುಖ್ಯಮಂತ್ರಿ @BSBommai ರವರು ಚಾಲನೆ ನೀಡಿದರು. ಅಂಬಾರಿಯಲ್ಲಿ ವಿರಾಜಮಾನರಾದ ನಾಡದೇವತೆ ಚಾಮುಂಡೇಶ್ವರಿ ತಾಯಿಗೆ ನಾಡಿನ ಸಮಸ್ತ ಜನತೆಯ ಪರವಾಗಿ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಸಲ್ಲಿಸಿದರು.#ನಾಡಹಬ್ಬದಸರಾ #Dasara2021 #ಜಂಬೂಸವಾರಿ pic.twitter.com/civsCs9Lnb

— CM of Karnataka (@CMofKarnataka) October 15, 2021

ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿನ್ನದ ಅಂಬಾರಿಯಲ್ಲಿ ಅಲಂಕೃತಗೊಂಡ ಶ್ರೀ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸುತ್ತಿದ್ದಂತೆ ರಾಷ್ಟ್ರಗೀತೆ ಮೊಳಗಿತು. ಇದೇ ವೇಳೆಗೆ 52 ಸೆಕೆಂಡ್‌ಗಳಲ್ಲಿ 21 ಬಾರಿ ಕುಶಾಲತೋಪುಗಳನ್ನು ಅರಮನೆಯ ಹೊರಾವರಣದಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಸಿಡಿಸಿದರು.

ಬಳಿಕ ಅಂಬಾರಿ ಆನೆಯು ಪೊಲೀಸ್ ಅಶ್ವದಳ, ಕೆ‌ಎಸ್‌ಆರ್‌ಪಿ ಮೌಂಟೇನ್ ಕಂಪನಿ ಬೆಂಗಾವಲಿನಲ್ಲಿ ಸಾಗಿತು. ನೆರೆದಿದ್ದ ಜನರು ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಂಡು ಝೇಂಕಾರ ಘೋಷಗಳನ್ನು ಕೂಗಿದರು.

ಮೆರವಣಿಗೆಯ ಆರಂಭದಲ್ಲಿ ನಿಶಾನೆ ಆನೆ ಧನಂಜಯ ಹಾಗೂ ಗೋಪಾಲಸ್ವಾಮಿ ನಡುವೆ ಅಶ್ವತ್ಥಾಮ ಆನೆಗಳು ಗಾಂಭೀರ್ಯದಿಂದ ಹೆಜ್ಜೆ ಹಾಕಿದವು. ಬಳಿಕ ನಾದಸ್ವರ ಮತ್ತು ಸ್ಯಾಕ್ಸೋಫೋನ್ ಕಲಾವಿದರು ಪ್ರದರ್ಶನ ನೀಡುತ್ತಾ ಸಾಗಿದರು. ನಾದಸ್ವರ, ವೀರಗಾಸೆ, ಚೆಂಡೆ ಮೇಳ, ಮರ ಗಾಲು ವೇಷ, ಚಿಲಿಪಿಲಿ ಗೊಂಬೆ ಕಲಾವಿದರು ಪ್ರದರ್ಶನ ನೀಡುತ್ತಾ ಎಲ್ಲರನ್ನು ರಂಜಿಸಿದರು.

ಮುಖ್ಯಮಂತ್ರಿ @BSBommai ಅವರು ಇಂದು ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿಜಯದಶಮಿ ಮೆರವಣಿಗೆಯನ್ನು ಉದ್ಘಾಟಿಸಿದರು.

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್, ಸಚಿವ @STSomashekarMLA, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.#ನಾಡಹಬ್ಬದಸರಾ #Dasara2021 #ಜಂಬೂಸವಾರಿ pic.twitter.com/rbK3w7lgEi

— CM of Karnataka (@CMofKarnataka) October 15, 2021

ಗಮನಸೆಳೆದ ಕಲಾ ತಂಡಗಳು

ನಾದಸ್ವರ ವಿದ್ವಾನ್ ಆರ್. ನಾಗರಾಜ್ ಮತ್ತು ತಂಡ ಹಾಗೂ ಹಂಪಾಪುರ ಮಹದೇವ್ ತಂಡದಿಂದ ಸುಮಧುರವಾಗಿ ನಾದಸ್ವರ ನುಡಿಸುತ್ತಾ ಸಾಗಿದರು‌. ಮೈಸೂರಿನ ರತ್ನಮ್ಮ ತಂಡ, ಅಂಬಳೆ ಶಿವಣ್ಣ ತಂಡ, ನೀಲಕಂಠ ತಂಡ, ಆನಂದ್ ಕುಮಾರ್ ತಂಡ ಹೆಚ್.ಪಿ ರುದ್ರೇಶ್ ಹಾಗೂ ವೀರಭದ್ರೇಶ್ವರ ವೀರಗಾಸೆ ತಂಡದವರು ವೀರಗಾಸೆ ಕುಣಿತವಾಡುತ್ತ ಮುನ್ನೆಡೆದರು‌.

ಕೆಂಪಿಸಿದ್ದನಹುಂಡಿ ಮಹದೇವು, ಚಿಕ್ಕಮರಿಯಪ್ಪ,  ಕಂಸಾಳೆ ಸಿದ್ದರಾಮು ಹಾಗೂ ಕೃಷ್ಣ ಜನಮನ ಮತ್ತು ತಂಡದಿಂದ ಕಂಸಾಳೆ ಜಾನಪದ ನೃತ್ಯ ಮಾಡಿದರು. ರಮ್ಯ, ಕಿರಣ್, ಕುಮಾರ್, ಸ್ವಾಮಿನಾಯಕ ಮತ್ತು ತಂಡದವರು ಮಾಡಿದ ಡೊಳ್ಳುಕುಣಿತವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಅಮೃತ ಮತ್ತು ತಂಡ, ಪಲ್ಲವಿ ಮತ್ತು ತಂಡದಿಂದ ನಗಾರಿ, ಪಲ್ಲವಿ ಹಾಗೂ ವೈ.ಬಿ ಪ್ರಕಾಶ್ ಮತ್ತು ತಂಡದಿಂದ ಪೂಜಾಕುಣಿತ ಅದ್ಭುತವಾಗಿತ್ತು. ಅಶ್ವಾರೋಹಿ ಪಡೆಯ ಪ್ರಧಾನ ಕಮಾಂಡೆಂಟ್ ಕೆಎಆರ್‌ಪಿ ಮೌಂಟೆಂಡ್ ಕಂಪನಿ ತುಕಡಿಗಳು ಶಿಸ್ತುಬದ್ಧವಾಗಿ ಹೆಜ್ಜೆ ಹಾಕಿದವು.

ಚಿತ್ತಾಕರ್ಷಕ ಸ್ತಬ್ದಚಿತ್ರಗಳು

ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಒಟ್ಟು 6 ವರ್ಣರಂಜಿತ ಸ್ತಬ್ಧಚಿತ್ರಗಳು ಎಲ್ಲರನ್ನೂ ಆಕರ್ಷಿಸಿದವು. 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಸ್ತಬ್ದಚಿತ್ರವು ಮೊದಲಿಗೆ ಸಾಗುವ ಮೂಲಕ ಎಲ್ಲರ ಚಿತ್ತ ನೆಟ್ಟಿತು.

ಬಳಿಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ‘ಬಹುವಸತಿ ಸಂಕೀರ್ಣ’, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ‘ಕೊರೊನಾ ಮುಕ್ತ ಕರ್ನಾಟಕ’ ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ‘ಸಮಗ್ರ ಕೃಷಿ’, ಮತ್ತು ದಸರಾ ಉಪಸಮಿತಿಯಿಂದ ‘ಪರಿಸರ ಸಂರಕ್ಷಣೆ’, ‘ಅರಮನೆ ಆನೆಬಂಡಿ’ ಸ್ತಬ್ಧ ಚಿತ್ರಗಳು ಸಾಗಿದವು.

ಪುಷ್ಪಾರ್ಚನೆ ವೇಳೆ ರಾಜ್ಯ ಹೃಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮೇಯರ್ ಸುನಂದ ಪಾಲನೇತ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೋಲಿಸ್ ಆಯುಕ್ತ ಡಾ.ಚಂದ್ರಗುಪ್ತ, ಮೈಸೂರು ರಾಜಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉಪಸ್ಥಿತರಿದ್ದರು.

Tags: festivals of karnatakakarnatakaMysurumysuru dasaramysuru dasara 2021nadahabba
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವಿಜಯದಶಮಿ ಪರಮಾರ್ಥವೇನು? ಸದ್ಗುರುಗಳು ಹೇಳಿದ ಸತ್ಯ ಸಂದೇಶ

ವಿಜಯದಶಮಿ ಪರಮಾರ್ಥವೇನು? ಸದ್ಗುರುಗಳು ಹೇಳಿದ ಸತ್ಯ ಸಂದೇಶ

Leave a Reply Cancel reply

Your email address will not be published. Required fields are marked *

Recommended

ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ

ಸ್ಫೋಟದ ಆರೋಪಿಗಳನ್ನು ರಕ್ಷಿಸುತ್ತಿಲ್ಲ, ಅನಾಹುತದಲ್ಲಿ ರಾಜಕಾರಣ ಸರಿಯಲ್ಲ; ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮಕ್ಕೆ ಅವಕಾಶವೇ ಇಲ್ಲ: ಸಚಿವ ಡಾ.ಸುಧಾಕರ್‌

5 years ago
3 ದಿನ ಸಿಇಟಿ ಪರೀಕ್ಷೋತ್ಸವ

ಜೂ.16, 17 ಮತ್ತು 18; 3 ದಿನ ಸಿಇಟಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ